Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋವಿಡ್ ನಿಯಂತ್ರಣ, ಸೋಂಕಿತರ ಚಿಕಿತ್ಸೆಯಲ್ಲಿ ನಿಷ್ಕಾಳಜಿ ಬೇಡ: ಎಚ್​ಕೆ ಪಾಟೀಲ್​

ಸರ್ಕಾರ ನೀಡಿರುವ ಮಾರ್ಗಸೂಚಿಗಳು ಜಿಲ್ಲೆಯಲ್ಲಿ ಯಥಾವತ್ತಾಗಿ ಅನುಷ್ಟಾನಗೊಳಿಸುವುದರೊಂದಿಗೆ ಸರಿಯಾಗಿ ಪಾಲನೆಯಾಗಬೇಕು. ಸೋಂಕಿತರಿಗೆ ಉತ್ತಮ ಚಿಕಿತ್ಸೆ ನೀಡುವ ಮೂಲಕ ಗುಣಮುಖರಾಗುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್​ಕೆ ಪಾಟೀಲ್​(HK Patil) ಸೂಚನೆ ನೀಡಿದ್ದಾರೆ.

ಕೋವಿಡ್ ನಿಯಂತ್ರಣ, ಸೋಂಕಿತರ ಚಿಕಿತ್ಸೆಯಲ್ಲಿ ನಿಷ್ಕಾಳಜಿ ಬೇಡ: ಎಚ್​ಕೆ ಪಾಟೀಲ್​
ಹೆಚ್​ಕೆ ಪಾಟೀಲ್
Follow us
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Updated By: ಕಿರಣ್ ಹನುಮಂತ್​ ಮಾದಾರ್

Updated on: Dec 27, 2023 | 6:53 PM

ಗದಗ, ಡಿ.27: ರಾಜ್ಯದಲ್ಲಿ ಈಗಾಗಲೇ 416 ಕೋವಿಡ್(Covid) ಹೊಸ ತಳಿಯ ಪ್ರಕರಣಗಳು ವರದಿಯಾಗಿದ್ದು, ಇಬ್ಬರು ಸೋಂಕಿತರು ಸಾವನ್ನಪ್ಪಿದ್ದಾರೆ. ಈ ಹಿನ್ನಲೆ ಗದಗ(Gadag) ಜಿಲ್ಲೆಯಲ್ಲಿ ಕೋವಿಡ್ ಸೋಂಕು ನಿಯಂತ್ರಣ ಹಾಗೂ ಸೋಂಕಿತರ ಚಿಕಿತ್ಸೆಯಲ್ಲಿ ನಿಷ್ಕಾಳಜಿ ಬೇಡ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್​ಕೆ ಪಾಟೀಲ್​(HK Patil) ಸೂಚನೆ ನೀಡಿದ್ದಾರೆ.

ನಗರದ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಮಾಡಿಕೊಳ್ಳಲಾದ ವ್ಯವಸ್ಥೆಯನ್ನು ಪರಿಶೀಲಿಸಿ ನಂತರ ಜಿಮ್ಸ್​ನಲ್ಲಿ ನಡೆದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅಧಿಕಾರಿಗಳಿಗೆ ಕೋವಿಡ್​ ಕುರಿತು ನಿರ್ದೇಶನ ನೀಡಿದರು. ಸರ್ಕಾರ ನೀಡಿರುವ ಮಾರ್ಗಸೂಚಿಗಳು ಜಿಲ್ಲೆಯಲ್ಲಿ ಯಥಾವತ್ತಾಗಿ ಅನುಷ್ಟಾನಗೊಳಿಸುವುದರೊಂದಿಗೆ ಸರಿಯಾಗಿ ಪಾಲನೆಯಾಗಬೇಕು. ಸೋಂಕಿತರಿಗೆ ಉತ್ತಮ ಚಿಕಿತ್ಸೆ ನೀಡುವ ಮೂಲಕ ಗುಣಮುಖರಾಗುವಂತೆ ನೋಡಿಕೊಳ್ಳಬೇಕು ಎಂದರು.

