ಹಿಂದೂ ಸಮಾಜದಲ್ಲಿ ಹಿಂದುಳಿದವರಿಗೆ, ದಲಿತರಿಗೆ ಬೆಂಬಲ ಸಿಗುತ್ತಿಲ್ಲ: ಈಶ್ವರಪ್ಪ ಬೇಸರ

ಗದಗನಲ್ಲಿ ಮಾತನಾಡಿದ ಮಾಜಿ ಉಪಮುಖ್ಯಮಂತ್ರಿ ಕೆಎಸ್ ಈಶ್ವರಪ್ಪ, ‘ಬಿಜೆಪಿಯಲ್ಲಿ ಹಿಂದುತ್ವದ ತತ್ವ ಸಿದ್ದಾಂತಗಳು ಈಗ ಇಲ್ಲ. ಈವಾಗ ಹಿಂದುತ್ವ ಬಿಟ್ಟ ಬಿಜೆಪಿಯಲ್ಲಿ ಸ್ವಜನ ಪಕ್ಷಪಾತ ನಡೆಯುತ್ತಿದೆ. ಇದಕ್ಕೆ ಸರಿಯಾಗಿ ಬ್ರೇಕ್ ಹಾಕಬೇಕು, ಹಿಂದುತ್ವಕ್ಕೆ ಸರಿಯಾದ ಬೆಲೆ ಸಿಗಬೇಕು. ಬಿಜೆಪಿ ಕುಟುಂಬ ರಾಜಕಾರಣದಿಂದ ಮುಕ್ತವಾಗಬೇಕು ಎಂದರು.

ಹಿಂದೂ ಸಮಾಜದಲ್ಲಿ ಹಿಂದುಳಿದವರಿಗೆ, ದಲಿತರಿಗೆ ಬೆಂಬಲ ಸಿಗುತ್ತಿಲ್ಲ: ಈಶ್ವರಪ್ಪ ಬೇಸರ
ಕೆಎಸ್​​ ಈಶ್ವರಪ್ಪ
Follow us
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Updated By: ಕಿರಣ್ ಹನುಮಂತ್​ ಮಾದಾರ್

Updated on:Oct 08, 2024 | 3:55 PM

ಗದಗ, ಅ.08: ಹಿಂದುಳಿದವರಿಗೆ, ದಲಿತರಿಗೆ ಹಿಂದೂ ಸಮಾಜದಲ್ಲಿ ಯಾವ ಬೆಂಬಲವೂ ಸಿಗುತ್ತಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಕೆಎಸ್ ಈಶ್ವರಪ್ಪ(KS Eshwarappa) ಬೇಸರ ವ್ಯಕ್ತಪಡಿಸಿದರು. ಇಂದು(ಮಂಗಳವಾರ) ಗದಗನಲ್ಲಿ ಮಾತನಾಡಿದ ಅವರು, ‘ರಾಯಣ್ಣ, ಚೆನ್ನಮ್ಮ ಬ್ರಿಗೇಡ್​ಗೆ ಯಾವ ಹೆಸರು ಇಡಬೇಕು ಎಂದು ಚರ್ಚೆಯಾಗಿದೆ. ಇದೇ ತಿಂಗಳು 20 ನೇ ತಾರೀಖು ಬೃಹತ್​ ಸಮಾವೇಶ ನಡೆಸಲು ಪ್ಲಾನ್ ಮಾಡಲಾಗಿದೆ ಎಂದರು.

