AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಕ್ಕುಂಡಿಯಲ್ಲಿ ನಿಧಿ ಸಿಕ್ಕ ಬೆನ್ನಲ್ಲೇ ಸರ್ಕಾರದಿಂದ ಮಹತ್ವದ ಹೆಜ್ಜೆ: ಕುತೂಹಲ ಕೆರಳಿಸಿದ ನಡೆ

ಐತಿಹಾಸಿಕ ಲಕ್ಕುಂಡಿ ಗ್ರಾಮ ಪುರಾತನ ಹಿನ್ನೆಲೆಯನ್ನು ಹೊಂದಿರುವ ಗ್ರಾಮ. ಈ ಗ್ರಾಮವನ್ನು ಈ ಹಿಂದೆ‌ ಕಲ್ಯಾಣ ಚಾಲುಕ್ಯರು, ವಿಜಯನಗರ ಅರಸರು ಆಳ್ವಿಕೆ ಮಾಡಿದ್ದಾರೆ. ಹೀಗಾಗಿ 101 ದೇವಸ್ಥಾನ ಹಾಗೂ 101 ಬಾವಿ ಇರೋದು ವಿಶೇಷ. ಇದರಿಂದ ಈ ದೇವಸ್ಥಾನದ ಬಳಿ ಅಪಾರವಾದ ಚಿನ್ನ, ವಜ್ರ ವೈಡೂರ್ಯ ಇದೆ ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಉತ್ಖನನ ನಡೆಸಲು ಅಧಿಕಾರಿಗಳು ಮುಂದಾಗಿದ್ದಾರೆ. ಇನ್ನು ಇಡೀ ಗ್ರಾಮವನ್ನೇ ಸ್ಥಳಾಂತರ ಮಾಡುವ ಚಿಂತನೆಗಳು ಸಹ ನಡೆದಿವೆ.

ಲಕ್ಕುಂಡಿಯಲ್ಲಿ ನಿಧಿ ಸಿಕ್ಕ ಬೆನ್ನಲ್ಲೇ ಸರ್ಕಾರದಿಂದ ಮಹತ್ವದ ಹೆಜ್ಜೆ: ಕುತೂಹಲ ಕೆರಳಿಸಿದ ನಡೆ
Lakkundi
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on: Jan 15, 2026 | 9:58 PM

Share

ಗದಗ, (ಜನವರಿ 15): ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಜನವರಿ 10ರಂದು ನಿಧಿ (lakkundi Gold Treasure) ಪತ್ತೆಯಾದ ಬೆನ್ನಲ್ಲೇ ಇದೀಗ ಉತ್ಖನನ ನಡೆಸಲು ಪುರಾತತ್ವ ಇಲಾಖೆ ಮುಂದಾಗಿದೆ. ಹೌದು.. ನಾಳೆಯಿಂದ ಅಂದರೆ ಜನವರಿ 16ರಿಂದ ಲಕ್ಕುಂಡಿ ಗ್ರಾಮದಲ್ಲಿ ಉತ್ಖನನ ಕಾರ್ಯ ಶುರುವಾಗಲಿದ್ದು, ಮೊದಲಿಗೆ ಕೋಟೆ ವೀರಭದ್ರೇಶ್ವರ ದೇವಸ್ಥಾನದ ಬಳಿ ಪುರಾತತ್ವ ಇಲಾಖೆ ಹಾಗೂ ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರದ ಒಟ್ಟು 48 ಸಿಬ್ಬಂದಿಯಿಂದ ಉತ್ಖನನ ನಡೆಯಲಿದೆ. ಹೀಗಾಗಿ ಇದಕ್ಕೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಸಹ ಮಾಡಿಕೊಳ್ಳಲಾಗಿದೆ. ಇನ್ನು ಇಡೀ ಗ್ರಾಮವನ್ನೇ ಸ್ಥಳಾಂತರ ಮಾಡುವ ಬಗ್ಗೆಯೂ ಸರ್ಕಾರದ ಮಟ್ಟದಲ್ಲಿ ಚರ್ಚೆಯಾಗುತ್ತಿದೆ ಎಂದು ಸ್ವತಃ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್​​​​ಕೆ ಪಾಟೀಲ್ ಮಾಹಿತಿ ಹಂಚಿಕೊಂಡಿದ್ದಾರೆ.

