ಗದಗ: ವಸತಿ ನಿಲಯದಲ್ಲಿ ಹಸಿವು ತಾಳದೆ ಪರದಾಟ; ರಾತ್ರೋರಾತ್ರಿ ಜಿಲ್ಲಾಡಳಿತದ ಮೊರೆ ಹೋದ ವಿದ್ಯಾರ್ಥಿಗಳು
120 ಕ್ಕೂ ಹೆಚ್ಚು ವಿದ್ಯಾರ್ಥಿಗಳು ನಿತ್ಯ ಪರದಾಟ ನಡೆಸುತ್ತಿದ್ದು, ರಾತ್ರಿ ಊಟ ಸಿಗದಿದಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೇ ಹಾಸ್ಟೆಲ್ ವಾರ್ಡನ್ ಹಾಗೂ ಸಿಬ್ಬಂದಿಗಳ ಮೇಲೆ ಸೂಕ್ತವಾದ ಕ್ರಮಕ್ಕೆ ಒತ್ತಾಯ ಮಾಡಿದ್ದಾರೆ.
ಗದಗ: ಹಸಿವು ತಾಳಲಾರದೆ ವಿದ್ಯಾರ್ಥಿಗಳು ಪರದಾಟ ನಡೆಸುತ್ತಿರುವ ಘಟನೆ ಗದಗ ಜಿಲ್ಲೆಯ ಸರಕಾರಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದಲ್ಲಿ ನಡೆದಿದೆ. ಸಮರ್ಪಕವಾಗಿ ಹಾಸ್ಟೆಲ್ (Hostel) ಸಿಬ್ಬಂದಿಗಳು ಊಟ ನೀಡದೆ ಇರುವುದು ವಿದ್ಯಾರ್ಥಿಗಳ (Students) ಆಕ್ರೋಶಕ್ಕೆ ಕಾರಣವಾಗಿದೆ. ಹೀಗಾಗಿ ಹಾಸ್ಟೆಲ್ ಸಿಬ್ಬಂದಿಗಳ ವರ್ತನೆಯಿಂದ ಬೇಸತ್ತ ವಿದ್ಯಾರ್ಥಿಗಳು ರಾತ್ರೋರಾತ್ರಿ ಜಿಲ್ಲಾಡಳಿತದ ಮೊರೆ ಹೋಗಿದ್ದಾರೆ.
120 ಕ್ಕೂ ಹೆಚ್ಚು ವಿದ್ಯಾರ್ಥಿಗಳು ನಿತ್ಯ ಪರದಾಟ ನಡೆಸುತ್ತಿದ್ದು, ರಾತ್ರಿ ಊಟ ಸಿಗದಿದಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೇ ಹಾಸ್ಟೆಲ್ ವಾರ್ಡನ್ ಹಾಗೂ ಸಿಬ್ಬಂದಿಗಳ ಮೇಲೆ ಸೂಕ್ತವಾದ ಕ್ರಮಕ್ಕೆ ಒತ್ತಾಯ ಮಾಡಿದ್ದಾರೆ. ಜತೆಗೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದಾವಣಗೆರೆ: ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಕ್ಕಳು ಅಸ್ವಸ್ಥ ಪ್ರಕರಣ; ಬಹುತೇಕ ವಿದ್ಯಾರ್ಥಿಗಳು ಚೇತರಿಕೆ ದಾವಣಗೆರೆ ಜಿಲ್ಲೆ ಜಗಳೂರಿನಲ್ಲಿರುವ ಮುರಾರ್ಜಿ ವಸತಿ ಶಾಲೆಯಲ್ಲಿ ಊಟ ಸೇವಿಸಿ 107 ಮಕ್ಕಳು ಅಸ್ವಸ್ಥರಾಗಿದ್ದರು. ಈ ಸಂಬಂಧ ಸದ್ಯ ಬಹುತೇಕ ವಿದ್ಯಾರ್ಥಿಗಳು ಚೇತರಿಸಿಕೊಂಡಿದ್ದಾರೆ. ಮೊನ್ನೆ ರಾತ್ರಿ ಅನ್ನ ಸಾಂಬಾರ್, ಬೆಳಗ್ಗೆ ಚಿತ್ರಾನ್ನ ಸೇವಿಸಿದ್ದರು. ನಂತರ ವಾಂತಿ, ಹೊಟ್ಟೆ ನೋವಿನಿಂದ ಬಳಲುತ್ತಿದ್ದ 107 ವಿದ್ಯಾರ್ಥಿಗಳನ್ನು ಜಗಳೂರು ತಾಲೂಕು ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಚಿಕಿತ್ಸೆ ಪಡೆದ ಬಳಿಕ 95 ವಿದ್ಯಾರ್ಥಿಗಳು ಚೆತರಿಸಿಕೊಂಡಿದ್ದಾರೆ. ವಸತಿ ಶಾಲೆಗೆ ತಹಶೀಲ್ದಾರ್, ಟಿಹೆಚ್ಒ, ಮಕ್ಕಳ ತಜ್ಞರು ಭೇಟಿ ನೀಡಿದ್ದರು. ಅಲ್ಲದೇ ಮಕ್ಕಳು ಸೇವಿಸಿದ್ದ ಆಹಾರವನ್ನು ಅಧಿಕಾರಿಗಳು ಪರೀಕ್ಷೆಗೆ ಕಳುಹಿಸಿದ್ದಾರೆ.
ಸ್ಥಳಕ್ಕೆ ತಾಲೂಕು ವೈಧ್ಯಾಧಿಕಾರಿ ಡಾ. ನಾಗರಾಜ್, ಮಕ್ಕಳ ತಜ್ಞ ಜಯಕುಮಾರ್, ತಹಶೀಲ್ದಾರ್ ಶಶಿಧರಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಇನ್ನೂ ಹತ್ತಕ್ಕೂ ಹೆಚ್ಚು ಮಕ್ಕಳಿಗೆ ಜಗಳೂರು ತಾಲೂಕಾ ಆಸ್ಪತ್ರೆ ಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ: ಕೊಪ್ಪಳ: ಕಳಪೆ ಧಾನ್ಯಗಳ ಊಟ ಸೇವಿಸಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ
ಲಗೇಜ್ ಸಮೇತ ಹಾಸ್ಟೆಲ್ನಿಂದ ಹೊರ ಬಿದ್ದಿರುವ ವಿದ್ಯಾರ್ಥಿಗಳು; ಹಾಸ್ಟೆಲ್ ವ್ಯವಸ್ಥೆ ಕಲ್ಪಿಸಲು ಒತ್ತಾಯ
Published On - 8:50 am, Sat, 18 December 21