ಕಿಡಿಗೇಡಿಗಳಿಂದ ಮಹಿಳೆಗೆ ಲೈಂಗಿಕ ಕಿರುಕುಳ‌ ಆರೋಪ; ಕಾಪಾಡಿ ಎಂದು ಕಣ್ಣೀರು

ಎಷ್ಟೇ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಂಡರೂ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ನಿಲ್ಲುತ್ತಿಲ್ಲ. ಅದರಂತೆ ಇಂದು(ಮೇ.14) ಗದಗ-ಬೆಟಗೇರಿ(Gadag-Betageri) ಪೊಲೀಸ್ ಠಾಣೆ ವ್ಯಾಪ್ತಿಯಲ್ಲೊಂದು ಅಮಾನವೀಯ ಘಟನೆ ನಡೆದಿದ್ದು, ಮಹಿಳೆ ಸೇರಿದಂತೆ ಆಕೆಯ ಅಪ್ರಾಪ್ತ ಇಬ್ಬರು ಹೆಣ್ಣು ಮಕ್ಕಳಿಗೆ ಕಿಡಿಗೇಡಿಗಳು ಲೈಂಗಿಕ ಕಿರುಕುಳ‌ ನೀಡಿದ ಆರೋಪ ಕೇಳಿಬಂದಿದೆ.

ಕಿಡಿಗೇಡಿಗಳಿಂದ ಮಹಿಳೆಗೆ ಲೈಂಗಿಕ ಕಿರುಕುಳ‌ ಆರೋಪ; ಕಾಪಾಡಿ ಎಂದು ಕಣ್ಣೀರು
ಗದಗದಲ್ಲಿ ಕಿಡಿಗೇಡಿಗಳಿಂದ ಮಹಿಳೆಗೆ ಲೈಂಗಿಕ ಕಿರುಕುಳ‌
Follow us
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Updated By: ಕಿರಣ್ ಹನುಮಂತ್​ ಮಾದಾರ್

Updated on:May 14, 2024 | 5:24 PM

ಗದಗ, ಮೇ.14: ಕಿಡಿಗೇಡಿಗಳ ಅಟ್ಟಹಾಸಕ್ಕೆ ಕುಟುಂಬವೊಂದು ನಲುಗಿದ ಘಟನೆ ಗದಗ-ಬೆಟಗೇರಿ(Gadag-Betageri) ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹೌದು, ಮಹಿಳೆ ಸೇರಿದಂತೆ ಆಕೆಯ ಅಪ್ರಾಪ್ತ ಇಬ್ಬರು ಹೆಣ್ಣು ಮಕ್ಕಳಿಗೂ ಕಿರುಕುಳ ನೀಡಿದ ಆರೋಪ ಕೇಳಿಬಂದಿದ್ದು, ‘ನನ್ನ ಕುಟುಂಬವನ್ನು ಕಾಪಾಡಿ ಎಂದು ಮಹಿಳೆ ಕಣ್ಣೀರು ಹಾಕುತ್ತಿದ್ದಾರೆ. ಜೊತೆಗೆ ಇದನ್ನು ಪ್ರಶ್ನಿಸಿದ್ದಕ್ಕೆ ತಾಯಿ, ಮಕ್ಕಳ ‌ಮೇಲೆ ಹಲ್ಲೆ ಮಾಡಿ ಕೊಲೆ ಬೆದರಿಕೆ ಕೂಡ ಹಾಕಿದ್ದಾರೆ ಎಂದು ಕುಟುಂಬ ಸದಸ್ಯರು ಆರೋಪಿಸಿದ್ದಾರೆ.

ಪೊಲೀಸರಿಗೆ ದೂರು ನೀಡಿದ್ರೂ ಕ್ಯಾರೇ ಎನ್ನದ ಪೊಲೀಸರು

ಇನ್ನು ಘಟನೆ ಕುರಿತು ಬೆಟಗೇರಿ ಪೊಲೀಸ್ ಠಾಣೆಗೆ ಲಿಯಾಕತ್, ಅಲ್ತಾಫ್ ಎಂಬುವವರ ವಿರುದ್ದ ಲೈಂಗಿಕ ಕಿರುಕುಳ ಆರೋಪದ ಮೇಲೆ ದೂರು ನೀಡಿದರೂ ಪೊಲೀಸರು ಮಾತ್ರ ಈ ಕುರಿತು ಕ್ಯಾರೇ ಎಂದಿಲ್ಲ. ಜೊತೆಗೆ ದೂರು ನೀಡಿದ್ರೆ ನಿನ್ನ ಮತ್ತು ಮಕ್ಕಳನ್ನು ಒಳಗೆ ಹಾಕುತ್ತೇವೆ  ಎಂದು ಪೊಲೀಸರು ಕೂಡ ಬೆದರಿಕೆ ಹಾಕಿದ್ದಾರೆ. ಹೀಗಾಗಿ ಪೊಲೀಸರ ವಿರುದ್ಧ ಮಹಿಳೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ನಿನ್ನೆ ರಾತ್ರಿ ಕೂಡ ತಾಯಿ ಸೈನಾಜ್, ಪುತ್ರ ಸದ್ಧಾಂ ಮೇಲೆ ಆರೋಪಿ ಲಿಯಾಕತ್, ಅಲ್ತಾಫ್ ಸೈಯದ್, ಸಮೀರ್, ರಿಯಾಜ್, ಜಾವೀದ್ ಎಂಬುವವರು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ.

ಇದನ್ನೂ ಓದಿ:ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಲೈಂಗಿಕ ಕಿರುಕುಳ‌ ಆರೋಪ; ವೈದ್ಯನ ಮೇಲೆ ದೂರು ದಾಖಲಿಸಿದ ವೈದ್ಯೆ

ಕೆಲಸ ಮಾಡ್ತಿದ್ದ ಕಚೇರಿಯಲ್ಲೇ ಹಣ ಕದ್ದು ಎಸ್ಕೇಪ್; ಆರೋಪಿ ಬಂಧನ

ಬೆಂಗಳೂರು: ಕೆಲಸ ಮಾಡ್ತಿದ್ದ ಕಚೇರಿಯಲ್ಲಿಯೇ ಹಣ ಕದ್ದು ಎಸ್ಕೇಪ್ ಅಗಿದ್ದ ಆರೋಪಿ ಮಹೇಶ್ (32) ಎಂಬಾತನನ್ನ ಪೊಲೀಸರು ಬಂಧಿಸಿದ್ದಾರೆ. ವಿಜಯ ನಗರ ಸರ್ವೀಸ್ ರಸ್ತೆಯಲ್ಲಿರುವ ಇನ್ಫ್ರಾಸ್ಟ್ರಕ್ಚರ್ ಕಂಪನಿಯಲ್ಲಿ ಆರೋಪಿ ಕೆಲಸ ಮಾಡಿಕೊಂಡಿದ್ದ. ಇತ ನಿವೃತ್ತಿ ಸಬ್ ಇನ್ಸ್ಪೆಕ್ಟರ್ ಮಗ ಕೂಡ ಹೌದು, ಕಚೇರಿಯ ಸಿಬ್ಬಂದಿಗಳಿಗೆ ಸಂಬಳ ಮಾಡಬೇಕಾಗಿದ್ದ 24 ಲಕ್ಷ  ರೂ. ಹಣವನ್ನು ಕದ್ದು ಎಸ್ಕೇಪ್ ಅಗಿದ್ದ.ಇದೀಗ ಆತನನ್ನು ಬಂಧಿಸಿ ಆರೋಪಿಯಿಂದ ಹಣವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:17 pm, Tue, 14 May 24

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