ಗದಗ: ಸಸ್ಪೆಂಡ್ ಆದ 15 ದಿನಗಳಲ್ಲಿ ಮುಖ್ಯಾಧಿಕಾರಿಯಾಗಿ ಬಡ್ತಿ ನೀಡಿದ ಸರ್ಕಾರ; ನಿಯಮ ಉಲ್ಲಂಘಿಸಿದ ಅಧಿಕಾರಿಗೆ ಸರ್ಕಾರದ ರಕ್ಷಣೆಯೆಂದು ಜನರ ಆಕ್ರೋಶ

ಗದಗ ನಗರಸಭೆಯಲ್ಲಿ ಕಂದಾಯ ಅಧಿಕಾರಿಯಾಗಿದ್ದ ಮಹೇಶ್ ಹಡಪದ ಎಂಬುವವರು ಸಸ್ಪೆಂಡ್ ಆದ ಹದಿನೈದು ದಿನಗಳಲ್ಲಿಯೇ ಮುಖ್ಯಾಧಿಕಾರಿ ಹುದ್ದೆಗೆ ಬಡ್ತಿ ಹೊಂದಿದ ಅಪರೂಪದ ಘಟನೆ ನಡೆದಿದೆ, ಹೌದು, ನಿಯಮ ಬಾಹಿರವಾಗಿ ‌1063 ನಿವೇಶನಗಳಿಗೆ ಫಾರ್ಮ್ ನಂ.3 ವಿತರಿಸಿ ಕರ್ತವ್ಯ ಲೋಪವೆಸಗಿದ್ದ ಆರೋಪದ ಮೇಲೆ ಅಮಾನತುಗೊಳಿಸಲಾಗಿತ್ತು.

ಗದಗ: ಸಸ್ಪೆಂಡ್ ಆದ 15 ದಿನಗಳಲ್ಲಿ ಮುಖ್ಯಾಧಿಕಾರಿಯಾಗಿ ಬಡ್ತಿ ನೀಡಿದ ಸರ್ಕಾರ; ನಿಯಮ ಉಲ್ಲಂಘಿಸಿದ ಅಧಿಕಾರಿಗೆ ಸರ್ಕಾರದ ರಕ್ಷಣೆಯೆಂದು ಜನರ ಆಕ್ರೋಶ
ಅಧಿಕಾರಿ ಮಹೇಶ್​, ಗದಗ ನಗರಸಭೆ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on:Aug 10, 2023 | 2:43 PM

ಗದಗ, ಆ.10: ಗದಗ(Gadag) ನಗರಸಭೆಯಲ್ಲಿ ಕಂದಾಯ ಅಧಿಕಾರಿಯಾಗಿದ್ದ ಮಹೇಶ್ ಹಡಪದ ಎಂಬುವವರು ಸಸ್ಪೆಂಡ್ ಆಗಿ, ಹದಿನೈದು ದಿನಗಳಲ್ಲಿಯೇ ಮುಖ್ಯಾಧಿಕಾರಿ ಹುದ್ದೆಗೆ ಬಡ್ತಿ ಹೊಂದಿದ ಅಪರೂಪದ ಘಟನೆ ನಡೆದಿದೆ. ಇನ್ನು ಮಹೇಶ್ ಹಡಪದ ಅವರನ್ನು ಕರ್ತವ್ಯ ಲೋಪ ಹಾಗೂ ಬೇಜವಾಬ್ದಾರಿತನ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಜುಲೈ 25 ರಂದು ಅಮಾನತು(Suspension)ಮಾಡಿ ಆದೇಶ ಹೊರಡಿಸಿದ್ದರು. ಇದೀಗ ಕೇವಲ 15 ದಿನಗಳಲ್ಲಿ ಮುಖ್ಯಾಧಿಕಾರಿಯಾಗಿ ಬಡ್ತಿ ಹೊಂದಿದ್ದಾರೆ.

