ಬಡವರಿಗೆ ಸಿಗಬೇಕಿದ್ದ ಅಕ್ಕಿಯ ಅಕ್ರಮ ಸಾಗಾಟ; ಗದಗದಲ್ಲಿ 80ಕ್ಕೂ ಹೆಚ್ಚು ಅಕ್ಕಿ ಮೂಟೆ ವಶಕ್ಕೆ

80 ಕ್ಕೂ ಹೆಚ್ಚು ಅಕ್ಕಿ ಮೂಟೆಗಳನ್ನು ಸಾಗಿಸುತ್ತಿದ್ದ ವಾಹನ ವಶಕ್ಕೆ ಪಡೆಯಲಾಗಿದೆ. ಆದರೆ, ಕಳೆದ 20 ಗಂಟೆಯಾದರೂ ಪೊಲೀಸರು ಕ್ರಮಕ್ಕೆ ಮುಂದಾಗಿಲ್ಲ. ಹೀಗಾಗಿ, ಗದಗ ಶಹರ ಪೊಲೀಸರ ವಿಳಂಬಕ್ಕೆ ಸಾರ್ವಜನಿಕರ ಆಕ್ರೋಶ ಕೇಳಿಬಂದಿದೆ.

ಬಡವರಿಗೆ ಸಿಗಬೇಕಿದ್ದ ಅಕ್ಕಿಯ ಅಕ್ರಮ ಸಾಗಾಟ; ಗದಗದಲ್ಲಿ 80ಕ್ಕೂ ಹೆಚ್ಚು ಅಕ್ಕಿ ಮೂಟೆ ವಶಕ್ಕೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ganapathi bhat

Updated on:Sep 03, 2021 | 5:42 PM

ಗದಗ: ಸರ್ಕಾರದಿಂದ ಬಡವರಿಗೆ ಕೊಡಲಾಗುವ ಅಕ್ಕಿಯ ಅಕ್ರಮ ಸಾಗಾಟ ದಂಧೆ ಬಯಲಾಗಿದೆ. ಎಗ್ಗಿಲ್ಲದೇ ಸಾಗಿರುವ ಅನ್ನಭಾಗ್ಯ ಅಕ್ಕಿ ಸಾಗಾಟ ದಂಧೆಯನ್ನು ಸ್ಥಳೀಯ ಜನರೇ ರೆಡ್ ಹ್ಯಾಂಡ್​ ಆಗಿ ಹಿಡಿದಿದ್ದಾರೆ. ಗದಗ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇಲ್ಲಿ ಗ್ರೇನ್​ಮಾರ್ಕೆಟ್​ನಿಂದ ರಾತ್ರೋರಾತ್ರಿ ಅಕ್ಕಿ ಸಾಗಾಟ ಆರೋಪ ಕೇಳಿಬಂದಿತ್ತು. ಬಳಿಕ ಅಕ್ಕಿ ಸಾಗಾಟ ವೇಳೆ ಸ್ಥಳೀಯರು ಆರೋಪಿಗಳನ್ನು ರೆಡ್​ ಹ್ಯಾಂಡ್ ಆಗಿ ಹಿಡಿದಿದ್ದಾರೆ. 80 ಕ್ಕೂ ಹೆಚ್ಚು ಅಕ್ಕಿ ಮೂಟೆಗಳನ್ನು ಸಾಗಿಸುತ್ತಿದ್ದ ವಾಹನ ವಶಕ್ಕೆ ಪಡೆಯಲಾಗಿದೆ. ಆದರೆ, ಕಳೆದ 20 ಗಂಟೆಯಾದರೂ ಪೊಲೀಸರು ಕ್ರಮಕ್ಕೆ ಮುಂದಾಗಿಲ್ಲ. ಹೀಗಾಗಿ, ಗದಗ ಶಹರ ಪೊಲೀಸರ ವಿಳಂಬಕ್ಕೆ ಸಾರ್ವಜನಿಕರ ಆಕ್ರೋಶ ಕೇಳಿಬಂದಿದೆ.

ಮೈಸೂರು: ಸರಗಳ್ಳರು ಹಾಗೂ ಕದ್ದ ಮಾಲು ಖರೀದಿಸುತ್ತಿದ್ದ ಅಂಗಡಿಯವನ ಬಂಧನ ಸರಗಳ್ಳತನ ಮತ್ತು ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ಇಬ್ಬರನ್ನು ಹಾಗೂ ಕದ್ದ ಮಾಲು ಖರೀದಿಸುತ್ತಿದ್ದ ಮತ್ತೊಬ್ಬ ಆರೋಪಿಯನ್ನು ಬಂಧಿಸಲಾಗಿದೆ. ಮೈಸೂರಿನ ನರಸಿಂಹರಾಜ ಠಾಣೆ ಪೊಲೀಸರಿಂದ ಮೂರು ಮಂದಿಯ ಬಂಧನವಾಗಿದೆ. ಬಂಧಿತರಿಂದ 21 ಲಕ್ಷ ಮೌಲ್ಯದ 388 ಗ್ರಾಂ ಚಿನ್ನ, 4 ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ.

ಕೆ.ಆರ್. ಮೊಹಲ್ಲಾದ ಸಲ್ಮಾನ್ ಖಾನ್ ಅಲಿಯಾಸ್ ಸಲ್ಲು(28), ಶಾಂತಿನಗರದ ನಿವಾಸಿ ತಾಜುದ್ದೀನ್ ಅಲಿಯಾಸ್ ಕಾಲು (21) ಬಂಧಿತ ಆರೋಪಿಗಳು. ಅಶೋಕ ರಸ್ತೆಯಲ್ಲಿರುವ ಮರಿಯಂ ಜ್ಯುವೆಲ್ಲರ್ಸ್ ಮಾಲೀಕ ಮೊಹಮ್ಮದ್ ಫರ್ವೇಜ್ (41) ಎಂಬಾತನನ್ನು ಕೂಡ ಸೆರೆ ಹಿಡಿಯಲಾಗಿದೆ. ಇವರು ಐಷಾರಾಮಿ ಜೀವನಕ್ಕಾಗಿ ಕಳ್ಳತನವೇ ವೃತ್ತಿಯಾಗಿಸಿಕೊಂಡಿದ್ದರು. ಹಾಗೂ ಮೈಸೂರಿನ ವಿವಿಧ ಠಾಣೆಗಳಲ್ಲಿ ಕಳವು ಪ್ರಕರಣ ದಾಖಲಾಗಿತ್ತು ಎಂದು ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: ಓರ್ವ ವ್ಯಕ್ತಿಗೆ ತಿಂಗಳಿಗೆ 5 ಕೆಜಿ ಅಕ್ಕಿ ಸಾಕು: ಈ ಹೇಳಿಕೆಗೆ ನಾನು ಬದ್ಧ: ಆಹಾರ ಸಚಿವ ಉಮೇಶ್ ಕತ್ತಿ

ಇದನ್ನೂ ಓದಿ: Fortified Rice: ಸಾರವರ್ಧಿತ ಅಕ್ಕಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರ ಘೋಷಣೆ ಮಹತ್ವದ್ದು; ಕಾರಣವೇನು?

Published On - 5:41 pm, Fri, 3 September 21

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