ಗದಗ: ಪತ್ನಿ ಚುಡಾಯಿಸಿದ್ದನ್ನು ಪ್ರಶ್ನೆ ಮಾಡಿದಕ್ಕೆ ಪತಿ, ಕುಟುಂಬಸ್ಥರ ಮೇಲೆ ಕಿಡಿಗೇಡಿಗಳಿಂದ ಹಲ್ಲೆ

ಪತ್ನಿ ಶೋಭಾಳನ್ನು ಚುಡಾಯಿಸುತ್ತಿದ್ದಾರೆ ಎಂದು ಪ್ರಶ್ನೆ ಮಾಡಲು ಹೋದ ದೇವರಾಜ್ ಅವರನ್ನು ಹಾಗೂ ಕುಟುಂಬದವರಾದ ಚಂದ್ರಪ್ಪ, ದಾನಪ್ಪ, ಚಂದ್ರಮ್ಮ, ಭಾಗ್ಯಮ್ಮರ ಮೇಲೆ ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ. ಮುಂಡರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಗದಗ: ಪತ್ನಿ ಚುಡಾಯಿಸಿದ್ದನ್ನು ಪ್ರಶ್ನೆ ಮಾಡಿದಕ್ಕೆ ಪತಿ, ಕುಟುಂಬಸ್ಥರ ಮೇಲೆ ಕಿಡಿಗೇಡಿಗಳಿಂದ ಹಲ್ಲೆ
ಪತ್ನಿಯನ್ನು ಚುಡಾಯಿಸಿದ್ದನ್ನು ಪ್ರಶ್ನೆ ಮಾಡಿದಕ್ಕೆ ಪತಿ, ಕುಟುಂಬಸ್ಥರ ಮೇಲೆ ಹಲ್ಲೆ
Updated By: ಆಯೇಷಾ ಬಾನು

Updated on: Jul 15, 2024 | 3:05 PM

ಗದಗ, ಜುಲೈ.15: ಪತ್ನಿಯನ್ನು ಚುಡಾಯಿಸಿದ್ದನ್ನು ಪ್ರಶ್ನೆ ಮಾಡಿದಕ್ಕೆ ಮಹಿಳೆಯ ಪತಿ ಹಾಗೂ ಕುಟುಂಬದವರ ಮೇಲೆ ಕೊಡಲಿ, ದೊಣ್ಣೆಗಳಿಂದ ಹಲ್ಲೆ (Assault) ಮಾಡಿರುವ ಅಮಾನವೀಯ ಘಟನೆ ಗದಗ (Gadag) ಜಿಲ್ಲೆ ಮುಂಡರಗಿ ತಾಲೂಕಿನ ಹಾರೂಗೇರಿ ಗ್ರಾಮದಲ್ಲಿ ನಡೆದಿದೆ. ಬೋವಿ ಸಮುದಾಯದ ದಲಿತ ಕುಟುಂಬದವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಲಾಗಿದ್ದು ಕುರುಬ ಸಮುದಾಯಕ್ಕೆ ಸೇರಿದ 6 ಜನರ ವಿರುದ್ಧ ಹಲ್ಲೆ ಆರೋಪ ಕೇಳಿ ಬಂದಿದೆ. ಇನ್ನು ಘಟನೆಯಲ್ಲಿ ಗಾಯಗೊಂಡ ಗಾಯಾಳುಗಳನ್ನ ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಕಿಡಿಗೇಡಿಗಳು ತನ್ನ ಪತ್ನಿ ಶೋಭಾಳನ್ನು ಚುಡಾಯಿಸುತ್ತಿದ್ದಾರೆ ಎಂದು ಪ್ರಶ್ನೆ ಮಾಡಲು ಹೋದ ದೇವರಾಜ್ ಅವರನ್ನು ಹಾಗೂ ಕುಟುಂಬದವರಾದ ಚಂದ್ರಪ್ಪ, ದಾನಪ್ಪ, ಚಂದ್ರಮ್ಮ, ಭಾಗ್ಯಮ್ಮರ ಮೇಲೆ ಹಲ್ಲೆ ನಡೆಸಿದ್ದಾರೆ. ಬಸವರಾಜ, ರವಿ, ಕೋಟೆಪ್ಪ, ಮುತ್ತಪ್ಪ ಸೇರಿದಂತೆ 6 ಜನರ ವಿರದ್ಧ ಹಲ್ಲೆ ಆರೋಪ ಕೇಳಿ ಬಂದಿದೆ. ಗ್ರಾಮಸ್ಥರ ಎದುರಲ್ಲೇ ‌ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಮುಂಡರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಆರೋಪಿಗಳ ಮೇಲೆ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: Viral Video: ಅಪಾಯ ಇದ್ರೂ ಇದೆಂಥಾ ಹುಚ್ಚಾಟ; ಚಲಿಸುತ್ತಿರುವ ರೈಲಿನಲ್ಲಿ ಯುವಕನ ಡೇಂಜರಸ್ ಸ್ಟಂಟ್

ಡಿವೈಡರ್​ಗೆ ಡಿಕ್ಕಿ ಹೊಡೆದ ಕಾರು, ಮಗು ಪ್ರಾಣಾಪಾಯದಿಂದ ಪಾರು

ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಹೆದ್ದಾರಿಯ ಡಿವೈಡರ್ ಗೆ ಡಿಕ್ಕಿ ಹೊಡೆದ ಘಟನೆ ಉಡುಪಿಯ ಪರ್ಕಳ ಹೈಸ್ಕೂಲ್ ಬಳಿ‌ ಇಂದು ಸಂಭವಿಸಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಮಗು ಸಣ್ಣಪುಟ್ಟ ಗಾಯದೊಂದಿಗೆ ಪಾರಾಗಿದೆ. ಮಣಿಪಾಲದಿಂದ ಆತ್ರಾಡಿಗೆ ತೆರಳುತ್ತಿದ್ದ ಲ್ಯಾಂಡ್ ರೋವರ್ ಕಾರು, ಪರ್ಕಳ ಹೈಸ್ಕೂಲ್ ಬಳಿ ತಲುಪುತ್ತಿದ್ದಂತೆ ಚಾಲಕ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಜಖಂಗೊಂಡಿದೆ. ಡಿವೈಡರ್ ಮೇಲಿದ್ದ ವಿದ್ಯುತ್ ಕಂಬ ಉರುಳಿಬಿದ್ದಿದ್ದು, ತಡೆಬೇಲಿ ಕಿತ್ತುಹೋಗಿದೆ. ಕಾರು ಚಾಲಕ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:59 pm, Mon, 15 July 24