ನಿಯಮ ಬಾಹಿರವಾಗಿ ‌1063 ನಿವೇಶನಗಳಿಗೆ ಫಾರ್ಮ್ ನಂ.3 ವಿತರಿಸಿ ಕರ್ತವ್ಯ ಲೋಪ

ಇನ್ನು ಮಹೇಶ್ ಅವರು ಸಾರ್ವಜನಿಕರಿಗೆ ಫಾರ್ಮ್ ನಂ.3 ವಿತರಣೆಯಲ್ಲಿ ವಿಳಂಬ ಹಾಗೂ 1063 ನಿವೇಶನಗಳಿಗೆ ನಿರಪೇಕ್ಷಣಾ ಪತ್ರ ಪಡೆಯದೇ ಫಾರ್ಮ್ ನಂ.3 ವಿತರಣೆ ಮಾಡಿದ ಆರೋಪ ಮಹೇಶ್ ಹಡಪದ ಅವರ ಮೇಲಿತ್ತು. ಹೀಗಾಗಿ ನಗರಸಭೆ ಸದಸ್ಯರಾದ ಬರಕತ್ ಅಲಿ ಮುಲ್ಲಾ ಹಾಗೂ ಲಕ್ಷ್ಮಿ ಅನಿಲಕುಮಾರ್ ಸಿದ್ಷಮ್ಮನಹಳ್ಳಿ ದೂರು ನೀಡಿದ ಹಿನ್ನೆಲೆಯಲ್ಲಿ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಅವರು ತನಿಖೆ ಮಾಡಿ ಜಿಲ್ಲಾಧಿಕಾರಿ ಅವರಿಗೆ ವರದಿ ಸಲ್ಲಿಸಿದ್ದರು.

ಇದನ್ನೂ ಓದಿ:ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವಿಸಿ ನಾಲ್ವರು ಸಾವು ಪ್ರಕರಣ; ನಗರಸಭೆ ಎಇಇ, ಜೆಇ, ವಾಲ್ವ್​ಮ್ಯಾನ್​ ಅಮಾನತು

ಸಸ್ಪೆಂಡ್ ಆಗಿ ಹದಿನೈದು ದಿನಗಳಲ್ಲಿ ಕೆರೂರ ಪಟ್ಟಣ ಪಂಚಾಯತಿಗೆ ಮುಖ್ಯಾಧಿಕಾರಿಯಾಗಿ ಬಡ್ತಿ

ಹೌದು, ಅಪರ ಜಿಲ್ಲಾಧಿಕಾರಿಗಳ ವರದಿ ಆಧರಿಸಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಅವರು ಅಮಾನತು ಮಾಡಿ ಆದೇಶ ಹೊರಡಿಸಿದ್ದರು. ಇದೀಗ ಸಸ್ಪೆಂಡ್ ಆಗಿದ್ದ ಹದಿನೈದು ದಿನಗಳಲ್ಲಿ ಸರಕಾರ ಇದೀಗ ಬಾಗಲಕೋಟೆ ಜಿಲ್ಲೆಯ ಕೆರೂರ ಪಟ್ಟಣ ಪಂಚಾಯತಿಗೆ ಮಹೇಶ್ ಹಡಪದ ಅವರನ್ನು ಮುಖ್ಯಾಧಿಕಾರಿಯಾಗಿ ಬಡ್ತಿ ನೀಡಿ, ನಿಯೋಜನೆ ಮಾಡಿ ಆದೇಶ ಹೊರಡಿಸಿದೆ.

ನಿಯಮ ಉಲ್ಲಂಘಿಸಿದ ಅಧಿಕಾರಿಗೆ ಸರ್ಕಾರ ರಕ್ಷಣೆ; ಜನರ ಆಕ್ರೋಶ

ನಿಯಮ ಉಲ್ಲಂಘಿಸಿ ಸಾವಿರಾರು ಫಾರ್ಮ್-3 ವಿತರಣೆ ಮಾಡಿದ್ದಾರೆ. ಈ ಕುರಿತು ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ತನಿಖೆ ಮಾಡಿ ವರದಿ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಯವರು ಅಮಾನತು ಮಾಡಿದ್ದಾರೆ. ಇಂಥಹ ಅಧಿಕಾರಿಗೆ ಸರ್ಕಾರ ಬಡ್ತಿ ನೀಡಿ ವರ್ಗಾವಣೆ ಮಾಡಿದ್ದು, ಎಷ್ಟು ಸರಿ ಎಂದು ಗದಗ-ಬೆಟಗೇರಿ ಅವಳಿ ನಗರದ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೊತೆಗೆ ಸರ್ಕಾರ ವರ್ಗಾವಣೆ ದಂಧೆಯಲ್ಲಿ ಮುಳುಗಿದೆ ಎನ್ನುವ ವಿಪಕ್ಷಗಳ ಆರೋಪಕ್ಕೆ ಈ ಪ್ರಕರಣ ತಾಜಾ ಉದಾಹರಣೆ ಎಂದು ಗದಗ ಜನರು ಕಿಡಿಕಾರಿದ್ದಾರೆ.

ಇದನ್ನೂ ಓದಿ:ಪತ್ನಿ ಹೆಸರಲ್ಲಿ ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಪತಿ, ಜೈಪುರ ಮೇಯರ್ ಮುನೇಶ್ ಗುರ್ಜರ್ ಅಮಾನತು

ಇನ್ನೂ ಅಮಾನತ್ತಿನಲ್ಲಿರುವ ಮಹೇಶ್​

ಇನ್ನು ಈ ಕುರಿತು ಗದಗ ನಗರಸಭೆ ಆಯಕ್ತ ರಮೇಶ್​ ಸುಣಗಾರ ಅವರನ್ನು ಕೇಳಿದರೆ ‘ಮಹೇಶ್ ಹಡಪದ ಅವರನ್ನು ಜಿಲ್ಲಾಧಿಕಾರಿಗಳು ಇಲಾಖೆ ತನಿಖೆ ಬಾಕಿ ಇಟ್ಟು ಅಮಾನತು ಮಾಡಿದ್ದಾರೆ. ಇನ್ನೂ ಕೂಡ ಅಮಾನತ್ತಿನಲ್ಲಿದ್ದಾರೆ. ಆದರೆ, ವರ್ಗಾವಣೆ, ಬಡ್ತಿ ಬಗ್ಗೆ ಮಾಹಿತಿ‌ ಇಲ್ಲ ಎಂದು ಟಿವಿ9 ಡಿಜಿಟಲ್​ಗೆ ಮಾಹಿತಿ ನೀಡಿದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:42 pm, Thu, 10 August 23

ತಾಜಾ ಸುದ್ದಿ
ಸೋಲಿಗೆ ಮಾಧ್ಯಮಗಳ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ ಡಿಕೆ ಸುರೇಶ್
ಸೋಲಿಗೆ ಮಾಧ್ಯಮಗಳ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ ಡಿಕೆ ಸುರೇಶ್
ಹಣವನ್ನು ಗಾಳಿಯಲ್ಲಿ ತೂರಿ ಹುಟ್ಟುಹಬ್ಬ ಆಚರಿಸಿಕೊಂಡ ಹುಬ್ಬಳ್ಳಿಯ ಯುವಕ
ಹಣವನ್ನು ಗಾಳಿಯಲ್ಲಿ ತೂರಿ ಹುಟ್ಟುಹಬ್ಬ ಆಚರಿಸಿಕೊಂಡ ಹುಬ್ಬಳ್ಳಿಯ ಯುವಕ
ಯುವಕರ ನೆಚ್ಚಿನ ಸ್ಟೈಲಿಶ್ ಕ್ಯಾಸಿಯೋ G Shock ಸ್ಮಾರ್ಟ್​ವಾಚ್ ಬಿಡುಗಡೆ
ಯುವಕರ ನೆಚ್ಚಿನ ಸ್ಟೈಲಿಶ್ ಕ್ಯಾಸಿಯೋ G Shock ಸ್ಮಾರ್ಟ್​ವಾಚ್ ಬಿಡುಗಡೆ
‘ಎಲ್ಲರಿಗೂ ನೋವಿದೆ’; ದರ್ಶನ್ ಪ್ರಕರಣದಲ್ಲಿ ಸುಮಲತಾ, ರಾಕ್​ಲೈನ್ ಮೌನ ಏಕೆ?
‘ಎಲ್ಲರಿಗೂ ನೋವಿದೆ’; ದರ್ಶನ್ ಪ್ರಕರಣದಲ್ಲಿ ಸುಮಲತಾ, ರಾಕ್​ಲೈನ್ ಮೌನ ಏಕೆ?
ಮನೆಯಲ್ಲಿ ಚಪ್ಪಲಿ ಹಾಕಿಕೊಂಡು ಓಡಾಡಬಾರದು, ಈ ಬಗ್ಗೆ ಆಧ್ಯಾತ್ಮದಲ್ಲೇನಿದೆ?
ಮನೆಯಲ್ಲಿ ಚಪ್ಪಲಿ ಹಾಕಿಕೊಂಡು ಓಡಾಡಬಾರದು, ಈ ಬಗ್ಗೆ ಆಧ್ಯಾತ್ಮದಲ್ಲೇನಿದೆ?
Horoscope:ಈ ರಾಶಿಯವರಿಗೆ ಪ್ರಸಿದ್ಧ ವ್ಯಕ್ತಿಗಳು ಅನಿರೀಕ್ಷಿತವಾಗಿ ಸಿಗುವರು
Horoscope:ಈ ರಾಶಿಯವರಿಗೆ ಪ್ರಸಿದ್ಧ ವ್ಯಕ್ತಿಗಳು ಅನಿರೀಕ್ಷಿತವಾಗಿ ಸಿಗುವರು
‘ನಾನು ದರ್ಶನ್ ಅವರ ಸಂಬಂಧಿ’: ಭೇಟಿ ಮಾಡಲು ಪರಪ್ಪನ ಅಗ್ರಹಾರಕ್ಕೆ ಬಂದ ಯುವತಿ
‘ನಾನು ದರ್ಶನ್ ಅವರ ಸಂಬಂಧಿ’: ಭೇಟಿ ಮಾಡಲು ಪರಪ್ಪನ ಅಗ್ರಹಾರಕ್ಕೆ ಬಂದ ಯುವತಿ
ದರ್ಶನ್​ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಹಿರಿಯ ನಿರ್ಮಾಪಕ ಸಾ.ರಾ. ಗೋವಿಂದು
ದರ್ಶನ್​ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಹಿರಿಯ ನಿರ್ಮಾಪಕ ಸಾ.ರಾ. ಗೋವಿಂದು
ಸಿಎಂ ವಿವಾದ ಸಿದ್ದರಾಮಯ್ಯ ಕಾರ್ಯವೈಖರಿ ಮೇಲೆ ಪ್ರಭಾವ ಬೀರಿದೆ: ಶೆಟ್ಟರ್
ಸಿಎಂ ವಿವಾದ ಸಿದ್ದರಾಮಯ್ಯ ಕಾರ್ಯವೈಖರಿ ಮೇಲೆ ಪ್ರಭಾವ ಬೀರಿದೆ: ಶೆಟ್ಟರ್
ಹೋರಿ ಬೆದರಿಸುವುದನ್ನು ನೋಡಲು ವಿದ್ಯುತ್​ ಟಿಸಿ ಏರಿ ಕೂತರು: ಜನರ ಹುಚ್ಚಾಟ
ಹೋರಿ ಬೆದರಿಸುವುದನ್ನು ನೋಡಲು ವಿದ್ಯುತ್​ ಟಿಸಿ ಏರಿ ಕೂತರು: ಜನರ ಹುಚ್ಚಾಟ