Heavy Rain: ರಾತ್ರೋರಾತ್ರಿ ಸುರಿದ ಭಾರೀ ಮಳೆ: ಮನೆಗಳಿಗೆ ನುಗ್ಗಿದ ನೀರು, ಮಳೆಗೆ ಜನರು ಹೈರಾಣು
ಕೇರಳದ ವಯನಾಡು, ಕಬಿನಿ ಜಲಾನಯನ ಪ್ರದೇಶದಲ್ಲಿ ಮಳೆ ಕೊಂಚ ಹೆಚ್ಚಾಗಿದ್ದು, ಕಬಿನಿ ಜಲಾಶಯದ ಒಳ ಹರಿವಿನ ಪ್ರಮಾಣದಲ್ಲಿ ಸ್ವಲ್ಪ ಏರಿಕೆಯಾಗಿದೆ.
ಗದಗ: ಗದಗ-ಬೆಟಗೇರಿ ಅವಳಿ ನಗರದಲ್ಲಿ ರಾತ್ರಿಯಿಡೀ ಭಾರಿ ಮಳೆ (Heavy Rain) ಸುರಿದಿದ್ದು, ರಾಜಕಾಲುವೆ ಒಡೆದು ಅಪಾರ ಪ್ರಮಾಣದ ನೀರು ಮನೆಗಳಿಗೆ ನುಗ್ಗಿದೆ. ಬೆಟಗೇರಿಯ ವಾರ್ಡ್ ನಂಬರ್ 4ರ ಮಂಜುನಾಥ್ ನಗರ, ವಾಲ್ಮೀಕಿ ಅಂಬೇಡ್ಕರ್ ಬಡಾವಣೆಯಲ್ಲಿ ಭಾರಿ ಅವಾಂತರ ಸೃಷ್ಟಿಯಾಗಿ, ನೂರಾರು ಮನೆಗಳಿಗೆ ನೀರು ನುಗ್ಗಿದೆ. ನಿದ್ರೆಯಲ್ಲಿ ಇದ್ದಾಗ ಏಕಾಏಕಿ ಮನೆಗಳಿಗೆ ನೀರು ನುಗ್ಗಿದ್ದು, ಜನರು ಕಂಗಾಲಾಗಿದ್ದಾರೆ. ಇನ್ನೂ ಕೂಡ ಮಳೆಯ ಅಬ್ಬರ ಮುಂದುವರೆದಿದ್ದು, ನಿರಂತರ ಮಳೆಯಿಂದ ನೂರಾರು ಕುಟುಂಬಗಳ ಬದುಕು ಅಯೋಮಯವಾಗಿದೆ. ಅಷ್ಟಾದರೂ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಸ್ಥಳಕ್ಕೆ ಭೇಟಿ ನೀಡದ ಹಿನ್ನೆಲೆ ಬಡಾವಣೆಯ ಜನರು ಆಕ್ರೋಶಗೊಂಡಿದ್ದಾರೆ.
ಇದನ್ನೂ ಓದಿ: ಜಪಾನ್: ಸಮುದ್ರ ತೀರವೊಂದರಲ್ಲಿರುವ ಡಾಲ್ಫಿನ್ ಜನರನ್ನು ಕಚ್ಚುತ್ತಿರುವುದರಿಂದ ಹತ್ತಿರ ಹೋಗದಂತೆ ಬೀಚ್ ಸಿಬ್ಬಂದಿ ಎಚ್ಚರಿಸಿದೆ
ಮನೆಗಳಿಗೆ ನುಗ್ಗಿದ ಮಳೆ ನೀರು:
ಶಿವಮೊಗ್ಗ: ನಗರದಲ್ಲಿ ನಿನ್ನೆ ರಾತ್ರಿ ಧಾರಾಕಾರ ಮಳೆ ಸುರಿದಿದ್ದು, ಬಾಪೂಜಿ ನಗರದ ಅನೇಕ ಮನೆಗಳಿಗೆ ನೀರು ನುಗ್ಗಿ ಅವಾಂತರ ಉಂಟಾಗಿದೆ. ಬಡಾವಣೆಯ ರಸ್ತೆ ಸಂಪೂರ್ಣ ಜಲಾವೃತವಾಗಿದ್ದು, ಜನರು ಪರದಾಟುವಂತ್ತಾಗಿದೆ. ಅವೈಜ್ಞಾನಿಕ ಮತ್ತು ಕಳಪೆ ಸ್ಮಾರ್ಟ್ ಸಿಟಿ ಕಾಮಗಾರಿ ಯಡವಟ್ಟಿಂದ್ದಾಗಿ ಮಳೆ ನೀರು ಹರಿದು ಹೋಗದ ಹಿನ್ನಲೆ ಬಡಾವಣೆಯಲ್ಲಿ ಮಳೆ ನೀರು ನಿಂತುಕೊಂಡಿದ್ದೆ.
