AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ: ಎಗ್ಗಿಲ್ಲದೇ ನಡೀತಿದೆ ಅಕ್ರಮ ಮರಳು ಲೂಟಿ, ಸರ್ಕಾರಕ್ಕೆ ನಿತ್ಯ ಲಕ್ಷಾಂತರ ರೂ. ತೆರಿಗೆ ವಂಚನೆ

ಗದಗ ಜಿಲ್ಲೆಯ ನರಗುಂದ ತಾಲೂಕಿನ ವಾಸನ ಮತ್ತು ಶಿರೋಳ ಗ್ರಾಮಗಳಲ್ಲಿ ಅಕ್ರಮ ಮರಳು ದಂಧೆ ಮಿತಿಮೀರಿದೆ. ಸಕ್ರಮದ ಪರವಾನಗಿ ಬಳಸಿ ಓವರ್‌ಲೋಡ್ ಸಾಗಾಟದ ಮೂಲಕ ಸರ್ಕಾರಕ್ಕೆ ಲಕ್ಷಾಂತರ ರೂ. ತೆರಿಗೆ ವಂಚಿಸಲಾಗುತ್ತಿದೆ. ಅಧಿಕಾರಿಗಳ ಮೌನಕ್ಕೆ ಸಾರ್ವಜನಿಕರು ಕಿಡಿಕಾರಿದ್ದು, ಇನ್ನಾದರೂ ಜಿಲ್ಲಾಡಳಿತ ಎಚ್ಚೆತ್ತು ಅಕ್ರಮ ಎಸಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಗದಗ: ಎಗ್ಗಿಲ್ಲದೇ ನಡೀತಿದೆ ಅಕ್ರಮ ಮರಳು ಲೂಟಿ, ಸರ್ಕಾರಕ್ಕೆ ನಿತ್ಯ ಲಕ್ಷಾಂತರ ರೂ. ತೆರಿಗೆ ವಂಚನೆ
ಗದಗ: ಎಗ್ಗಿಲ್ಲದೇ ನಡೀತಿದೆ ಅಕ್ರಮ ಮರಳು ಲೂಟಿImage Credit source: tv9
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on: Apr 01, 2026 | 6:24 PM

Share

ಗದಗ, ಏಪ್ರಿಲ್ 1: ಗದಗ (Gadag) ಜಿಲ್ಲೆಯ ನರಗುಂದ ತಾಲೂಕಿನಲ್ಲಿ ಮರಳು ಗಣಿಗಾರಿಕೆ ಎಗ್ಗಿಲ್ಲದೇ ಸಾಗಿದ್ದು, ಕಾನೂನಿನ ಭಯವಿಲ್ಲದೇ ಹಗಲು-ರಾತ್ರಿ ಮರಳು ಲೂಟಿ ಮಾಡಲಾಗುತ್ತಿದೆ. ಸಕ್ರಮದ ಪರವಾನಗಿ ಪಡೆದು ಅದರ ಮರೆಯಲ್ಲಿ ಅಕ್ರಮವಾಗಿ ಮರಳು ಸಾಗಿಸುವ ಮೂಲಕ ಸರ್ಕಾರಕ್ಕೆ ನಿತ್ಯ ಲಕ್ಷಾಂತರ ರೂಪಾಯಿ ತೆರಿಗೆ ವಂಚನೆ ಮಾಡಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಸಕ್ರಮದ ಹೆಸರಲ್ಲಿ ಅಕ್ರಮದ ಅಟ್ಟಹಾಸ

ನರಗುಂದ ತಾಲೂಕಿನ ವಾಸನ, ಕಲ್ಲಾಪುರ ಹಾಗೂ ಶಿರೋಳ ಗ್ರಾಮಗಳ ವ್ಯಾಪ್ತಿಯ ಪಟ್ಟಾ ಭೂಮಿಯಲ್ಲಿ ಮರಳು ತೆಗೆಯಲು ಸರ್ಕಾರದಿಂದ ಅನುಮತಿ ಪಡೆಯಲಾಗಿದೆ. ಆದರೆ, ನಿಯಮದ ಪ್ರಕಾರ 10-12 ಟನ್‌ಗೆ ಬಿಲ್ ಮಾಡಿ, ವಾಸ್ತವದಲ್ಲಿ 15-18 ಟನ್ ಮರಳನ್ನು ಓವರ್‌ಲೋಡ್ ಮಾಡಿ ಸಾಗಿಸಲಾಗುತ್ತಿದೆ. ಗಣಿಗಾರಿಕೆ ನಡೆಯುವ ಜಾಗದಲ್ಲಿ ಸಿಸಿ ಕ್ಯಾಮರಾ ಅಳವಡಿಸಿಲ್ಲ ಹಾಗೂ ವೇ-ಬ್ರಿಡ್ಜ್ (ತೂಕದ ಯಂತ್ರ) ವ್ಯವಸ್ಥೆಯೂ ಇಲ್ಲದೆ ಬೇಕಾಬಿಟ್ಟಿ ಲೂಟಿ ಮಾಡಲಾಗುತ್ತಿದೆ.

