Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳೆ ವಿಮೆ ಕುರಿತು ರೈತರಲ್ಲಿ ಜಾಗೃತಿ ಮೂಡಿಸುವ ಕಾರ್ಯವಾಗಲಿ: ಸಚಿವ ಎಚ್​ಕೆ ಪಾಟೀಲ

ಗದಗ: ಜಿಲ್ಲೆಯ ಪ್ರತಿಯೊಬ್ಬ ಅರ್ಹ ರೈತರಿಗೆ ಬೆಳೆ ವಿಮೆ ಸೌಲಭ್ಯವನ್ನು ದೊರಕಬೇಕು. ಆ ನಿಟ್ಟಿನಲ್ಲಿ ಬೆಳೆವಿಮೆ ಕುರಿತು ರೈತರಲ್ಲಿ ಜಾಗೃತಿ ಮೂಡಿಸುವಂತೆ ರಾಜ್ಯ ಕಾನೂನು ಸಚಿವ ಎಚ್.ಕೆ.ಪಾಟೀಲ​ ಸೂಚನೆ ನೀಡಿದ್ದಾರೆ.

ಬೆಳೆ ವಿಮೆ ಕುರಿತು ರೈತರಲ್ಲಿ ಜಾಗೃತಿ ಮೂಡಿಸುವ ಕಾರ್ಯವಾಗಲಿ: ಸಚಿವ ಎಚ್​ಕೆ ಪಾಟೀಲ
ಅಧಿಕಾರಿಗಳೊಂದಿಗೆ ಸಭೆ ಮಾಡಿದ ಸಚಿವ ಹೆಚ್​ಕೆ ಪಾಟೀಲ್​
Follow us
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Updated By: ಗಂಗಾಧರ​ ಬ. ಸಾಬೋಜಿ

Updated on:Jul 01, 2023 | 6:39 PM

ಗದಗ: ಜಿಲ್ಲೆಯ ಪ್ರತಿಯೊಬ್ಬ ಅರ್ಹ ರೈತರಿಗೆ ಬೆಳೆ ವಿಮೆ (crop insurance) ಸೌಲಭ್ಯವನ್ನು ದೊರಕಬೇಕು. ಆ ನಿಟ್ಟಿನಲ್ಲಿ ಪ್ರಾಥಮಿಕ ಹಂತದಲ್ಲಿಯೇ ತಯಾರಿ ನಡೆಸುವದರ ಜೊತೆಗೆ ಬೆಳೆವಿಮೆ ಕುರಿತು ರೈತರಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿ ಪ್ರಚಾರ ಕೈಗೊಳ್ಳಲು ಮುಂದಾಗುವಂತೆ ರಾಜ್ಯ ಕಾನೂನು, ನ್ಯಾಯ ಹಾಗೂ ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಹೇಳಿದ್ದಾರೆ.

ಗದಗ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಶನಿವಾರದಂದು ಜರುಗಿದ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬೆಳೆ ವಿಮೆ ಕುರಿತು ರೈತರಿಗೆ ಮನವರಿಕೆ ಮಾಡಿ ಕೊಡಲು ಕಂದಾಯ ಹಾಗೂ ವಿಮಾ ಕಂಪನಿಯವರನ್ನು ನೇಮಿಸುವದರ ಜೊತೆಗೆ ಬೆಳೆ ವಿಮೆ ಕುರಿತು ನಿಯಮಿತವಾಗಿ ಪತ್ರಿಕಾ ಪ್ರಕಟಣೆಗಳನ್ನು ನೀಡಬೇಕು. ಬೆಳೆ ವಿಮೆ ವ್ಯಾಪ್ತಿಗೆ ಬರುವಂತಹ ಹೆಸರು ಬೆಳೆ ಜೊತೆಗೆ ಎಲ್ಲ ಬೆಳೆಗಳ ಕುರಿತು ಜಾಗೃತಿ ಮೂಡಿಸಲು ಸೂಚಿಸಿದರು.

