ಗದಗನಲ್ಲಿ ಅಂತಾರಾಜ್ಯ ಗಾಂಜಾ ಜಾಲ ಪತ್ತೆ: ಸೊಲ್ಲಾಪುರದಿಂದ ಮಾಲು ಸಾಗಿಸುತ್ತಿದ್ದ ಇಬ್ರು ಸೇರಿ ನಾಲ್ವರ ಬಂಧನ

ಗದಗ ಗ್ರಾಮೀಣ ಪೊಲೀಸರು ಅಂತಾರಾಜ್ಯ ಗಾಂಜಾ ಜಾಲ ಭೇದಿಸಿದ್ದು, ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತರಿಂದ 1.17 ಲಕ್ಷ ರೂ ಮೌಲ್ಯದ 2.3 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಇನ್ನು ಹುಬ್ಬಳ್ಳಿ ಗಾಂಜಾ ಮಾರಾಟ ಪ್ರಕರಣದಲ್ಲಿ ಧಾರವಾಡ ನ್ಯಾಯಾಲಯ ಇಬ್ಬರಿಗೆ 3 ವರ್ಷ ಜೈಲು ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.

ಗದಗನಲ್ಲಿ ಅಂತಾರಾಜ್ಯ ಗಾಂಜಾ ಜಾಲ ಪತ್ತೆ: ಸೊಲ್ಲಾಪುರದಿಂದ ಮಾಲು ಸಾಗಿಸುತ್ತಿದ್ದ ಇಬ್ರು ಸೇರಿ ನಾಲ್ವರ ಬಂಧನ
ಬಂಧಿತರು
Edited By:

Updated on: Oct 18, 2026 | 4:53 PM

ಮುಖ್ಯಾಂಶಗಳು

  • ಗದಗ ಗ್ರಾಮೀಣ ಪೊಲೀಸರ ಭರ್ಜರಿ ಬೇಟೆ‌‌‌
  • ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಜಾಲ ಬೇಧಿಸಿದ ಪೊಲೀಸರು
  • ಗದಗ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ

ಗದಗ, ಅಕ್ಟೋಬರ್​​​ 18: ಇಬ್ಬರು ಅಂತಾರಾಜ್ಯ ಗಾಂಜಾ ದಂಧೆಕೋರರು ಸೇರಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ ಪಡೆದು ದಾಳಿ ಮಾಡಿ ಬಂಧಿಸುವ ಮೂಲಕ ಗದಗ ಗ್ರಾಮೀಣ ಪೊಲೀಸರು ಭರ್ಜರಿ ಬೇಟೆ‌‌‌ ಆಡಿದ್ದಾರೆ. ಗ್ರಾಮೀಣ ಸಿಪಿಐ ಸಿದ್ದರಾಮೇಶ್ವರ ಗಡಾದ್ ನೇತೃತ್ವದ ತಂಡ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಜಾಲ ಬೇಧಿಸಿದ್ದಾರೆ‌. ಬಂಧಿತರಿಂದ 1.17 ಲಕ್ಷ ರೂ ಮೌಲ್ಯದ 2ಕೆ.ಜಿ 341 ಗ್ರಾಂ ಒಣ ಗಾಂಜಾ ವಶಕ್ಕೆ ಪಡೆಯಲಾಗಿದೆ.

ನಾಲ್ವರ ಬಂಧನ 

ಮಹಾರಾಷ್ಟ್ರ ರಾಜ್ಯದ ಸೊಲ್ಲಾಪುರದ ಆಕಾಶ್​ ಕಡೇಕರ (23) ಮತ್ತು ರವಿ ಕಡೇಕರ (20) ಗದಗ ನಗರಕ್ಕೆ ಗಾಂಜಾ ಸರಬರಾಜು ಮಾಡುತ್ತಿದ್ದರು. ಮಂಜುನಾಥ್ (36) ಮತ್ತು ಭಾಷಾಸಾಬ್ (26) ಗದಗನಲ್ಲಿ ಮಾರಾಟ ಮಾಡುತ್ತಿದ್ದರು. ಸದ್ಯ ಎಲ್ಲರನ್ನು ಬಂಧಿಸಲಾಗಿದೆ.

Loading...

