ಮುಡಾ ಹಗರಣದಲ್ಲಿ ಸತ್ಯಾಂಶ ಇಲ್ಲದಿದ್ರೆ ಇಷ್ಟು ದೊಡ್ಡ ಚರ್ಚೆ ಆಗ್ತಿರಲಿಲ್ಲ; ಸಿಎಂ ಹೇಳಿಕೆಗೆ ಬೊಮ್ಮಾಯಿ ಟಾಂಗ್

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ಸಾಕಷ್ಟು ಟೀಕೆಗಳನ್ನು ಮಾಡುತ್ತಿದ್ದು, ಇದೀಗ ಟಿವಿ9 ಕನ್ನಡ ನಡೆಸಿದ ಸಂದರ್ಶನದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ‘ಮುಡಾ ಸೈಟ್ ಹಂಚಿಕೆಯಲ್ಲಿ ಯಾವ ಹಗರಣವೂ ಆಗಿಲ್ಲ ಎಂದಿದ್ದಾರೆ. ಇದಕ್ಕೆ ಟಾಂಗ್​ ಕೊಟ್ಟ ಸಂಸದ ಬಸವರಾಜ ಬೊಮ್ಮಾಯಿ, ‘ಯಾವುದೇ ಹಗರಣ ಇಲ್ಲವೆಂದ ಮೇಲೆ ಯಾಕೆ ಭಯ ಪಡಬೇಕು?, ಸಿಬಿಐ ತನಿಖೆ ನಡೆಸಲಿ ಎಂದಿದ್ದಾರೆ.

ಮುಡಾ ಹಗರಣದಲ್ಲಿ ಸತ್ಯಾಂಶ ಇಲ್ಲದಿದ್ರೆ ಇಷ್ಟು ದೊಡ್ಡ ಚರ್ಚೆ ಆಗ್ತಿರಲಿಲ್ಲ; ಸಿಎಂ ಹೇಳಿಕೆಗೆ ಬೊಮ್ಮಾಯಿ ಟಾಂಗ್
ಸಿಎಂ ಹೇಳಿಕೆಗೆ ಬೊಮ್ಮಾಯಿ ಟಾಂಗ್
Follow us
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 13, 2024 | 7:10 PM

ಗದಗ, ಜು.13: ಮುಡಾ ಸೈಟ್ ಹಂಚಿಕೆಯಲ್ಲಿ ಯಾವ ಹಗರಣವೂ ಆಗಿಲ್ಲ ಎಂದು ಟಿವಿ9 ನಡೆಸಿದ ಸಂದರ್ಶನವೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರು ಹೇಳಿದ್ದಾರೆ. ಇದಕ್ಕೆ ಗದಗನಲ್ಲಿ ಪ್ರತಿಕ್ರಿಯಿಸಿದ ಸಂಸದ ಬಸವರಾಜ್ ಬೊಮ್ಮಾಯಿ(Basavaraj Bommai), ‘ಮುಡಾ ಹಗರಣದಲ್ಲಿ ಯಾವುದೇ ಸತ್ಯಾಂಶ ಇಲ್ಲವೆಂದರೆ ಇಷ್ಟು ದೊಡ್ಡ ಚರ್ಚೆ ಆಗುತ್ತಿರಲಿಲ್ಲ ಎಂದು ಸಿಎಂ ಹೇಳಿಕೆಗೆ ಟಾಂಗ್ ಕೊಟ್ಟಿದ್ದಾರೆ.

ಯಾವುದೇ ಹಗರಣ ಇಲ್ಲಾಂದ್ರೆ ಯಾಕೆ ಭಯ?

