ಗದಗ, ಜೂ.28: ಆರೋಪಿಯನ್ನ ಕರೆದೊಯ್ಯುವ ವೇಳೆ ಪೊಲೀಸರ(Police) ಮೇಲೆಯೇ ಸಿನಿಮೀಯ ರೀತಿಯಲ್ಲಿ ಅಟ್ಯಾಕ್ ಮಾಡಿ ಆರೋಪಿ ಸಮೇತ ಎಸ್ಕೇಪ್ ಆಗಿರುವ ಘಟನೆ ನಗರದ ಬೆಟಗೇರಿ(Betageri) ರೈಲ್ವೆ ಅಂಡರ್ ಬ್ರಿಜ್ಜ್ ಬಳಿ ನಡೆದಿದೆ. ಕಳ್ಳತನಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಕೊಪ್ಪಳ ಜಿಲ್ಲೆಯ ಗಂಗಾವತಿ ಪೊಲೀಸರು ಕರೆದೊಯ್ಯುವ ವೇಳೆ ಗದಗದ ರೈಲ್ವೆ ಬ್ರಿಡ್ಜ್ ಬಳಿ ಪೊಲೀಸ್ ವಾಹನವನ್ನೇ ಅಡ್ಡಗಟ್ಟಿದ ದುಷ್ಕರ್ಮಿಗಳು, ಹಲ್ಲೆ ಮಾಡಿದ್ದಾರೆ.
ಇನ್ನು ಆರೋಪಿ ಕರೆದೊಯ್ಯಲು ಇನೋವಾ ಕಾರ್ ನಂಬರ್ KA 22 Z 1636 ನಲ್ಲಿ ಬಂದಿದ್ದ ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿಯನ್ನ ಎಸ್ಕೇಪ್ ಮಾಡಿದ್ದಾರೆ. ನಾಲ್ವರು ಪೊಲೀಸರ ಮೇಲೆ ಹಲ್ಲೆ ಮಾಡಿರುವ ಬಗ್ಗೆ ಅನುಮಾನ ಮೂಡಿದ್ದು, ಗಾಯಾಳು ಪೊಲೀಸರನ್ನು ಬೆಟಗೇರಿ ಖಾಸಗಿ ಆಸ್ಪತ್ರೆಗೆ ದಾಖಲು ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಘಟನೆ ಬಗ್ಗೆ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡದೇ ಗಂಗಾವತಿ ಪೊಲೀಸರು ಬಂದಿದ್ದರು ಎನ್ನಲಾಗಿದೆ.
ಇದನ್ನೂ ಓದಿ:ಬೆಂಗಳೂರು: ನಡುರಸ್ತೆಯಲ್ಲಿ ಸಿನಿಮೀಯ ರೀತಿಯಲ್ಲಿ ಲಾಂಗ್ ಬೀಸಿ ಹಲ್ಲೆ, ಆರೋಪಿಗಳ ಬಂಧನ
ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದ ಬಳಿ ಟ್ರ್ಯಾಕ್ಟರ್ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿದ್ದ ಗುಂಡ್ಲುಪೇಟೆ ಆಹಾರ ನಿರೀಕ್ಷಕ ನಾಗೇಂದ್ರ(54) ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಆಹಾರ ಇಲಾಖೆ ಶಿರಸ್ತೆದಾರ ರಮೇಶ್ಗೆ ಗಂಭೀರ ಗಾಯವಾಗಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಂಗಳ ಗ್ರಾಮದಲ್ಲಿ ಜನಸ್ಪಂದನ ಕಾರ್ಯಕ್ರಮ ಮುಗಿಸಿ ಬರುತ್ತಿದ್ದ ವೇಳೆ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಡಿಸಿ, ಎಸ್ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 11:08 pm, Fri, 28 June 24