ಸಂಘಟನೆ ಮಾಡಲು ಸಾಕಷ್ಟು ಪೋನ್ ಕರೆಗಳು ಬರುತ್ತಿದೆ. ಹೀಗಾಗಿ ಸಾಧು ಸಂತರ ಮಾರ್ಗದರ್ಶನದಲ್ಲಿ ಯಾವ ಹೆಸರು ಇಡಬೇಕು. ಯಾವ ರೂಪದಲ್ಲಿ ಸಂಘಟನೆ ತೆಗೆದುಕೊಂಡು ಹೋಗಬೇಕು ಎನ್ನುವುದು ಗೊತ್ತಾಗುತ್ತದೆ. ಆಗಿನಿಂದ ಮುಂದಿನ ಚಟುವಟಿಕೆ ಆರಂಭ ಮಾಡುತ್ತೇವೆ. ಬಸವನಗೌಡ ಪಾಟೀಲ್ ಯತ್ನಾಳ್​ ಕೂಡ ಬರುತ್ತಾರೆ. ಹಾಗಂತ ಇದು ಈಶ್ವರಪ್ಪ ಮತ್ತು ಬಸವನಗೌಡ ಪಾಟೀಲ್ ಯತ್ನಾಳ್ ನೇತೃತ್ವ ಅಲ್ಲ. ಇದು ಸಾಧು ಸಂತರ ನೇತೃತ್ವದಲ್ಲಿ ನಡೆಯುತ್ತದೆ. ಇದಕ್ಕೆ ಶ್ರೀ ಜಯ ಮೃತ್ಯುಂಜಯ ಸ್ವಾಮೀಜಿ ಕೂಡ ಸಾಥ್ ನೀಡಲಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ:ಹೊಸ ಸಂಘಟನೆ ಕಟ್ಟಲು ನಿರ್ಧಾರ, ಬಾಗಲಕೋಟೆಯಲ್ಲಿ ಹೆಸರು ಘೋಷಣೆ: ಈಶ್ವರಪ್ಪ

ಬಿಎಸ್​ವೈ ಕುಟುಂಬ ವಿರುದ್ಧ ವಾಗ್ದಾಳಿ

ಇದೇ ವೇಳೆ ಬಿಜೆಪಿಯಲ್ಲಿ ಹಿಂದುತ್ವದ ತತ್ವ ಸಿದ್ದಾಂತಗಳು ಈಗ ಇಲ್ಲ. ಈವಾಗ ಹಿಂದುತ್ವ ಬಿಟ್ಟ ಬಿಜೆಪಿಯಲ್ಲಿ ಸ್ವಜನ ಪಕ್ಷಪಾತ ನಡೆಯುತ್ತಿದೆ. ಇದಕ್ಕೆ ಸರಿಯಾಗಿ ಬ್ರೇಕ್ ಹಾಕಬೇಕು, ಹಿಂದುತ್ವಕ್ಕೆ ಸರಿಯಾದ ಬೆಲೆ ಸಿಗಬೇಕು. ಬಿಜೆಪಿ ಕುಟುಂಬ ರಾಜಕಾರಣದಿಂದ ಮುಕ್ತವಾಗಬೇಕು. ಬಿವೈ ವಿಜಯೇಂದ್ರ ಕಾಂಗ್ರೆಸ್ ಪಕ್ಷದ ಭಿಕ್ಷೆಯಿಂದ ಶಾಸಕರಾಗಿದ್ದಿರಿ ಎಂದು ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಅದಕ್ಕೆ ಈವರೆಗೆ ಬಿಜೆಪಿ ರಾಜ್ಯಾಧ್ಯಕ್ಷ ಉತ್ತರ ನೀಡಿಲ್ಲ. ಕಾಂಗ್ರೆಸ್ ಜೊತೆ ಹೊಂದಾಣಿಕೆ ಮಾಡಿಕೊಂಡು 10 ಸಾವಿರ ವೋಟ್​ನಿಂದ ಗೆದ್ದರು. ಏನು ಹೊಂದಾಣಿಕೆಯಾಗಿತ್ತು ಎನ್ನುವುದನ್ನು ಡಿಕೆ ಶಿವಕುಮಾರ್ ಬಹಿರಂಗ ಮಾಡಲಿ. ಹೊಂದಾಣಿಕೆ ರಾಜಕಾರಣ ಮಾಡಿಕೊಂಡು ಬರ್ತಾಯಿದ್ದಾರೆ. ಈ ಹೊಂದಾಣಿಕೆ ರಾಜಕಾರಣ ಮುಕ್ತಾಯವಾಗಬೇಕು. ಈವೆಲ್ಲ ಬಿಜೆಪಿ ಪಕ್ಷದಲ್ಲಿ ಚರ್ಚೆಯಾಗಬೇಕು, ಇವಾಗ ಆಗುತ್ತಿವೆ ಎಂದು ಯಡಿಯೂರಪ್ಪ ಕುಟುಂಬ ವಿರುದ್ಧ ವಾಗ್ದಾಳಿ ನಡೆಸಿದರು.