ಈ ಹಗರಣದಲ್ಲಿ ಏನೂ ಇಲ್ಲ ಅಂದರೆ ಸ್ವತಂತ್ರವಾಗಿ ಯಾಕೆ ತನಿಖೆಗೆ ಹಿಂಜರಿಕೆ. ವಿಚಾರಣೆ ಮಾಡೋದು ಬೇರೆ, ತನಿಖೆ ಮಾಡುವುದು ಬೇರೆ. ಮುಡಾ ಹಗರಣದ ತನಿಖೆಗೆ ಒಪ್ಪಿಸಬೇಕು. ಸಂಪೂರ್ಣವಾಗಿ ಮುಡಾದಲ್ಲಿ ಎಕ್ಸೆಂಜ್ ಸೈಟ್​ಗಳು ಯಾವ್ಯಾವು ಇವೆ. ಯಾವ ಸಂದರ್ಭದಲ್ಲಿ, ಯಾರಿಗೆ ನೀಡಿದ್ದೀರಿ ಸಂಪೂರ್ಣ ತನಿಖೆ ಆಗಬೇಕು. ಹೀಗಾಗಿ ಸಿಬಿಐ ತನಿಖೆಗೆ ನೀಡಲಿ. ಯಾವುದೇ ಹಗರಣ ಇಲ್ಲವೆಂದ ಮೇಲೆ ಯಾಕೆ ಭಯ ಪಡಬೇಕು ಎಂದರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:ಸಿದ್ದರಾಮಯ್ಯ ಪತ್ನಿಗೆ ಬಂದ ಜಮೀನು ಸರ್ಕಾರಿ ಭೂಮಿ -ಹೆಚ್​ಡಿ ಕುಮಾರಸ್ವಾಮಿ

ಇನ್ನು ಬಹಳ ಸ್ಪಷ್ಟವಾಗಿ ಮಾಧ್ಯಮಗಳು ತೋರಿಸಿಕೊಟ್ಟಿದ್ದೀರಿ. ಸಿಎಂ ಸಿದ್ದರಾಮಯ್ಯ ಬೇಕಾದದ್ದು ಹೇಳಲಿ. ಎಕ್ಸೆಂಜ್ ಸೈಟ್ ಯಾವ ಯಾವ ಲೇಔಟ್​ನಲ್ಲಿ ಪಡೆದುಕೊಳ್ಳಬೇಕು ಎನ್ನುವ ಕಾನೂನು ಸ್ಪಷ್ಟವಾಗಿ ಉಲ್ಲಂಘನೆ ಆಗಿದೆ. ಯಾವ ಕಾನೂನು ಉಲ್ಲಂಘನೆ ಆಗಿದೆ ಎಂದು ನಮ್ಮ ಪಕ್ಷದ ನಾಯಕರು ಓದಿ ಹೇಳಿದ್ದಾರೆ. 50/50 ಯಾವ ಲೇಔಟ್​ನಲ್ಲಿ ನೀಡಬೇಕು ಅಲ್ಲಿ ನೀಡಿಲ್ಲ. ಮೇಲ್ನೋಟಕ್ಕೆ ಉಲ್ಲಂಘನೆ ಆಗಿದ್ದು ಸ್ಪಷ್ಟವಾಗಿದೆ. ಯಾವ ಸಂದರ್ಭದಲ್ಲಿ ಸೈಟ್ ಪಡೆದುಕೊಂಡ್ರು, ಯಾವ ರೀತಿ ಪಡೆದುಕೊಂಡರು ಎನ್ನುವ ಪ್ರಶ್ನೆ ಇದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸುಖಾಸುಮ್ಮನೆ ವಿರಾಟ್ ಕೊಹ್ಲಿ ಕಿರಿಕ್: ತಿರುಗಿ ನಿಂತ ಸ್ಯಾಮ್ ಕೊನ್​ಸ್ಟಾಸ್
ಸುಖಾಸುಮ್ಮನೆ ವಿರಾಟ್ ಕೊಹ್ಲಿ ಕಿರಿಕ್: ತಿರುಗಿ ನಿಂತ ಸ್ಯಾಮ್ ಕೊನ್​ಸ್ಟಾಸ್
ಬಡತನದಿಂದ ಮುಕ್ತಿ ಹೊಂದಲು, ಮನೆಯಲ್ಲಿ ನೆಮ್ಮದಿಗೆ ಇಲ್ಲಿದೆ ಸುಲಭ ಉಪಾಯ
ಬಡತನದಿಂದ ಮುಕ್ತಿ ಹೊಂದಲು, ಮನೆಯಲ್ಲಿ ನೆಮ್ಮದಿಗೆ ಇಲ್ಲಿದೆ ಸುಲಭ ಉಪಾಯ
ಸಫಲ ಏಕಾದಶಿಯ ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿರಲಿದೆ ನೋಡಿ
ಸಫಲ ಏಕಾದಶಿಯ ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿರಲಿದೆ ನೋಡಿ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್