AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವರು ವರ ಕೊಟ್ರೂ ಪೂಜಾರಿ ಕೊಡ್ಲಿಲ್ಲ: 6 ಕೋಟಿಯ ಹೈಟೆಕ್ ಆಸ್ಪತ್ರೆ ಉದ್ಘಾಟನೆಯಾದ್ರೂ ಚಿಕಿತ್ಸೆ ಸಿಗ್ತಿಲ್ಲ

ಗದಗ ಜಿಲ್ಲೆಯ ಹೊಳೆಆಲೂರಿನಲ್ಲಿ 6 ಕೋಟಿ ವೆಚ್ಚದಲ್ಲಿ ನಿರ್ಮಿಸಿದ 30 ಹಾಸಿಗೆಗಳ ಹೈಟೆಕ್ ಸಮುದಾಯ ಆರೋಗ್ಯ ಕೇಂದ್ರ ವೈದ್ಯರು, ಸಿಬ್ಬಂದಿ, ಉಪಕರಣಗಳಿಲ್ಲದೆ ಪಾಳುಬಿದ್ದಿದೆ. ಉದ್ಘಾಟನೆಯಾಗಿ ವರ್ಷ ಕಳೆದರೂ ಕಾರ್ಯಾರಂಭವಾಗದ ಈ ಆಸ್ಪತ್ರೆ ಸರ್ಕಾರದ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ. ಸಾರ್ವಜನಿಕ ಹಣದ ದುರುಪಯೋಗಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ, ಕೂಡಲೇ ಕ್ರಮಕ್ಕೆ ಆಗ್ರಹಿಸಿದ್ದಾರೆ.

ದೇವರು ವರ ಕೊಟ್ರೂ ಪೂಜಾರಿ ಕೊಡ್ಲಿಲ್ಲ: 6 ಕೋಟಿಯ ಹೈಟೆಕ್ ಆಸ್ಪತ್ರೆ ಉದ್ಘಾಟನೆಯಾದ್ರೂ ಚಿಕಿತ್ಸೆ ಸಿಗ್ತಿಲ್ಲ
ಗದಗ ಆಸ್ಪತ್ರೆ
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on: Nov 02, 2026 | 4:44 PM

Share

ಗದಗ, ನ.2: ಹೊರಗಡೆಯಿಂದ ನೋಡಿದರೆ ಅಬ್ಬಾ! ಗ್ರಾಮೀಣ ಭಾಗದಲ್ಲೂ ಎಂಥಾ ಅತ್ಯಾಧುನಿಕ ಆಸ್ಪತ್ರೆ ಸೌಲಭ್ಯ ಎನ್ನುವಂತಹ ಭವ್ಯ ಕಟ್ಟಡ, ಅತ್ಯಾಧುನಿಕ ಆಪರೇಷನ್ ಥಿಯೇಟರ್ ಹಾಗೂ 30 ಹಾಸಿಗೆಗಳ ಸೌಲಭ್ಯ. ಆದರೆ, ಆಸ್ಪತ್ರೆಯ ಒಳಗೆ ಹೆಜ್ಜೆ ಇಟ್ಟರೆ ಸಾಕು ಪಕ್ಕಾ ‘ಭೂತ ಬಂಗಲೆ’ಯಂತೆ ದರ್ಶನ ನೀಡುತ್ತದೆ! ಎಲ್ಲಿ ನೋಡಿದರೂ ಧೂಳು, ಸ್ವಚ್ಛತೆಯೇ ಮಾಯ!

