ಅನಾರೋಗ್ಯದಿಂದ ಬೇಸತ್ತು ಹೆಡ್ಕಾನ್ಸ್ಟೇಬಲ್ ನೇಣು ಬಿಗಿದುಕೊಂಡು ಆತ್ಮಹತ್ಯೆ
ಅನಾರೋಗ್ಯದಿಂದ ಬೇಸತ್ತು ಹೆಡ್ಕಾನ್ಸ್ಟೇಬಲ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗನ ತೇಜಾ ನಗರದಲ್ಲಿ ನಡೆದಿದೆ.
ಗದಗ: ಅನಾರೋಗ್ಯದಿಂದ ಬೇಸತ್ತು ಹೆಡ್ಕಾನ್ಸ್ಟೇಬಲ್ (Head constable) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗನ ತೇಜಾ ನಗರದಲ್ಲಿ ನಡೆದಿದೆ. ಅನಿಲ್ ಸಜ್ಜನರ್(48) ಮೃತ ಹೆಡ್ಕಾನ್ಸ್ಟೇಬಲ್. ಅನಿಲ್ ಸಜ್ಜನರ್ ಜಿಲ್ಲಾ ಸಶಸ್ತ್ರ ಮೀಸಲು ಪಡೆಯಲ್ಲಿ ಹೆಡ್ಕಾನ್ಸ್ಟೇಬಲ್ ಆಗಿದ್ದರು. ಅನಿಲ್ ಸಜ್ಜನರ್ 2 ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಇಂದು (ನ. 25) ಅನಿಲ್ ಸಜ್ಜನರ್ ಎಳನೀರು ತರುವಂತೆ ಪತ್ನಿಯನ್ನು ಹೊರಗೆ ಕಳುಹಿಸಿ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಗದಗ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:53 pm, Fri, 25 November 22