AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಟ್ಟದ ಫೈಟ್​​ ನಡುವೆ ಸ್ಫೋಟಕ ಭವಿಷ್ಯ ನುಡಿದ ಹುಲಿಗೆಮ್ಮ ಜೋಗತಿ: ಡಿಕೆಶಿಗೆ ಇದ್ಯಾ ಸಿಎಂ ಯೋಗ?

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​​ ಅವರ ಬಗ್ಗೆ ಗದಗದಲ್ಲಿ ಹುಲಿಗೆಮ್ಮ ದೇವಿ ಜೋಗತಿ ಬೈಲಮ್ಮ ಎಂಬವರು ಸ್ಫೋಟಕ ಭಿಷ್ಯ ನುಡಿದಿದ್ದಾರೆ. ರಾಜ್ಯ ರಾಜಕಾರಣದಲ್ಲಿ ಸಿಎಂ ಕುರ್ಚಿ ಗುದ್ದಾಟ ಜೋರಾಗಿರುವಾಗಲೇ ಈ ಭವಿಷ್ಯ ಕುತೂಹಲ ಮೂಡಿಸಿದೆ. ಡಿಕೆಶಿ ಸೇರಿ ಕೆಲ ನಾಯಕರ ಹೆಸರೂ ಸಿಎಂ ರೇಸ್​ನಲ್ಲಿ ಕೇಳಿ ಬರುತ್ತಿದ್ದು, ಆ ಬಗ್ಗೆಯೂ ಜೋಗತಿ ಭವಿಷ್ಯ ನುಡಿದಿದ್ದಾರೆ. ಸಿದ್ದರಾಮಯ್ಯ ಮತ್ತು ಡಿಕೆಶಿ ನಡುವೆ ಇರುವ ಬಾಂಧವ್ಯ ಎಂತಹದ್ದು ಎಂಬುದನ್ನೂ ಉಲ್ಲೇಖಿಸಿದ್ದಾರೆ.

ಪಟ್ಟದ ಫೈಟ್​​ ನಡುವೆ ಸ್ಫೋಟಕ ಭವಿಷ್ಯ ನುಡಿದ ಹುಲಿಗೆಮ್ಮ ಜೋಗತಿ: ಡಿಕೆಶಿಗೆ ಇದ್ಯಾ ಸಿಎಂ ಯೋಗ?
ಜೋಗತಿ ಭವಿಷ್ಯ
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on:Nov 24, 2025 | 5:43 PM

Share

ಗದಗ, ನವೆಂಬರ್​ 24: ರಾಜ್ಯದಲ್ಲಿ ಸಿಎಂ ಕುರ್ಚಿಯ ಗುದ್ದಾಟ ಬಲು ಜೋರಾಗಿದೆ. ಸಿಎಂ, ಡಿಸಿಎಂ ನಡುವೆ ನೀ ಕೊಡೆ ನಾ ಬಿಡೆ ಎಂಬ ಸ್ಥಿತಿ ನಿರ್ಮಾಣವಾಗಿದೆ. ಈ ಹೊತ್ತಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​​ ಬಗ್ಗೆ ಹುಲಿಗೆಮ್ಮ ದೇವಿ ಅಚ್ಚರಿಯ ಭವಿಷ್ಯ ನುಡಿದಿದ್ದಾಳೆ. ಸಿದ್ದರಾಮಯ್ಯ ಹಾಗೂ ಡಿಕೆಶಿ ಅಣ್ಣ-ತಮ್ಮನಂತೆ ಇದ್ದಾರೆ. ಸಿದ್ದರಾಮಯ್ಯ ಖುಷಿ ಖುಷಿಯಿಂದ ಸಿಎಂ ಸ್ಥಾನವನ್ನು ಡಿ.ಕೆ. ಶಿವಕುಮಾರ್​​ಗೆ ಬಿಟ್ಟು ಕೊಡ್ತಾರೆಂದು ಹುಲಿಗೆಮ್ಮ ದೇವಿಯ ಜೋಗತಿ ಬೈಲಮ್ಮ ಹೇಳಿದ್ದಾರೆ.

