Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗನಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಆಪ್ತ ಕಾಂತಿಲಾಲ್ ಬನ್ಸಾಲಿ ಮೇಲೆ ಹಲ್ಲೆ; ಹಣ ದೋಚಿ ಪರಾರಿ

ಗದಗ ಜಿಲ್ಲಾ ಬಿಜೆಪಿ ನಾಯಕರಲ್ಲಿ ಮುಸುಕಿನ ಗುದ್ದಾಟ ನಡೆದಿದೆ. ಎರಡು ದಿನಗಳ ಹಿಂದೆ ಮಾಜಿ ನಿಗಮ ಮಂಡಳಿ ಅಧ್ಯಕ್ಷರೊಬ್ಬರು ಪರೋಕ್ಷವಾಗಿ ಪಕ್ಷದ ನಾಯಕರ ವಿರುದ್ಧ ವಾಗ್ದಾಳಿ ಮಾಡಿದ್ದರು. ಈ ಘಟನೆ ನಡೆದ ಎರಡೇ ದಿನದಲ್ಲಿ ಮಾಜಿ ನಿಗಮ ಮಂಡಳಿ ಅಧ್ಯಕ್ಷನ ಮೇಲೆ ಹಾಡಹಗಲೇ ಹಲ್ಲೆಯಾಗಿದೆ. ಬೈಕ್ ಅಡ್ಡಗಟ್ಟಿ ಹಲ್ಲೆ ಮಾಡಿ 50 ಸಾವಿರ ದೋಚಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಈ ಕುರಿತು ಒಂದು ವರದಿ ಇಲ್ಲಿದೆ.

ಗದಗನಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಆಪ್ತ ಕಾಂತಿಲಾಲ್ ಬನ್ಸಾಲಿ ಮೇಲೆ ಹಲ್ಲೆ; ಹಣ ದೋಚಿ ಪರಾರಿ
ಗದಗನಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಆಪ್ತ ಕಾಂತಿಲಾಲ್ ಬನ್ಸಾಲಿ ಮೇಲೆ ಹಲ್ಲೆ
Follow us
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Updated By: ಕಿರಣ್ ಹನುಮಂತ್​ ಮಾದಾರ್

Updated on: Oct 11, 2024 | 4:03 PM

ಗದಗ, ಅ.11: ಗದಗ ನಗರದ ಭೂಮರೆಡ್ಡಿ ಸರ್ಕಲ್ ಬಳಿ ನಿನ್ನೆ(ಅ.10) ಮಧ್ಯಾಹ್ನ 2.30 ರ ಸುಮಾರಿಗೆ ಎಪಿಎಂಸಿಯಿಂದ ಭೂಮರೆಡ್ಡಿ ಸರ್ಕಲ್ ಮೂಲಕ ಮನೆಗೆ ಹೋಗುತ್ತಿದ್ದ ಮಾಜಿ ಸಿಎಂ ಯಡಿಯೂರಪ್ಪ ಆಪ್ತ ಹಾಗೂ ಬಿಜೆಪಿ ಹಿರಿಯ ಮುಖಂಡ ಕಾಂತಿಲಾಲ್ ಬನ್ಸಾಲಿ(Kantilal Bhansali) ಮೇಲೆ ದುಷ್ಕರ್ಮಿಗಳು ಹಲ್ಲೆ ಮಾಡಿ, ಹಣ ದೋಚಿ ಪರಾರಿಯಾಗಿದ್ದಾರೆ. ಹೌದು, ಬೈಕ್​ಗೆ ಡಿಕ್ಕಿ ಹೊಡೆದು ನೆಲಕ್ಕೆ ಕೆಡವಿದ ದುಷ್ಕರ್ಮಿಗಳು, ಬಳಿಕ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಅಷ್ಟೇ ಅಲ್ಲ, ಮೈಮೆಲಿನ ಶರ್ಟ್ ಹರಿದು 50 ಸಾವಿರ ಹಣ ದೋಚಿದ್ದಾರೆ.

