ಗದಗ: ಜಿಲ್ಲಾ ಆಸ್ಪತ್ರೆ (Gadag District Hospital) ಒಂದಲ್ಲಾ ಒಂದು ವಿಷಯಕ್ಕೆ ಸುದ್ದಿಯಲ್ಲಿರುತ್ತದೆ. ಜಿಮ್ಸ್ (GIMS) ಆಸ್ಪತ್ರೆಯ ವೈದ್ಯರು ಆಶಾ ಕಾರ್ಯಕರ್ತೆಗೆ ನಿಂದಿಸಿ ಕಪಾಳಮೋಕ್ಷ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅಲ್ಲದೇ ವೈದ್ಯರು ಸಕಾಲಕ್ಕೆ ಹೆರಿಗೆ ಮಾಡಿಸದಿದ್ದರಿಂದ ಗರ್ಭದಲ್ಲೇ ಮಗು ಸಾವನ್ನಪ್ಪಿರುವ ಆರೋಪ ಕೇಳಿಬಂದಿದೆ. ನಿನ್ನೆ (ಏ.4) ಸಾಯಂಕಾಲ ಓರ್ವ ಆಶಾ ಕಾರ್ಯಕರ್ತೆ ಗರ್ಭಿಣಿಯನ್ನು ಹೆರಿಗೆಗೆಂದು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಈ ವೇಳೆ ವೈದ್ಯರು ಹುಚ್ಚಿಯನ್ನು ಯಾಕೆ ಈ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾಯಾ? ಎಂದು ಹೊಡೆದರು. ನಂತರ ತಮ್ಮನ್ನು ತಡರಾತ್ರಿವರೆಗೂ ಒಂಟಿ ಕಾಲಿನಲ್ಲಿ ನಿಲ್ಲಿಸಿ ಕೋಣೆಯೊಂದರಲ್ಲಿ ಕೂಡಿ ಹಾಕಿದ್ದರು ಎಂದು ಆಶಾ ಕಾರ್ಯಕರ್ತರು ಆರೋಪ ಮಾಡಿದ್ದಾರೆ.
ಇದನ್ನೂ ಓದಿ: ಮನೆಯ ಮುದ್ದಿನ ಮಗ ಬೈಕ್ ಆಕ್ಸಿಡೆಂಟ್ನಲ್ಲಿ ಮೃತಪಟ್ಟನಾ ಅಥವಾ ಕೊಲೆಯಾದನಾ?
ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಗೂ ವೈದ್ಯರು ಕಪಾಳಮೋಕ್ಷ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಇನ್ನು ವೈದ್ಯರು ಹೆರಿಗೆ ಮಾಡಿಸಲು ತಡಮಾಡಿದ್ದರಿಂದ ಮಗು ಗರ್ಭದಲ್ಲೇ ಸಾವನ್ನಪ್ಪಿದೆ ಎಂದು ಬಾಣಂತಿ ಕುಟುಂಬಸ್ಥರು ಮತ್ತು ಆಶಾ ಕಾರ್ಯಕರ್ತರು ಆರೋಪಿಸಿದ್ದಾರೆ.
ಇನ್ನು ಘಟನೆ ಸಂಬಂಧ ಆಶಾ ಕಾರ್ಯಕರ್ತೆಯರು ಆಕ್ರೋಶ ವ್ಯಕ್ತಪಡಿಸಿದ್ದು, ಜಿಮ್ಸ್ ಎದುರು ನೂರಾರು ಆಶಾ ಕಾರ್ಯಕರ್ತೆಯರು ಪ್ರತಿಭಟನೆ ಮಾಡುತ್ತಿದ್ದಾರೆ. ಹಲ್ಲೆ ಮಾಡಿದ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಒತ್ತಾಯ ಮಾಡಿದ್ದಾರೆ. ಇತ್ತ ಮಗು ಕಳೆದುಕೊಂಡು ಬಾಣಂತಿ ಮತ್ತು ಕುಟುಂಬಸ್ಥರು ಕಣ್ಣೀರು ಹಾಕುತ್ತಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