AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PWD ಇಲಾಖೆಯಲ್ಲಿ 500 ಕೋಟಿ ರೂ. ಹಗರಣ: ತನಿಖೆಗೆ ಆದೇಶಿಸಿದ ಸರ್ಕಾರ, ಸಿಸಿ ಪಾಟೀಲ್​ಗೆ​ ಸಂಕಷ್ಟ

ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿನ ಹಗರಣವನ್ನು ಈಗಿನ ಕಾಂಗ್ರೆಸ್ ಸರ್ಕಾರ ತನಿಖೆಗೆ ಆದೇಶಿಸಿದೆ. ಲೋಕೋಪಯೋಗಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ 500 ಕೋಟಿ ರೂಪಾಯಿ ಹಗಣವನ್ನು ತನಿಖೆ ಆದೇಶಿಸಿದ್ದು, ಇದರಿಂದ ಆ ಇಲಾಖೆಯ ಸಚಿವರಾವಗಿದ್ದ ಸಿಸಿ ಪಾಟೀಲ್​ಗೆ ಶಾಕ್ ಕೊಟ್ಟಿದೆ.

PWD ಇಲಾಖೆಯಲ್ಲಿ 500 ಕೋಟಿ ರೂ. ಹಗರಣ: ತನಿಖೆಗೆ ಆದೇಶಿಸಿದ ಸರ್ಕಾರ, ಸಿಸಿ ಪಾಟೀಲ್​ಗೆ​ ಸಂಕಷ್ಟ
ಸಿಸಿ ಪಾಟೀಲ್, ಮಾಜಿ PWD ಸಚಿವ
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Updated By: ರಮೇಶ್ ಬಿ. ಜವಳಗೇರಾ|

Updated on:Oct 09, 2023 | 12:59 PM

Share

ಗದಗ, (ಅಕ್ಟೋಬರ್ 09): ಈ ಹಿಂದಿನ ಬಿಜೆಪಿ (BJP) ಸರ್ಕಾರದ ಅವಧಿಯಲ್ಲಿ ಲೋಕೋಪಯೋಗಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ 500 ಕೋಟಿ ರೂಪಾಯಿ ಹಗರಣವನ್ನು (pwd department Scam ) ಇದೀಗ ಕಾಂಗ್ರೆಸ್​ ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಿದೆ. ಮಾಜಿ ಸಚಿವ ಬಿ ಆರ್ ಯಾವಗಲ್ ದೂರಿನ ಮೇಲೆ ರಾಜ್ಯ ಸರ್ಕಾರವು,  ಪಿಡಬ್ಲ್ಯೂ ಗುಣ ಭರವಸೆ ವಲಯ ಬೆಂಗಳೂರ ಮುಖ್ಯ ಇಂಜಿನಿಯರ್ ನೇತೃತ್ವದಲ್ಲಿ ತನಿಖೆಗೆ ಆದೇಶಿಸಿದೆ. ಇದರಿಂದ ಅಂದಿನ ಲೋಕೋಪಯೋಗಿ ಇಲಾಖೆ ಸಚಿವರಾಗಿದ್ದ ಸಿಸಿ ಪಾಟೀಲ್​ಗೆ ಸಂಕಷ್ಟ ಎದುರಾಗಿದೆ.

ಇನ್ನು ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಯಾವಗಲ್ , ಕಳಪೆ ಕಾಮಗಾರಿ, ಅರ್ಹತೆ ಇಲ್ಲದ ಗುತ್ತಿಗೆದಾರರಿಗೆ ಕೋಟ್ಯಾಂತರ ರೂಪಾಯಿ ಮೊತ್ತದ ಟೆಂಡರ್ ನೀಡಲಾಗಿದೆ ಎಂದು ಆರೋಪಿಸಲಾಗಿದೆ. ಅ್ಲಲದೇ ಗುತ್ತಿಗೆದಾರರು. ನಕಲಿ ವರ್ಕ್ ಡನ್ ಸರ್ಟಿಫಿಕೇಟ್ ನೀಡಿ ಟೆಂಡರ್ ಪಡೆದುಕೊಂಡಿದ್ದಾರೆ. ಕಡಿಮೆ ಮೊತ್ತಕ್ಕೆ ಟೆಂಡರ್ ಹಾಕಿದವರನ್ನು ಬಿಟ್ಟು ಹೆಚ್ಚಿನ ದರಕ್ಕೆ ಹಾಕಿದವರಿಗೆ ಟೆಂಡರ್ ನಿಡಲಾಗಿದೆ. ಅಂದಿನ ಸಚಿವ ಸಿ ಸಿ ಪಾಟೀಲ್ ತಮಗೆ ಬೇಕಾದವರಿಗೆ ಕೆಲಸ ಕೊಡಿಸಿದ್ದಾರೆ ಎಂದು ಗಂಭೀರ ಆರೋಪಗಳನ್ನು ಮಾಡಿದರು.

ಮಾಜಿ ಲೋಕೋಪಯೋಗಿ ಇಲಾಖೆ ಸಚಿವ ಸಿ ಸಿ ಪಾಟೀಲ್ ಈ 500 ಕೋಟಿ ರೂ. ಹಗರಣದ ರೂವಾರಿಯಾಗಿದ್ದಾರೆ. ಇದೇ ಅಕ್ಟೋಬರ್ 11, 12 ರಂದು ತನಿಖಾ ತಂಡ ನರಗುಂದ ಕ್ಷೇತ್ರಕ್ಕೆ ಆಗಮಿಸಲಿದೆ ಎಂದು ತಿಳಿಸಿದರು.

Published On - 12:48 pm, Mon, 9 October 23