AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ: ಸರ್ಕಾರಿ ವಸತಿ ನಿಲಯದ ವಿದ್ಯಾರ್ಥಿನಿ ಮೇಲೆ ಹಲ್ಲೆ ಮಾಡಿದ ಯುವಕ

ವಸತಿ ನಿಲಯಕ್ಕೆ ಬರುತ್ತಿದ್ದ ವಿದ್ಯಾರ್ಥಿನಿಯನ್ನು ಹಿಗ್ಗಾಮುಗ್ಗಾ ಥಳಿಸುತ್ತಿದ್ದ ಯುವಕನಿಗೆ ಸ್ಥಳೀಯರು ಕಪಾಳಮೋಕ್ಷ ಮಾಡಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಗದಗ: ಸರ್ಕಾರಿ ವಸತಿ ನಿಲಯದ ವಿದ್ಯಾರ್ಥಿನಿ ಮೇಲೆ ಹಲ್ಲೆ ಮಾಡಿದ ಯುವಕ
ವಿದ್ಯಾರ್ಥಿನಿಗೆ ಥಳಿಸಿದ್ದ ಆರೋಪಿಯನ್ನ ಪೊಲೀಸರಿಗೆ ಒಪ್ಪಿಸಿದ ಸ್ಥಳಿಯರು
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jan 14, 2023 | 12:13 PM

Share

ಗದಗ: ನಗರದ ಕಳಸಾಪುರ ರಸ್ತೆಯಲ್ಲಿನ ಮೆಟ್ರಿಕ್ ನಂತರದ ಬಾಲಕೀಯರ ವಸತಿ ನಿಲಯದ ವಿದ್ಯಾರ್ಥಿನಿಯನ್ನು ಹೊಡೆಯುತ್ತಿದ್ದ ಯುವಕನನ್ನು ತರಾಟೆಗೆ ತೆಗೆದುಕೊಂಡ ಯುವಕನಿಂದ ವಿದ್ಯಾರ್ಥಿಯನ್ನ ಬಚಾವ್ ಮಾಡಿದ ಸ್ಥಳೀಯ ಮಹಿಳೆಯರು, ಯುವಕನಿಗೆ ಕಪಾಳಮೋಕ್ಷ ಮಾಡುವ ಮೂಲಕ ಕೈಯಲ್ಲಿ ಕೋಲು ಹಿಡಿದು ಕಿಡಿಗೇಡಿಗೆ ಪಾಠ ಕಲಿಸಿದ್ದಾರೆ. ನಂತರ ಪೊಲೀಸರಿಗೆ ಒಪ್ಪಿಸಿದ್ದಾರೆ.

ವಸತಿ ನಿಲಯದ ವಿದ್ಯಾರ್ಥಿನಿಗೆ ಈ ಹಿಂದೆಯೇ ನಿಲಯದ ಸಿಬ್ಬಂದಿಗಳು ವಾರ್ನ್ ಮಾಡಿದ್ದರು. ಆದರೂ ಕೂಡಾ ವಿದ್ಯಾರ್ಥಿನಿ ಯುವಕನ ಜೊತೆಗೆ ಸಲುಗೆಯಿಂದ ಇರುತ್ತಿದ್ದಳು. ಇದೀಗ ವಿದ್ಯಾರ್ಥಿನಿಯನ್ನ ಬಚಾವ್ ಮಾಡಿ, ಕಿಡಿಗೇಡಿಗೆ ಪಾಠ ಕಲಿಸಿ, ವಿದ್ಯಾರ್ಥಿನಿ ಜೊತೆಗೆ ಅಸಭ್ಯವಾಗಿ ವರ್ತನೆ ಮಾಡಿದ ಯುವಕನನ್ನ ಗದಗ ಗ್ರಾಮೀಣ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ವಿದ್ಯಾಕಾಶಿಯಲ್ಲಿ ಪುಂಡರ ದಾಂಧಲೆ; ಕುಡಿದು ಲಾಡ್ಜ್ ಸಿಬ್ಬಂದಿ ಮೇಲೆ ಹಲ್ಲೆ