ಅಧಿಕಾರಿಗಳ ಎದುರಲ್ಲೇ ಸಾಗಾಟ!

ಅಚ್ಚರಿಯ ವಿಷಯವೆಂದರೆ, ಈ ಓವರ್‌ಲೋಡ್ ಟಿಪ್ಪರ್‌ಗಳು ನರಗುಂದ ಪೊಲೀಸ್ ಠಾಣೆ ಹಾಗೂ ತಹಶೀಲ್ದಾರ್ ಕಚೇರಿಯ ಮುಂದೆಯೇ ರಾಜಾರೋಷವಾಗಿ ಸಂಚರಿಸುತ್ತಿದ್ದರೂ ಅಧಿಕಾರಿಗಳು ಮಾತ್ರ ‘ಡೋಂಟ್ ಕೇರ್’ ಎನ್ನುತ್ತಿದ್ದಾರೆ. ಬೋಟ್ ಬಳಸಿ ಮರಳು ಫಿಲ್ಟರ್ ಮಾಡುವುದು ನಿಷೇಧವಿದ್ದರೂ, ಇಲ್ಲಿ ಬಹಿರಂಗವಾಗಿ ಬೋಟ್ ಬಳಸಿ ಮರಳು ತೆಗೆಯಲಾಗುತ್ತಿದೆ. ಅಧಿಕಾರಿಗಳು ಲೂಟಿಕೋರರೊಂದಿಗೆ ಕೈಜೋಡಿಸಿ ಕುಂಭಕರ್ಣ ನಿದ್ದೆಗೆ ಜಾರಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅವಧಿ ಮುಗಿದರೂ ನಿಂತಿಲ್ಲ ದಂಧೆ

ವಾಸನ ಗ್ರಾಮದಲ್ಲಿ ಕೆಲವು ಪಟ್ಟಾ ಜಮೀನುಗಳ ಲೀಜ್ ಅವಧಿ ಮುಗಿದಿದ್ದರೂ ರಾತ್ರೋರಾತ್ರಿ ಮರಳು ಲೂಟಿ ಮುಂದುವರಿದಿದೆ. ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಹಾಗೂ ಎಸಿ ಗಂಗಪ್ಪ ಅವರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ.

ಇದನ್ನೂ ಓದಿ: ಪ್ರತ್ಯೇಕ ಘಟನೆ: ರಜೆ ತಂದ ಆಪತ್ತು; ಈಜಲು ತೆರಳಿದ್ದ ಐವರು ಬಾಲಕರು ನೀರುಪಾಲು

ಜಿಲ್ಲಾಡಳಿತವೇ ಈ ದಂಧೆಗೆ ರಕ್ಷಣೆ ನೀಡುತ್ತಿದೆಯೇ ಎಂಬ ಅನುಮಾನ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿದೆ. ಇನ್ನಾದರೂ ಜಿಲ್ಲಾಡಳಿತ ಎಚ್ಚೆತ್ತು ತೆರಿಗೆ ಕಳ್ಳರ ವಿರುದ್ಧ ಕ್ರಮ ಕೈಗೊಳ್ಳಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು: ಪೊಲೀಸರಿಂದಲೇ ನಿಯಮ ಉಲ್ಲಂಘನೆ
ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು: ಪೊಲೀಸರಿಂದಲೇ ನಿಯಮ ಉಲ್ಲಂಘನೆ
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಆಕ್ಲೆಂಡ್​ನಲ್ಲಿ ‘ಮೋದಿ ಮೋದಿ’ ಘೋಷಣೆ: ಪ್ರಧಾನಿಯ ಸ್ವಾಗತಕ್ಕೆ ಜನಸಾಗರ
ಆಕ್ಲೆಂಡ್​ನಲ್ಲಿ ‘ಮೋದಿ ಮೋದಿ’ ಘೋಷಣೆ: ಪ್ರಧಾನಿಯ ಸ್ವಾಗತಕ್ಕೆ ಜನಸಾಗರ
ತಾಯಿ, ಅಜ್ಜಿ, ಮಾವನನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಮಗ!
ತಾಯಿ, ಅಜ್ಜಿ, ಮಾವನನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಮಗ!
40 ವರ್ಷಗಳಲ್ಲಿ ನ್ಯೂಜಿಲೆಂಡ್​ಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ ಮೋದಿ!
40 ವರ್ಷಗಳಲ್ಲಿ ನ್ಯೂಜಿಲೆಂಡ್​ಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ ಮೋದಿ!
ಕ್ವಾಟ್ಲೆ ಕಿಚನ್​​ಗೆ ಬಂದ ‘ಧುರಂಧರ್’ ಹಮ್ಜಾ ಅಲಿ: ವಿಡಿಯೋ
ಕ್ವಾಟ್ಲೆ ಕಿಚನ್​​ಗೆ ಬಂದ ‘ಧುರಂಧರ್’ ಹಮ್ಜಾ ಅಲಿ: ವಿಡಿಯೋ