Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾವೈಕ್ಯತೆಗೆ ಸಾಕ್ಷಿಯಾದ ಗದಗನ ಈ ಗ್ರಾಮ: ನೂರಾರು ವರ್ಷಗಳಿಂದ ಹನುಮನ ದೇವರಿಗೆ ಆರಾಧಿಸುವ ಮುಸ್ಲಿಂರು

ಕೋಮು ಸೌಹಾರ್ದತೆಯನ್ನು ಉತ್ತೇಜಿಸಲು ದೇವಸ್ಥಾನದಲ್ಲಿ ಪೂಜೆ ಮತ್ತು ಇತರ ಆಚರಣೆಗಳನ್ನು ನಡೆಸಲು ಮುಸ್ಲಿಮರಿಗೆ ಅವಕಾಶ ನೀಡಲಾಗಿದೆ. ಕೋರಿಕೊಪ್ಪದಲ್ಲಿ ಹಿಂದೂಗಳು ಮತ್ತು ಮುಸ್ಲಿಮರು ಯಾವಾಗಲೂ ಶಾಂತಿಯುತವಾಗಿ ಸಹಬಾಳ್ವೆದಿಂದ ಜೀವನ ನಡೆಸುತ್ತಿದ್ದಾರೆ. ಇಲ್ಲಿ ಎಂದಿಗೂ ಯಾವುದೇ ಕೋಮು ಘರ್ಷಣೆಗೆ ಸಾಕ್ಷಿಯಾಗಲಿಲ್ಲ ಎಂದು ಗದಗ ಜಿಲ್ಲೆಯ ಲಕ್ಷ್ಮೇಶ್ವರ ಸಮೀಪದ ಕೋರಿಕೊಪ್ಪ ಗ್ರಾಮಸ್ಥರು ಹೇಳಿದರು.

ಭಾವೈಕ್ಯತೆಗೆ ಸಾಕ್ಷಿಯಾದ ಗದಗನ ಈ ಗ್ರಾಮ: ನೂರಾರು ವರ್ಷಗಳಿಂದ ಹನುಮನ ದೇವರಿಗೆ ಆರಾಧಿಸುವ ಮುಸ್ಲಿಂರು
ಭಾವೈಕ್ಯತೆಗೆ ಸಾಕ್ಷಿಯಾದ ಹನುಮಾನ ದೇವಸ್ಥಾನ
Follow us
ವಿವೇಕ ಬಿರಾದಾರ
|

Updated on:Sep 02, 2023 | 11:41 AM

ಗದಗ: ಉತ್ತರ ಕರ್ನಾಟಕ (North Karnataka) ಭಾವೈಕ್ಯತೆಗೆ ಹೆಸರುವಾಸಿಯಾಗಿದೆ. ಇಲ್ಲಿನ ಅನೇಕ ಮಠಗಳು ಭಾವೈಕ್ಯತೆಯ ಸಾರವನ್ನು ಜಗತ್ತಿಗೆ ಸಾರಿ ಸಾರಿ ಹೇಳುತ್ತಿವೆ. ಹೀಗೆ ಜಿಲ್ಲೆಯ ಲಕ್ಷ್ಮೇಶ್ವರ (Lakshmeshwara) ಸಮೀಪದ ಕೋರಿಕೊಪ್ಪ ಗ್ರಾಮದಲ್ಲಿರುವ ಹನುಮಾನ ದೇವಸ್ಥಾನಕ್ಕೆ (Hanuman Temple) ಕಳೆದ 150 ವರ್ಷಗಳಿಂದ ಮುಸ್ಲಿಮರು ಕೂಡ ಬರುತ್ತಿದ್ದಾರೆ. ಹೌದು ನೀವು ಓದಿರುವುದು ಸತ್ಯ. ಮುಸ್ಲಿಮರು ದೇವಾಲಯದ ಗರ್ಭಗುಡಿಯನ್ನು ಪ್ರವೇಶಿಸಿ ಹನುಮಂನ ದೇವಸ್ಥಾನಕ್ಕೆ ಮುಸ್ಲಿಂರು ಕೂಡ ನಡೆದುಕೊಳ್ಳುತ್ತಿದ್ದಾರೆ.

ಕೋರಿಕೊಪ್ಪ ಗ್ರಾಮದ ಪ್ರವೇಶ ದ್ವಾರದಲ್ಲಿ ಚಿಕ್ಕ ಹನುಮಾನ ದೇವಸ್ಥಾನದೆ. ಸುಮಾರು ವರ್ಷಗಳ ಹಿಂದೆ ಕೋರಿಕೊಪ್ಪ ಗ್ರಾಮಕ್ಕೆ ಪ್ಲೇಗ್ ಮತ್ತು ಕಾಲರಾ ರೋಗ ಒಕ್ಕರಿಸಿದ್ದರಿಂದ ಜನರು ಗ್ರಾಮವನ್ನು ತೊರೆದು ಬೇರೆಡೆ ವಲಸೆ ಹೋಗಿದ್ದರು. ಈ ಹಿನ್ನೆಲೆಯಲ್ಲಿ ದೇವಾಲಯದಲ್ಲಿ ಪೂಜೆ ಮಾಡಲು ಯಾರು ಇಲ್ಲದಂತಾಯಿತು. ಆಗ ಬದ್ನಿ ಗ್ರಾಮದ ಕೆಲವು ಮುಸ್ಲಿಂ ಕುಟುಂಬಗಳು ಹನುಮ ದೇವಸ್ಥಾನಕ್ಕೆ ನಡೆದುಕೊಂಡರು. ಇದು ಹೀಗೆ ಮುಂದುವರೆದುಕೊಂಡು ಬಂದಿದೆ. ಮುಂದಿನ ದಿನಗಳಲ್ಲಿ ಗ್ರಾಮಸ್ಥರು ಎಲ್ಲರೂ ಸೇರಿ ದೇವಸ್ಥಾನವನ್ನು ಜೀರ್ಣೋದ್ಧಾರ ಮಾಡಿದರು.

