AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಕ್ಕುಂಡಿ ಸಿಕ್ಕ ನಿಧಿಗೆ ಇದೆ 300 ವರ್ಷಗಳ ಇತಿಹಾಸ, ಗ್ರಾಮಸ್ಥರಲ್ಲಿ ಶುರುವಾಯ್ತು ಹೊಸ ಆತಂಕ

ನಿಧಿ ಸಿಕ್ಕಿರುವ ಗದಗ ಜಿಲ್ಲೆಯ ಲಕ್ಕುಂಡಿ ಐತಿಹಾಸಿಕ ಹಿನ್ನೆಲೆ ಹೊಂದಿರುವ ಗ್ರಾಮ. ಮೂವರು ಅರಸರು ಆಳಿದ್ದ ಊರಿದು ಅಂತ ಹೇಳಲಾಗುತ್ತಿದೆ. ಇಂಥಾ ಊರಲ್ಲಿ ನಿಧಿ ಸಿಕ್ಕಿದ್ದು, ಈ ಹಿಂದಿನ ಕೆಲ ಇತಿಹಾಸ ಕುರುಹುಗಳಿಗೆ ಪುಷ್ಠಿ ಕೊಟ್ಟಿದೆ. ಇನ್ನು ಮನೆ ಪಾಯಾ ಅಗೆಯುವ ಸಿಕ್ಕಿರುವ ಚಿನ್ನ ಎಷ್ಟು ವರ್ಷ ಹಿಂದಿನದ್ದು? ಯಾರು ಕಾಲದ ಚಿನ್ನ ಎನ್ನುವುದು ಬಹಿರಂಗವಾಗಿದೆ. ಇದರ ನಡುವೆ ಇದೀಗ ಲಕ್ಕುಂಡಿ ಗ್ರಾಮಸ್ಥರಲ್ಲಿ ಹೊಸ ಆತಂಕ ಶುರುವಾಗಿದೆ.

ಲಕ್ಕುಂಡಿ ಸಿಕ್ಕ ನಿಧಿಗೆ ಇದೆ 300 ವರ್ಷಗಳ ಇತಿಹಾಸ, ಗ್ರಾಮಸ್ಥರಲ್ಲಿ ಶುರುವಾಯ್ತು ಹೊಸ ಆತಂಕ
Lakkundi Gold Treasure
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on: Jan 14, 2026 | 9:07 PM

Share

ಗದಗ, (ಜನವರಿ 14): ಜಿಲ್ಲೆಯ ಲಕ್ಕುಂಡಿಯಲ್ಲಿ ಸಿಕ್ಕ ನಿಧಿ (Lakkundi Gold Treasure) ಈಗ ಭಾರಿ ಚರ್ಚೆ ಹುಟ್ಟುಹಾಕಿದ್ದು, ಈ ಚಿನ್ನದ ಹಿನ್ನೆಲೆಯ ರಹಸ್ಯ ಬಯಲಾಗಿದೆ. ಹೌದು…ಜಿಲ್ಲಾಡಳಿತ ವಶಕ್ಕೆ ಪಡೆದ ಚಿನ್ನವನ್ನು ಪರಿಶೀಲನೆ ನಡೆಸಿದಾಗ ಚಿನ್ನ ಪುರಾತನ ಕಾಲದ್ದು, ಕಲ್ಯಾಣ ಚಾಳುಕ್ಯರು, ಹಾಗೂ ವಿಜಯನಗರದ ಸಾಮ್ರಾಜ್ಯದ ಆಡಳಿತದ ವೇಳೆಯ ಚಿನ್ನ ಎನ್ನುವುದು ಬಹಿರಂಗವಾಗಿದೆ. ಇನ್ನು ಈ ಬಗ್ಗೆ ಟಿವಿ9ಗೆ ಗದಗ (Gadag) ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಮಾಹಿತಿ ನೀಡಿದ್ದು, ಸಿಕ್ಕಿರುವ ನಿಧಿ ವಿಜಯನಗರ ಸಾಮ್ರಾಜ್ಯ ಅಥವಾ ಚಾಲುಕ್ಯರ ಕಾಲದ್ದು. ಬ್ರಿಟಿಷರ ಕಾಲಕ್ಕಿಂತಲೂ ಹಳೆಯದಾದ ನಿಧಿಯಾಗಿದ್ದು, ಮೇಲ್ನೋಟಕ್ಕೆ ಇದು ವಿಜಯನಗರ ಕಾಲದ್ದು ಅನ್ನಿಸ್ತಿದೆ. ಆದ್ರೆ ನಿಖರ ವರದಿ ಬರಲು ಇನ್ನೂ 3 ದಿನಗಳು ಬೇಕಾಗುತ್ತೆ ಎಂದು ಸ್ಪಷ್ಟಪಡಿಸಿದ್ದಾರೆ.

