ಗದಗ ತಹಶೀಲ್ದಾರ ಕಚೇರಿಯಲ್ಲಿ ಸದಾ ಸರ್ವರ್ ಡೌನ್: ದಾಖಲೆ ಪಡೆಯಲು ದಿನವಿಡೀ ಸರ್ಕಾರಿ ಕಚೇರಿಯಲ್ಲಿ ‘ಕುಸ್ತಿ’!

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಹಶೀಲ್ದಾರ್ ಕಚೇರಿಯಲ್ಲಿ ನಿರಂತರ ಸರ್ವರ್ ಸಮಸ್ಯೆಯಿಂದಾಗಿ ಸಾರ್ವಜನಿಕರು ಪರದಾಡುತ್ತಿದ್ದು, ಜಾತಿ-ಆದಾಯ ಪ್ರಮಾಣಪತ್ರ ಹಾಗೂ ಉತಾರ ಪಡೆಯಲು ದಿನವಿಡೀ ಸರದಿ ಸಾಲಿನಲ್ಲಿ ನಿಲ್ಲುವಂತಾಗಿದೆ. ಇದರಿಂದ ಬೇಸತ್ತ ಜನರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಜಿಲ್ಲಾಡಳಿತ ತಕ್ಷಣವೇ ಮಧ್ಯಪ್ರವೇಶಿಸಬೇಕು ಎಂದು ಆಗ್ರಹಿಸಿದ್ದಾರೆ.

ಗದಗ ತಹಶೀಲ್ದಾರ ಕಚೇರಿಯಲ್ಲಿ ಸದಾ ಸರ್ವರ್ ಡೌನ್: ದಾಖಲೆ ಪಡೆಯಲು ದಿನವಿಡೀ ಸರ್ಕಾರಿ ಕಚೇರಿಯಲ್ಲಿ ‘ಕುಸ್ತಿ’!
ಲಕ್ಷ್ಮೇಶ್ವರ ತಹಶೀಲ್ದಾರ್ ಕಚೇರಿಯಲ್ಲಿ ಸರ್ವರ್ ಸಮಸ್ಯೆ
Image Credit source: tv9
Edited By:

Updated on: Sep 10, 2026 | 1:00 PM

ಮುಖ್ಯಾಂಶಗಳು

  • ಲಕ್ಷ್ಮೇಶ್ವರ ತಹಶೀಲ್ದಾರ್ ಕಚೇರಿಯಲ್ಲಿ ಸರ್ವರ್ ಡೌನ್
  • ದಾಖಲೆ ಸಿಗದೆ ವಿದ್ಯಾರ್ಥಿಗಳು, ರೈತರು ಹೈರಾಣ
  • ತಾಂತ್ರಿಕ ಸಮಸ್ಯೆ ಪರಿಹಾರಕ್ಕೆ ಸಾರ್ವಜನಿಕರ ಆಗ್ರಹ

ಗದಗ, ಸೆಪ್ಟೆಂಬರ್ 10: ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಹಶೀಲ್ದಾರ್ ಕಚೇರಿಯಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಸಾರ್ವಜನಿಕರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಸಕಾಲಕ್ಕೆ ಅಗತ್ಯ ದಾಖಲೆಗಳು ಸಿಗದೆ ವಿದ್ಯಾರ್ಥಿಗಳು, ಮಹಿಳೆಯರು ಹಾಗೂ ರೈತರು ದಿನವಿಡೀ ಕಚೇರಿ ಆವರಣದಲ್ಲಿ ಕಾದು ಕುಳಿತುಕೊಳ್ಳುವ ದುಸ್ಥಿತಿ ನಿರ್ಮಾಣವಾಗಿದೆ. ಜನನ-ಮರಣ ಪ್ರಮಾಣಪತ್ರ, ಜಾತಿ ಮತ್ತು ಆದಾಯ ಪ್ರಮಾಣಪತ್ರ ಹಾಗೂ ಜಮೀನಿನ ಉತಾರ (RTC) ಸೇರಿದಂತೆ ವಿವಿಧ ತುರ್ತು ದಾಖಲೆಗಳನ್ನು ಪಡೆಯಲು ತಾಲೂಕಿನ ದೂರದ ಹಳ್ಳಿಗಳಿಂದ ನೂರಾರು ಜನರು ನಿತ್ಯ ಕಚೇರಿಗೆ ಆಗಮಿಸುತ್ತಿದ್ದಾರೆ.

