ಗದಗ: ಹೆಚ್ಚಾದ ಮನೆಕಳ್ಳತನ ನಿಯಂತ್ರಣಕ್ಕೆ ಪೊಲೀಸ್ ಇಲಾಖೆ ಪ್ಲಾನ್; ಇಲ್ಲಿದೆ ವಿವರ

ಗದಗ ಜಿಲ್ಲೆಯಲ್ಲಿ ಮನೆಕಳ್ಳರ ಹಾವಳಿ ಹೆಚ್ಚಾಗಿದೆ. ‌ಲಾಕ್​ ಆಗಿರುವ ಮನೆಗಳನ್ನೆ ಟಾರ್ಗೆಟ್ ಮಾಡುವ ಕಿಲಾಡಿ ಕಳ್ಳರು, ಬೀಗ ಹಾಕಿದ ಮನೆಯಲ್ಲಿದ್ದ ಚಿನ್ನ, ಬೆಳ್ಳಿ, ಹಣವನ್ನು ದೋಚಿಕೊಂಡು ಕಳ್ಳರು ನಾಪತ್ತೆಯಾಗುತ್ತಿದ್ದಾರೆ. ಇದು ಪೊಲೀಸ್ ಇಲಾಖೆಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಹೀಗಾಗಿ ಗದಗ ಜಿಲ್ಲಾ ಪೊಲೀಸ್ ಇಲಾಖೆ ಬೆಸ್ಟ್ ಪ್ಲಾನ್ ಮಾಡಿದೆ. ಅಷ್ಟಕ್ಕೂ ಮನೆಕಳ್ಳತನ ನಿಯಂತ್ರಣಕ್ಕೆ ಮಾಡಿರೋ ಪ್ಲಾನ್ ಏನೂ ಅಂತೀರಾ? ಹಾಗಿದ್ರೆ ಈ ಸ್ಟೋರಿ ಓದಿ.

ಗದಗ: ಹೆಚ್ಚಾದ ಮನೆಕಳ್ಳತನ ನಿಯಂತ್ರಣಕ್ಕೆ ಪೊಲೀಸ್ ಇಲಾಖೆ ಪ್ಲಾನ್; ಇಲ್ಲಿದೆ ವಿವರ
ಹೆಚ್ಚಾದ ಮನೆಕಳ್ಳತನ ನಿಯಂತ್ರಣಕ್ಕೆ ಗದಗ ಪೊಲೀಸ್ ಇಲಾಖೆ ಪ್ಲಾನ್
Follow us
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Updated By: ಕಿರಣ್ ಹನುಮಂತ್​ ಮಾದಾರ್

Updated on:Mar 30, 2024 | 8:02 PM

ಗದಗ, ಮಾ.30: ಗದಗ-ಬೆಟಗೇರಿ(Gadag-Betgeri) ಅವಳಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಮನೆಕಳ್ಳತನ ಪ್ರಕರಣಗಳು ಹೆಚ್ಚಾಗಿವೆ. ಕಳೆದ ಮೂರು ತಿಂಗಳಿಂದ ಕಳ್ಳರ ಹಾವಳಿ ಹೆಚ್ಚಾಗಿದ್ದು, ಜಿಲ್ಲೆಯ ಜನರು ಬೆಚ್ಚಿಬಿದ್ದಿದ್ದಾರೆ. ಹಾಡುಹಗಲೇ ಮನೆಯನ್ನು ದೋಚಿಕೊಂಡು ಕಳ್ಳರು ನಾಪತ್ತೆ ಆಗುತ್ತಿದ್ದಾರೆ. ಅದರಲ್ಲೂ ವಿಶೇಷವಾಗಿ ಬೀಗ ಹಾಕಿದ ಮನೆಗಳನ್ನು ಕಳ್ಳರು ಟಾರ್ಗೆಟ್ ಮಾಡುತ್ತಿದ್ದಾರೆ. ಹೀಗಾಗಿ ಗದಗ ಜಿಲ್ಲಾ ಪೊಲೀಸರು ಮನೆಕಳ್ಳತನ ನಿಯಂತ್ರಣಕ್ಕೆ ತರಲು ಬೆಸ್ಟ್ ಪ್ಲಾನ್ ಮಾಡಿದ್ದು, ಲಾಕ್ಡ್ ಹೌಸ್ ಮಾನಿಟರಿಂಗ್ ಸಿಸ್ಟಮ್ ಅಳವಡಿಕೆ ಮಾಡಿದ್ದಾರೆ.

ಈ ಮೂಲಕ ಗದಗ- ಬೆಟಗೇರಿ ಅವಳಿ ನಗರದ ಸೇರಿದಂತೆ ಜಿಲ್ಲೆಯ ಪಟ್ಟಣ, ಗ್ರಾಮೀಣ ಭಾಗಗಳಲ್ಲಿ ಪೊಲೀಸ್ ಇಲಾಖೆಯ ವಾಹನದಲ್ಲಿ ಧ್ವನಿ ವರ್ಧಕ ಮೂಲಕ ಜಾಗೃತಿ ಮೂಡಿಸುತ್ತಿದ್ದಾರೆ. ಬಹಳ ದಿನಗಳ ಕಾಲ ಮನೆಯಿಂದ ಹೊರಗಡೆ ಹೋಗುವಾಗ ಮನೆಯಲ್ಲಿ ಚಿನ್ನ, ಬೆಳ್ಳಿ, ಹಣ ಇಡಬಾರದು. ಹಾಗೆಯೇ ಪೊಲೀಸ್ ಇಲಾಖೆಯ ನಂಬರ್ ಮೆಸೇಜ್ ಅಥವಾ ವಾಟ್ಸ್ ಆಪ್ ಮಾಡುವಂತೆ, ಮನೆ ಮನೆಗೆ ಹೋಗಿ ಕರಪತ್ರಗಳನ್ನು ನೀಡುತ್ತಿದ್ದಾರೆ. ಜನರು ಕೂಡ ಪೊಲೀಸ್ ಇಲಾಖೆಯೊಂದಿಗೆ ಸಾಥ್ ನೀಡಿದ್ರೆ, ಬೀಗ್ ಹಾಕಿದ ಮನೆಗಳ ಕಳ್ಳತನ ಪ್ರಕರಣಗಳನ್ನು ನಿಯಂತ್ರಣ ಮಾಡಬಹುದು ಎಂದು ಗದಗ ಎಸ್ಪಿ ಬಿ ಎಸ್ ನೇಮಗೌಡ ಹೇಳಿದ್ದಾರೆ.

