ಜನತಾ ದರ್ಶನ: ಸಾರ್ವಜನಿಕರಿಗೆ ಸ್ಥಳದಲ್ಲಿಯೇ ಪರಿಹಾರ ನೀಡಿದ ಸಚಿವ ಎಚ್​ಕೆ ಪಾಟೀಲ

ಜಿಲ್ಲಾಡಳಿತ ಭವನದಲ್ಲಿ ಶನಿವಾರದಂದು ಜರುಗಿದ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮಕ್ಕೆ ಜನಸಾಗರ ತಮ್ಮ ಅಹವಾಲುಗಳೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ.ಪಾಟೀಲ ಅವರನ್ನು ಭೇಟಿ ಮಾಡಿ ಅಹವಾಲುಗಳನ್ನು ಸಲ್ಲಿಸಿದರು. ಸಾಧ್ಯವಾದಷ್ಟು ಅಹವಾಲುಗಳಿಗೆ ಸ್ಥಳದಲ್ಲಿಯೇ ಪರಿಹಾರ ಒದಗಿಸಿ ಬಾಕಿ ಸಮಸ್ಯೆಗಳ ಪರಿಹಾರಕ್ಕಾಗಿ ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಗೆ ಸಮಸ್ಯೆಗಳನ್ನು ನಿವಾರಿಸಲು ಸೂಚನೆ ನೀಡಿದ್ದಾರೆ.

ಜನತಾ ದರ್ಶನ: ಸಾರ್ವಜನಿಕರಿಗೆ ಸ್ಥಳದಲ್ಲಿಯೇ ಪರಿಹಾರ ನೀಡಿದ ಸಚಿವ ಎಚ್​ಕೆ ಪಾಟೀಲ
ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಸಚಿವ ಎಚ್.ಕೆ.ಪಾಟೀಲ
Follow us
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Updated By: ಗಂಗಾಧರ​ ಬ. ಸಾಬೋಜಿ

Updated on: Sep 30, 2023 | 9:06 PM

ಗದಗ, ಸೆಪ್ಟೆಂಬರ್​ 30: ಜಿಲ್ಲಾಡಳಿತ ಭವನದಲ್ಲಿ ಶನಿವಾರದಂದು ಜರುಗಿದ ಜಿಲ್ಲಾ ಮಟ್ಟದ ಜನತಾ ದರ್ಶನ (Janata Darshan) ಕಾರ್ಯಕ್ರಮಕ್ಕೆ ಜನಸಾಗರ ತಮ್ಮ ಅಹವಾಲುಗಳೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ.ಪಾಟೀಲ ಅವರನ್ನು ಭೇಟಿ ಮಾಡಿ ಅಹವಾಲುಗಳನ್ನು ಸಲ್ಲಿಸಿದರು. ಸಚಿವ ಎಚ್.ಕೆ.ಪಾಟೀಲ ಅವರು ಸಂಯಮದಿಂದಲೇ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ ಸಾಧ್ಯವಾದಷ್ಟು ಅಹವಾಲುಗಳಿಗೆ ಸ್ಥಳದಲ್ಲಿಯೇ ಪರಿಹಾರ ಒದಗಿಸಿ ಬಾಕಿ ಸಮಸ್ಯೆಗಳ ಪರಿಹಾರಕ್ಕಾಗಿ ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಗೆ ಗಡುವನ್ನು ನೀಡಿ ಸಾರ್ವಜನಿಕರ ಸಮಸ್ಯೆಗಳನ್ನು ನಿವಾರಿಸಲು ಸೂಚನೆ ನೀಡಿದರು.