ಆದರೆ, ಅಧಿಕಾರಿಗಳಿಂದ ‘ಸರ್ವರ್ ಡೌನ್’ ಎಂಬ ಒಂದೇ ಸಿದ್ಧಸೂತ್ರದ ಉತ್ತರ ವ್ಯಕ್ತವಾಗುತ್ತಿದ್ದು, ಯಾವುದೇ ಕೆಲಸಗಳು ಸಸೂತ್ರವಾಗಿ ನೆರವೇರುತ್ತಿಲ್ಲ. ಶಾಲಾ-ಕಾಲೇಜು ಪ್ರವೇಶ ಹಾಗೂ ವಿದ್ಯಾರ್ಥಿವೇತನಕ್ಕೆ ಜಾತಿ ಮತ್ತು ಆದಾಯ ಪ್ರಮಾಣಪತ್ರ ಅನಿವಾರ್ಯವಾಗಿದ್ದು, ಪೋಷಕರು ಮಕ್ಕಳೊಂದಿಗೆ ಗಂಟೆಗಟ್ಟಲೆ ಸರದಿ ಸಾಲಿನಲ್ಲಿ ನಿಲ್ಲಬೇಕಾಗಿದೆ.

‘ಸರ್ಕಾರಿ ಸೇವೆ ಜನರ ಮನೆ ಬಾಗಿಲಿಗೆ’: ಸರ್ಕಾರದ ಘೋಷಣೆ ಮಾತಿಗೆ ಸೀಮಿತ ಎಂದ ರೈತರು

ಇನ್ನೊಂದೆಡೆ ಕೃಷಿ ಕೆಲಸಗಳನ್ನು ಬದಿಗೊತ್ತಿ ಕಚೇರಿಗೆ ಬರುವ ರೈತರು ಮೂರ್ನಾಲ್ಕು ದಿನಗಳಿಂದ ಅಲೆದಾಡುವಂತಾಗಿದೆ. ಮಹಿಳೆಯರು ಹಾಗೂ ಕೂಲಿ ಕಾರ್ಮಿಕರು ದಿನದ ದುಡಿಮೆಯನ್ನು ಕಳೆದುಕೊಂಡು ಬರಿಗೈಯಲ್ಲಿ ಮನೆಗೆ ಹಿಂತಿರುಗುತ್ತಿದ್ದಾರೆ. ‘ಸರ್ಕಾರಿ ಸೇವೆ ಜನರ ಮನೆ ಬಾಗಿಲಿಗೆ’ ಎಂಬ ಸರ್ಕಾರದ ಘೋಷಣೆ ಕೇವಲ ಮಾತಿಗೆ ಸೀಮಿತವಾಗಿದ್ದು, ತಾಲೂಕು ಆಡಳಿತದ ವಿಳಂಬ ಧೋರಣೆಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸರ್ಕಾರವೇ ನಿಮ್ಮ ಮನೆ ಬಾಗಿಲಿಗೆ!;ಪ್ರಜಾಸೇವಾ ಯೋಜನೆಯ ಸಂಪೂರ್ಣ ವಿವರ ಇಲ್ಲಿದೆ

ಜಿಲ್ಲಾಡಳಿತ ತಕ್ಷಣವೇ ಮಧ್ಯಪ್ರವೇಶಿಸಿ ತಾಂತ್ರಿಕ ಸಮಸ್ಯೆಯನ್ನು ಪರಿಹರಿಸಿ, ಶಾಶ್ವತ ಪರಿಹಾರ ಕಲ್ಪಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಂಜೀವ ಕುಮಾರ್​ ಪಾಂಡ್ರೆ, ಗದಗ

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More
Loading...
Unable to load recommendations.
Follow Us