ವರುಣನ ಅಬ್ಬರ ಜೋರು; ಜನ ಹೈರಾಣು
ಹಾಸನ: ಜಿಲ್ಲೆಯ ವಿವಿಧೆಡೆ ವರುಣನ ಅಬ್ಬರ ಜೋರಾಗಿದ್ದು, ರಾತ್ರಿ ಸುರಿದ ಧಾರಾಕಾರ ಮಳೆಗೆ ಜನ ಹೈರಾಣಾಗಿದ್ದಾರೆ. ಅರಸೀಕೆರೆ ಪಟ್ಟಣದಲ್ಲಿ ಭಾರಿ ಮಳೆಗೆ ಜನರು ತತ್ತರಿಸಿದ್ದು, ಪೇಟೆ ಬೀದಿಯಲ್ಲಿರುವ ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಮನೆಯಲ್ಲಿದ್ದ ವಸ್ತುಗಳು ನೀರಿನಲ್ಲಿ ತೇಲಾಡಿವೆ. ಆಹಾರ ಸಾಮಾಗ್ರಿ, ದವಸ ಧಾನ್ಯಗಳು ನೀರುಪಾಲಾಗಿದ್ದು, ನೀರು ಹೊರಹಾಕಲು ನಿವಾಸಿಗಳು ಪರದಾಡುತ್ತಿದ್ದಾರೆ. ದಿಡೀರ್ ಬಂದ ಭಾರಿ ಮಳೆಯಿಂದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಇದನ್ನೂ ಓದಿ; ಹದಿನೇಳು ವರ್ಷಗಳ ಹಿಂದೆ ಗರ್ಲ್ಫ್ರೆಂಡ್ಳನ್ನು ಕೊಂದ ಆರೋಪದಲ್ಲಿ ಆಸ್ಟ್ರೇಲಿಯನ್ ವ್ಯಕ್ತಿಯ ಬಂಧನ
ಕೇರಳದ ವಯನಾಡು, ಕಬಿನಿ ಜಲಾನಯನ ಪ್ರದೇಶದಲ್ಲಿ ಕೊಂಚ ಹೆಚ್ಚಾದ ಮಳೆ
ಮೈಸೂರು: ಕೇರಳದ ವಯನಾಡು, ಕಬಿನಿ ಜಲಾನಯನ ಪ್ರದೇಶದಲ್ಲಿ ಮಳೆ ಕೊಂಚ ಹೆಚ್ಚಾಗಿದ್ದು, ಕಬಿನಿ ಜಲಾಶಯದ ಒಳ ಹರಿವಿನ ಪ್ರಮಾಣದಲ್ಲಿ ಸ್ವಲ್ಪ ಏರಿಕೆಯಾಗಿದೆ. ಜಿಲ್ಲೆಯ ಹೆಚ್ಡಿ ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದ ಕಬಿನಿ ಜಲಾಶಯದ ಇಂದಿನ ಒಳಹರಿವು 5,746 ಕ್ಯೂಸೆಕ್ ಇದ್ದು, ಹೊರಹರಿವು 6000 ಕ್ಯೂಸೆಕ್ ಇದೆ. 84 ಅಡಿ ಗರಿಷ್ಠ ಸಾಮರ್ಥ್ಯ ಹೊಂದಿರುವ ಕಬಿನಿ ಜಲಾಶಯ, ಇಂದಿನ ನೀರಿನ ಮಟ್ಟ 83.66 ಅಡಿಯಷ್ಟಿದೆ. ಒಟ್ಟು 19.52 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿದ್ದು, ಜಲಾಶಯದಲ್ಲಿ ಇಂದು 19.29 ಟಿಎಂಸಿ ನೀರು ಸಂಗ್ರಹವಾಗಿದೆ. 12 ಎಂಎಂ ಮಳೆ ದಾಖಲಾಗಿದೆ.