ಅಮಿತ್ ಷಾ, ನಡ್ಡಾ ಮೋದಿಯವರು ನನ್ನನ್ನು ರಾಜ್ಯಾಧ್ಯಕ್ಷ ಮಾಡಿದ್ದಾರೆ. ಯಾರು ನಮ್ಮನ್ನು ಹೇಳುವವರು, ಕೇಳೋರು ಇಲ್ಲ ಎನ್ನುವ ದಾಟಿ ವಿರುದ್ಧ ಆರ್​ಎಸ್​ಎಸ್ ಸಭೆಯಲ್ಲಿ ಅವರನ್ನು ಟೀಕೆ ಮಾಡಿದ್ದಾರೆ. ರಾಜ್ಯದಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಪಕ್ಷ ಬೆಳೆದು ಬಂದಿದೆ. ಇವಾಗ ಒಂದು ಕುಟುಂಬದ ಕೈಗೆ ಸಿಕ್ಕಿರುವುದರಿಂದ ಶಾಸಕರ ಸಂಖ್ಯೆ ಕಡಿಮೆಯಾಗಿದೆ. ಇಡೀ ರಾಜ್ಯದ ಪ್ರಮುಖ ನಾಯಕರು ನೊಂದಿದ್ದಾರೆ. ಕುಟುಂಬ ರಾಜಕಾರಣ ಸರಿಯಿಲ್ಲ, ಹೊಂದಾಣಿಕೆ ರಾಜಕಾರಣಕ್ಕೆ ಪರಿಹಾರ ಕಂಡು ಹಿಡಿಯಬೇಕು, ಇದು ನಮ್ಮ ಪ್ರಯತ್ನವಾಗಿದೆ.

ಇನ್ನು ಬಿಜೆಪಿ ಪಕ್ಷದಲ್ಲಿ ಅನ್ಯಾಯವಾಗಿದೆ ಎನ್ನುವ ಪ್ರಶ್ನೆಗೆ ಉತ್ತರಿಸಿದ ಈಶ್ವರಪ್ಪ, ‘ಅನೇಕರಿಗೆ ಅನ್ಯಾಯವಾಗಿದೆ ಎಂದು ಸುಮ್ಮನೆ ಕುಳಿತುಕೊಂಡಿದ್ದಾರೆ. ಅನ್ಯಾಯ ಆಗಿದಕ್ಕೆ ನಾನು ಚುನಾವಣೆಗೆ ಸ್ಪರ್ಧೆ ಮಾಡಿದ್ದೇ. ಅದು ಕೇಂದ್ರ ನಾಯಕರಿಗೆ ಗೊತ್ತಾಗಲಿ ಎಂದು. ಸಿಟಿ ರವಿ, ಪ್ರತಾಪ್ ಸಿಂಹ, ಅನಂದ ಕುಮಾರ್ ಹೆಗಡೆ ಇವರಿಗೆ ಅನ್ಯಾಯವಾಗಿದೆ. ಇವರೆಲ್ಲರೂ ಹಿಂದುತ್ವದ ಬಗ್ಗೆ ಮಾತನಾಡಿದ್ದೇ ತಪ್ಪಾ? ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:53 pm, Tue, 8 October 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