AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗದಲ್ಲಿ ಇಸ್ಲಾಂ ಧರ್ಮಕ್ಕೆ ಹಿಂದೂ ಯುವಕನ ಮತಾಂತರ ಆರೋಪ: ಅಷ್ಟಕ್ಕೂ ಆಗಿದ್ದೇನು?

ಗದಗದಲ್ಲಿ ಹಿಂದೂ ಯುವಕನ ಮತಾಂತರದ ಕುರಿತು ಗಂಭೀರ ಆರೋಪ ಕೇಳಿಬಂದಿದೆ. 17 ವರ್ಷದ ಯುವಕನನ್ನು ಇಸ್ಲಾಂ ಧರ್ಮಕ್ಕೆ ಬಲವಂತವಾಗಿ ಮತಾಂತರಿಸಲಾಗಿದೆ ಎಂದು ಆತನ ಪೋಷಕರು ಆರೋಪಿಸಿದ್ದಾರೆ. ಯುವಕ ನಾಪತ್ತೆಯಾಗಿದ್ದು, ಟೀ ಸ್ಟಾಲ್​ ನಡೆಸುತ್ತಿದ್ದ ಇಬ್ಬರು ಯುವಕರೇ ಘಟನೆಗೆ ಕಾರಣ ಎನ್ನಲಾಗಿದೆ. ಕೈ ತುತ್ತು ತಿನ್ನಿಸಿ ಬೆಳೆಸಿದ ಮಗನ ವರ್ತನೆಯಿಂದ ತಂದೆ-ತಾಯಿ ಕಣ್ಣೀರು ಹಾಕುತ್ತಿದ್ದಾರೆ.

ಗದಗದಲ್ಲಿ ಇಸ್ಲಾಂ ಧರ್ಮಕ್ಕೆ ಹಿಂದೂ ಯುವಕನ ಮತಾಂತರ ಆರೋಪ: ಅಷ್ಟಕ್ಕೂ ಆಗಿದ್ದೇನು?
ಮಗನ ವರ್ತನೆಯಿಂದ ಪೋಷಕರು ಕಣ್ಣೀರು
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Updated By: ಪ್ರಸನ್ನ ಹೆಗಡೆ|

Updated on:Nov 20, 2025 | 11:37 AM

Share

ಗದಗ, ನವೆಂವರ್​ 20: ಪ್ರೀತಿ ಪ್ರೇಮದ ಹೆಸರಲ್ಲಿ ಹಿಂದೂ ಯುವತಿಯರನ್ನ ಬಲೆಗೆ ಬೀಳಿಸಿಕೊಂಡು ಲವ್​​ ಜಿಹಾದ್​ ನಡೆಸಿದ ಆರೋಪಗಳು ರಾಜ್ಯದಲ್ಲಿ ಮೇಲಿಂದ ಮೇಲೆ ಕೇಳಿಬರುತ್ತಲೇ ಇರುತ್ತವೆ. ಹಿಂದೂ ಸಂಘಟನೆಗಳು ಈ ಬಗ್ಗೆ ಬಹಳ ಸಮಯದಿಂದ ಧ್ವನಿ ಎತ್ತುತ್ತಿವೆ. ಈ ನಡುವೆ ಹಿಂದೂ ಯುವಕನನ್ನು ತಲೆಕೆಡಿಸಿ ಇಸ್ಲಾಂಗೆ ಮತಾಂತರ ಮಾಡಿರುವ ಆರೋಪ ಗದಗದಲ್ಲಿ ಕೇಳಿಬಂದಿದೆ. ಆ ಮೂಲಕ ಹಿಂದೂ ಹುಡುಗಿಯರ ಬಳಿಕ ಯುವಕರೂ ಈಗ ಟಾರ್ಗೆಟ್​​ ಆದ್ರಾ ಎನ್ನುವ ಪ್ರಶ್ನೆ ಉದ್ಭವಿಸಿದೆ.

ಹೆತ್ತವರು ಹೇಳೋದೇನು?