ಇದನ್ನೂ ಓದಿ:ಕರ್ನಾಟಕದಲ್ಲಿ ಕೋವಿಡ್ ನಿಯಂತ್ರಣಕ್ಕೆ ಸಂಪುಟ ಉಪ ಸಮಿತಿ ರಚನೆ: ಸಮಿತಿಯಲ್ಲಿ ಯಾರ್ಯಾರು ಇದ್ದಾರೆ?

ಬಳಿಕ ಜಿಮ್ಸ್ ನಿರ್ದೇಶಕ ಡಾ. ಬಸವರಾಜ ಬೊಮ್ಮನಹಳ್ಳಿ ಮಾತನಾಡಿ ‘ಜಿಲ್ಲಾಸ್ಪತ್ರೆಯಲ್ಲಿ ಒಟ್ಟು 890 ಬೆಡ್​ಗಳಿದ್ದು, 735 ಆಕ್ಸಿಜನ್ ಬೆಡ್‍ಗಳನ್ನು ಹೊಂದಿದೆ. ಈ ಪೈಕಿ 50 ಬೆಡ್‍ಗಳನ್ನು ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಮೀಸಲಿರಿಸಲಾಗಿದೆ. ಜಿಮ್ಸ್ ಆವರಣದಲ್ಲಿ 20 ಹಾಗೂ 13 ಕೆ ಎಲ್. ಆಕ್ಸಿಜನ್ ಸಂಗ್ರಹಣಾ ಸಾಮರ್ಥ್ಯದ ಘಟಕ ಹೊಂದಿದ್ದು, 4 ಆಕ್ಸಿಜನ್ ಜನರೇಟರ್ ಪ್ಲಾಂಟ್ ಸಹ ಕಾರ್ಯಪ್ರವೃತ್ತವಾಗಿವೆ ಎಂದರು. ಈಗಾಗಲೇ ಆಕ್ಸಿಜನ್ ಪೂರೈಕೆ ಕುರಿತಂತೆ ಡ್ರೈರನ್ ಮಾಡಲಾಗಿದೆ. ಇರುವ ಆಂಬ್ಯುಲೆನ್ಸ್​ಗಳೆಲ್ಲ ಸುಸ್ಥಿತಿಯಲ್ಲಿದ್ದು ಕಾರ್ಯನಿರ್ವಹಿಸುತ್ತಿವೆ. ಹೆಚ್ಚುವರಿಯಾಗಿ 4 ಚಾಲಕರ ಸಿಬ್ಬಂದಿಗಳ ಅಗತ್ಯವಿದೆ. ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಅಗತ್ಯವಿರುವ ಮೆಡಿಸಿನ್ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗುತ್ತಿದೆ ಎಂದರು.

ಇದೇ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್  ‘ಕೋವಿಡ್ ಸೋಂಕಿತರ ಪರೀಕ್ಷೆ ನಿಯಮಿತವಾಗಿ ಜರುಗಿಸಬೇಕು. ಸೋಂಕಿತರ ಪ್ರಮಾಣ ಅಧಿಕವಾದಲ್ಲಿ ಜಿಲ್ಲಾಸ್ಪತ್ರೆಗೆ ಅಗತ್ಯದ ಭದ್ರತಾ ಸಿಬ್ಬಂದಿಗಳನ್ನು ಸಹ ನೀಡಲು ಕ್ರಮ ವಹಿಸಲಾಗುವುದು. ಒಟ್ಟಾರೆ ಕೋವಿಡ್ ನಿರ್ವಹಣೆಯಲ್ಲಿ ಉತ್ತಮ ಕಾರ್ಯಮಾಡಬೇಕು ಎಂದರು. ಸಭೆಯಲ್ಲಿ ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ಬಿ.ಎಸ್. ನೇಮಗೌಡ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್.ನೀಲಗುಂದ, ಡಾ.ಬಿ.ಸಿ.ಕರಿಗೌಡ್ರ, ಡಾ. ಸೋಮಶೇಖರ ಬಿಜ್ಜಳ, ಡಾ. ಪಲ್ಲೇದ, ಡಾ. ವೆಂಕಟೇಶ ರಾಠೋಡ, ಲೆಕ್ಕಾಧಿಕಾರಿ ಜೆ.ಸಿ. ಪ್ರಶಾಂತ ಸೇರಿದಂತೆ ಜಿಮ್ಸ್ ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿ ಉಪಸ್ಥಿತರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