‘ಎರಡೂವರೆ ತಿಂಗಳಲ್ಲಿ ಡಿಕೆಶಿ ಸಿಎಂ’

ಹುಲಿಗೆಮ್ಮ ದೇವಿ ಆರಾಧಾನೆ ಮಾಡುವ ಗದಗ ನಗರ ರಾಚೋಟೇಶ್ವರ ನಗರದ ಬೈಲಮ್ಮ ಎಂಬ ಜೋಗತಿ ಈ ಬಗ್ಗೆ ಭವಿಷ್ಯ ನುಡಿದಿದ್ದು, ಸಿದ್ದರಾಮಯ್ಯ ಅವರ ಹತ್ತಿರ ಯಾವುದೇ ಕಪಟತನವಿಲ್ಲ. ಹೀಗಾಗಿ ಅಣ್ಣ ಹೇಗೆ ತಮ್ಮನಿಗಾಗಿ ಬಿಟ್ಟು ಕೊಡ್ತಾನೋ, ಹಾಗೆಯೇ ಸಿದ್ದರಾಮಯ್ಯ ಸಂತೋಷದಿಂದ ಮುಖ್ಯಮಂತ್ರಿ ಸ್ಥಾನವನ್ನು ಡಿ.ಕೆ.ಶಿವಕುಮಾರ್​​ಗೆ ಬಿಟ್ಟುಕೊಡ್ತಾರೆ ಎಂದು ಹೇಳಿದ್ದಾರೆ. ಅಲ್ಲದೆ, ಇಬ್ಬರ ಕಚ್ಚಾಟದಲ್ಲಿ ಮೂವರನೇವರು ಮೂಗು ತೋರಿಸುತ್ತಿದ್ದಾರೆ. ಆದ್ರೆ ಅವರಿಗೆ ಯಾವುದೇ ಸಿಎಂ ಸ್ಥಾನ ಸಿಗೋದಿಲ್ಲ. ಇನ್ನು, ಎರಡೂವರೆ ತಿಂಗಳಲ್ಲಿ ಮುಂದಿನ ಸಿಎಂ ಆಗಿ ಡಿ.ಕೆ. ಶಿವಕುಮಾರ್ ಅಧಿಕಾರ ವಹಿಸಿಕೊಳ್ಳತ್ತಾರೆಂದು ಭವಿಷ್ಯ ನುಡಿದಿದ್ದಾರೆ.

ಇದನ್ನೂ ಓದಿ: ಸಿಎಂ ಕುರ್ಚಿಗಾಗಿ ಕಿತ್ತಾಟ, ಅಂದಿನ ಶಾಸಕಾಂಗ ಸಭೆಯ ರಹಸ್ಯ ಬಿಚ್ಚಿಟ್ಟ ರಾಯರೆಡ್ಡಿ

ರಾಜ್ಯದ ರಾಜಕಾರಣದಲ್ಲಿ ನವೆಂಬರ್ ಕ್ರಾಂತಿ ಚರ್ಚೆ ಜೋರಾಗಿ ನಡೆಯುತ್ತಿದೆ. ಈ ನಡುವೆ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಇಬ್ಬರೂ ಹೈಕಮಾಂಡ್​​ ನಾಯಕರನ್ನು ಭೇಟಿಯಾಗಿದ್ದಾರೆ. ಹೀಗಾಗಿ ಸಿಎಂ ಆಗಿ ಇನ್ನೆರಡೂವರೆ ವರ್ಷ ಸಿದ್ದರಾಮಯ್ಯ ಮುಂದುವರಿಯುತ್ತಾರೋ ಅಥವಾ ಡಿಕೆಶಿ ಅವರಿಗೆ ಬಿಟ್ಟುಕೊಡ್ತಾರೋ ಎಂಬ ಪ್ರಶ್ನೆ ಉದ್ಭವಿಸಿದೆ. ದಲಿತ ನಾಯಕರಾದ ಸತೀಶ ಜಾರಕಿಹೊಳಿ, ಗೃಹ ಸಚಿವ ಜಿ. ಪರಮೇಶ್ವರ ಹೆಸರು ಕೂಡ ಸಿಎಂ ಸ್ಥಾನದ ರೇಸ್​​ನಲ್ಲಿದೆ. ಈ ನಡುವೆ ಹುಲಿಗೆಮ್ಮ ದೇವಿಯ ಜೋಗತಿ ಬೈಲಮ್ಮ ನುಡಿದಿರುವ ಭವಿಷ್ಯ ಭಾರಿ ಕುತೂಹಲ ಮೂಡಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 5:41 pm, Mon, 24 November 25

Follow Us
Sanjeev Pandre
Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