AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ: ಸೆ 3 ರಂದು ಟರ್ಫ ಹಾಕಿ ಕ್ರೀಡಾಂಗಣ ಲೋಕಾರ್ಪಣೆ: ಸಚಿವ ಎಚ್​ಕೆ ಪಾಟೀಲ

ಗದಗ-ಬೆಟಗೇರಿ ನಗರದ ಹೃದಯ ಭಾಗದಲ್ಲಿ ಅಂದಾಜು 9 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾದಂತಹ ಸುಸಜ್ಜಿತ ಟರ್ಫ ಹಾಕಿ ಕ್ರೀಡಾಂಗಣವು ಬರುವ ಸೆಪ್ಟೆಂಬರ 3 ರಂದು ಮುಂಜಾನೆ 9 ಗಂಟೆಗೆ ಲೋಕಾರ್ಪಣೆಗೊಳ್ಳಲಿದೆ ಎಂದು ಕಾನೂನು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದ್ದಾರೆ.

ಗದಗ: ಸೆ 3 ರಂದು ಟರ್ಫ ಹಾಕಿ ಕ್ರೀಡಾಂಗಣ ಲೋಕಾರ್ಪಣೆ: ಸಚಿವ ಎಚ್​ಕೆ ಪಾಟೀಲ
ಹಾಕಿ ಆಡಿದ ಸಚಿವ ಎಚ್.ಕೆ. ಪಾಟೀಲ
Follow us
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Updated By: ಗಂಗಾಧರ​ ಬ. ಸಾಬೋಜಿ

Updated on: Aug 28, 2023 | 6:57 PM

ಗದಗ, ಆಗಸ್ಟ್​ 28: ಹಾಕಿ ಕ್ರೀಡೆಯಲ್ಲಿ ಗದಗ ಜಿಲ್ಲೆ ತನ್ನದೇ ಆದ ಇತಿಹಾಸವನ್ನು ಹೊಂದಿದೆ. ಕಲ್ಕತ್ತಾ, ಮುಂಬೈ ಬಿಟ್ಟರೆ ರಾಜ್ಯ ರಾಷ್ಟ್ರ ಮಟ್ಟದಲ್ಲಿ ಅತ್ಯುತ್ತಮ ಹಾಕಿ ಕ್ರೀಡಾ ಪಟುಗಳನ್ನು ನೀಡಿರುವ ಹೆಮ್ಮೆ ನಮ್ಮ ಗದಗ ಜಿಲ್ಲೆಯದಾಗಿದೆ ಎಂದು ಕಾನೂನು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ (HK Patil) ಹೇಳಿದ್ದಾರೆ. ಗದಗ ನಗರದ ಬೆಟಗೇರಿಯ ಗಾಂಧೀ ನಗರದಲ್ಲಿ ನಿರ್ಮಾಣವಾದಂತಹ ಸುಸಜ್ಜಿತ ಹಾಕಿ ಕ್ರೀಡಾಂಗಣ ವೀಕ್ಷಣೆ ಬಳಿಕ ಅವರು ಮಾತನಾಡಿದರು.

ಗದಗ-ಬೆಟಗೇರಿ ನಗರದ ಹೃದಯ ಭಾಗದಲ್ಲಿ ಅಂದಾಜು 9 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾದಂತಹ ಸುಸಜ್ಜಿತ ಟರ್ಫ ಹಾಕಿ ಕ್ರೀಡಾಂಗಣವು ಬರುವ ಸೆಪ್ಟೆಂಬರ 3 ರಂದು ಮುಂಜಾನೆ 9 ಗಂಟೆಗೆ ಲೋಕಾರ್ಪಣೆಗೊಳ್ಳಲಿದೆ. ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪನವರು ಸುಸಜ್ಜಿತ ಹಾಕಿ ಕ್ರೀಡಾಂಗಣವನ್ನು ಉದ್ಘಾಟಿಸಲಿದ್ದು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಚಿವರಾದ ನಾಗೇಂದ್ರ ಅವರು ಆಗಮಿಸಲಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ಗದಗ: ಸರ್ಕಾರಿ ಶಾಲೆಯ ಮೈದಾನದಲ್ಲಿ ತೆಲೆ ಎತ್ತಿದ ಅಕ್ರಮ ಮನೆಗಳು; ನಮ್ಮ ಶಾಲೆ ಉಳಿಸಿ ಎಂದು ವಿದ್ಯಾರ್ಥಿಗಳ ಆಕ್ರೋಶ!

ಅದೇ ದಿನ ಮುಂಜಾನೆ 10 ಗಂಟೆಗೆ ಹಾಕಿ ಕ್ರೀಡಾಂಗಣದಲ್ಲಿ ಆರು ತಂಡಗಳು ಎ ಮತ್ತು ಬಿ ಗುಂಪುಗಳಾಗಿ ವಿಂಗಡಿಸಿ ಹಾಕಿ ಪಂದ್ಯಾವಳಿಗಳನ್ನು ಆಯೋಜಿಸಲಾಗುತ್ತಿದೆ. ಮೊದಲ ಗುಂಪಿನಲ್ಲಿ ಕರ್ನಾಟಕ ರಾಜ್ಯ ಪೋಲಿಸ್, ಹುಬ್ಬಳ್ಳಿಯ ಹಾಕಿ ಅಕಾಡೆಮಿ, ಬಿ.ವಾಯ್.ಎ.ಎಸ್ ತಂಡಗಳು ಹಾಗೂ ಮತ್ತೋಂದು ಗುಂಪಿನಲ್ಲಿ ಗದಗ- XI , ಎಸ್.ಡಬ್ಲೂ.ಆರ್. ಹುಬ್ಬಳ್ಳಿ ಹಾಗೂ ಬಿ.ವಾಯ್.ಎ.ಎಸ್. ಬೆಂಗಳೂರು ತಂಡಗಳು ಸೆಣಸಾಡಲಿವೆ ಎಂದು ತಿಳಿಸಿದರು.

ಸುಸಜ್ಜಿತ ಈ ಹಾಕಿ ಕ್ರೀಡಾಂಗಣವು ಉತ್ತರ ಕರ್ನಾಟಕ ಭಾಗದಲ್ಲಿಯೇ ಪ್ರಥಮವಾಗಿದ್ದು ಪ್ರತಿಭಾವಂತ ಮಕ್ಕಳಿಗೆ ಉತ್ತಮ ವೇದಿಕೆ ಆಗುವ ಮೂಲಕ ರಾಜ್ಯ, ರಾಷ್ಟ್ರ ಮಟ್ಟಕ್ಕೆ ಮುನ್ನಡೆಯಲು ಈ ಕ್ರೀಡಾಂಗಣ ಸಹಕಾರಿಯಾಗಲಿದೆ. ಜಿಲ್ಲಾ ಮಟ್ಟದಲ್ಲಿ ಸುಸಜ್ಜಿತ ಟರ್ಫ ಹಾಕಿ ಕ್ರೀಡಾಂಗಣ ಹೊಂದಿರುವುದು ಗದಗ ಜಿಲ್ಲೆ ಮಾತ್ರ ಎಂಬುದು ಹೆಮ್ಮೆಯ ಸಂಗತಿಯಾಗಿದೆ.

ಇದನ್ನೂ ಓದಿ: ಕೋವಿಡ್ ರಿಸ್ಕ್ ಅಲೋವೆನ್ಸ್​​ ಬಿಡುಗಡೆಗಾಗಿ ವೈದ್ಯಕೀಯ ಶಿಕ್ಷಣ ಸಚಿವರ ಕಾಲಿಗೆ ಬಿದ್ದ ಜಿಮ್ಸ್ ಸಿಬ್ಬಂದಿ

ಈ ಹಾಕಿ ಕ್ರಿಡಾಂಗಣದ ಉದ್ಘಾಟನಾ ಸಮಾರಂಭದಲ್ಲಿ ಯುವ ಕ್ರೀಡಾಪಟುಗಳಿಗೆ ತರಬೇತಿ ನೀಡಿ ಕ್ರೀಡಾ ಕ್ಷೇತ್ರದಲ್ಲಿ ಎತ್ತರಕ್ಕೆ ಬೆಳೆದಂತಹ ಕ್ರೀಡಾಪಟುಗಳಿಗೆ ಹಾಗೂ ತರಬೇತಿದಾರರಿಗೆ ಸನ್ಮಾನಿಸಲಾಗುವುದು. ಇವರುಗಳ ಜೊತೆಗೆ ಸುಸಜ್ಜಿತ ಟರ್ಫ ಹಾಕಿ ಕ್ರೀಡಾಂಗಣ ನಿರ್ಮಿಸಲು ಅಗತ್ಯದ ಸಲಹೇ ಸೂಚನೆ ಹಾಗೂ ಸಹಕಾರಿ ನೀಡಿದ 5 ಜನರನ್ನು ಸಹ ಗೌರವಿಸಿ ಸನ್ಮಾನಿಸಲಾಗುವುದು.

ಅದೇ ದಿನ ಕಳಸಾಪುರ ರಸ್ತೆಯಲ್ಲಿನ ಒಳಾಂಗಣ ಕ್ರೀಡಾಂಗಣದ ಹಿಂದುಗಡೆ ನಿರ್ಮಾಣ ಗೊಂಡಿರುವಂತಹ ಹೊಸ ಈಜು ಕೊಳ ಕೂಡ ಮಧ್ಯಾಹ್ನ 12 ಗಂಟೆಗೆ ಸಚಿವರಾದ ನಾಗೇಂದ್ರ ಅವರು ಲೋಕಾರ್ಪಣೆ ಗೊಳಿಸುವರು ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಇದೇ ಸಂದರ್ಭದಲ್ಲಿ ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ಜನಸಾಮಾನ್ಯರಿಗೆ ಕಷ್ಟ ತಪ್ಪಿದ್ದಲ್ಲ ಅಂತ ಉಡಾಫೆ ಮಾತಾಡಿದ ಕಾರ್ಯಕರ್ತೆ
ಜನಸಾಮಾನ್ಯರಿಗೆ ಕಷ್ಟ ತಪ್ಪಿದ್ದಲ್ಲ ಅಂತ ಉಡಾಫೆ ಮಾತಾಡಿದ ಕಾರ್ಯಕರ್ತೆ
ಸೋಮನಹಳ್ಳಿ ಟೋಲ್ ವಿರುದ್ಧ ರೈತರು, ಸ್ಥಳೀಯರಿಂದ ಹೋರಾಟ
ಸೋಮನಹಳ್ಳಿ ಟೋಲ್ ವಿರುದ್ಧ ರೈತರು, ಸ್ಥಳೀಯರಿಂದ ಹೋರಾಟ