ಗದಗದಲ್ಲಿ ಹೆಸರಿಗೊಂದು ಸರ್ಕಾರಿ ಆಸ್ಪತ್ರೆ; ವೈದ್ಯರೇ ಇಲ್ಲ

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ಇರುವ ಸರಕಾರಿ ಆಸ್ಪತ್ರೆ ಕೇವಲ ಹೆಸರಿಗೆ ಮಾತ್ರ. ಈ ಆಸ್ಪತ್ರೆಯಲ್ಲಿ ಎಲ್ಲ ಸೌಕರ್ಯವಿದೆ. ಆದರೆ ಇಲ್ಲಿ ಚಿಕಿತ್ಸೆ ನೀಡಲು ವೈದ್ಯರುಗಳೇ ಇಲ್ಲ.

ಗದಗದಲ್ಲಿ ಹೆಸರಿಗೊಂದು ಸರ್ಕಾರಿ ಆಸ್ಪತ್ರೆ; ವೈದ್ಯರೇ ಇಲ್ಲ
ವೈದ್ಯರಿಲ್ಲದ ಆಸ್ಪತ್ರೆ
Follow us
TV9 Web
| Updated By: sandhya thejappa

Updated on:Sep 23, 2021 | 10:12 AM

ಗದಗ: ಜಿಲ್ಲೆಯ ಗಡಿಭಾಗದಲ್ಲಿ ಏಕೈಕ ಸರಕಾರಿ ಆಸ್ಪತ್ರೆ ಇದೆ. ಎರಡು ವರ್ಷಗಳ ಹಿಂದೆಯೇ ಎಲ್ಲಾ ಸೌಕರ್ಯಗಳು ಇರುವಂತೆ ಸುಸಜ್ಜಿತವಾಗಿ ಹೈಟೆಕ್ ಆಸ್ಪತ್ರೆ ನಿರ್ಮಾಣ ಮಾಡಲಾಗಿದೆ. ಸುತ್ತಮುತ್ತಲಿನ ನೂರಾರು ಗ್ರಾಮದ ಜನರಿಗೆ, ಪಕ್ಕದ ಜಿಲ್ಲೆಯ ರೋಗಿಗಳಿಗೆ ಆ ಆಸ್ಪತ್ರೆಯೇ ಸಂಜೀವಿನಿ ಆಗಿದೆ. ಆದರೆ ಈ ಆಸ್ಪತ್ರೆ ದೇವರಿಲ್ಲದ ಗರ್ಭಗುಡಿಯಂತಾಗಿದೆ. ಅಂದರೆ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಎದುರಾಗಿದೆ.

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ಇರುವ ಸರಕಾರಿ ಆಸ್ಪತ್ರೆ ಕೇವಲ ಹೆಸರಿಗೆ ಮಾತ್ರ. ಈ ಆಸ್ಪತ್ರೆಯಲ್ಲಿ ಎಲ್ಲ ಸೌಕರ್ಯವಿದೆ. ಆದರೆ ಇಲ್ಲಿ ಚಿಕಿತ್ಸೆ ನೀಡಲು ವೈದ್ಯರುಗಳೇ ಇಲ್ಲ. ಜ್ವರ, ನೆಗಡಿಯಂತ ಬೇರೆ ಕಾಯಿಲೆ ಬಂದರೆ ದಂತ ವೈದ್ಯರೇ ಚಿಕಿತ್ಸೆ ಕೊಡುತ್ತಾರೆ. ಇಲ್ಲಿ ಕೇವಲ ಮೂವರು ವೈದ್ಯರಿದ್ದು, ಸಾಮಾನ್ಯ ಕಾಯಿಲೆಗಳಿಗೆ ಪ್ರಾಥಮಿಕ ಚಿಕಿತ್ಸೆ ನೀಡುತ್ತಾರೆ.