ಧಾರವಾಡ: ನಗರದ ಹೊಸ ಬಸ್ ನಿಲ್ದಾಣದ ಎದುರಿನ ‘ಧಾರವಾಡ ರೆಸಿಡೆನ್ಸಿ’ ಲಾಡ್ಜ್ ಮ್ಯಾನೇಜರ್​ ಮಹೇಂದ್ರ ಎಂಬುವವನ ಮೇಲೆ ಕುಡಿದ ಮತ್ತಿನಲ್ಲಿ ರಾಹುಲ್, ವಿಜಯ್, ಮಣಿಕಂಠ, ಪ್ರಜ್ವಲ್ ಪವಾರ್ ಎಂಬುವವರು ನಿನ್ನೆ(ಜ.13) ರಾತ್ರಿ ಸಿಬ್ಬಂದಿ ಜೊತೆ ಜಗಳಕ್ಕಿಳಿದು ಹಲ್ಲೆ ಮಾಡಿದ್ದಾರೆ. ಪುಂಡರ ಗಲಾಟೆ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಉಪನಗರ ಠಾಣೆಗೆ ಮಹೇಂದ್ರ ದೂರು ನೀಡಿದ್ದಾರೆ.

ಇದನ್ನೂ ಓದಿ:Bengaluru: ದೇವಸ್ಥಾನದಲ್ಲಿ ಮಹಿಳೆ ಮೇಲೆ ಹಲ್ಲೆ ಪ್ರಕರಣ: ಧರ್ಮದರ್ಶಿ ಮುನಿಕೃಷ್ಣ ಅರೆಸ್ಟ್

ಕ್ರೈಸ್ತ ವಿದ್ಯಾರ್ಥಿನಿಗೆ ಚಾಕಲೇಟ್ ಆಫರ್ ನೀಡಿದ ಮುಸ್ಲಿಂ ವಿದ್ಯಾರ್ಥಿ; ಬಸ್ಸಿಂದ ಕೆಳಗಿಳಿಸಿ ಹಲ್ಲೆ

ಮಂಗಳೂರು: ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಕೆಲಿಂಜ ಎಂಬಲ್ಲಿ ವೀರಕಂಬ ನಿವಾಸಿ ಮಹಮ್ಮದ್ ಶಾಕೀರ್ ಎಂಬ ವಿದ್ಯಾರ್ಥಿ ಬಸ್​ನಲ್ಲಿ ಹೋಗುವಾಗ ಕ್ರೈಸ್ತ ವಿದ್ಯಾರ್ಥಿನಿಗೆ ಚಾಕಲೇಟ್ ಆಫರ್ ನೀಡಿದ ಕಾರಣಕ್ಕಾಗಿ ಆತನನ್ನ ಬಸ್​ನಿಂದ ಇಳಿಸಿ ಹಲ್ಲೆ ಮಾಡಲಾಗಿದೆ. ಗಾಯಾಳು ವಿದ್ಯಾರ್ಥಿಯನ್ನ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದು, ಹಲ್ಲೆಗೊಳಗಾದ ವಿದ್ಯಾರ್ಥಿ ಮಹಮ್ಮದ್ ಶಾಕೀರ್​ ತನ್ನ ಮೇಲೆ ಹಲ್ಲೆ ಮಾಡಿದ ವೀರಕಂಬ ಕೆಲಿಂಜ ನಿವಾಸಿಗಳಾದ ಚಂದ್ರಶೇಖರ್, ಪ್ರಜ್ವಲ್, ರೋಹಿತ್ ಸೇರಿ ಇತರ ಮೂವರ ವಿರುದ್ಧ ವಿಟ್ಲ ಪೋಲೀಸ್ ಠಾಣೆಯಲ್ಲಿ ದೂರು ನೀಡಿದ್ದಾನೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