ಸತ್ತವರ ಬ್ಯಾಂಕ್ ಖಾತೆಗೂ ಗೃಹಲಕ್ಷ್ಮಿ ಹಣ ಜಮೆ; ಯೋಜನೆಯ ಹಣ ಪಡೆಯಲು ಕುಟುಂಬಸ್ಥರ ಪರದಾಟ
ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ ಮೂಲಕ ಪ್ರತಿ ಮನೆಯ ಓರ್ವ ಮಹಿಳೆಗೆ 2 ಸಾವಿರ ರೂಪಾಯಿ ನೀಡುತ್ತಿದೆ. ಆದರೆ, ಗದಗ ಜಿಲ್ಲೆಯ ನರಗುಂದ(Naragunda) ತಾಲೂಕಿನ ಜಗಾಪುರ ಗ್ರಾಮದ ಮಹಿಳೆಯೋರ್ವಳು ಸತ್ತು ಹೋದ ಅತ್ತೆಯ ಹೆಸರಿನಲ್ಲಿ ಅರ್ಜಿ ಸಲ್ಲಿಸಿದ್ದಾಳೆ. ಈ ಹಿನ್ನಲೆ ಆಕೆಯ ಖಾತೆಗೆ ಹಣ ಜಮೆಯಾಗಿದ್ದು, ಇದೀಗ ಅದನ್ನು ತಗೆದುಕೊಳ್ಳಲು ಹರಸಾಹಸ ಪಡುತ್ತಿದ್ದಾರೆ.
ಗದಗ, ಫೆ.20: ಸತ್ತವರ ಬ್ಯಾಂಕ್ ಖಾತೆಗೂ ಗೃಹಲಕ್ಷ್ಮಿ ಹಣ ಜಮೆಯಾಗಿದ್ದು, ಅದನ್ನು ಪಡೆಯಲು ಕುಟುಂಬಸ್ಥರು ಹರಸಾಹಸ ಪಡುತ್ತಿರುವ ಘಟನೆ ಗದಗ ಜಿಲ್ಲೆಯ ನರಗುಂದ(Naragunda) ತಾಲೂಕಿನ ಜಗಾಪುರ ಗ್ರಾಮದಲ್ಲಿ ನಡೆದಿದೆ. ಜಗಾಪುರ ಗ್ರಾಮದ ನಿಂಗವ್ವ ಶಿವಪ್ಪ ಹೂಲಿ ಎಂಬಾಕೆ ಗೃಹ ಲಕ್ಷಿ ಯೋಜನೆ ಜಾರಿಗೆ ಬರುವ ಮುನ್ನವೇ ಅಂದರೆ ಆಗಸ್ಟ್ 26, 2020 ರಂದು ಮೃತಪಟ್ಟಿದ್ದಾರೆ. ಆದರೆ, ಸೊಸೆ ಲಲಿತಾ ಹೂಲಿ ಗೃಹಲಕ್ಷ್ಮಿ ಯೋಜನೆ ಅಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದಳು.
ಈ ಹಿನ್ನಲೆ ಮೃತಳ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು ಗೃಹಲಕ್ಷ್ಮೀ ಹಣ ಜಮಾ ಆಗಿದೆ. ಈಗಲೂ ಅನೇಕ ಮಹಿಳೆಯರು ಗೃಹಲಕ್ಷ್ಮಿ ಹಣ ಜಮೆಯಾಗದೇ ಪರದಾಡುತ್ತಾ ಕಚೇರಿಗಳಿಗೆ ಅಲೆದಾಟ ನಡೆಸಿದ್ದಾರೆ. ಆದರೆ, ಗದಗ ಜಿಲ್ಲೆಯಲ್ಲಿ ನಿಧನ ಹೊಂದಿರುವ ಮಹಿಳೆಯೊಬ್ಬರಿಗೆ ಹಣ ಜಮೆಯಾಗಿದೆ. ಇಂತಹ ಪ್ರಕರಣಗಳು ನರಗುಂದ ತಾಲೂಕಿನಲ್ಲಿ 7 ರಿಂದ 8 ಪ್ರಕರಣಗಳು ಬೆಳಕಿಗೆ ಬಂದಿದೆ. ನಿಂಗವ್ವ ಮೃತಪಟ್ಟಿದ್ದರಿಂದ ನ್ಯಾಯಬೆಲೆ ಅಂಗಡಿಯಲ್ಲಿ ಈ ಕುಟುಂಬದ ನಾಲ್ವರಿಗೆ ಮಾತ್ರ ಪಡಿತರ ವಿತರಣೆ ಮಾಡಲಾಗುತ್ತಿದೆ. ಆದರೆ, ಅತ್ತೆ ಮೃತಪಟ್ಟಿರುವುದರಿಂದ ಗೃಹಲಕ್ಷ್ಮಿ ಹಣವನ್ನು ತನ್ನ ಖಾತೆಗೆ ಜಮಾ ಮಾಡುವಂತೆ ಸೊಸೆ ಅಲೆದಾಟ ನಡೆಸಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಅರ್ಜಿ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ.
ಕಾಂಗ್ರೆಸ್ ಚುನಾವಣಾ ಪೂರ್ವದಲ್ಲಿ ನೀಡಿದ್ದ ಪಂಚ ಗ್ಯಾರಂಟಿಗಳನ್ನು ನೀಡಿತ್ತು. ಅಧಿಕಾರಕ್ಕೆ ಬಂದ ಮೇಲೆ ಅದನ್ನು ಈಡೇರಿಸುವ ಮೂಲಕ ಜನರ ಭರವಸೆಗಳನ್ನು ಉಳಿಸಿಕೊಂಡಿದೆ. ಅದರಂತೆ ಗೃಹಲಕ್ಷ್ಮೀ ಯೋಜನೆಯ ಮೂಲಕ ಮಹಿಳೆಯರಿಗೆ ಸಹಾಯವಾಗಲು 2 ಸಾವಿರ ರೂಪಾಯಿಯನ್ನು ನೇರವಾಗಿ ಅವರ ಖಾತೆಗೆ ಹಾಕುತ್ತಿದೆ. ಇನ್ನೂ ಕೆಲವರಿಗೆ ಬರುವುದು ಬಾಕಿ ಇದೆ. ಆದರೆ, ಈ ಮಧ್ಯೆ ನರಗುಂದಲ್ಲಿ ಸತ್ತವರ ಖಾತೆಗೂ ಗೃಹಲಕ್ಷ್ಮೀ ಹಣ ಜಮೆಯಾಗಿದ್ದು,
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:16 pm, Tue, 20 February 24