ಶಸ್ತ್ರಚಿಕಿತ್ಸೆ ಕೊಠಡಿ ಕೂಡಾ ಹೆಸರಿಗೆ ಮಾತ್ರ. ಶಸ್ತ್ರಚಿಕಿತ್ಸೆಯ ಕೊಠಡಿಯಲ್ಲಿ ಹೈಟೆಕ್ ಸಂಪನ್ಮೂಲಗಳಿದ್ದರೂ ಶಸ್ತ್ರಚಿಕಿತ್ಸಕರು ಇಲ್ಲ. ಮಕ್ಕಳ ತಜ್ಞರು ಮತ್ತು ಸ್ತ್ರೀ ರೋಗ ತಜ್ಞರು ನೇಮಕವಾಗಿದ್ದರೂ ಡ್ಯೂಟಿಗೆ ಬರುವುದಕ್ಕೆ ಹಿಂದೇಟು ಹಾಕುತ್ತಿದ್ದಾರಂತೆ. ಗಜೇಂದ್ರಗಡ ಪಟ್ಟಣ ಗದಗ ಜಿಲ್ಲೆಯ ಗಡಿ ಭಾಗದ ತಾಲೂಕು. ಇದು ಬಾಗಲಕೋಟೆ, ಕೊಪ್ಪಳ ಜಿಲ್ಲೆಯ ಗಡಿ ಹಳ್ಳಿಗೆ ಹೊಂದಿಕೊಂಡಿದೆ. ಕೊಪ್ಪಳದ ಕುಷ್ಟಗಿ, ಯಲಬುರ್ಗಾ, ಕುಕನೂರು, ಬಾಗಲಕೋಟೆ ಜಿಲ್ಲೆಯ ಬದಾಮಿ, ಹುನಗುಂದ ಮತ್ತು ಇಲಕಲ್ ತಾಲೂಕಿನ ಹಳ್ಳಿಗಳ ಜನರಿಗೆ ಇದೇ ಆಸ್ಪತ್ರೆ ಸಂಜೀವಿನಿ ಇದ್ದಂತೆ.

ಸ್ತ್ರೀ ರೋಗ ತಜ್ಞರು, ಮಕ್ಕಳ ತಜ್ಞರು, ಶಸ್ತ್ರಚಿಕಿತ್ಸಿಕರ ಕೊರತೆ ಇದೆ. ಇದರಿಂದ ತುರ್ತಾಗಿ ಗರ್ಭಿಣಿಯರಿಗೆ ಚಿಕಿತ್ಸೆ ಬೇಕಾದಲ್ಲಿ ನೂರು ಕಿ.ಮೀ ದೂರದಲ್ಲಿರುವ ಜಿಮ್ಸ್ ಆಸ್ಪತ್ರೆಗೆ ರವಾನಿಸುವ ಪರಿಸ್ಥಿತಿ ಇದೆ. ಇದರಿಂದ ಸ್ವಲ್ಪ ಯಾಮಾರಿದರೂ ರೋಗಿಗೆ ಅಪಾಯ ಕಟ್ಟಿಟ್ಟ ಬುತ್ತಿ ಅಂತ ಸ್ಥಳೀಯ ಎಚ್.ಎಸ್.ಸೋಂಪುರ ಕಿಡಿಕಾರಿದ್ದಾರೆ.

ಇಲ್ಲಿ ವೈದ್ಯರು ಮತ್ತು ನರ್ಸ್​ಗಳ ಕೊರತೆ ಇರುವುದು ನಿಜ. ಇದರಿಂದ ರೋಗಿಗಳು ಚಿಕಿತ್ಸೆಗೆ ಸ್ವಲ್ಪ ಸಮಸ್ಯೆ ಇದೆ. ಇರುವ ಸಿಬ್ಬಂದಿಯಲ್ಲಿಯೇ ಚಿಕಿತ್ಸೆ ನೀಡಿ ಸಮಯ ಪ್ರಜ್ಞೆ ಮೆರೆಯುತ್ತಿದ್ದೇವೆ ಅಂತ ಇಲ್ಲಿನ ವೈದ್ಯಾಧಿಕಾರಿ ಡಾ.ರಮೇಶ್ ಹೇಳಿದ್ದಾರೆ.

ಇದನ್ನೂ ಓದಿ

Dookudu: ‘ದೂಕುಡು’ ಚಿತ್ರಕ್ಕೆ 10 ವರ್ಷದ ಸಂಭ್ರಮ; ಫ್ಯಾನ್ಸ್​ಗೆ ವಿಶೇಷ ಗಿಫ್ಟ್ ನೀಡಿದ ಚಿತ್ರತಂಡ

ಕಿಯಾರಾ ಅಡ್ವಾಣಿ ಫ್ಯಾಷನ್​ ಅಭಿರುಚಿಗೆ ಸಾಟಿ ಯಾರು? ಶೇರ್​ಷಾ ಸುಂದರಿ ಈಗ ಸಖತ್​ ಮಿಂಚಿಂಗ್​

(Lack of doctors in gadag government hospital)

Published On - 9:55 am, Thu, 23 September 21

ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು