ಜಿಮ್ಸ್​ ಆಸ್ಪತ್ರೆ ವೈದ್ಯರು ಆಶಾ ಕಾರ್ಯಕರ್ತೆ ಮೇಲೆ ಹಲ್ಲೆ ಮಾಡಿರುವ ಆರೋಪ: ಕ್ರಮ ಕೈಗೊಳ್ಳುವಂತೆ ಒತ್ತಾಯ

ಜಿಮ್ಸ್​​ ಆಸ್ಪತ್ರೆಯ ವೈದ್ಯರು ಆಶಾ ಕಾರ್ಯಕರ್ತೆಗೆ ನಿಂದಿಸಿ ಕಪಾಳಮೋಕ್ಷ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಜಿಮ್ಸ್​ ಆಸ್ಪತ್ರೆ ವೈದ್ಯರು ಆಶಾ ಕಾರ್ಯಕರ್ತೆ ಮೇಲೆ ಹಲ್ಲೆ ಮಾಡಿರುವ ಆರೋಪ: ಕ್ರಮ ಕೈಗೊಳ್ಳುವಂತೆ ಒತ್ತಾಯ
ಗದಗ ಜಿಲ್ಲಾ ಆಸ್ಪತ್ರೆ
Follow us
ವಿವೇಕ ಬಿರಾದಾರ
|

Updated on: Apr 05, 2023 | 7:21 PM

ಗದಗ: ಜಿಲ್ಲಾ ​​ಆಸ್ಪತ್ರೆ (Gadag District Hospital) ಒಂದಲ್ಲಾ ಒಂದು ವಿಷಯಕ್ಕೆ ಸುದ್ದಿಯಲ್ಲಿರುತ್ತದೆ. ಜಿಮ್ಸ್​​ (GIMS) ಆಸ್ಪತ್ರೆಯ ವೈದ್ಯರು ಆಶಾ ಕಾರ್ಯಕರ್ತೆಗೆ ನಿಂದಿಸಿ ಕಪಾಳಮೋಕ್ಷ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅಲ್ಲದೇ ವೈದ್ಯರು ಸಕಾಲಕ್ಕೆ ಹೆರಿಗೆ ಮಾಡಿಸದಿದ್ದರಿಂದ ಗರ್ಭದಲ್ಲೇ ಮಗು ಸಾವನ್ನಪ್ಪಿರುವ ಆರೋಪ ಕೇಳಿಬಂದಿದೆ. ನಿನ್ನೆ (ಏ.4) ಸಾಯಂಕಾಲ ಓರ್ವ ಆಶಾ ಕಾರ್ಯಕರ್ತೆ ಗರ್ಭಿಣಿಯನ್ನು ಹೆರಿಗೆಗೆಂದು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಈ ವೇಳೆ ವೈದ್ಯರು ಹುಚ್ಚಿಯನ್ನು ಯಾಕೆ ಈ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾಯಾ? ಎಂದು ಹೊಡೆದರು. ನಂತರ ತಮ್ಮನ್ನು ತಡರಾತ್ರಿವರೆಗೂ ಒಂಟಿ ಕಾಲಿನಲ್ಲಿ ನಿಲ್ಲಿಸಿ ಕೋಣೆಯೊಂದರಲ್ಲಿ ಕೂಡಿ ಹಾಕಿದ್ದರು ಎಂದು ಆಶಾ ಕಾರ್ಯಕರ್ತರು ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ಮನೆಯ ಮುದ್ದಿನ ಮಗ ಬೈಕ್ ಆಕ್ಸಿಡೆಂಟ್​​ನಲ್ಲಿ ಮೃತಪಟ್ಟನಾ ಅಥವಾ ಕೊಲೆಯಾದನಾ?

ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಗೂ ವೈದ್ಯರು ಕಪಾಳಮೋಕ್ಷ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಇನ್ನು ವೈದ್ಯರು ಹೆರಿಗೆ ಮಾಡಿಸಲು ತಡಮಾಡಿದ್ದರಿಂದ ಮಗು ಗರ್ಭದಲ್ಲೇ ಸಾವನ್ನಪ್ಪಿದೆ ಎಂದು ಬಾಣಂತಿ ಕುಟುಂಬಸ್ಥರು ಮತ್ತು ಆಶಾ ಕಾರ್ಯಕರ್ತರು ಆರೋಪಿಸಿದ್ದಾರೆ.

ಇನ್ನು ಘಟನೆ ಸಂಬಂಧ ಆಶಾ ಕಾರ್ಯಕರ್ತೆಯರು ಆಕ್ರೋಶ ವ್ಯಕ್ತಪಡಿಸಿದ್ದು, ಜಿಮ್ಸ್​ ಎದುರು ನೂರಾರು ಆಶಾ ಕಾರ್ಯಕರ್ತೆಯರು ಪ್ರತಿಭಟನೆ ಮಾಡುತ್ತಿದ್ದಾರೆ. ಹಲ್ಲೆ ಮಾಡಿದ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಒತ್ತಾಯ ಮಾಡಿದ್ದಾರೆ. ಇತ್ತ ಮಗು ಕಳೆದುಕೊಂಡು ಬಾಣಂತಿ ಮತ್ತು ಕುಟುಂಬಸ್ಥರು ಕಣ್ಣೀರು ಹಾಕುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