ಗದಗ ನಗರದ ಗಂಗವ್ವ ವಾಲ್ಮಿಕಿ ಅವರು ರಾಷ್ಟ್ರೀಯ ಕುಟುಂಬ ನೆರವು ಯೋಜನೆಯಡಿ ಸಹಾಯಧನ ಕುರಿತು ಸಲ್ಲಿಸಿದ ಅಹವಾಲಿಗೆ ಸ್ಪಂಧಿಸಿದ ಸಚಿವರು, ತಹಶೀಲ್ದಾರ ಅವರಿಗೆ ಇಂದೇ ಮಂಜೂರಾತಿ ಪತ್ರ ನೀಡುವಂತೆ ಸೂಚಿಸಿದ ಹಿನ್ನಲೆಯಲ್ಲಿ ರಾಷ್ಟ್ರೀಯ ಕುಟುಂಬ ನೆರವು ಯೋಜನೆಯಡಿ 20000/- ರೂಗಳ ಸಹಾಯ ಧನದ ಮಂಜೂರಾತಿ ಆದೇಶ ಪ್ರತಿಯನ್ನು ಗಂಗವ್ವ ವಾಲ್ಮೀಕಿ ಅವರಿಗೆ ಸಚಿವರು ವಿತರಿಸಿದರು.

ನರಗುಂದ ತಾಲೂಕಿನ ರುದ್ರವ್ವ ಕುರಿ ಅವರು ಮನೆ ನಿರ್ಮಾಣಕ್ಕೆ ಸಹಾಯ ಧನ ಕೋರಿ ಸಲ್ಲಿಸಿದ ಅಹವಾಲಿಗೆ ಸ್ಪಂಧಿಸಿ ಕೂಡಲೇ ಕ್ರಮಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಳಿಗೆ ನಿರ್ದೇಶನ ನೀಡಿದರು. ರೆಣವ್ವ ಮದಗುಣಕಿ ಅವರ ಆಸ್ತಿ ವಿಭಜನೆಗೆ ಸಂಬಂಧಿಸಿದ ಮನವಿಗೆ ಒಂದು ವಾರದೊಳಗೆ ಸಮಸ್ಯೆ ಪರಿಹರಿಸಲಾಗುವದು ಎಂದು ಭರವಸೆ ನೀಡಿದರು.

ಇದನ್ನೂ ಓದಿ: ಜನತಾ ದರ್ಶನ: ಪದ್ಮಭೂಷಣ ಪ್ರಶಸ್ತಿಗೆ ಅರ್ಜಿ ಸಲ್ಲಿಸಿದ ವ್ಯಕ್ತಿ, ಸಚಿವ ಹೆಚ್​ಕೆ ಪಾಟೀಲ್ ತಬ್ಬಿಬ್ಬು

ಮುಂಡರಗಿ ತಾಲೂಕಿನ ಅಬ್ದುಲಖಾದರ ಪದ್ಮ ವಿಭೂಷಣ ಪ್ರಶಸ್ತಿಗೆ ಶಿಫಾರಸ್ಸು ಮಾಡುವಂತೆ ಮನವಿಗೆ ಸ್ಪಂದಿಸಿದ ಸಚಿವರು ತಾವು ಜನಸೇವೆಯಲ್ಲಿ ತೊಡಗಿಸಿಕೊಂಡಿದ್ದು ಸಮಾಜ ಮೆಚ್ಚುವಂತಹ ಕಾರ್ಯ ಮಾಡಿರುತ್ತಿರಿ ತಮ್ಮ ಕಾರ್ಯವನ್ನು ಜಿಲ್ಲಾ ಮಟ್ಟದಲ್ಲಿ ಗುರುತಿಸಿ ಗೌರವಿಸಲಾಗುವದು ಎಂದರು.

ಗದಗ ನಗರದ ಶಬಾನಾ ಹೊಸಪೇಟೆ ಅವರು ವಿಧವಾ ವೇತನ ಕುರಿತು ಅಹವಾಲಿಗೆ ಸಚಿವರು ಶಬಾನಾ ಅವರಿಗೆ ಸ್ಥಳದಲ್ಲಿಯೇ ವಿಧವಾ ವೇತನ ಮಂಜೂರಾತಿ ಆದೇಶ ಪ್ರತಿ ವಿತರಿಸಿದರು. ಅಂಧ ಮತ್ತು ಕಿವುಡು ಮಕ್ಕಳ ಶಾಲೆಗೆ ಅಗತ್ಯದ ಪಠ್ಯ ಪುಸ್ತಕಗಳನ್ನು ಪೂರೈಸುವ ಮನವಿಗೆ ಸಂಬಂಧಿಸಿದಂತೆ ಸಚಿವರು ಶಾಲೆಗೆ ಬೇಕಾದ ಅಗತ್ಯದ ಪಠ್ಯ ಪುಸ್ತಕಗಳನ್ನು ಏಳು ದಿನದೊಳಗಾಗಿ ಪೂರೈಸುವಂತೆ ತಿಳಿಸಿದರು.

