ಪ್ರವಾದಿ ಪೈಗಂಬರ್ ಬಗ್ಗೆ ಪ್ರಬಂಧ ಸ್ಪರ್ಧೆ ಆಯೋಜಿಸಿದ್ದ ಗದಗ ಜಿಲ್ಲೆಯ ಮುಖ್ಯ ಶಿಕ್ಷಕ ಅಮಾನತು

ಮುಖ್ಯ ಶಿಕ್ಷಕ ಅಬ್ದುಲ್ ಮುನಾಫ್ ಬಿಜಾಪೂರ ಅವರನ್ನು ಅಮಾನತು ಮಾಡಿ ಶಿಕ್ಷಣ ಇಲಾಖೆಯ ಧಾರವಾಡ ವಿಭಾಗದ ಅಪರ ಆಯುಕ್ತ ಶ್ರೀಶೈಲ ಬಿರಾದಾರ ಆದೇಶ ಹೊರಡಿಸಿದ್ದಾರೆ.

ಪ್ರವಾದಿ ಪೈಗಂಬರ್ ಬಗ್ಗೆ ಪ್ರಬಂಧ ಸ್ಪರ್ಧೆ ಆಯೋಜಿಸಿದ್ದ ಗದಗ ಜಿಲ್ಲೆಯ ಮುಖ್ಯ ಶಿಕ್ಷಕ ಅಮಾನತು
ಗದಗ ತಾಲ್ಲೂಕಿನ ನಾಗಾವಿ ಗ್ರಾಮದಲ್ಲಿರುವ ಸರ್ಕಾರಿ ಪ್ರೌಢಶಾಲೆಯಲ್ಲಿ ಶ್ರೀರಾಮಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Sep 29, 2022 | 9:14 AM

ಗದಗ: ಇಸ್ಲಾಂ ಧರ್ಮ ಪ್ರವರ್ತಕ ಪ್ರವಾದಿ ಮೊಹಮದ್ ಪೈಗಂಬರ್ (Prophet Mohammad Paigambar) ಅವರ ಬಗ್ಗೆ ಪ್ರಬಂಧ ಸ್ಪರ್ಧೆ ಆಯೋಜಿಸಿದ್ದ ಜಿಲ್ಲೆಯ ನಾಗಾವಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಅಬ್ದುಲ್ ಮುನಾಫ್ ಬಿಜಾಪೂರ ಅವರನ್ನು ಅಮಾನತು ಮಾಡಿ ಶಿಕ್ಷಣ ಇಲಾಖೆಯ ಧಾರವಾಡ ವಿಭಾಗದ ಅಪರ ಆಯುಕ್ತ ಶ್ರೀಶೈಲ ಬಿರಾದಾರ ಆದೇಶ ಹೊರಡಿಸಿದ್ದಾರೆ. ಸಮಾಜದ ಸ್ವಾಸ್ಥ್ಯ ಕದಡುವ ಹಾಗೂ ಮುಸ್ಲಿಂ ಧರ್ಮದ ಬಗ್ಗೆ ಅಭಿಮಾನ ಹುಟ್ಟಿಸುವ ಪ್ರಯತ್ನ ಇದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಗದಗ ತಾಲ್ಲೂಕಿನ ನಾಗಾವಿ ಶಾಲೆಯಲ್ಲಿ ಇಸ್ಲಾಮೀಕರಣ ಪ್ರಯತ್ನ ನಡೆಯುತ್ತಿದೆ ಎಂದು ಸೆ 27ರಂದು ಶ್ರೀರಾಮಸೇನೆ ಕಾರ್ಯಕರ್ತರು ಶಾಲೆಗೆ ನುಗ್ಗಿ ಆಕ್ರೋಶ ವ್ಯಕ್ತಪಡಿಸಿದ್ದರು. ಶಾಂತಿ ಪ್ರಕಾಶನ ಪ್ರಕಟಿಸಿರುವ ಮೊಹಮದ್ ಪೈಗಂಬರ್ ಅವರ ಜೀವನ ಮತ್ತು ಬೋಧನೆ ಕುರಿತ ಪುಸ್ತಕವನ್ನು ಮಕ್ಕಳಿಗೆ ಕೊಟ್ಟಿದ್ದ ಮುಖ್ಯ ಶಿಕ್ಷಕರು ಪ್ರಬಂಧ ಬರೆಯಲು ಸೂಚಿಸಿದ್ದರು.

ಶಾಲೆಗೆ ನುಗ್ಗಿದ್ದ ಶ್ರೀರಾಮಸೇನೆ ಕಾರ್ಯಕರ್ತರು

ಪೈಗಂಬರ್ ಪ್ರಬಂಧ ಸ್ಪರ್ಧೆ ಆಯೋಜಿಸಿದ್ದು ಶ್ರೀರಾಮಸೇನೆ ಕಾರ್ಯಕರ್ತರ ಕೆಂಗಣ್ಣಿಗೆ ಗುರಿಯಾಗಿತ್ತು. ‘ಪಠ್ಯದಲ್ಲಿ ಇಲ್ಲದ ವಿಷಯದ ಬಗ್ಗೆ ಪ್ರಬಂಧ ಬರೆಯಲು ಸೂಚಿಸಿದ್ದು ಏಕೆ’ ಎಂದು ಕಾರ್ಯಕರ್ತರು ಪ್ರಶ್ನಿಸಿದ್ದರು. ‘ಶಾಲೆಯ ಮುಖ್ಯ ಶಿಕ್ಷಕರಾಗಿರುವ ಎ.ಎಲ್.ಬಿಜಾಪುರ ಅವರು ಪೈಗಂಬರ್ ಅವರಿಗೆ ಸಂಬಂಧಿಸಿದ ಪುಸ್ತಕವೊಂದನ್ನು 8ನೇ ತರಗತಿ ಮಕ್ಕಳಿಗೆ ಕೊಟ್ಟು ಓದಲು ಪ್ರೇರೇಪಿಸಿದ್ದರು. ನಂತರ ಪ್ರಬಂಧ ಬರೆಯುವಂತೆ ಮಕ್ಕಳಿಗೆ ಸೂಚಿಸಿದ್ದರು. ಉತ್ತಮ ಪ್ರಬಂಧಕ್ಕೆ ₹ 8 ಸಾವಿರ ಬಹುಮಾನ ನೀಡುವುದಾಗಿ ಹೇಳಿದ್ದರು. ಇಂಥ ಪ್ರಯತ್ನಗಳ ಮೂಲಕ ಮಕ್ಕಳನ್ನು ಮತಾಂತರ ಮಾಡಲು ಯತ್ನಿಸುತ್ತಿದ್ದಾರೆ’ ಎಂದು ಕಾರ್ಯಕರ್ತರು ದೂರಿದ್ದರು. ಸ್ಥಳಕ್ಕೆ ಜಿಪಂ ಸಿಇಒ ಹಾಗೂ ಡಿಡಿಪಿಐ ಬರಬೇಕು ಎಂದು ಕಾರ್ಯಕರ್ತರು ಪಟ್ಟು ಹಿಡಿದಿದ್ದರು.

Published On - 9:14 am, Thu, 29 September 22

ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