AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಶಾಸಕ ಬೆನ್ನಲ್ಲೇ ಗದಗ ASI ಲೋಕಾಯುಕ್ತ ಬಲೆಗೆ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪೊಲೀಸಪ್ಪ

ಗುತ್ತಿಗೆದಾರನಿಂದ ಕಮಿಷನ್ ರೂಪದಲ್ಲಿ 5 ಲಕ್ಷ ರೂಪಾಯಿ ಹಣ ಪಡೆಯುತ್ತಿದ್ದ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಇದೀಗ ಜೈಲು ಪಾಲಾಗಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೀಶ್ವರ ಪಟ್ಟಣದಲ್ಲಿರುವ ಬಾಲಾಜಿ ಆಸ್ಪತ್ರೆಯಲ್ಲಿ ಐದು ಲಕ್ಷ ರೂ. ಪಡೆಯುತ್ತಿರುವಾಗಲೇ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದರು. ಇದೀಗ ಬೆನ್ನಲ್ಲೇ ಇದೀಗ ಗದಗದಲ್ಲಿ ಲೋಕಾಯುಕ್ತ ಅಧಿಕಾರಿಗಳ ಬೇಟಿ ಮುಂದುವರೆದಿದ್ದು, ಇದೀಗ ಎಎಸ್​​ಐ ಸಹ ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದಿದ್ದಾರೆ.

ಬಿಜೆಪಿ ಶಾಸಕ ಬೆನ್ನಲ್ಲೇ ಗದಗ ASI ಲೋಕಾಯುಕ್ತ ಬಲೆಗೆ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪೊಲೀಸಪ್ಪ
Gadag Asi
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on: Feb 25, 2026 | 7:10 PM

Share

ಗದಗ, (ಫೆಬ್ರವರಿ 25): ಲೋಕಾಯುಕ್ತ (Lokayukta) ಅಧಿಕಾರಿಗಳ ದಾಳಿ ವೇಳೆ ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ (Chandru Lamani) ಹಾಗೂ ಅವರ ಇಬ್ಬರು ಪಿಎಗಳಾದ ಮಂಜುನಾಥ್ ಹಾಗೂ ಗುರುನಾಯಕ್ ಸಹ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಸದ್ಯ ಮೂವರನ್ನು ಪರಪ್ಪನ ಅಗ್ರಹಾರ ಜೈಲಿಗಟ್ಟಲಾಗಿದೆ. ಇದರ ಬೆನ್ನಲ್ಲೇ ಇದೀಗ ಗದಗ (Gadag)  ಶಹರ ಠಾಣೆ ASI ಚನ್ನಬಸಪ್ಪ ಇಂಗಳಳ್ಳಿ ಸಹ ಲೋಕಾಯುಕ್ತ ಬಲೆಬಿದ್ದಿದ್ದಾರೆ. ಪಿಟಿಷನ್ ಅರ್ಜಿ ವಿಚಾರಣೆಗೆ ಲಂಚ 10 ಸಾವಿರ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ರೆಡ್​​ ಹ್ಯಾಂಡ್ ಆಗಿ ಹಿಡಿದಿದ್ದಾರೆ.

ಗದಗ ಶಹರ ಪೊಲೀಸ್ ಠಾಣೆಯ ಎಎಸ್ಐ ಚೆನ್ನಬಸಪ್ಪ ಇಂಗಳಳ್ಳಿ ಅವರು ಪಿಟಿಷನ್ ಅರ್ಜಿ ವಿಚಾರಣೆಗೆ ಸುಮಾರು ಹತ್ತು ಸಾವಿರ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ವೀರೇಶ ಪೂಜಾರ್ ಎಂಬುವರು ಲೋಕಾಯುಕ್ತಕ್ಕೆ ದೂರು ದಾಖಲಿಸಿದ್ದರು. ಈ ದೂರಿನ ಹಿನ್ನೆಲೆ, ಇಂದು (ಫೆಬ್ರವರಿ 25) ಪೊಲೀಸ್ ಠಾಣೆಯಲ್ಲಿ ಹತ್ತು ಸಾವಿರ ಲಂಚ ಪಡೆಯುವಾಗ ರೆಡ್​​ಹ್ಯಾಂಡ್ ಆಗಿ ಲಾಕ್​ ಆಗಿದ್ದಾರೆ. ಲೋಕಾಯುಕ್ತ ಡಿವೈಎಸ್​ಪಿ ವಿಜಯ ಬಿರಾದಾರ ನೇತೃತ್ವದ ತಂಡ ದಾಳಿ ಮಾಡಿದೆ.

