Swachhta Hi Seva: ಸ್ವಚ್ಛತಾ ಹಿ ಸೇವಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಚಿವ ಎಚ್​ಕೆ ಪಾಟೀಲ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ನಗರಾಭಿವೃದ್ಧಿ ಕೋಶ ಹಾಗೂ ಗದಗ-ಬೆಟಗೇರಿ ನಗರಸಭೆ ಸೇರಿದಂತೆ ವಿವಿಧ ಸಂಘಟನೆಗಳ ಸಹಯೋಗದಲ್ಲಿ ನಗರದ ಭೀಷ್ಮ ಕೆರೆ ಆವರಣದಲ್ಲಿ ಆಯೋಜಿಸಲಾಗಿದ್ದ ಸ್ವಚ್ಛತಾ ಹಿ ಸೇವಾ ಕಾರ್ಯಕ್ರಮವನ್ನು ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಅವರು ಚಾಲನೆ ನೀಡಿದ್ದಾರೆ.

Swachhta Hi Seva: ಸ್ವಚ್ಛತಾ ಹಿ ಸೇವಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಚಿವ ಎಚ್​ಕೆ ಪಾಟೀಲ
ಸೇವಾ ಕಾರ್ಯದಲ್ಲಿ ಸಚಿವ ಎಚ್.ಕೆ. ಪಾಟೀಲ
Follow us
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Updated By: ಗಂಗಾಧರ​ ಬ. ಸಾಬೋಜಿ

Updated on: Oct 01, 2023 | 6:27 PM

ಗದಗ, ಅಕ್ಟೋಬರ್​ 01: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ನಗರಾಭಿವೃದ್ಧಿ ಕೋಶ ಹಾಗೂ ಗದಗ-ಬೆಟಗೇರಿ ನಗರಸಭೆ ಸೇರಿದಂತೆ ವಿವಿಧ ಸಂಘಟನೆಗಳ ಸಹಯೋಗದಲ್ಲಿ ನಗರದ ಭೀಷ್ಮ ಕೆರೆ ಆವರಣದಲ್ಲಿ ಸ್ವಚ್ಛತಾ ಹಿ ಸೇವಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸ್ವಚ್ಛತಾ ಹಿ ಸೇವಾ (Swachhta Hi Seva) ಕಾರ್ಯಕ್ರಮಕ್ಕೆ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಅವರು ಚಾಲನೆ ನೀಡಿ ಮಾತನಾಡಿದರು.

ಸ್ವಚ್ಛತೆ ಮಾಡುವದರಿಂದ ಸ್ವಚ್ಛತೆ ಬಗ್ಗೆ ಗಂಭೀರತೆ ಹಾಗೂ ತಿಳುವಳಿಕೆಯನ್ನು ನೀಡುತ್ತದೆ. ಸ್ವಚ್ಛತೆ ಕುರಿತು ನಮ್ಮನ್ನು ಜಾಗೃತಗೊಳಿಸಲು ಈ ಕಾರ್ಯಕ್ರಮವು ಅತ್ಯಪಯುಕ್ತವಾಗಿದೆ. ಜಿಲ್ಲೆಯಲ್ಲಿ ಇಂದು ಒಟ್ಟು 62 ಕಡೆ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸ್ವಚ್ಛತೆ ಬಗ್ಗೆ ಈ ಒಂದು ದಿನ ಮಾತ್ರ ತೊಡಗಿಸಿಕೊಳ್ಳದೆ ಇದನ್ನು ನಮ್ಮ ದಿನನಿತ್ಯದ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಗದಗ ನಗರವನ್ನು ಸ್ವಚ್ಛ ನಗರವನ್ನಾಗಿಸಲು ಪಣತೊಡುವಂತೆ ಕರೆ ನೀಡಿದರು.

ಇದನ್ನೂ ಓದಿ: ಜನತಾ ದರ್ಶನ: ಸಾರ್ವಜನಿಕರಿಗೆ ಸ್ಥಳದಲ್ಲಿಯೇ ಪರಿಹಾರ ನೀಡಿದ ಸಚಿವ ಎಚ್​ಕೆ ಪಾಟೀಲ

ಜಿಲ್ಲೆಯಲ್ಲಿ ಕಸದಿಂದ ಇಂಧನವನ್ನು ಉತ್ಪಾದನೆಯನ್ನು ಮಾಡುವ ತಂತ್ರಜ್ಞಾನವನ್ನು ಮುಂಬರುವ ದಿನಮಾನಗಳಲ್ಲಿ ಸ್ಥಾಪಿಸಲಾಗುವದು ಈ ಕುರಿತು ಪ್ರಕ್ರಿಯೆಗಳು ಪ್ರಾರಂಭವಾಗಿವೆ. ಗದಗ ನಗರವು ದೇಶದ ಅತ್ಯುತ್ತಮ ಗಾಳಿಯನ್ನು ಹೊಂದಿರುವಂತಹ ಜಿಲ್ಲೆಯಾಗಿರುವುದು ಹೆಮ್ಮೆಯ ವಿಷಯವಾಗಿದ್ದು ಇದೊಂದು ನಮಗೆ ನೈಸರ್ಗಿಕ ಕೊಡುಗೆಯಾಗಿದ್ದು ಇದನ್ನು ಸ್ವಚ್ಚವಾಗಿಟ್ಟುಕೊಳ್ಳುವದು ನಮ್ಮೆಲ್ಲರ ಹೊಣೆಯಾಗಿದ್ದು ನಗರದ ಸ್ವಚ್ಛತೆಗ ನಾವು ನಮ್ಮೆಲ್ಲರೂ ಕೈಜೋಡಿಸುವಂತೆ ತಿಳಿಸಿದರು.

ಇದನ್ನೂ ಓದಿ: ಜನತಾ ದರ್ಶನ: ಪದ್ಮಭೂಷಣ ಪ್ರಶಸ್ತಿಗೆ ಅರ್ಜಿ ಸಲ್ಲಿಸಿದ ವ್ಯಕ್ತಿ, ಸಚಿವ ಹೆಚ್​ಕೆ ಪಾಟೀಲ್ ತಬ್ಬಿಬ್ಬು

ಈ ಸಂದರ್ಭದಲ್ಲಿ ವಿಧಾನ ಪರಿಷತ ಸದಸ್ಯ ಎಸ್.ವಿ.ಸಂಕನೂರ, ಗದಗ-ಬೆಟಗೇರಿ ನಗರ ಸಭೆ ಅಧ್ಯಕ್ಷೆ ಉಷಾ ದಾಸರ, ಉಪಾದ್ಯಕ್ಷೆ ಸುನಂದಾ ಬಾಕಳೆ, ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಾರುತಿ ಬ್ಯಾಕೋಡ, ನಗರಸಭೆ ಪೌರಾಯುಕ್ತ ಗಂಗಪ್ಪ ಎಂ,. ವಾರ್ತಾಧಿಕಾರಿ ವಸಂತ ಮಡ್ಲೂರ, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ ವಿಭೂತಿ ಸೇರಿದಂತೆ ನಗರ ಸಭೆಯ ಸದಸ್ಯರು, ಚುನಾಯಿತ ಪ್ರತಿನಿಧಿಗಳು, ಶಾಲಾ ಕಾಲೇಜುಗಳು ವಿಧ್ಯಾರ್ಥಿಗಳು, ಸಾರ್ವಜನಿಕರು ಹಾಜರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