ಶ್ರಾವಣ ಮಾಸದಲ್ಲಿ ಜಾತಿ, ಮತ ಭೇದವಿಲ್ಲದೆ ಗ್ರಾಮಸ್ಥರೆಲ್ಲರೂ ಸೇರಿ ದೇವಸ್ಥಾನದಲ್ಲಿ ಹೋಮ, ಹವನ, ಭಜನೆ ಮಾಡುತ್ತಾರೆ. ದೇವಾಲಯದ ಆವರಣದಲ್ಲಿ ಪುರಾತನ ಕಾಲದ ಮಣ್ಣಿನ ಮಡಕೆಗಳು, ಶಾಸನಗಳು ಲಭ್ಯವಾಗಿದ್ದು, ಇವುಗಳ ಕುರಿತು ಅಧ್ಯಯನ ನಡೆಸುವಂತೆ ಗ್ರಾಮಸ್ಥರು ಪುರಾತತ್ವ ಇಲಾಖೆಗೆ ಮನವಿ ಸಲ್ಲಿಸಿದ್ದಾರೆ. ಈ ಅಧ್ಯಯನವು ಸೆಪ್ಟೆಂಬರ್‌ನಲ್ಲಿ ಪ್ರಾರಂಭವಾಗಲಿದೆ.

ಇದನ್ನೂ ಓದಿ: ಡಿಜಿಟಲ್ ಬಟನ್ ಒತ್ತುವ ಮೂಲಕ ಗೃಹಲಕ್ಷ್ಮೀ ಯೋಜನೆಗೆ ರಾಹುಲ್​ ಗಾಂಧಿ ಚಾಲನೆ

ಮುಸ್ಲಿಂರು ಹನುಮನ ದೇವೆ ಆರಾಧನೆ  ಮಾಡುತ್ತಿರುವುದೇ ಈ ದೇವಾಲಯದ ವೈಶಿಷ್ಟ್ಯವಾಗಿದೆ. ಬದ್ನಿ ಗ್ರಾಮದ  ಈ ದೇವಸ್ಥಾನಕ್ಕೆ ಹಿಂದೂಗಳು ಮತ್ತು ಜೈನರು ಬರುತ್ತಾರೆ ಎಂದು ಲಕ್ಷ್ಮೇಶ್ವರ ತಾಲೂಕಿನ ಮೊಹಮ್ಮದ್ ಲಕ್ಷ್ಮೇಶ್ವರ್ ಮತ್ತು ಜಿನೇಶ್ ಜೈನ್ ಹೇಳಿದರು.

ಲಕ್ಷ್ಮೇಶ್ವರದ ಪಿ.ಕೆ.ಪೂಜಾರ್ ಮಾತನಾಡಿ, ಅದರಕಟ್ಟಿ-ಕೊಂಡಿಕೊಪ್ಪ ರಸ್ತೆಯಲ್ಲಿರುವ ಕೋರಿಕೊಪ್ಪ ಗ್ರಾಮ ಕೋಮು ಸೌಹಾರ್ದಕ್ಕೆ ಹೆಸರಾಗಿದೆ. ಶನಿವಾರ ಮತ್ತು ಮಂಗಳವಾರದಂದು ಸುತ್ತಮುತ್ತಲಿನ ಗ್ರಾಮಗಳು ಮತ್ತು ಇತರೆಡೆಗಳಿಂದ ನೂರಾರು ಜನರು ದೇವಸ್ಥಾನಕ್ಕೆ ಭೇಟಿ ನೀಡುತ್ತಾರೆ ಎಂದರು.

ಕೋರಿಕೊಪ್ಪದಲ್ಲಿ ಹಿಂದೂಗಳು ಮತ್ತು ಮುಸ್ಲಿಮರು ಯಾವಾಗಲೂ ಶಾಂತಿಯುತವಾಗಿ ಸಹಬಾಳ್ವೆದಿಂದ ಜೀವನ ನಡೆಸುತ್ತಿದ್ದಾರೆ. ಇಲ್ಲಿ ಎಂದಿಗೂ ಯಾವುದೇ ಕೋಮು ಘರ್ಷಣೆಗೆ ಸಾಕ್ಷಿಯಾಗಲಿಲ್ಲ ಎಂದು ಗ್ರಾಮಸ್ಥರು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:03 pm, Wed, 30 August 23

IPL 2025: ನಂಬಿ ಕೆಟ್ಟ ಇಶಾನ್ ಕಿಶನ್: ಇಲ್ಲಿದೆ ಒರಿಜಿನಲ್ ವಿಡಿಯೋ
IPL 2025: ನಂಬಿ ಕೆಟ್ಟ ಇಶಾನ್ ಕಿಶನ್: ಇಲ್ಲಿದೆ ಒರಿಜಿನಲ್ ವಿಡಿಯೋ
‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್
‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್
ಬೆಳಗ್ಗೆ 6 ಗಂಟೆಗೆ ದೆಹಲಿಯಿಂದ ಬೆಂಗಳೂರು ಆಗಮಿಸಿದ ಮಂಜುನಾಥ್ ದೇಹ
ಬೆಳಗ್ಗೆ 6 ಗಂಟೆಗೆ ದೆಹಲಿಯಿಂದ ಬೆಂಗಳೂರು ಆಗಮಿಸಿದ ಮಂಜುನಾಥ್ ದೇಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