ಇದನ್ನೂ ಓದಿ:ಹಣ ಕಳ್ಳತನವಾಗಿದೆ ಎಂದು ಸಮವಸ್ತ್ರ ಬಿಚ್ಚಿಸಿ ಪರಿಶೀಲನೆ ನಡೆಸಿದ್ದ ಶಿಕ್ಷಕಿಯರು, ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

ಇನ್ನು ಈ ವರ್ಷದ ಜನವರಿ ತಿಂಗಳಲ್ಲಿ 7 ಪ್ರಕರಣಗಳು ಹಾಗೂ ಫೆಬ್ರವರಿ ತಿಂಗಳಲ್ಲಿ 21 ಪ್ರಕರಣಗಳು ದಾಖಲಾಗಿದ್ದು, ಮಾರ್ಚ್ ತಿಂಗಳಲ್ಲಿ ಕೂಡ ಮನೆಕಳ್ಳರ ಹಾವಳಿ ಮುಂದುವರೆದಿದೆ. ಹೀಗಾಗಿ ಪೊಲೀಸ್ ಇಲಾಖೆ ಲಾಕ್ಡ್ ಹೌಸ್ ಮಾನಿಟರಿಂಗ್ ಸಿಸ್ಟಮ್ ಮೊರೆ ಹೋಗಿದ್ದಾರೆ. ಮನೆ ಮಾಲೀಕರು ಪೊಲೀಸ್ ಇಲಖೆ ನೀಡಿರುವ ನಂಬರಿಗೆ ಹೆಲ್ಪ್ ಎಂದು ಮೆಸೇಜ್ ಮಾಡಿದ್ರೆ ಸಾಕು, ಆಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನೈಟ್ ಬಿಟ್, ಡೇ ಬಿಟ್ ಇರುವ ಸಿಬ್ಬಂದಿಗಳು ಅಂತಹ ಮನೆಗಳ ಮೇಲೆ ನಿಗಾ ವಹಿಸುತ್ತಾರೆ. ಈಗಾಗಲೇ ಗದಗ ಜಿಲ್ಲೆಯಲ್ಲಿ ನಡೆದ ಕಳ್ಳತನ ಪ್ರಕರಣಗಳು, ಪತ್ತೆ ಮಾಡಲು ಪೊಲೀಸ್ ಇಲಾಖೆ ಮುಂದಾಗಿದೆ. ಕಳ್ಳರ ಕೈಚಳಕ ಥರ್ಡ್‌ ಐ ಕ್ಯಾಮರಾ ಹಾಗೂ ಖಾಸಗಿ ಕ್ಯಾಮರಾಗಳಲ್ಲಿ ಸೆರೆಯಾಗಿವೆ. ಅವುಗಳ ಆಧರಿಸಿ ಕಳ್ಳರನ್ನು ಪತ್ತೆ ಮಾಡಲಾಗುತ್ತಿದೆಯಂತೆ.

ಕೆಲವು ಕಳ್ಳರ ಬಗ್ಗೆ ಮಾಹಿತಿ ಸಿಕ್ಕಿದ್ದು, ಅವರು ನಾಪತ್ತೆಯಾಗಿದ್ದಾರೆ. ಆದಷ್ಟು ಬೇಗ ಈ ಹಿಂದಿನ ಪ್ರಕರಣಗಳು ಬೇಧಿಸುತ್ತೇವೆ ಎಂದು ಎಸ್ಪಿ ಭರವಸೆ ಕೊಟ್ಟಿದ್ದಾರೆ. ಇನ್ನು ಅವಳಿ ನಗರದಲ್ಲಿ ಪೊಲೀಸ್ ವಾಹನದ ಮೂಲಕ ವಿವಿಧ ಬಡಾವಣೆ ಹಾಗೂ ಮನೆ ಮನೆಗೆ ಬಂದು ಪೊಲೀಸರು ಕರಪತ್ರಗಳನ್ನು ಹಂಚುವ ಮೂಲಕ ಕಳ್ಳತನ ಪ್ರಕರಣಗಳನ್ನು ನಿಯಂತ್ರಣ ಮಾಡಲು ಪ್ಲಾನ್ ಮಾಡಿದ್ದಾರೆ. ಕಳ್ಳರ ಹಾವಳಿ ನಿಯಂತ್ರಣಕ್ಕೆ, ಪೊಲೀಸ್ ಇಲಾಖೆ ಜಿಲ್ಲೆಯಲ್ಲಿ ಕಣ್ಗಾವಲು ಎನ್ನುವ ಕಾನ್ಸೆಪ್ಟ್ ಜಾರಿ ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:00 pm, Sat, 30 March 24

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?