ಡಂಬಳ ಶಾಲೆಯಲ್ಲಿನ ಶೌಚಾಲಯ ಸಮಸ್ಯೆ ಕುರಿತಂತೆ ಹಾಗೂ ಶಾಲಾ ಮಕ್ಕಳಿಗಾಗಿ ಸಾರಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಕೋರಿ ಸಲ್ಲಿಸಿದ ಮನವಿಗೆ ಸಚಿವರು ತಕ್ಷಣ ಮೂಲಭೂತ ಸಮಸ್ಯೆಗಳ ನಿವಾರಣೆಗೆ ಅಧಿಕಾರಿ ವರ್ಗ ಮುಂದಾಗಬೇಕು. ಸಾರಿಗೆ ಸಂಸ್ಥೆಯಿಂದ ಶಾಲಾ ಮಕ್ಕಳಿಗೆ ನಿಗದಿತ ಅವಧಿಗೆ ಬಸ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಿದರು. ಶರಣಪ್ಪ ಎಂಬುವವರು ರೈತರಿಗೆ ಬೆಳೆ ವಿಮೆಗೆ ಜಿಪಿಎಸ್ ಮಾಡುವ ತರಬೇತಿಯನ್ನು ನೀಡಬೇಕು ಎಂದು ಸಚಿವರಲ್ಲಿ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಎಚ್.ಕೆ.ಪಾಟೀಲ ಅವರು ಒಂದು ವಾರದಲ್ಲಿ ಜಿಪಿಎಸ್ ಮಾಡುವ ಕುರಿತು ರೈತರಿಗೆ ತರಬೇತಿ ನೀಡಲು ಸೂಚಿಸಿದರು.

ಇದನ್ನೂ ಓದಿ: ಭೀಕರ ಬರದಿಂದ ಕಂಗಾಲದ ರೈತರಿಗೆ ಮಹಾ ಮೋಸ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಕೋಟ್ಯಾಂತರ ರೂ. ವಂಚನೆ

ಗರ್ಭಿಣಿ ಮಹಿಳೆ ಪಡಿತರ ಚೀಟಿ ಹೊಂದದೇ ಇರುವದರಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲು ನಿರಾಕರಿಸುತ್ತಿರುವ ಕುರಿತ ಅಹವಾಲಿಗೆ ಸಿಡಿಮಿಡಿಗೊಂಡ ಸಚಿವರು ಗರ್ಭೀಣಿ ಮಹಿಳೆಯರು ಪಡಿತರ ಚೀಟಿ ಹೊಂದದೇ ಇದ್ದರೂ ಸಹ ಅವರಿಗೆ ಜಿಮ್ಸ ಸೇರಿದಂತೆ ಜಿಲ್ಲೆಯ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚನೇ ನೀಡಿದರು.

ಸಚಿವ ಎಚ್.ಕೆ.ಪಾಟೀಲ ಅವರು ಆಶ್ರಯಮನೆ, ಜಲಜೀವನ ಮಿಷನ, ಪಹಣಿ ತಿದ್ದುಪಡಿ, ವ್ಯಾಸಂಗ, ಉಚಿತ ಲ್ಯಾಪಟಾಪ್, ಆರೋಗ್ಯ ಸಂಬಂಧಿತ ಕಾಯಿಲೆಗಳಿಗೆ ಹೆಚ್ಚಿನ ಚಿಕಿತ್ಸೆಗೆ ನೆರವು ಕೋರಿ ಕುರಿತಂತೆ ಸಾರ್ವಜನಿಕರ ಹಲವಾರು ಸಮಸ್ಯೆಗಳನ್ನು ಶಾಂತಚಿತ್ತದಿಂದಲೇ ಆಲಿಸಿ ಪರಿಹಾರ ಸೂಚಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