ಇದನ್ನೂ ಓದಿ: ಭಗತ್ ಸಿಂಗ್ ಫೋಟೋ ಬಳಸಿ ಗಾಂಜಾ ಸಾಗಾಟ: ಬೆಂಗಳೂರಿನಲ್ಲಿ 1.70 ಕೋಟಿ ರೂ. ಮೌಲ್ಯದ 317 ಕೆಜಿ ಗಾಂಜಾ ಜಪ್ತಿ

ಸೊಲ್ಲಾಪುರದಿಂದ ಆರೋಪಿಗಳು ಪೂರೈಕೆ ಮಾಡುತ್ತಿದ್ದ ಗಾಂಜಾವನ್ನು ಮಂಜುನಾಥ್ ಜಾಧವ ಸಣ್ಣಸಣ್ಣ ಪಾಕೆಟ್ ಮಾಡಿ ಭಾಷಾಸಾಬ್​ಗೆ 200 ರೂ.ಗೆ ಮಾರಾಟ ಮಾಡುತ್ತಿದ್ದ. ಈ ಭಾಷಾಸಾಬ್ 300ರಿಂದ 400 ರೂ.ಗೆ ಮಾರಾಟ ಮಾಡುತ್ತಿದ್ದ. ಸದ್ಯ ಪೊಲೀಸರು ಗಾಂಜಾ ಮಾರಾಟ ಜಾಲವನ್ನು ಬೇಧಿಸಿದ್ದಾರೆ‌.

ಗಾಂಜಾ ಮಾರಾಟ ಪ್ರಕರಣದಲ್ಲಿ ಇಬ್ಬರಿಗೆ 3 ವರ್ಷ ಜೈಲುಶಿಕ್ಷೆ: 25 ಸಾವಿರ ರೂ.ದಂಡ

ಹುಬ್ಬಳ್ಳಿಯಲ್ಲಿ ಗಾಂಜಾ ಸಾಗಾಟ ಮತ್ತು ಅಕ್ರಮ ಮಾರಾಟ ಪ್ರಕರಣದಲ್ಲಿ ಇಬ್ಬರಿಗೆ 3 ವರ್ಷ ಜೈಲುಶಿಕ್ಷೆ ವಿಧಿಸಿ ಧಾರವಾಡದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಬಸವರಾಜ್ ಭಜಂತ್ರಿ, ಶಿವರಾಜ್ ಗಜಕೋಶ ಎಂಬುವರಿಗೆ 3 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 25 ಸಾವಿರ ರೂ.ದಂಡ ವಿಧಿಸಲಾಗಿದೆ. ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 2023ರಲ್ಲಿ 11,500 ರೂ. ಮೌಲ್ಯದ 1,154 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿತ್ತು.

1.1 ಕೋಟಿ ರೂ ಮೌಲ್ಯದ 500 ಗಾಂಜಾ ಗಿಡಗಳು ಜಪ್ತಿ: ಓರ್ವ ಅರೆಸ್ಟ್​

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ದಿಂಡವಾರ ಗ್ರಾಮದ ಬಳಿ ಜಮೀನಿನಲ್ಲಿ ಬೆಳೆದಿದ್ದ 1 ಕೋಟಿ 1 ಲಕ್ಷ 37 ಸಾವಿರ ರೂ ಮೌಲ್ಯದ 500 ಗಾಂಜಾ ಗಿಡಗಳನ್ನ ಸೀಜ್ ಮಾಡಲಾಗಿದೆ. ಜಮೀನಿನಲ್ಲಿ ತೊಗರಿ ಬೆಳೆ ಮಧ್ಯೆ ಗಾಂಜಾ ಬೆಳೆದಿದ್ದ ಶಿವಶಂಕರ್ ಜೀರ್ ಎಂಬಾತನನ್ನು ಬಂಧಿಸಲಾಗಿದೆ. ಪ್ರಕರಣ ಭೇದಿಸಿದ ಬಸವನ ಬಾಗೇವಾಡಿ ಪೊಲೀಸ್ ಸಿಬ್ಬಂದಿ ಕಾರ್ಯಕ್ಕೆ ಎಸ್​​ಪಿ ಲಕ್ಷ್ಮಣ ನಿಂಬರಗಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:46 pm, Sun, 18 October 26

ಸಂಜೀವ ಕುಮಾರ್​ ಪಾಂಡ್ರೆ, ಗದಗ

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More
Loading...
Unable to load recommendations.
Follow Us