ಗದಗ, ಜ.22: ಅಯೋಧ್ಯೆ ರಾಮ ಮಂದಿರದಲ್ಲಿ (Ayodhya Ram Mandir) ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಗೆ ಇಡೀ ಭಾರತ ಕಾತುರದಿಂದ ಕಾಯುತ್ತಿದೆ. ಪ್ರತಿ ಜಿಲ್ಲೆ, ರಾಜ್ಯಗಳಲ್ಲಿ ಹಬ್ಬದ ವಾತಾವರಣ ಮನೆ ಮಾಡಿದೆ. ಆದರೆ ಇಲ್ಲೊಬ್ಬ ಕಿಡಿಗೇಡಿ ರಾಮ ಮಂದಿರದ ಚಿತ್ರವನ್ನು ತಿರುಚಿ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿ ಜೈಲು ಸೇರಿದ್ದಾನೆ. ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ತಾಜುದ್ದೀನ್ ದಫೇದಾರ್ ಎಂಬ ಯುವಕನೊಬ್ಬ ಅಯೋಧ್ಯೆ ರಾಮ ಮಂದಿರದ ಮೇಲೆ ಹಸಿರು ಬಾವುಟ ಹಾರಿಸಿರುವಂತೆ ಫೋಟೋ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ.
ಅಯೋಧ್ಯೆ ರಾಮ ಮಂದಿರದಲ್ಲಿ ರಾಮನ ಪ್ರಾಣಪ್ರತಿಷ್ಠಾಪನೆಗೆ ಕ್ಷಣಗಣನೆ ಆರಂಭದಲ್ಲಿ ಇಂತಹ ಘಟನೆ ನಡೆದಿದೆ. ರಾಮ ಮಂದಿರದ ಮೇಲೆ ಹಸಿರು ಬಾವುಟ ಹಾಕಿರುವ ಚಿತ್ರ ಫೇಸ್‌ಬುಕ್‌ನಲ್ಲಿ ಫೋಸ್ಟ್ ಮಾಡಲಾಗಿದೆ. ಸುದ್ಧಿ ತಿಳಿಯುತ್ತಿದ್ದಂತೆ ಹಿಂದೂಪರ ಸಂಘಟನೆಗಳ ಮುಖಂಡರು ಆಕ್ರೋಶ ಹೊರ ಹಾಕಿದ್ದು ಗಜೇಂದ್ರಗಡ ಪೊಲೀಸರು ತಾಜುದ್ದೀನ್ ದಫೇದಾರ್ ಎಂಬಾತನನ್ನು ಬಂಧಿಸಿದ್ದಾರೆ. ಪಟ್ಟಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಬಜರಂಗದಳ ಸೇರಿ ವಿವಿಧ ಸಂಘಟನೆಗಳ ಕಾರ್ಯಕರ್ತರು ತಡರಾತ್ರಿ ಪೊಲೀಸ್ ಠಾಣೆಗೆ ದೌಡಾಯಿಸಿ ಯುವಕನಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಯುವಕನ ವಿರುದ್ಧ ಎಫ್‌ಐಆರ್ ದಾಖಲಾಗಿದೆ ಎಂದು ಪಿಎಸ್‌ಐ ಸೋಮನಗೌಡರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: Ram mandir: ರಾಮಲಾಲ ಪ್ರಾಣ ಪ್ರತಿಷ್ಠಾಕ್ಕಾಗಿ ಅಯೋಧ್ಯೆಗೆ ತಲುಪಿದ ವಿರಾಟ್ ಕೊಹ್ಲಿ: ವಿಡಿಯೋ ನೋಡಿ
ರಾಮನ ನಂಟಿರುವ ಪುಣ್ಯ ಸ್ಥಳಗಳಿಗೆ ಭೇಟಿ ನೀಡಿದ್ದಾಗಿದೆ. ರಾಮ ಸೀತೆ ಇದ್ದ ಸ್ಥಳಗಳಲ್ಲಿ ಪೂಜೆ ಸಲ್ಲಿಸಿದ್ದಾಗಿದೆ. ಪ್ರಧಾನಿ ಮೋದಿ ಮಹಾರಾಷ್ಟ್ರದ ನಾಸಿಕ್, ಆಂಧ್ರಪ್ರದೇಶದ ಲೇಪಾಕ್ಷಿ, ಕೇರಳ ತ್ರಿಪಯಾರ್, ತಮಿಳುನಾಡಿನ ರಂಗಸ್ವಾಮಿ ಹಾಗೂ ರಾಮೇಶ್ವರಂ, ದನುಷ್ಕೋಟಿಯ ದರ್ಶನ ಪಡೆದಿದ್ದಾರೆ. ತಣ್ಣೀರಿನ ಸ್ನಾನ ಮಾಡಿದ್ದಾರೆ. ಸಮುದ್ರದಲ್ಲಿ ಮಿಂದೆದ್ದ್ದಿದ್ದಾರೆ. ಬರೀಗಾಲಲ್ಲಿ ನಡೆದಿದ್ದಾರೆ. ಜಪ ತಪ ಮಾಡಿದ್ದಾರೆ. ಇದೀಗ ರಾಮನ ಪ್ರಾಣಪ್ರತಿಷ್ಠಾನೆಗೆ ಅಣಿಯಾಗಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಬಾಲರಾಮನ ಪ್ರಾಣಪ್ರತಿಷ್ಠಾಪನೆಯ ಮುಖ್ಯ ಯಜಮಾನರು. ಹೀಗೆ ಕಳೆದ 11 ದಿನಗಳಿಂದ ಕಠಿಣ ಯಮನಿಯಮ ಪಾಲಿಸಿದ್ದಾರೆ. ಆತ್ಮಶುದ್ಧಿಯ ಪರಿಪೂರ್ಣತೆಯ ಜತೆಗೆ ಸ್ವಯಂ ದೈವಿ ಶಕ್ತಿಯನ್ನು ಅಹ್ವಾನಿಸಿಕೊಳ್ಳುವ ನಿಟ್ಟಿನಲ್ಲಿ ಹೆಜ್ಜೆಯನ್ನಿಟ್ಟಿದ್ದಾರೆ. ಇದೀಗ ಅಂತಿಮ ಘಟ್ಟದಲ್ಲಿ ಶ್ರೀರಾಮನಿಗೆ ಪ್ರಾಣಪ್ರತಿಷ್ಠನೆಯ ಪರಮ ಪುಣ್ಯಕಾರ್ಯಕ್ಕೆ ಸಜ್ಜಾಗಿದ್ದಾರೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