ಗದಗ ತಾಲೂಕಿನ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಜನವರಿ 10 ರಂದು ಚಿನ್ನದ‌ ನಿಧಿ ಪತ್ತೆಯಾಗಿತ್ತು. ಕಸ್ತೂರಿ ರಿತ್ತಿ ಅವರ ಮನೆಯ ಪಾಯ ಮುಚ್ಚುವ ವೇಳೆ ಚಿನ್ನದ ನಿಧಿ ಪತ್ತೆಯಾಗಿದ್ದು, ದೊಡ್ಡ ಸಂಚಲನಕ್ಕೆ ಕಾರಣವಾಗಿತ್ತು. ಕುಟುಂಬಸ್ಥರು ಪ್ರಾಮಾಣಿಕವಾಗಿ ಚಿನ್ನವನ್ನು ಜಿಲ್ಲಾಡಳಿತಕ್ಕೆ ಹಸ್ತಾಂತರ ಮಾಡಿದ್ದರು. ಈ ನಾಲ್ಕು ಜನ ರಾಜ್ಯ ಹಾಗೂ ಕೇಂದ್ರದ ಪುರಾತತ್ತ್ವ ‌ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, ಮೇಲ್ನೋಟಕ್ಕೆ ಈ ಚಿನ್ನ 300ಕ್ಕೂ ವರ್ಷಗಳ ಹಿಂದಿನದ್ದು ಎನ್ನಲಾಗಿದೆ. ಕಲ್ಯಾಣ ಚಾಲುಕ್ಯರು, ವಿಜಯನಗರ ಅರಸರ ಆಳ್ವಿಕೆ ಸಮಯದಲ್ಲಿ ಚಿನ್ನ ಇರಬಹುದು ಎಂದು ಅಂದಾಜಿಸಲಾಗಿದೆ. ಇನ್ನೂ ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರ ಆಯುಕ್ತರಾದ ಶರಣು ಗೋಗೇರಿ ಮಾತನಾಡಿ, ‌ಖಜಾನೆಯಲ್ಲಿ ಇಟ್ಟಿದ್ಷ ಚಿನ್ನವನ್ನು ವಿಡಿಯೋ ಚಿತ್ರೀಕರಣ ಮಾಡೋ ಮೂಲಕ ಅದರ ಮೂಲವನ್ನು ಪತ್ತೆ ಮಾಡುವ ಕೆಲಸ ಮಾಡಲಾಗಿದೆ ಎಂದಿದ್ದಾರೆ.

ಇದನ್ನೂ ಓದಿ: ಲಕ್ಕುಂಡಿಯಲ್ಲಿ ನಿಧಿ ಸಿಕ್ಕ ಕುಟುಂಬಕ್ಕೆ ಸರ್ಪದ ಭಯದ ನಡುವೆಯೂ ಶುಕ್ರದೆಸೆ

ಇನ್ನೂ ಲಕ್ಕುಂಡಿ ಗ್ರಾಮದಲ್ಲಿ ಸಿಕ್ಕ ಚಿನ್ನ ಹಳೆ ಕಾಲದ್ದು ಎನ್ನುವ ಸತ್ಯ ಬಹಿರಂಗವಾಗಿದೆ.‌ ಈ ಚಿನ್ನವನ್ನು ನೋಡಿದ್ರೆ ಒಬ್ಬ ಸದೃಢ ಮನುಷ್ಯ ಹಾಕಿಕೊಳ್ಳುವ ಆವರಣಗಳನ್ನು ಎನ್ನುವುದು ಈ ಗಾತ್ರವನ್ನು ನೋಡಿದ್ರೆ ತಿಳಿಯುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 ಲಕ್ಕುಂಡಿ ಗ್ರಾಮಸ್ಥರಲ್ಲಿ ಹೊಸ ಆತಂಕ