ಇಡೀ ಗ್ರಾಮ ಸ್ಥಳಾಂತರಕ್ಕೆ ಚಿಂತನೆ

ಜನವರಿ 10ರಂದು ರಿತ್ತಿ ಕುಟುಂಬ ಮನೆಯ ಪಾಯ ಮುಚ್ಚುವ ವೇಳೆ ಚಿನ್ನದನಿಧಿ ಪತ್ತೆಯಾಗಿತ್ತು. ಕುಟುಂಬ ಕೂಡಾ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಚಿನ್ನವನ್ನು ಹಸ್ತಾಂತರ ಮಾಡಿದೆ. ಇದರ ಬೆನ್ನಲ್ಲೇ ನಾಳೆಯಿಂದ ಕೋಟೆ ವೀರಭದ್ರೇಶ್ವರ ದೇವಸ್ಥಾನದ ಬಳಿ ಉತ್ಖನನಕ್ಕೆ‌ ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರ ಮುಂದಾಗಿದೆ. ಇನ್ನು ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ 101 ದೇವಸ್ಥಾನಗಳಿವೆ. ಹೀಗಾಗಿ ದೇವಸ್ಥಾನದ ಅಡಿಯಲ್ಲಿ ಸಾಕಷ್ಟು ಪ್ರಮಾಣದ ನಿಧಿಯಿದೆ ಎನ್ನಲಾಗುತ್ತಿದೆ. ಹೀಗಾಗಿ ಲಕ್ಕುಂಡಿ ಗ್ರಾಮವನ್ನು ಸ್ಥಳಾಂತರ ‌ಮಾಡಬೇಕು. ಆಗ ಮಾತ್ರ ಲಕ್ಕುಂಡಿ ಗ್ರಾಮದಲ್ಲಿ ನಿಧಿ ರಹಸ್ಯ ಬಯಲಾಗುತ್ತದೆ. ಇದರಿಂದ ಗ್ರಾಮವನ್ನ ಸ್ಥಳಾಂತರ ಮಾಡುವ ಬಗ್ಗೆಯೂ ಸರ್ಕಾರ ಚಿಂತನೆ ನಡೆಸಿದೆ ಎಂದು ಸ್ವತಃ ಜಿಲ್ಲಾ ಉಸ್ತುವಾರಿ ಸಚಿವ ಎಚ್​​​ಕೆ ಪಾಟೀಲ್ ಹೇಳಿದ್ದಾರೆ.

ಇದನ್ನೂ ಓದಿ: ಲಕ್ಕುಂಡಿ ಸಿಕ್ಕ ನಿಧಿಗೆ ಇದೆ 300 ವರ್ಷಗಳ ಇತಿಹಾಸ, ಗ್ರಾಮಸ್ಥರಲ್ಲಿ ಶುರುವಾಯ್ತು ಹೊಸ ಆತಂಕ

ಗ್ರಾಮದಲ್ಲಿರುವ ಒಂದೊಂದು ದೇವಸ್ಥಾನಕ್ಕೆ ‌ಸೇರಿದ ಆವರಣಗಳಿವೆ. ಹೀಗಾಗಿ ಇಡೀ ಗ್ರಾಮವನ್ನು ಸ್ಥಳಾಂತರ ‌ಮಾಡಿದ್ರೆ ಅಪಾರ ಸಂಪತ್ತು ಸಿಗುತ್ತೇ ಅಂತಾರೆ ಲಕ್ಕುಂಡಿ ಗ್ರಾಮಸ್ಥರು.  ಇನ್ನು ಲಕ್ಕುಂಡಿ ಗ್ರಾಮದಲ್ಲಿ ಈ‌ ಹಿಂದೆ ಸಹ ಸಾಕಷ್ಟು ‌ಚಿನ್ನದ ನಿಧಿಪತ್ತೆಯಾಗಿತ್ತು. ಆ ಸಮಯದಲ್ಲಿ ನಿಧಿಯನ್ನು ಇಟ್ಟುಕೊಂಡು‌‌‌ ಕುಟುಂಬಗಳು ಸರ್ವನಾಶವಾಗಿವೆ. ಗ್ರಾಮದಲ್ಲಿ ‌ಸಿಕ್ಕ ನಿಧಿ ಉಪಯೋಗಿಸಿದ‌ ಕುಟುಂಬಗಳು ಸರ್ವನಾಶವಾಗಿವೆ ಎನ್ನುವುದು ಗ್ರಾಮದ ಕೆಲ ಜನರ ಅಭಿಪ್ರಾಯವಾಗಿದೆ. ಇನ್ನೊಂದೆಡೆ ಗ್ರಾಮದಲ್ಲಿ ನಿಧಿಗಳ್ಳರ ಹಾವಳಿಗೆ ಜನ ಆತಂಕಗೊಂಡಿದ್ದು, ಯಾವಾಗ ಏನೇನು ಆಗುತ್ತೆ ಎನ್ನುವ ಭಯದಲ್ಲಿ ದಿನ ಕಳೆಯುತ್ತಿದ್ದಾರೆ.

ಒಟ್ಟಿನಲ್ಲಿ ನಿಧಿ ಸಿಕ್ಕ ಬೆನ್ನಲ್ಲೇ ಲಕ್ಕುಂಡಿ ಗ್ರಾಮದಲ್ಲಿ ನಾನಾ ರೀತಿಯ ಮಾತುಗಳು, ಚರ್ಚೆಗಳು ನಡೆದಿದ್ದು, ಜನರಲ್ಲಿ ಆತಂಕ ಮನೆ ಮಾಡಿದಂತೂ ಸತ್ಯ. ಇನ್ನೊಂದೆಡೆ ಉತ್ಖನನ ವೇಳೆ ಏನೆಲ್ಲಾ ಸಿಗಬಹುದು ಎನ್ನುವ ಕಾತರದಲ್ಲಿ ಜನ ಇದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು
‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?