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಗವಿಸಿದ್ದಪ್ಪ ಅಲಿಯಾಸ್ ವಿನಾಯಕ ಗಣದಿನ್ನಿ ಎಂಬ 17 ವರ್ಷದ ಯುವಕನನ್ನು ಮುಸ್ಲಿಂ ಸಮುದಾಯಕ್ಕೆ ಮತಾಂತರ ಮಾಡಲಾಗಿದೆ ಎಂದು ಆತನ ಹೆತ್ತವರೇ ಗಂಭೀರ ಆರೋಪ ಮಾಡಿದ್ದಾರೆ. ಲಕ್ಷ್ಮೇಶ್ವರ ಪಟ್ಟಣದಲ್ಲಿ ಟೀ‌ ಸ್ಟಾಲ್ ಇಟ್ಟುಕೊಂಡಿರುವ ಸೋಹೆಲ್ ಮತ್ತು ಗಲ್ಲು ಎಂಬವರ ವಿರುದ್ಧ ಆರೋಪ ಕೇಳಿಬಂದಿದ್ದು, ಅವರ ಟೀ ಸ್ಟಾಲ್​​ಗೆ ಗವಿಸಿದ್ದಪ್ಪ ನಿತ್ಯ ಟೀ ಕುಡಿಯಲೆಂದು ತೆರಳುತ್ತಿದ್ದ. ಆ ವೇಳೆ ಸೋಹೆಲ್ ಮತ್ತು ಗಲ್ಲು ತಮ್ಮ ಮಗನ ತಲೆ ಕೆಡಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ:  ಗೋಕರ್ಣದಲ್ಲಿ ಮತಾಂತರ ಶಂಕೆ; ಬಡವರು, ರೋಗ ಪಿಡಿತರೇ ಟಾರ್ಗೆಟ್!

ಒಂದೂವರೆ ತಿಂಗಳಿಂದ ಲಕ್ಷ್ಮೇಶ್ವರ ಪಟ್ಟಣದಿಂದ ಯುವಕ ನಾಪತ್ತೆಯಾಗಿದ್ದು, ಕೈ ತುತ್ತು ತಿನ್ನಿಸಿ ಬೆಳೆಸಿದ ಮಗನ ವರ್ತನೆಯಿಂದ ಹೆತ್ತವರು ಕಣ್ಣೀರು ಹಾಕುತ್ತಿದ್ದಾರೆ. ಓದಿನಲ್ಲೂ ಮುಂದಿದ್ದ ಮಗ ಇತ್ತೀಚೆಗೆ ಸರಿಯಾಗಿ ಕಾಲೇಜಿಗೆ ಹೋಗುತ್ತಿರಲಿಲ್ಲ. ಈ ವಿಚಾರವನ್ನು ಆತನ ಬಳಿ ಪ್ರಶ್ನಿಸಿದರೆ ಉತ್ತರ ಸಿಗದ ಕಾರಣ, ಮಗನಿಗೆ ಏನಾಗಿದೆ ಎಂದು ಯೋಚಿಸುತ್ತಿದ್ದ ಪೋಷಕರಿಗೆ ಆತ ಸೋಹೆಲ್ ಮತ್ತು ಗಲ್ಲು ನಡೆಸುತ್ತಿದ್ದ ಟೀ ಅಂಗಡಿಯಲ್ಲಿ ಕೆಲಸಕ್ಕೆ ಸೇರಿದ್ದು ಗೊತ್ತಾಗಿದೆ. ಆ ವೇಳೆ ಅಂಗಡಿಯವರ ಜೊತೆ ಜಗಳವಾಡಿ ಮಗನನ್ನು ಕರೆತಂದಿದ್ದೆವು. ಆದರೆ ಕಳೆದ ಒಂದೂವರೆ ತಿಂಗಳಿನಿಂದ ಆತ ಎಲ್ಲಿದ್ದಾನೆ ಎಂಬುದೇ ನಮಗೆ ಗೊತ್ತಿಲ್ಲ ಎಂಬುದು ಹೆತ್ತವರ ಅಳಲು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 11:20 am, Thu, 20 November 25

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