ಲಕ್ಕುಂಡಿ ಗ್ರಾಮದಲ್ಲಿ ಚಿನ್ನದ ‌ನಿಧಿಪತ್ತೆಯಾದ ಬೆನ್ನಲ್ಲೇ ನಿಧಿಗಳ್ಳರ ಹಾವಳಿ ಹೆಚ್ಚಾಗುವ ಆತಂಕ ಎದುರಾಗಿದೆ. ಈ ಹಿಂದೆ ಕೂಡಾ ಲಕ್ಕುಂಡಿ ಗ್ರಾಮದಲ್ಲಿ ಸಾಕಷ್ಟು ನಿಧಿ ಶೋಧ ಮಾಡಿವ ದುಷ್ಕೃತ್ಯಗಳ ನಡೆದಿವೆ. ಗ್ರಾಮದಲ್ಲಿ 101 ದೇವಸ್ಥಾನ ಹಾಗೂ 101 ಬಾವಿಗಳಿದ್ದು, ‌ಕಳೆದ‌ ಎರಡು ವರ್ಷಗಳ ಹಿಂದೆ ಸೋಮೇಶ್ವರ ದೇವಸ್ಥಾನದಲ್ಲಿ ನಿಧಿಗಳ್ಳರು, ಬಸಣ್ಣ ಮೂರ್ತಿಯನ್ನು ತೆಗೆದು, ಆರೇಳು ಆಡಿಯಷ್ಟು ತಗ್ಗು ಅಗೆದು ನಿಧಿ ಶೋಧ ಮಾಡಿದ್ದರು. ಈಗ ಮನೆಯ ಪಾಯ ಹಾಕುವ ವೇಳೆಯಲ್ಲಿ ನಿಧಿ ಸಿಕ್ಕಿದ್ದರಿಂದ ಮತ್ತೆ ನಿಧಿಗಳ್ಳರ ಹಾವಳಿ ಹೆಚ್ಚಾಗಲಿದ್ದು, ಪುರಾತನ ದೇವಸ್ಥಾನಗಳಿಗೆ ಸಿಸಿಟಿವಿ ಹಾಗೂ ಭದ್ರತೆ ಒದಗಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಒಟ್ಟಿನಲ್ಲಿ ನಿಧಿಯ ನಿಖರ ಕಾಲಮಾನ ತಿಳಿಯಲು ಜಿಲ್ಲಾಡಳಿತ ಮುಂದಾಗಿದೆ. ಆದ್ರೆ ಊರಲ್ಲಿ ನಿಧಿ ಸಿಕ್ಕಿದ್ದೇ ಗ್ರಾಮಸ್ಥರು ನಿದ್ದೆಗೆಡುವಂತೆ ಮಾಡಿದ್ದು, ನಿಧಿಗಳ್ಳರಿಂದಾಗಿ ಆತಂಕದಲ್ಲೇ ಬದುಕುವಂತಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sanjeev Pandre
Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More
ಬಳ್ಳಾರಿ: ಪಾಲಿಕೆ ಸದಸ್ಯೆ ಪತಿಯಿಂದ ಬಡವರಿಗೆ ಮಹಾವಂಚನೆ!
ಬಳ್ಳಾರಿ: ಪಾಲಿಕೆ ಸದಸ್ಯೆ ಪತಿಯಿಂದ ಬಡವರಿಗೆ ಮಹಾವಂಚನೆ!
ಕಾನ್​ ಸಿನಿಮೋತ್ಸವದಲ್ಲಿ ಫ್ಲೈಯಿಂಗ್ ಕಿಸ್ ಕೊಟ್ಟ ಐಶ್ವರ್ಯಾ ರೈ
ಕಾನ್​ ಸಿನಿಮೋತ್ಸವದಲ್ಲಿ ಫ್ಲೈಯಿಂಗ್ ಕಿಸ್ ಕೊಟ್ಟ ಐಶ್ವರ್ಯಾ ರೈ
ಗುರು ಸಂಚಾರ ಸಿಂಹ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಗುರು ಸಂಚಾರ ಸಿಂಹ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ, 80ಕ್ಕೂ ಅಧಿಕ ಮಂದಿ ಸಾವು
ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ, 80ಕ್ಕೂ ಅಧಿಕ ಮಂದಿ ಸಾವು
ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ಪಲ್ಟಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ಪಲ್ಟಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸೊಸೆ ಗರ್ಭಿಣಿ, ಮಗ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದ ಮೃತನ ತಂದೆ
ಸೊಸೆ ಗರ್ಭಿಣಿ, ಮಗ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದ ಮೃತನ ತಂದೆ
ಯುವಕರಿಗೆ ಸ್ವಿಮ್ಮಿಂಗ್ ಪೂಲ್ ಆಗಿದ್ದ ಹೊಂಡಕ್ಕೆ ಮೊಸಳೆ ಎಂಟ್ರಿ
ಯುವಕರಿಗೆ ಸ್ವಿಮ್ಮಿಂಗ್ ಪೂಲ್ ಆಗಿದ್ದ ಹೊಂಡಕ್ಕೆ ಮೊಸಳೆ ಎಂಟ್ರಿ
ಟೈರ್ ಬ್ಲಾಸ್ಟ್ ಆಗಿ ಟಿಟಿ ವಾಹನ ಪಲ್ಟಿ, ಮಗು ಸೇರಿ 12 ಜನರಿಗೆ ಗಾಯ
ಟೈರ್ ಬ್ಲಾಸ್ಟ್ ಆಗಿ ಟಿಟಿ ವಾಹನ ಪಲ್ಟಿ, ಮಗು ಸೇರಿ 12 ಜನರಿಗೆ ಗಾಯ
ರಾಯರ ಬಗ್ಗೆ ಆಲ್ಬಂ ಸಾಂಗ್ ಮಾಡಲು ಕಾರಣ ಏನು? ವಿವರಿಸಿದ ಅಜನೀಶ್
ರಾಯರ ಬಗ್ಗೆ ಆಲ್ಬಂ ಸಾಂಗ್ ಮಾಡಲು ಕಾರಣ ಏನು? ವಿವರಿಸಿದ ಅಜನೀಶ್
Video: ಕೋಲ್ಕತ್ತಾಗೆ ಆಗಮಿಸಿದ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ರುಬಿಯೋ
Video: ಕೋಲ್ಕತ್ತಾಗೆ ಆಗಮಿಸಿದ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ರುಬಿಯೋ