ಮಕ್ಕಳ ಪಾಲನಾ ಕೇಂದ್ರದಲ್ಲಿದ್ದ ಸಂತ್ರಸ್ತ ಬಾಲಕಿ ಗರ್ಭಿಣಿ, 3 ಮಕ್ಕಳ ತಂದೆಯಿಂದ ನೀಚ ಕೃತ್ಯ -ಅರೆಸ್ಟ್
ಪರಿಚಯಸ್ಥ ವ್ಯಕ್ತಿಯಿಂದಲೇ ಸಂತ್ರಸ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದೆ ಎಂದು ತಿಳಿದುಬಂದಿದೆ. 35 ವರ್ಷದ ಮೂರು ಮಕ್ಕಳ ತಂದೆಯಿಂದ ಕುಕೃತ್ಯ ನಡೆದಿದೆ. ಬಾಲಕಿ ಗರ್ಭಿಣಿಯಾದ ಮೇಲೆ ಅತ್ಯಾಚಾರವಾದ ಬಗ್ಗೆ ಮಾಹಿತಿ ಬಹಿರಂಗವಾಗಿದೆ. ಮಹಿಳಾ ಠಾಣೆ ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ ಎಂದು ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.
ಗದಗ, ಸೆಪ್ಟೆಂಬರ್ 4: ಮಕ್ಕಳ ಪಾಲನಾ ಕೇಂದ್ರದಲ್ಲಿ ಆಶ್ರಯ ಪಡೆದಿದ್ದ ಸಂತ್ರಸ್ತ ಬಾಲಕಿ ಗರ್ಭಿಣಿಯಾಗಿದ್ದಾಳೆ (pregnant). ಗದಗ (gadag) ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ಬೆಳಕಿಗೆ ಬಂದಿದೆ. 2019ರಲ್ಲಿ ಬಾಲಕಿ ಮೇಲೆ ಅತ್ಯಾಚಾರ ಹಿನ್ನೆಲೆ ಕೇಂದ್ರಕ್ಕೆ ಶಿಫ್ಟ್ ಮಾಡಿಸಲಾಗಿತ್ತು. ಆಧಾರ್ ಕಾರ್ಡ್ ಮಾಡಿಸಲು ಮನೆಗೆ ಹೋಗಿದ್ದು, ವಾಪಸ್ ಬರುವಾಗ ಬಾಲಕಿಯ ಮೇಲೆ ಅತ್ಯಾಚಾರ (rape) ನಡೆದಿದೆ. ತಂದೆಯೊಂದಿಗೆ (father) ಮನೆಗೆ ಹೋಗಿ ಪರಿಚಯಸ್ಥ ವ್ಯಕ್ತಿಯೊಂದಿಗೆ ಬಾಲಕಿ ವಾಪಸಾಗುತ್ತಿದ್ದಳು.
ಪರಿಚಯಸ್ಥ ವ್ಯಕ್ತಿ ನಾರಾಯಣಸಿಂಗ್ನಿಂದಲೇ ಬಾಲಕಿ ಮೇಲೆ ಅತ್ಯಾಚಾರ ನಡೆದಿದೆ ಎಂದು ತಿಳಿದುಬಂದಿದೆ. 35 ವರ್ಷದ ಮೂರು ಮಕ್ಕಳ ತಂದೆಯಿಂದಲೇ ಈ ನೀಚ ಕೃತ್ಯ ನಡೆದಿದೆ. ಬಾಲಕಿ ಗರ್ಭಿಣಿಯಾದ ಮೇಲೆ ಅತ್ಯಾಚಾರವಾದ ಬಗ್ಗೆ ಮಾಹಿತಿ ಬಹಿರಂಗವಾಗಿದೆ.