ಗದಗ ಜಿಲ್ಲೆಯ ರೋಣ ತಾಲೂಕಿನ ಹೊಳೆಆಲೂರು ಗ್ರಾಮದಲ್ಲಿ ಕೋಟ್ಯಾಂತರ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಹೈಟೆಕ್ ಸಮುದಾಯ ಆರೋಗ್ಯ ಕೇಂದ್ರದ ಕಥೆ ಇದು. ಕೋಟಿ ಕೋಟಿ ವೆಚ್ಚ ಮಾಡಿ ಆಸ್ಪತ್ರೆ ನಿರ್ಮಿಸಿದರೂ ವೈದ್ಯರು ಹಾಗೂ ಸಿಬ್ಬಂದಿಗಳನ್ನೇ ನೇಮಿಸದೆ ರಾಜ್ಯ ಸರ್ಕಾರ ನಿರ್ಲಕ್ಷ್ಯ ವಹಿಸಿರುವುದು ಸ್ಥಳೀಯರ ಹಾಗೂ ರೋಗಿಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಕೇಂದ್ರ ಸರ್ಕಾರದ ಎನ್‌ಹೆಚ್‌ಎಮ್ ಯೋಜನೆ ಹಾಗೂ ರಾಜ್ಯ ಸರ್ಕಾರದ ಅನುದಾನ ಸೇರಿ ಒಟ್ಟು 6 ಕೋಟಿ ರೂಪಾಯಿ ವೆಚ್ಚದಲ್ಲಿ ಈ 30 ಹಾಸಿಗೆಗಳ ಹೈಟೆಕ್ ಸಮುದಾಯ ಆರೋಗ್ಯ ಕೇಂದ್ರದ ಕಟ್ಟಡ ನಿರ್ಮಾಣವಾಗಿದೆ. ಕಳೆದ ವರ್ಷ ನರಗುಂದ ಮತಕ್ಷೇತ್ರದ ಶಾಸಕ ಸಿ.ಸಿ. ಪಾಟೀಲ್ ಅವರು ಈ ನೂತನ ಕಟ್ಟಡವನ್ನು ಉದ್ಘಾಟಿಸಿದ್ದರು. : ಉದ್ಘಾಟನೆಯಾಗಿ ವರ್ಷಗಳೇ ಕಳೆದರೂ ಆಸ್ಪತ್ರೆ ಬಾಗಿಲು ತೆರೆದು ಚಿಕಿತ್ಸೆ ನೀಡಲು ಸಾಧ್ಯವಾಗಿಲ್ಲ. ಕಟ್ಟಡಕ್ಕೆ ಇನ್ನೂ ಸುಮಾರು ೩ ಕೋಟಿ ರೂಪಾಯಿ ವೆಚ್ಚದ ವೈದ್ಯಕೀಯ ಉಪಕರಣಗಳು ಬರಬೇಕಿದೆ.

ಈ 30 ಹಾಸಿಗೆಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕನಿಷ್ಠ 5 ಮುಖ್ಯ ವೈದ್ಯರು ಹಾಗೂ ನರ್ಸ್‌ಗಳು ಸೇರಿ 30ಕ್ಕೂ ಹೆಚ್ಚು ಸಿಬ್ಬಂದಿಗಳ ಅಗತ್ಯವಿದೆ. ಆದರೆ ರಾಜ್ಯ ಸರ್ಕಾರ ವೈದ್ಯರನ್ನಾಗಲಿ, ಸಿಬ್ಬಂದಿಯನ್ನಾಗಲಿ ನೇಮಕ ಮಾಡಿಲ್ಲ. “ಹೊರಗಡೆ ನೋಡಲು ಅದ್ಭುತವಾಗಿರುವ ಕಟ್ಟಡ ಒಳಗಡೆ ಸಂಪೂರ್ಣವಾಗಿ ಧೂಳು ತಿನ್ನುತ್ತಿದೆ. ರೋಗಿಗಳಿಗೆ ಉಚಿತ ಹಾಗೂ ಉತ್ತಮ ಚಿಕಿತ್ಸೆ ನೀಡಬೇಕಿದ್ದ ಆಸ್ಪತ್ರೆ ಸಿಬ್ಬಂದಿಗಳ ಸಂಸಾರ ಮಾಡುವ ತಾಣವಾಗಿದೆ. ಕೋಟ್ಯಾಂತರ ರೂಪಾಯಿ ಸಾರ್ವಜನಿಕರ ಹಣ ವ್ಯರ್ಥವಾಗುತ್ತಿದ್ದು, ಸರ್ಕಾರ ತಕ್ಷಣವೇ ವೈದ್ಯರನ್ನು ನೇಮಿಸಿ ಚಿಕಿತ್ಸೆ ಆರಂಭಿಸಬೇಕು,” ಎಂದು ಸ್ಥಳೀಯ ನಿವಾಸಿ ರಾಹುಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಗೃಹಲಕ್ಷ್ಮಿಯರೇ ಎಚ್ಚರ….: ಒಟಿಪಿ, ಬ್ಯಾಂಕ್‌ ವಿವರ ಕೇಳಿದ್ರೆ ನೀಡಬೇಡಿ; ಇಲ್ಲಿದೆ ಸರ್ಕಾರ ಮಹತ್ವದ ಸೂಚನೆ

“ಹೊಳೆಆಲೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಅಗತ್ಯವಿರುವ ವೈದ್ಯರು, ನರ್ಸ್‌ಗಳು ಹಾಗೂ ಇತರ ಸಿಬ್ಬಂದಿಗಳ ನೇಮಕಾತಿ ಮತ್ತು 3 ಕೋಟಿ ವೆಚ್ಚದ ವೈದ್ಯಕೀಯ ಉಪಕರಣಗಳ ಪೂರೈಕೆಗೆ ಸಂಬಂಧಿಸಿದಂತೆ ಜಿಲ್ಲಾ ಆರೋಗ್ಯ ಇಲಾಖೆಯಿಂದ ರಾಜ್ಯ ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ಸರ್ಕಾರದಿಂದ ಅನುಮತಿ ಹಾಗೂ ಅನುದಾನ ಸಿಕ್ಕ ತಕ್ಷಣವೇ ವೈದ್ಯರನ್ನು ನಿಯೋಜಿಸಿ ಆಸ್ಪತ್ರೆಯನ್ನು ಪೂರ್ಣಪ್ರಮಾಣದಲ್ಲಿ ಕಾರ್ಯಾರಂಭಗೊಳಿಸಲಾಗುವುದು.” ಎಂದು ಗದಗ ಡಿಎಚ್‌ಒ ಡಾ. ಎಸ್.ಎಸ್. ನಿಲಗುಂದ ಹೇಳಿದ್ದಾರೆ. ಆರೋಗ್ಯ ಇಲಾಖೆ ಹಾಗೂ ಸರ್ಕಾರ ತಕ್ಷಣವೇ ಎಚ್ಚೆತ್ತುಕೊಂಡು, ಕೋಟ್ಯಾಂತರ ವೆಚ್ಚದ ಈ ಆಸ್ಪತ್ರೆ ಕಟ್ಟಡ ಪಾಳು ಬೀಳುವುದನ್ನು ತಪ್ಪಿಸಿ, ಗ್ರಾಮೀಣ ಭಾಗದ ಬಡ ರೋಗಿಗಳಿಗೆ ಗುಣಮಟ್ಟದ ವೈದ್ಯಕೀಯ ಸೇವೆ ಒದಗಿಸಬೇಕಿದೆ ಎಂದು ಸಾರ್ವಜನಿಕ ಆಗ್ರಹಿಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಂಜೀವ ಕುಮಾರ್​ ಪಾಂಡ್ರೆ, ಗದಗ
ಸಂಜೀವ ಕುಮಾರ್​ ಪಾಂಡ್ರೆ, ಗದಗ