‘ನಿಂದು ಬಹಳ ಆಗಿದೆ’ ಎಂದು ಅವಾಜ್ ಹಾಕಿ ಎಸ್ಕೇಪ್ ಆದ ದುಷ್ಕರ್ಮಿಗಳು

ಸಾರ್ವಜನಿಕರು ಓಡಿ ಬರುತ್ತಿದ್ದಂತೆ ದುಷ್ಕರ್ಮಿಗಳು ‘ನಿಂದು ಬಹಳ ಆಗಿದೆ’ ಎಂದು ಅವಾಜ್ ಹಾಕಿ ಎಸ್ಕೇಪ್ ಆಗಿದ್ದಾರೆ. ಇದೆ ಮಾತು ಈಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ಎರಡು ದಿನಗಳ ಹಿಂದೆ ಗದಗ ಜಿಲ್ಲಾ ನಾಯಕರ ವಿರುದ್ಧ ಕಾಂತಿಲಾಲ್ ಬನ್ಸಾಲಿ ವಾಗ್ದಾಳಿ ಮಾಡಿದ್ದರು. ‘ಮಕ್ಕಳನ್ನು ಬೆಳೆಸಬೇಡಿ, ಕಾರ್ಯಕರ್ತರನ್ನು ಬೆಳೆಸಿ ಎಂದಿದ್ದರು. ಈ ಹೇಳಿಕೆ ನೀಡಿದ ಎರಡನೇ ದಿನದಲ್ಲಿ ಈ ಅಟ್ಯಾಕ್ ನಡೆದಿದ್ದು, ಬಿಜೆಪಿಯಲ್ಲೇ ಯಾರಾದರೂ ಹೆದರಿಸಲು ಈ ಅಟ್ಯಾಕ್ ಮಾಡಿಸಿದ್ದಾರೆ ಎನ್ನುವ ಗುಸುಗುಸು ನಡೆದಿದೆ.

ಇದನ್ನೂ ಓದಿ:ಮಹಿಳಾ PSI ಮೇಲೆ ಹಲ್ಲೆ; ಕಾನ್ಸಸ್ಟೇಬಲ್ ವಿರುದ್ದ ಗಂಭೀರ ಆರೋಪ

ಹಾಡಹಗಲೇ ದುಷ್ಕರ್ಮಿಗಳ ಅಟ್ಟಹಾಸಕ್ಕೆ ಗದಗ-ಬೆಟಗೇರಿ ಅವಳಿ ನಗರದ ಜನರು ಬೆಚ್ಚಿಬಿದ್ದಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಹಲ್ಲೆಗೊಳಗಾದ ಕಾಂತಿಲಾಲ್ ಬನ್ಸಾಲಿ, ‘ದುಷ್ಕರ್ಮಿಗಳು ನನ್ನ ಬೈಕ್​ಗೆ ಡಿಕ್ಕಿ ಹೊಡೆದರು. ಅಷ್ಟೇ, ಏಕಾಏಕಿ ಹಿಗ್ಗಾಮುಗ್ಗಾ ಹಲ್ಲೆ ಮಾಡಿ ನನ್ನ ಬಳಿ ಇದ್ದ 50 ಹಣ ದೋಚಿ, ‘ನಿಂದು ಬಹಳ ಆಗಿದೆ ಎಂದು ಹೆದರಿಸಿ ಪರಾರಿಯಾದರು ಎಂದು ಹೇಳಿದ್ದಾರೆ.

ಹಾಡಹಗಲೇ ಉದ್ಯಮಿಯೂ ಆದ ಬಿಜೆಪಿ ಮುಖಂಡ ಕಾಂತಿಲಾಲ್ ಬನ್ಸಾಲಿ ಮೇಲೆ ಹಲ್ಲೆಯಾಗಿದ್ದು, ಉದ್ಯಮಿಗಳಲ್ಲೂ ಆತಂಕ ಹೆಚ್ಚಿದೆ. ಇದು ಹಣಕ್ಕೆ ಮಾಡಿದ ಹಲ್ಲೆಯೋ, ರಾಜಕೀಯ ದ್ವೇಷದ ಹಲ್ಲೆಯೋ ಎನ್ನುವ ಚರ್ಚೆ ಗದಗ-ಬೆಟಗೇರಿ ಅವಳಿ ನಗರದಲ್ಲಿ ನಡೆದಿದೆ. ಅಷ್ಟೇ ಅಲ್ಲ, ಸ್ವಪಕ್ಷದ ರಾಜಕೀಯ ವಿರೋಧಿಗಳು ಮಾಡಿಸಿದ ಹಲ್ಲೆ ಎಂಬ ಗುಮಾನಿಯೂ ಹಬ್ಬಿದೆ. ಇತ್ತೀಚೆಗೆ ಗದಗ ಕ್ಷೇತ್ರದ ಬಿಜೆಪಿ ಬೆಳವಣಿಗೆ ಬಗ್ಗೆ ಬಹಿರಂಗವಾಗಿ ಕಾಂತಿಲಾಲ್ ಮಾತನಾಡಿದ್ದಾರಂತೆ. ಹೀಗಾಗಿ ಯಾರಾದರೂ ಹೆದರಿಸಲು ಹಲ್ಲೆ ಮಾಡಿಸಿದ್ದಾರಾ ಎಂದು ಬಿಜೆಪಿ ವಲಯದಲ್ಲಿ ಚರ್ಚೆ ನಡೆದಿದೆ.

