ಪರೀಕ್ಷೆ ತ್ಯಜಿಸಿ ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ಕರೆತಂದ ಅಧಿಕಾರಿಗಳು!

ಗದಗದ ಮುಂಡರಗಿ ತಾಲೂಕಿನಲ್ಲಿ ಬಡತನದಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ತ್ಯಜಿಸಿ ಕೂಲಿ ಕೆಲಸಕ್ಕೆ ತೆರಳಿದ್ದ ವಿದ್ಯಾರ್ಥಿನಿಯನ್ನು ಶಿಕ್ಷಣ ಇಲಾಖೆಯ ಅಧಿಕಾರಿಗಳು ಮನವೊಲಿಸಿ ಮತ್ತೆ ಪರೀಕ್ಷೆ ಬರೆಯುವಂತೆ ಮಾಡಿದ್ದಾರೆ. ಈ ಮಾನವೀಯ ಕಾರ್ಯದಿಂದ ವಿದ್ಯಾರ್ಥಿನಿಯ ಭವಿಷ್ಯಕ್ಕೆ ನೆರವಾಗಿದೆ. ಅಧಿಕಾರಿಗಳ ಸಮಯೋಚಿತ ನಡೆಗೆ ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಇದು ಶಿಕ್ಷಣದಿಂದ ವಂಚಿತರಾಗುತ್ತಿರುವ ಇತರ ವಿದ್ಯಾರ್ಥಿಗಳಿಗೂ ಸ್ಫೂರ್ತಿ ನೀಡಿದೆ.

ಪರೀಕ್ಷೆ ತ್ಯಜಿಸಿ ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ಕರೆತಂದ ಅಧಿಕಾರಿಗಳು!
ಪರೀಕ್ಷೆ ತ್ಯಜಿಸಿ ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ಕರೆತಂದು ಪರೀಕ್ಷೆ ಬರೆಸಿದ ಅಧಿಕಾರಿಗಳು
Edited By:

Updated on: Mar 23, 2026 | 2:47 PM

ಗದಗ, ಮಾರ್ಚ್​ 23: ಬಡತನದ ಕಾರಣದಿಂದ ಹಲವಡೆ ವಿದ್ಯಾರ್ಥಿಗಳು ಶಾಲಾ ಕಾಲೇಜುಗಳನ್ನು ಬಿಟ್ಟು ಕೂಲಿ ಕೆಲಸಕ್ಕೆ ಹೋಗುತ್ತಾರೆ. ಓದಿ, ಪರೀಕ್ಷೆ ಬರೆದು ವಿದ್ಯಾವಂತರಾಗಬೇಕಾದ ಸಮಯದಲ್ಲಿ ಕುಟುಂಬಕ್ಕೆ ನೆರವಾಗಿ ಶಿಕ್ಷಣದಿಂದ (Education) ವಂಚಿತರಾಗುತ್ತಾರೆ. ಇದೇ ರೀತಿಯ ಘಟನೆ ಗದಗದಲ್ಲೂ ನಡೆದಿದ್ದು, ಶಿಕ್ಷಣ ಇಲಾಖೆಯ ಅಧಿಕಾರಿಗಳ ನಡೆಗೆ ಈಗ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ವಿಜ್ಞಾನ ಪರೀಕ್ಷೆಯನ್ನು ಯಶಸ್ವಿಯಾಗಿ ಬರೆದ ವಿದ್ಯಾರ್ಥಿನಿ

ಜಿಲ್ಲೆಯ ಮುಂಡರಗಿ ತಾಲೂಕಿನ ಪೇಠಾಲೂರು ಗ್ರಾಮದಲ್ಲಿ ಬಡತನದ ಕಾರಣ ಎಸ್‌ಎಸ್‌ಎಲ್‌ಸಿ ಪರೀಕ್ಷೆ ತ್ಯಜಿಸಿ ಕೂಲಿ ಕೆಲಸಕ್ಕೆ ತೆರಳಿದ್ದ ವಿದ್ಯಾರ್ಥಿನಿಯನ್ನು ಶಿಕ್ಷಣ ಇಲಾಖೆ ಅಧಿಕಾರಿಗಳು ಹುಡುಕಿ ಕರೆತಂದು ಪರೀಕ್ಷೆ ಬರೆಸಿದ ಘಟನೆ ನಡೆದಿದೆ.

ಪಲ್ಲವಿ ಹಳ್ಳಿಕೇರಿ ಎಂಬ ವಿದ್ಯಾರ್ಥಿನಿ ಮುಂಡರಗಿ ತಾಲೂಕಿನ ಬರದೂರು ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ವ್ಯಾಸಂಗ ಮಾಡುತ್ತಿದ್ದಳು. ಮುಂಡರಗಿ ಪಟ್ಟಣದ ವಿಜಿ ಲಿಂಬಿಕಾಯಿ ಶಿಕ್ಷಣ ಸಂಸ್ಥೆಯಲ್ಲಿ ಪರೀಕ್ಷಾ ಕೇಂದ್ರ ನಿಗದಿಯಾಗಿತ್ತು. ಆದರೆ ಮನೆಯ ಆರ್ಥಿಕ ಸಂಕಷ್ಟದಿಂದ ಪಲ್ಲವಿ ದ್ರಾಕ್ಷಿ ತೋಟಕ್ಕೆ ಕೂಲಿ ಕೆಲಸಕ್ಕೆ ತೆರಳಿದ್ದಳು.

ಇದನ್ನೂ ಓದಿ ಮಕ್ಕಳ ಬಾಳಲ್ಲಿ ಶಾಲಾ ಆಡಳಿತ ಮಂಡಳಿ ಚೆಲ್ಲಾಟ: ಪರೀಕ್ಷೆಯಿಂದ ವಂಚಿತರಾದ SSLC ವಿದ್ಯಾರ್ಥಿಗಳು

ಈ ವಿಚಾರ ತಿಳಿದ ಕ್ಷೇತ್ರ ಶಿಕ್ಷಣಾಧಿಕಾರಿ ಗಂಗಾಧರ ಅಣ್ಣಿಗೇರಿ ಅವರು ತಕ್ಷಣ ಕ್ರಮ ಕೈಗೊಂಡು, ವಿದ್ಯಾರ್ಥಿನಿಯನ್ನು ಮನವೊಲಿಸಿ ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ನಂತರ ಆಕೆ ವಿಜ್ಞಾನ ಪರೀಕ್ಷೆಯನ್ನು ಯಶಸ್ವಿಯಾಗಿ ಬರೆದಿದ್ದಾಳೆ.ಅಧಿಕಾರಿಗಳ ಈ ಮಾನವೀಯ ನಡೆಗೆ ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 

Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More
Follow Us