AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ: ಮಲಪ್ರಭಾ ನದಿ ಪ್ರವಾಹಕ್ಕೆ ತತ್ತರಿಸಿದ ರೈತರು; ಸತತ ಎರಡು ವರ್ಷದಿಂದ ಬೆಳೆ ನಾಶ

karnataka monsoon: ಮಲಪ್ರಭಾ ನದಿ ತೀರದ ನೂರಾರು ಎಕರೆಯಲ್ಲಿನ ಹೆಸರು, ಗೋವಿನ ಜೋಳ, ಕಬ್ಬು, ಸೂರ್ಯಕಾಂತಿ ಸೇರಿ ಹಲವು ಬೆಳೆ ಹಾನಿಯಾಗಿದೆ. ಸೌಜನ್ಯಕ್ಕೂ ರೋಣ ತಾಲೂಕಿನ ತಹಶಿಲ್ದಾರ್ ಮತ್ತು ಕೃಷಿ ಇಲಾಖೆ ಅಧಿಕಾರಿಗಳು ಇತ್ತ ಭೇಟಿ ನೀಡಿಲ್ಲ. ಉಸ್ತುವಾರಿ ಸಚಿವ ಸಿ. ಸಿ. ಪಾಟೀಲ್ ತವರು ಕ್ಷೇತ್ರದಲ್ಲೇ ನಿರ್ಲಕ್ಷ್ಯ ವಹಿಸಿದ್ದಾರೆ.

ಗದಗ: ಮಲಪ್ರಭಾ ನದಿ ಪ್ರವಾಹಕ್ಕೆ ತತ್ತರಿಸಿದ ರೈತರು; ಸತತ ಎರಡು ವರ್ಷದಿಂದ ಬೆಳೆ ನಾಶ
ಮಲಪ್ರಭಾ ನದಿ ಪ್ರವಾಹಕ್ಕೆ ತತ್ತರಿಸಿದ ರೈತರು
TV9 Web
| Edited By: |

Updated on: Aug 06, 2021 | 1:10 PM

Share

ಗದಗ: ಜುಲೈ ತಿಂಗಳಲ್ಲಿ ಕರ್ನಾಟಕದಾದ್ಯಂತ ಅಬ್ಬರಿಸಿದ ಮಳೆಯಿಂದಾಗಿ ಜನಜೀವನ ದುಸ್ತರಗೊಂಡಿದೆ. ಕಳೆದ ಕೆಲ ದಿನಗಳಿಂದ ಮಳೆ ಆರ್ಭಟ (Karnataka Rain) ಕೊಂಚ ತಗ್ಗಿದಂತೆ ಕಾಣುತ್ತಿತ್ತಾದರೂ ಇದೀಗ ಆರಂಭವಾಗಿರುವ ಆಶ್ಲೇಷಾ ಮಳೆ ಮತ್ತೆ ಜೋರಾಗಿ ಸುರಿಯಲಾರಂಭಿಸಿದೆ. ಈ ಬಾರಿಯಂತೂ ಮೇ ತಿಂಗಳಿನಿಂದಲೇ ಮಳೆಗಾಲದ ವಾತಾವರಣವಿತ್ತಾದ್ದರಿಂದ ಉತ್ತರ ಕರ್ನಾಟಕ, ಮಲೆನಾಡು, ಕರಾವಳಿ ಭಾಗದಲ್ಲಿ ಭೂಮಿ ಒಣಗಲು ಅವಕಾಶವೇ ಸಿಕ್ಕಿಲ್ಲ ಎಂಬಂತಾಗಿ ಕೃಷಿಕರು ಅತಿಯಾದ ಮಳೆಯಿಂದ (Heavy Rain) ಕಂಗಾಲಾಗಿದ್ದಾರೆ. ಅದರಂತೆ ಮಳೆಯ ಆರ್ಭಟಕ್ಕೆ ಮಲಪ್ರಭಾ ನದಿ ಪಾತ್ರದ ಜನರು ಪ್ರವಾಹಕ್ಕೆ ತುತ್ತಾಗಿದ್ದು, ರೈತರಂತು ತಾವು ಬೆಳೆದ ಬೆಳೆಯನ್ನು ಕಳೆದುಕೊಂಡಿದ್ದಾರೆ. ಸತತ ಎರಡು ವರ್ಷ ಭೀಕರ ಪ್ರವಾಹ ಬಂಗಾರದಂಥ ಬೆಳೆ ಸರ್ವನಾಶ ಮಾಡಿದ್ದು, ರೈತರನ್ನು ಸಂಕಷ್ಟಕ್ಕೆ ದೂಡಿದೆ.

ಗದಗ ಜಿಲ್ಲೆಯ ರೋಣ, ಗಾಡಗೋಳಿ, ಹೊಳೆಮಣ್ಣೂರ ತಾಲೂಕಿನ ರೈತರು ಬೆಳೆ ಕಳೆದುಕೊಂಡಿದ್ದು, ಕಳೆದ ವರ್ಷ ಪರಿಹಾರ ನೀಡುವುದಾಗಿ ಅಧಿಕಾರಿಗಳು ನೂರಾರು ರೂಪಾಯಿ ಖರ್ಚು ಮಾಡಿಸಿ ನೈಯಾಪೈಸೆ ಪರಿಹಾರ ನೀಡಿಲ್ಲ. ಈ ವರ್ಷವೂ ಇತ್ತ ನಮ್ಮ ಗೋಳು ಕೇಳಲು ಯಾರು ಬಂದಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಲಪ್ರಭಾ ನದಿ ತೀರದ ನೂರಾರು ಎಕರೆಯಲ್ಲಿನ ಹೆಸರು, ಗೋವಿನ ಜೋಳ, ಕಬ್ಬು, ಸೂರ್ಯಕಾಂತಿ ಸೇರಿ ಹಲವು ಬೆಳೆ ಹಾನಿಯಾಗಿದೆ. ಸೌಜನ್ಯಕ್ಕೂ ರೋಣ ತಾಲೂಕಿನ ತಹಶಿಲ್ದಾರ್ ಮತ್ತು ಕೃಷಿ ಇಲಾಖೆ ಅಧಿಕಾರಿಗಳು ಇತ್ತ ಭೇಟಿ ನೀಡಿಲ್ಲ. ಉಸ್ತುವಾರಿ ಸಚಿವ ಸಿ. ಸಿ. ಪಾಟೀಲ್ ತವರು ಕ್ಷೇತ್ರದಲ್ಲೇ ನಿರ್ಲಕ್ಷ್ಯ ವಹಿಸಿದ್ದಾರೆ. ಅವರು ತಮ್ಮ ಸ್ಥಾನದ ಭದ್ರತೆಗಾಗಿ ಬೆಂಗಳೂರು, ದೆಹಲಿಗೆ ಹೋಗಿದ್ದಾರೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮಳೆ-ಪ್ರವಾಹದಿಂದ ಪಶ್ಚಿಮ ಬಂಗಾಳದಲ್ಲಿ 23 ಜನರು ಸಾವು; ಡಿವಿಸಿ ವಿರುದ್ಧ ಪ್ರಧಾನಿಗೆ ದೂರು ನೀಡಿದ ಮಮತಾ ಬ್ಯಾನರ್ಜಿ

ಮಳೆ ಅಬ್ಬರ ತಗ್ಗಿದರೂ ಬೆಳಗಾವಿಯಲ್ಲಿ ನಿಲ್ಲದ ಭೀತಿ; ಬೆಳೆ ಹಾನಿಗೆ ಪರಿಹಾರ ನೀಡುವಂತೆ ರೈತರ ಆಗ್ರಹ

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​