Crime News: ಗದಗದಲ್ಲಿ ಅಪರಿಚಿತ ಯುವಕರಿಂದ ಮೂವರಿಗೆ ಚಾಕು ಇರಿತ

ರಸ್ತೆಯಲ್ಲಿ ಅಡ್ಡಾದಿಡ್ಡಿ ಓಡಾಡುತ್ತಿದ್ದವರಿಗೆ ಬುದ್ಧಿ ಹೇಳಿದ್ದಕ್ಕೆ ಗದಗ ನಗರದ ಜೋಡ ಮಾರುತಿ ದೇವಸ್ಥಾನದ ಬಳಿ ಅನ್ಯಕೋಮಿಗೆ ಸೇರಿದ ಅಪರಿಚಿತ ಯುವಕರಿಂದ ಮೂವರಿಗೆ ಚಾಕು ಇರಿತವಾಗಿದೆ.

Crime News: ಗದಗದಲ್ಲಿ ಅಪರಿಚಿತ ಯುವಕರಿಂದ ಮೂವರಿಗೆ ಚಾಕು ಇರಿತ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on:Dec 03, 2022 | 12:02 PM

ಗದಗ: ನಗರದಲ್ಲಿ ಅನ್ಯಕೋಮಿಗೆ ಸೇರಿದ ಅಪರಿಚಿತ ಯುವಕರಿಂದ ಮೂವರಿಗೆ ಚಾಕು ಇರಿತವಾಗಿದೆ. ರಸ್ತೆಯಲ್ಲಿ ಅಡ್ಡಾದಿಡ್ಡಿ ಓಡಾಡುತ್ತಿದ್ದವರಿಗೆ ಬುದ್ಧಿ ಹೇಳಿದ್ದಕ್ಕೆ ಗದಗ ನಗರದ ಜೋಡ ಮಾರುತಿ ದೇವಸ್ಥಾನದ ಬಳಿ ಕೃತ್ಯ ಎಸಗಲಾಗಿದೆ. ವಸಂತಬಾಕಳೆ, ಗೋಪಾಲಖೋಡೆ, ಮಾಧು ಸಾಬದಿಗೆ ಚಾಕು ಇರಿಯಲಾಗಿದ್ದು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಗದಗ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಡರಾತ್ರಿ ಘಟನೆ ನಡೆದಿದೆ. ಕೃತ್ಯವೆಸಗಿದ್ದ ಮೂವರು ಆರೋಪಿಗಳನ್ನ ಶಹರ ಪೊಲೀಸರು ಬಂಧಿಸಿದ್ದಾರೆ.

ಸೊಸೆಗೆ ಲೈಂಗಿಕ ಕಿರುಕುಳ ನೀಡಿದ್ದ ಮಾವನ ಹತ್ಯೆ, ನಾಲ್ವರು ಅರೆಸ್ಟ್

ಸೊಸೆಗೆ ಲೈಂಗಿಕ ಕಿರುಕುಳ ನೀಡಿದ್ದ ಮಾವನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಹಳ್ಳಿಮೈಸೂರು ಪೊಲೀಸರು ಬಂಧಿಸಿದ್ದಾರೆ. ಯೋಗೇಶ್, ಚಂದ್ರೇಗೌಡ, ಮೈಲಾರಿಗೌಡ, ತಾಯಮ್ಮ ಬಂಧಿತರು. ನ.13ರಂದು ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ದೊಡ್ಡಿಹಳ್ಳಿ ಗ್ರಾಮದಲ್ಲಿ ತಮ್ಮೇಗೌಡ(55) ಹತ್ಯೆಯಾಗಿತ್ತು. ಬಳಿಕ ಪೊಲೀಸರು ಕೊಲೆಯ ತನಿಖೆ ನಡೆಸಿದಾಗ ಸುಪಾರಿ ಕೊಲೆಯ ರಹಸ್ಯ ಬಯಲಾಯ್ತು.