ಇದನ್ನೂ ಓದಿ: ಗದಗ: ಲವ್ ಪ್ರಕರಣದಲ್ಲಿ ನಿರ್ಲಕ್ಷ್ಯ, ಪಿಎಸ್ಐ ಅಮಾನತು
ಕಂಗಾಲಾದ ಪಾಲನಾ ಕೇಂದ್ರದ ಸಿಬ್ಬಂದಿ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆಗಸ್ಟ್ 26 ನೇ ತಾರೀಖು ಮಹಿಳಾ ಠಾಣೆ ಪೊಲೀಸರಿಗೆ ಸಿಬ್ಬಂದಿ ದೂರು ನೀಡಿದ್ದಾರೆ. ಮಹಿಳಾ ಠಾಣೆ ಪೊಲೀಸರು ಆರೋಪಿ ನಾರಾಯಣಸಿಂಗ್ನನ್ನು ಬಂಧಿಸಿದ್ದಾರೆ ಎಂದು ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ ಎಸ್ ನೇಮಗೌಡ ತಿಳಿಸಿದ್ದಾರೆ.
ಗಂಗಾವತಿ ಬಾಲಕಿಯ ನಗ್ನ ವಿಡಿಯೋದಿಂದ ಬ್ಲ್ಯಾಕ್ ಮೇಲ್: ಯುವಕ ಅರೆಸ್ಟ್
ಕೊಪ್ಪಳ: ಅಪ್ರಾಪ್ತ ಬಾಲಕಿಯ ಬೆತ್ತಲೆ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಯುವಕನೋರ್ವನ್ನು ಪೊಲೀಸರು ಬಂಧಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದ್ದು ಪ್ರೀತಿ-ಪ್ರೇಮ (Love) ನಾಟಕವಾಡಿ ವಿದ್ಯಾರ್ಥಿನಿಯ ಬೆತ್ತಲೆ ವಿಡಿಯೋ ರೆಕಾರ್ಡ್ ಮಾಡಿಟ್ಟುಕೊಂಡು ಬಳಿಕ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಮುಸ್ತಾಫಾ ಎನ್ನುವಾತನ್ನನ್ನು ಗಂಗಾವತಿ ಪೊಲೀಸರು ಬಂಧಿಸಿದ್ದಾರೆ.
ಘಟನೆ ಹಿನ್ನೆಲೆ:
ಇನ್ಸ್ಟಾಗ್ರಾಮ್ ಮೂಲಕ ವಿದ್ಯಾರ್ಥಿನಿಯನ್ನು ಪರಿಚಯ ಮಾಡಿಕೊಂಡು ಬಳಿಕ ಪ್ರೀತಿ ಪ್ರೇಮ ನಾಟಕವಾಡಿದ್ದಾನೆ. ಹೀಗೆ ಒಂದು ದಿನ ಪ್ರೀತಿ ನಾಟಕದೊಂದಿಗೆ ನಂಬಿಸಿ ವಿಡಿಯೋ ಕಾಲ್ನಲ್ಲಿ ವಿದ್ಯಾರ್ಥಿನಿಯನ್ನು ಬೆತ್ತಲಾಗುವಂತೆ ಹೇಳಿ ಅದನ್ನು ಸ್ಕ್ರೀನ್ ರೆಕಾರ್ಡ್ ಮಾಡಿಕೊಂಡಿದ್ದಾನೆ. ನಂತರ ಹೀಗೆ ಪ್ರತಿ ಬಾರಿಯೂ ಸಹ ಬೆತ್ತಲೆ ವಿಡಿಯೋ ಕಾಲ್ ಮಾಡುವಂತೆ ಒತ್ತಾಯಿಸುತ್ತಿದ್ದ. ಆದ್ರೆ, ಇದಕ್ಕೆ ವಿದ್ಯಾರ್ಥಿನಿ ನಿರಾಕರಿಸಿದಾಗ ಆ ವಿಡಿಯೋವನ್ನು ತೋರಿಸಿ ಬ್ಲ್ಯಾಕ್ ಮೇಲ್ ಮಾಡಲು ಶುರು ಮಾಡಿದ್ದಾನೆ. ಇದರಿಂದ ಬೇಸತ್ತು ವಿದ್ಯಾರ್ಥಿನಿ ಗಂಗಾವತಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ಈ ದೂರಿನಂತೆ ಪೊಲೀಸರು ಇದೀಗ ಆರೋಪಿ ಮುಸ್ತಾಫನನ್ನು ಪೋಕ್ಸೊ ಕಾಯ್ದೆ ಅಡಿಯಲ್ಲಿ ಬಂಧಿಸಿದ್ದಾರೆ.
ಗದಗ ಜಿಲ್ಲಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:36 am, Mon, 4 September 23