ಉಸಿರಾಟದ ತೊಂದರೆಯಿಂದ ಮೃತಪಟ್ಟ ಯೋಧ, ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

ಗದಗ: ನಿಮೋನಿಯಾ ಹಾಗೂ ಉಸಿರಾಟದ ತೊಂದರೆಯಿಂದ ಮೃತಪಟ್ಟ ಯೋಧನನ್ನ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ಮಾಡಲಾಗಿದೆ. ಗದಗ ತಾಲೂಕಿನ ಶ್ಯಾಗೋಟಿ ಗ್ರಾಮದ ಹೊರವಲಯದಲ್ಲಿ 34 ವರ್ಷದ ವೀರಪ್ಪ ತಹಶಿಲ್ದಾರ ಎಂಬ ಯೋಧನ ಅಂತ್ಯಕ್ರಿಯೆ ನೆರವೇರಿದೆ. ನಿಮೋನಿಯಾ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಯೋಧ ಗದಗ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದೆರ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ದೇಶದಲ್ಲಿ ಕೊರೊನಾ ಭೀತಿ ಹೆಚ್ಚಿರುವ ಹಿನ್ನೆಲೆಯಲ್ಲಿ ಮೃತ ಯೋಧನನ್ನ ಕೊರೊನಾ ಟೆಸ್ಟ್​ಗೆ ಒಳಪಡಿಸಲಾಗಿತ್ತು. ವರದಿ ನೆಗೆಟಿವ್ ಬಂದಿದೆ. ಯೋಧ ವೀರಪ್ಪ […]

ಉಸಿರಾಟದ ತೊಂದರೆಯಿಂದ ಮೃತಪಟ್ಟ ಯೋಧ, ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ
Follow us
ಸಾಧು ಶ್ರೀನಾಥ್​
|

Updated on:Apr 23, 2020 | 2:48 PM

ಗದಗ: ನಿಮೋನಿಯಾ ಹಾಗೂ ಉಸಿರಾಟದ ತೊಂದರೆಯಿಂದ ಮೃತಪಟ್ಟ ಯೋಧನನ್ನ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ಮಾಡಲಾಗಿದೆ. ಗದಗ ತಾಲೂಕಿನ ಶ್ಯಾಗೋಟಿ ಗ್ರಾಮದ ಹೊರವಲಯದಲ್ಲಿ 34 ವರ್ಷದ ವೀರಪ್ಪ ತಹಶಿಲ್ದಾರ ಎಂಬ ಯೋಧನ ಅಂತ್ಯಕ್ರಿಯೆ ನೆರವೇರಿದೆ.

ನಿಮೋನಿಯಾ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಯೋಧ ಗದಗ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದೆರ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ದೇಶದಲ್ಲಿ ಕೊರೊನಾ ಭೀತಿ ಹೆಚ್ಚಿರುವ ಹಿನ್ನೆಲೆಯಲ್ಲಿ ಮೃತ ಯೋಧನನ್ನ ಕೊರೊನಾ ಟೆಸ್ಟ್​ಗೆ ಒಳಪಡಿಸಲಾಗಿತ್ತು. ವರದಿ ನೆಗೆಟಿವ್ ಬಂದಿದೆ.

ಯೋಧ ವೀರಪ್ಪ ತಹಶಿಲ್ದಾರ 2006 ರಲ್ಲಿ ಸೇವೆಯನ್ನ ಆರಂಭಿಸಿ 158 ನೇ ಬಟಾಲಿಯನ್ ಬಿಎಸ್ಎಫ್ ವೆಸ್ಟ್ ಬೆಂಗಾಲ್ ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ರಜೆಗಾಗಿ ಊರಿಗೆ ಬಂದಿದ್ದು, ಏಪ್ರಿಲ್ 15 ಕ್ಕೆ ರಜೆ ಮುಗಿದಿತ್ತು. ಲಾಕ್​ಡೌನ್ ಹಿನ್ನಲೆಯಲ್ಲಿ ಗ್ರಾಮದಲ್ಲೇ ಉಳಿದಿದ್ದರು. ಉಸಿರಾಟದ ತೊಂದರೆಯಿಂದ ಮೃತಪಟ್ಟಿದ್ದಾರೆ.

ತಂದೆ, ತಾಯಿ, ಹಾಗೂ ಪತ್ನಿ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಗದಗ ಜಿಲ್ಲಾಡಳಿತದಿಂದ ಸರ್ಕಾರಿ ಗೌರವದೊಂದಿಗೆ ಅಂತ್ಯ ಸಂಸ್ಕಾರ ನೆರವೇರಿದೆ. ಕುಟುಂಬಸ್ಥರು ಹಾಗೂ ಕೆಲವು ಸಂಬಂಧಿಕರಿಗೆ ಮಾತ್ರ ಅಂತ್ಯ ಸಂಸ್ಕಾರಕ್ಕೆ ಅವಕಾಶ ನೀಡಲಾಗಿತ್ತು.

Published On - 2:41 pm, Thu, 23 April 20

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