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More
ತೀವ್ರಗೊಂಡ ಕಬ್ಬು ಬೆಳೆಗಾರರ ಹೋರಾಟ: ಹಿಂಡಲಗಾ ಜೈಲ್ ಭರೋ ಚಳವಳಿ ಆರಂಭ
ತೀವ್ರಗೊಂಡ ಕಬ್ಬು ಬೆಳೆಗಾರರ ಹೋರಾಟ: ಹಿಂಡಲಗಾ ಜೈಲ್ ಭರೋ ಚಳವಳಿ ಆರಂಭ
ಮುರಸು ಚಂಡಮಾರುತದ ಎಫೆಕ್ಟ್​​: ಕರ್ನಾಟಕದಲ್ಲಿ 5 ದಿನಗಳ ಕಾಲ ಮಳೆ
ಮುರಸು ಚಂಡಮಾರುತದ ಎಫೆಕ್ಟ್​​: ಕರ್ನಾಟಕದಲ್ಲಿ 5 ದಿನಗಳ ಕಾಲ ಮಳೆ
ದರ ಏರಿಕೆ ಎಫೆಕ್ಟ್​: ನವ ದಂಪತಿಗೆ ಹಾಲು ಮೊಸರು ಗಿಫ್ಟ್
ದರ ಏರಿಕೆ ಎಫೆಕ್ಟ್​: ನವ ದಂಪತಿಗೆ ಹಾಲು ಮೊಸರು ಗಿಫ್ಟ್
ಹೆಲಿಕಾಪ್ಟರ್​ಗಳಲ್ಲಿ ಎರಡು ಪೈಲಟ್ಗಳು ಕಡ್ಡಾಯ
ಹೆಲಿಕಾಪ್ಟರ್​ಗಳಲ್ಲಿ ಎರಡು ಪೈಲಟ್ಗಳು ಕಡ್ಡಾಯ
ಬಿಗ್ ಬಾಸ್ ಮನೆಯಲ್ಲಿ ಕೋಲಾಹಲಕ್ಕೆ ಕಾರಣವಾದ ಕ್ಯಾಪ್ಟನ್ ಜಗದೀಶ್ ನಿರ್ಧಾರ
ಬಿಗ್ ಬಾಸ್ ಮನೆಯಲ್ಲಿ ಕೋಲಾಹಲಕ್ಕೆ ಕಾರಣವಾದ ಕ್ಯಾಪ್ಟನ್ ಜಗದೀಶ್ ನಿರ್ಧಾರ
ವಿಎ ಪರೀಕ್ಷೆಯಲ್ಲಿ ಅಕ್ರಮ: ಶಂಕರ್ ಬನ್ನೂರು ವಿರುದ್ಧ ಎಫ್​ಐಆರ್​​
ವಿಎ ಪರೀಕ್ಷೆಯಲ್ಲಿ ಅಕ್ರಮ: ಶಂಕರ್ ಬನ್ನೂರು ವಿರುದ್ಧ ಎಫ್​ಐಆರ್​​
ಸಿಎಂ ಡಿಕೆ ಶಿವಕುಮಾರ್ ಭೇಟಿಗೆ ಆಗಮಿಸಿದ ಸಂಸದ ಬಸವರಾಜ ಬೊಮ್ಮಾಯಿ!
ಸಿಎಂ ಡಿಕೆ ಶಿವಕುಮಾರ್ ಭೇಟಿಗೆ ಆಗಮಿಸಿದ ಸಂಸದ ಬಸವರಾಜ ಬೊಮ್ಮಾಯಿ!
ಅರುಣ್ ಸಾಳುಂಕೆ ಮೃತದೇಹದ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಮಗಳು
ಅರುಣ್ ಸಾಳುಂಕೆ ಮೃತದೇಹದ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಮಗಳು
ಕಾಫಿ, ಟೀ ಬೆಲೆ ಹೆಚ್ಚಳ: ಸರ್ಕಾರದ ವಿರುದ್ಧ ಆಕ್ರೋಶ, ಜನ ಏನಂತಾರೆ ನೋಡಿ
ಕಾಫಿ, ಟೀ ಬೆಲೆ ಹೆಚ್ಚಳ: ಸರ್ಕಾರದ ವಿರುದ್ಧ ಆಕ್ರೋಶ, ಜನ ಏನಂತಾರೆ ನೋಡಿ
ಸ್ಟಿಂಗ್ ಆಪರೇಷನ್ ಪ್ರಕರಣ: ಕುಮಾರಸ್ವಾಮಿ ದೆಹಲಿ ನಿವಾಸ ಪರಿಶೀಲನೆ ಸಾಧ್ಯತೆ
ಸ್ಟಿಂಗ್ ಆಪರೇಷನ್ ಪ್ರಕರಣ: ಕುಮಾರಸ್ವಾಮಿ ದೆಹಲಿ ನಿವಾಸ ಪರಿಶೀಲನೆ ಸಾಧ್ಯತೆ