ಇದನ್ನೂ ಓದಿ: ಕಾಂಗ್ರೆಸ್ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ವಿರುದ್ಧ ಇಳಕಲ್ ಪೊಲೀಸ್ ಠಾಣೆಯೊಂದರಲ್ಲಿ ಎಫ್ಐಆರ್ ದಾಖಲು

ಸೊಸೆ ನಾಗರತ್ನಗೆ ತಮ್ಮೇಗೌಡ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪ ಕೇಳಿ ಬಂದಿತ್ತು. ಮಗ ಅಂಗವಿಕಲ, ಬುದ್ಧಿಯೂ ಕಡಿಮೆ ಆತನಿಂದ ವಂಶೋದ್ಧಾರಕ ಆಗಲ್ಲ. ನನ್ನಿಂದಲೇ ವಂಶ ಬೆಳೆಯಲಿ ಎಂದು ಸೊಸೆಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ. ಹೀಗಾಗಿ ಈ ಬಗ್ಗೆ ಮಾವನ ನೀಚ ಬುದ್ಧಿಯನ್ನು ಪೋಷಕರ ಬಳಿ ನಾಗರತ್ನ ಹೇಳಿಕೊಂಡಿದ್ದರು. ಹಾಗೂ ತಮ್ಮೇಗೌಡನ ಕೊಲೆ ಮಾಡಲು ನಾಗರತ್ನ ಪೋಷಕರು ಸುಪಾರಿ ನೀಡಿದ್ದರು. ಯೋಗೇಶ್​ ಎಂಬಾತನಿಗೆ 50 ಸಾವಿರ ರೂಪಾಯಿಗೆ ಸುಪಾರಿ ನೀಡಿದ್ದರು. ಅದರಂತೆ ತಮ್ಮೇಗೌಡನಿಗೆ ಮದ್ಯಪಾನ ಮಾಡಿಸಿ ರಾಡ್​​ನಿಂದ ಹಲ್ಲೆ ಮಾಡಿ ಕೊಲೆ ಮಾಡಿ ಶವವನ್ನು ಕೆರೆಗೆ ಎಸೆದು ಆರೋಪಿಗಳು ಪರಾರಿಯಾಗಿದ್ದರು. ಸದ್ಯ ನಾಲ್ವರು ಆರೋಪಿಗಳನ್ನು ಹಳ್ಳಿಮೈಸೂರು ಪೊಲೀಸರು ಬಂಧಿಸಿದ್ದಾರೆ.

ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಜಗಳ ಕೊಲೆಯಲ್ಲಿ ಅಂತ್ಯ

ಧಾರವಾಡ ಜಿಲ್ಲೆ ನವಲಗುಂದ ತಾಲೂಕಿನ ಅಮರಗೋಳ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ನಡೆದಂತಹ ಜಗಳದಲ್ಲಿ ವ್ಯಕ್ತಿಯ ಕೊಲೆಯಾಗಿದೆ. ಸಂಗನಗೌಡ ಮುದಿಗೌಡರ(48) ಕೊಲೆಯಾದ ವ್ಯಕ್ತಿ. ಈರಪ್ಪ ಕಿತ್ತಲಿ ಎಂಬಾತ ಬೈಕ್ ಬೈಕ್ ತಗುಲಿದ್ದನ್ನು ಪ್ರಶ್ನಿಸಿದ್ದಕ್ಕೆ ಈರಪ್ಪ ಹಾಗೂ ಸಂಗನಗೌಡ ಇಬ್ಬರ ನಡುವೆ ಜಗಳ ಶುರುವಾಗಿ ಮಾತು ವಿಕೋಪಕ್ಕೆ ಹೋಗಿ ಕೊಲೆ ನಡೆದಿದೆ. ನವಲಗುಂದ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಕೊಲೆ‌ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:02 pm, Sat, 3 December 22

ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