ಗದಗ: ನರಗುಂದ ಪೊಲೀಸರ ಭರ್ಜರಿ ಬೇಟೆ, ಕಾರಿನಲ್ಲಿ ಸಿಕ್ತು 1.70 ಕೋಟಿ ರೂ. ಹಣ
ಬಾಗಲಕೋಟೆಯಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದ ಕಾರಿನಲ್ಲಿ ಕೋಟ್ಯಂತರ ಹಣ ಪತ್ತೆಯಾಗಿದೆ. ಹುಬ್ಬಳ್ಳಿ ಮೂಲದ ವ್ಯಾಪಾರಿ ವಿಕ್ರಮ್ ಸಿಂಗ್ ಎಂಬುವವರಿಗೆ ಸೇರಿದ 1ಕೋಟಿ 70 ಲಕ್ಷ ರೂ ಹಣ ವಶಕ್ಕೆ ಪಡೆದಿದ್ದಾರೆ.
ಗದಗ: ಜಿಲ್ಲೆಯ ನರಗುಂದ ಪಟ್ಟಣದಲ್ಲಿ ಯಾವುದೇ ದಾಖಲೆ ಇಲ್ಲದೆ 1.70 ಕೋಟಿ ರೂ. ಹಣವನ್ನು ಕಾರಿನಲ್ಲಿ ಸಾಗಾಟ ಮಾಡುತ್ತಿದ್ದಾಗ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಗಲಕೋಟೆಯಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದ ಕಾರಿನಲ್ಲಿ ಕೋಟ್ಯಂತರ ಹಣ ಪತ್ತೆಯಾಗಿದೆ. ಹುಬ್ಬಳ್ಳಿ ಮೂಲದ ವ್ಯಾಪಾರಿ ವಿಕ್ರಮ್ ಸಿಂಗ್ ಎಂಬುವವರಿಗೆ ಸೇರಿದ 1ಕೋಟಿ 70 ಲಕ್ಷ ರೂ ಹಣ ವಶಕ್ಕೆ ಪಡೆದಿರುವ ನರಗುಂದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ನಿನ್ನೆ(ಮೇ 21) ಮಧ್ಯರಾತ್ರಿ ಕಾರಿನಲ್ಲಿ ಹಣ ಸಾಗಾಟದ ಬಗ್ಗೆ ಅನುಮಾನ ಬಂದ ಹಿನ್ನೆಲೆಯಲ್ಲಿ ಪೊಲೀಸರು ಕಾರು ತಪಾಸಣೆ ಮಾಡಿದಾಗ ಈ ಹಣ ಪತ್ತೆಯಾಗಿದೆ. ಕಾರು ಚಾಲಕ ಶಿವಬಸಯ್ಯ ಹಾಗೂ ವ್ಯಾಪಾರಿ ವಿಕ್ರಮ್ ಸಿಂಗ್ ಅವರನ್ನು ಇನ್ಸ್‌ಪೆಕ್ಟರ್ ಮಲ್ಲಯ್ಯ ಮಠಪತಿ ಅವರು ಹಣದ ಮೂಲ ಹಾಗೂ ದಾಖಲೆಗಳ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ. ನರಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ: ರಾಜಕಾಲುವೆಯಲ್ಲಿ ಕೊಚ್ಚಿಹೋದ ಯುವಕ: ನಿನ್ನೆಯ ಮಳೆಗೆ ಬೆಂಗಳೂರಿನಲ್ಲಿ ಟೆಕ್ಕಿ ಬಲಿ ಬೆನ್ನಲ್ಲೇ ಮತ್ತೊಂದು ದುರಂತ
ಭದ್ರಾ ಡ್ಯಾಂ ಪಕ್ಕದ ಕಾಲುವೆಯಲ್ಲಿ ಮುಳುಗಿ ಮೂವರ ಸಾವು
ಚಿಕ್ಕಮಗಳೂರು: ಕಾಲುವೆ ನೀರಿನಲ್ಲಿ ಆಟವಾಡುವಾಗ ಆಯತಪ್ಪಿ ಬಿದ್ದು ಮೂವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಭದ್ರಾ ಡ್ಯಾಂ ಪಕ್ಕದ ಕಾಲುವೆಯಲ್ಲಿ ನಡೆದಿದೆ. ರವಿ(31), ಅನನ್ಯ(17), ಶಾಮವೇಣಿ(16) ಮೃತ ದುರ್ದೈವಿಗಳು. ರವಿ ಮೂಲತಃ ಲಕ್ಕವಳ್ಳಿ ನಿವಾಸಿ. ಅನನ್ಯ ಮತ್ತು ಶಾಮವೇಣಿ ರವಿಯ ಸಹೋದರಿಯರ ಮಕ್ಕಳು. ಅನನ್ಯ ಮೂಲತಃ ಶಿವಮೊಗ್ಗ, ಶಾಮವೇಣಿ ನಂಜನಗೂಡಿನವರು. ರಜೆ ನಿಮಿತ್ತ ಅನನ್ಯ ಮತ್ತ ಶಾಮವೇಣಿ ಲಕ್ಕವಳ್ಳಿ ಸಂಬಂಧಿ ಮನೆಗೆ ಬಂದಾಗ ಘಟನೆ ಸಂಭವಿಸಿದೆ. ರವಿ ಮೃತದೇಹ ಪತ್ತೆಯಾಗಿದ್ದು, ಮತ್ತಿಬ್ಬರ ಮೃತದೇಹಕ್ಕಾಗಿ ಶೋಧ ಕಾರ್ಯ ನಡೆಯುತ್ತಿದೆ. ಲಕ್ಕವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗದಗ ಜಿಲ್ಲೆಯ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 10:55 am, Mon, 22 May 23