ಇದನ್ನೂ ಓದಿ: ಚಂದ್ರು ಲಮಾಣಿಗೆ ನ್ಯಾಯಾಂಗ ಬಂಧನ: ಪರಪ್ಪನ ಅಗ್ರಹಾರ ಪಾಲಾದ ಬಿಜೆಪಿ ಶಾಸಕ

ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ PDO

ಇನ್ನೊಂದೆಡೆ ಚಿಕ್ಕಮಗಳೂರಿನಲ್ಲೂ ಸಹ ಲೋಕಾಯುಕ್ತ ದಾಳಿ ನಡೆಸಿದ್ದು, ಲಂಚ ಪಡೆಯುವಾಗ ಪಿಡಿಓ ಬಲೆಗೆ ಬಿದ್ದಿದ್ದಾರೆ. ಸೈಟ್​​ ಒಂದಕ್ಕೆ ಎನ್​​ಒಸಿ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಅದರಂತೆ ಹಣ ಸ್ವೀಕರಿಸುತ್ತಿದ್ದ ವೇಳೆ ಪಿಡಿಒ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕಡೂರು ತಾಲೂಕಿನ ತಂಗಲಿ ಗ್ರಾಮ ಪಂಚಾಯಿತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ನಂಜುಂಡಮ್ಮ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಯಾಗಿದ್ದಾರೆ. ತಿಮ್ಮಶೆಟ್ಟಿ ಎನ್ನುವರು ಲೋಕಾಯಯಕ್ತ ಪೋಲೀಸರಿಗೆ ದೂರು ನೀಡಿದ್ದರು. ಈ ದೂರಿನ ಮೇರೆಗೆ ಲೋಕಾಯುಕ್ತ ಡಿವೈಎಸ್ಪಿ ತಿರುಮಲೇಶ್ ನೇತೃತ್ವದಲ್ಲಿ ದಾಳಿ ಮಾಡಿ ರೆಡ್​ ಹ್ಯಾಂಡ್ ಆಗಿ ಹಿಡಿದಿದ್ದಾರೆ.

ಮೊನ್ನೆ ಮೊನ್ನೆಯಷ್ಟೇ ಇದೇ ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಶಾಸಕ ಡಾ. ಚಂದ್ರು ಲಮಾಣಿ ಅವರು ಸುಮಾರು ಐದು ಲಕ್ಷ ಲಂಚ ಸ್ವೀಕರಿಸುವ ವೇಳೆ ರೆಡ್​ ಹ್ಯಾಂಡ್​ ಆಗಿ ಲಾಕ್​ ಆಗಿದ್ದರು. ಈ ಘಟನೆ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಆದರೆ, ಇಂತಹ ಘಟನೆಗಳಿಂದ ಎಚ್ಚರಗೊಳ್ಳದ ಕೆಲ ಲಂಚಬಾಕ ಅಧಿಕಾರಿಗಳು ಜನರಿಂದ ಲಂಚ ಸ್ವೀಕರಿಸುವುದನ್ನು ಮುಂದುವರಿಸಿದ್ದಾರೆ. ಇನ್ನು ಲಂಚಬಾಕ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಅಧಿಕಾರಿಗಳು ಸಹ ಸಮರ ಸಾರಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗ್ಯಾಂಗ್​ಸ್ಟರ್ ಸಂದೀಪ್​ಗೆ ಡ್ರಮ್ ಬಾರಿಸಿ ಸ್ವಾಗತ ಕೋರಿದ ಗ್ರಾಮಸ್ಥರು
ಗ್ಯಾಂಗ್​ಸ್ಟರ್ ಸಂದೀಪ್​ಗೆ ಡ್ರಮ್ ಬಾರಿಸಿ ಸ್ವಾಗತ ಕೋರಿದ ಗ್ರಾಮಸ್ಥರು
ಬೆಂಗಳೂರಿನ ಹಲವೆಡೆ ತಡರಾತ್ರಿ ಮಳೆ ಅಬ್ಬರ: ವಾಹನ ಸವಾರರ ಪರದಾಟ
ಬೆಂಗಳೂರಿನ ಹಲವೆಡೆ ತಡರಾತ್ರಿ ಮಳೆ ಅಬ್ಬರ: ವಾಹನ ಸವಾರರ ಪರದಾಟ
ರವಿ ಕನ್ಯಾ, ಚಂದ್ರ ಧನು ರಾಶಿಯಲ್ಲಿ ಸಂಚಾರ: 12 ರಾಶಿಗಳ ಇಂದಿನ ದಿನ ಭವಿಷ್ಯ
ರವಿ ಕನ್ಯಾ, ಚಂದ್ರ ಧನು ರಾಶಿಯಲ್ಲಿ ಸಂಚಾರ: 12 ರಾಶಿಗಳ ಇಂದಿನ ದಿನ ಭವಿಷ್ಯ
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