ಬಿಜೆಪಿ ಮುಖಂಡನ ಮೇಲಿನ ಹಲ್ಲೆಗೆ ಬಿಜೆಪಿ ನಾಯಕರು ತೀವ್ರ ಖಂಡನೆ

ಬಿಜೆಪಿ ಮುಖಂಡನ ಮೇಲಿನ ಹಲ್ಲೆಗೆ ಬಿಜೆಪಿ ನಾಯಕರು ತೀವ್ರವಾಗಿ ಖಂಡಿಸಿದ್ದಾರೆ. ಮಾಜಿ ನಿಗಮ ಮಂಡಳಿ ಅಧ್ಯಕ್ಷರಿಗೆ ರಕ್ಷಣೆ ಇಲ್ಲವೆಂದರೆ, ಸಾಮಾನ್ಯ ಜನರಿಗೆ ರಕ್ಷಣೆ ಎಲ್ಲಿ ಎಂದು ಎಂಎಲ್​ಸಿ ಎಸ್ ವಿ ಸಂಕನೂರ ಪೊಲೀಸ್ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಗದಗನಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಕಿಡಿಕಾರಿದ್ದಾರೆ. ಬಳಿಕ ಕಾಂತಿಲಾಲ್ ಮನೆಗೆ ಎಸ್ ಸಂಕನೂರ ಭೇಟಿ ನೀಡಿ ಬನ್ಸಾಲಿ ಅವರಿಗೆ ಧೈರ್ಯ ತುಂಬಿದ್ದಾರೆ. ಹಾಡಹಗಲೇ ಹಲ್ಲೆಯಿಂದ ಅವಳಿ ನಗರದಲ್ಲಿ ಭಯ ಸೃಷ್ಠಿಯಾಗಿದೆ. ಪೊಲೀಸರು ಏನು ಕೆಲಸ ಮಾಡುತ್ತಿದ್ದಾರೆ. ಹಾಡಹಗಲೇ ಹಲ್ಲೆ ಆಗುತ್ತದೆ ಅಂದರೆ ಯಾರ ಭಯ ಇಲ್ಲವಾ?, ಇದೆಲ್ಲಾ ನೋಡಿದರೆ ಪೊಲೀಸರ ವೈಫಲ್ಯ ಎದ್ದು ಕಾಣುತ್ತದೆ. ಕಳ್ಳರಿಗೆ ಗದಗನಲ್ಲಿ ಭಯ ಇಲ್ಲದಂತ ವಾತಾವರಣ ನಿರ್ಮಾಣವಾಗಿದೆ ಎಂದು ಪೊಲೀಸ್ ಇಲಾಖೆ ವಿರುದ್ಧ ವಾಗ್ದಾಳಿ ನಡೆಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಜೆಪಿಯ ರಾಜಕೀಯ ಪಿತೂರಿ; ಇಡಿ ಸಮನ್ಸ್ ಬಳಿಕ ರಾಬರ್ಟ್ ವಾದ್ರಾ ಆರೋಪ
ಬಿಜೆಪಿಯ ರಾಜಕೀಯ ಪಿತೂರಿ; ಇಡಿ ಸಮನ್ಸ್ ಬಳಿಕ ರಾಬರ್ಟ್ ವಾದ್ರಾ ಆರೋಪ
ಮತ್ತೊಮ್ಮೆ ಸಮೀಕ್ಷೆ ಮಾಡಿಸುವಂತೆ ಸಿಎಂ, ಡಿಸಿಎಂಗೆ ಆಗ್ರಹಿಸುತ್ತೇವೆ: ಶಾಸಕ
ಮತ್ತೊಮ್ಮೆ ಸಮೀಕ್ಷೆ ಮಾಡಿಸುವಂತೆ ಸಿಎಂ, ಡಿಸಿಎಂಗೆ ಆಗ್ರಹಿಸುತ್ತೇವೆ: ಶಾಸಕ
ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸಿಎಂ ಹಣ ಮೀಸಲಿಟ್ಟಿದ್ದಾರಾ? ವಿಜಯೇಂದ್ರ
ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸಿಎಂ ಹಣ ಮೀಸಲಿಟ್ಟಿದ್ದಾರಾ? ವಿಜಯೇಂದ್ರ
ಬವೇರಿಯ 1.3 ಕೋಟಿ ಜನಸಂಖ್ಯೆಯಿರುವ ಜರ್ಮನಿಯ ಅತಿದೊಡ್ಡ ರಾಜ್ಯ
ಬವೇರಿಯ 1.3 ಕೋಟಿ ಜನಸಂಖ್ಯೆಯಿರುವ ಜರ್ಮನಿಯ ಅತಿದೊಡ್ಡ ರಾಜ್ಯ
ಸಕಾಲದಲ್ಲಿ 13 ನೇ ಕ್ರಾಸ್​ನಿಂದ 18ನೇ ಕ್ರಾಸ್ ತಲುಪಿದ ವಿದ್ಯಾರ್ಥಿನಿ
ಸಕಾಲದಲ್ಲಿ 13 ನೇ ಕ್ರಾಸ್​ನಿಂದ 18ನೇ ಕ್ರಾಸ್ ತಲುಪಿದ ವಿದ್ಯಾರ್ಥಿನಿ
VIDEO: ರಾಕೆಟ್ ರಾಕೆಟ್ ರಾಕೆಟ್: ಒಂದೇ ಕೈಯಲ್ಲಿ ಧೋನಿಯ ರಾಕೆಟ್ ಸಿಕ್ಸ್
VIDEO: ರಾಕೆಟ್ ರಾಕೆಟ್ ರಾಕೆಟ್: ಒಂದೇ ಕೈಯಲ್ಲಿ ಧೋನಿಯ ರಾಕೆಟ್ ಸಿಕ್ಸ್
ವೇದಿಕೆಯಲ್ಲೇ ಸಚಿವ ಖಂಡ್ರೆ, ಶಾಸಕ ಶೈಲೇಂದ್ರ ಬೆಲ್ದಾಳೆ ಮಾತಿನ ಚಕಮಕಿ
ವೇದಿಕೆಯಲ್ಲೇ ಸಚಿವ ಖಂಡ್ರೆ, ಶಾಸಕ ಶೈಲೇಂದ್ರ ಬೆಲ್ದಾಳೆ ಮಾತಿನ ಚಕಮಕಿ
ಭಾವಿ ಪತ್ನಿ ವೈಷ್ಣವಿಗಾಗಿ ಕನ್ನಡ ಕಲಿತು ಮಾತನಾಡಿದ ಅನುಕೂಲ್
ಭಾವಿ ಪತ್ನಿ ವೈಷ್ಣವಿಗಾಗಿ ಕನ್ನಡ ಕಲಿತು ಮಾತನಾಡಿದ ಅನುಕೂಲ್
ಬುರ್ಖಾ ತೆಗೆ, ಹೆಸರೇನು ಹೇಳು: ಬೆಂಗಳೂರಲ್ಲಿ ಮತ್ತೊಂದು ನೈತಿಕ ಪೊಲೀಸ್​ಗಿರಿ
ಬುರ್ಖಾ ತೆಗೆ, ಹೆಸರೇನು ಹೇಳು: ಬೆಂಗಳೂರಲ್ಲಿ ಮತ್ತೊಂದು ನೈತಿಕ ಪೊಲೀಸ್​ಗಿರಿ
ರಾಯಚೂರಿನ ಆರ್​ಟಿಪಿಎಸ್ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಅಗ್ನಿ ಅವಘಡ
ರಾಯಚೂರಿನ ಆರ್​ಟಿಪಿಎಸ್ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಅಗ್ನಿ ಅವಘಡ