ಈಗಾಗಲೇ ಜಿಲ್ಲೆಯ 50 ಸಾವಿರ ಹೆಕ್ಟೆರ ಪ್ರದೇಶದಲ್ಲಿ ಬಿತ್ತನೆಯಾದಂತಹ ಹೆಸರು ಬೆಳೆ ಮಳೆ ಆಗದೇ ಇರುವ ಕಾರಣ ಹಾನಿ ಆಗುವ ಸಂಭವ ಹೆಚ್ಚಾಗಿದೆ. ಈ ವಿಷಯದಲ್ಲಿ ಯಾವುದೇ ಪ್ರಮಾದಗಳನ್ನು ಎಸಗದೆ ರೈತರಿಗೆ ಅನ್ಯಾಯವಾಗದಂತೆ ಬೆಳೆ ವಿಮೆ ಪಾವತಿಸಬೇಕು. ಬೆಳೆ ವಿಮೆ ಕುರಿತು ಇರುವ ಮಾರ್ಗಸೂಚಿಗಳ ಕುರಿತು ವಿಸ್ತ್ರತವಾಗಿ ಚರ್ಚಿಸಬೇಕು. ಜಿಲ್ಲೆಯಲ್ಲಿ ಹೆಸರು ಬಿತ್ತನೆಯಾದಂತಹ ಪ್ರದೇಶಗಳನ್ನು ಗುರುತಿಸಿ ಅಂತಹವರ ಪಹಣಿ ಪತ್ರದಲ್ಲಿ ನಮೂದಿಸಲು ತಹಶೀಲ್ದಾರರು ಹಾಗೂ ಸಹಾಯಕ ಕೃಷಿ ನಿರ್ದೇಶಕರುಗಳು ಕೂಡಲೇ ಕಾರ್ಯ ಪ್ರವೃತ್ತರಾಗಿ ಜು.8 ರೊಳಗಾಗಿ ಈ ಕಾರ್ಯವನ್ನು ಪೂರ್ಣಗೊಳಿಸಲು ಸೂಚನೆ ನೀಡಿದರು. ಅಲ್ಲದೇ ಹೆಸರು ಬಿತ್ತನೆ ಮಾಡಿದ ರೈತರೆಲ್ಲರೂ ಕಡ್ಡಾಯವಾಗ ಬೆಳೆ ವಿಮೆ ಮಾಡಿಸಲು ಅಧಿಕಾರಿಗಳು ಮುಂದಾಗಬೇಕು ಎಂದರು.

ಇದನ್ನೂ ಓದಿ: Pralhad Joshi: ಸುಳ್ಳು ಹಾಗೂ ಕಾಂಗ್ರೆಸ್ ಒಂದೇ ನಾಣ್ಯದ ಎರಡು ಮುಖಗಳು : ಕಾಂಗ್ರೆಸ್ ಪಕ್ಷದ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತೀವ್ರ ವಾಗ್ದಾಳಿ

ರೋಣ ಶಾಸಕ ಜಿ.ಎಸ್.ಪಾಟೀಲ ಅವರು ಕಳಪೆ ಸೂರ್ಯಕಾಂತಿ ಬೀಜ ಕುರಿತು ಟಿವಿ9 ಮಾಡಿದ ವರದಿ ಸಭೆಯ ಗಮನಕ್ಕೆ ತಂದರು. ಈ ಕುರಿತು ಜಂಟಿ ಕೃಷಿ ನಿರ್ದೇಶಕರಿಂದ ಮಾಹಿತಿ ಪಡೆದ ಸಚಿವ ಎಚ್.ಕೆ.ಪಾಟೀಲ ಅವರು ಕಳಪೆ ಗುಣಮಟ್ಟದ ಸೂರ್ಯಕಾಂತಿ ಬಿತ್ತನೆ ಬೀಜ ಪೂರೈಕೆಯಾಗಿದ್ದರ ಕುರಿತು ವರದಿ ಬಂದಲ್ಲಿ ಅಂತಹ ಕಂಪನಿ ವಿರುದ್ಧ ಯಾವುದೇ ಒತ್ತಡಗಳಿಗೆ ಮನಿಯದೇ ನಿರ್ದಾಕ್ಷಣ್ಯವಾಗಿ ಕ್ರಿಮಿನಲ್​ ಕೇಸ್ ದಾಖಲಿಸಿ ಕ್ರಮ ಕೈಗೊಳ್ಳಬೇಕು ಹಾಗೂ ಕಳಪೆ ಬೀಜದಿಂದ ಬಾಧಿತರಾದ ರೈತರಿಗೆ ಸೂಕ್ತ ಪರಿಹಾರ ದೊರಕಿಸಿ ಕೊಡಬೇಕೆಂದು ಸೂಚಿಸಿದ್ದಾರೆ.

ಜಿಲ್ಲೆಯಲ್ಲಿ ಬರಗಾಲದ ಛಾಯೆ ಎದ್ದು ಕಾಣುತ್ತಿದ್ದು ಇದರ ಸಮರ್ಪಕ ನಿರ್ವಹಣೆಗೆ ಪೂರ್ವಭಾವಿ ತಯಾರಾಗಿರಬೇಕು. ನರೆಗಾ ಯೋಜನೆಯಡಿ ಈಗಿರುವ ಗುರಿಯನ್ನು ನಾಲ್ಕು ಪಟ್ಟು ಹೆಚ್ಚಿಗೆ ಮಾಡಬೇಕು. ಅಲ್ಲದೇ ನೂರು ಮಾನವ ದಿನಗಳ ಬದಲಾಗಿ ಎರಡನೂರು ಮಾನವ ದಿನಗಳನ್ನು ಒದಗಿಸಲು ಸಭೆಯಲ್ಲಿ ಠರಾವು ಮಾಡಿ ಈ ಕುರಿತು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ತಿಳಿಸಿದರು.

ಡಿ.ಬಿ.ಓ.ಟಿ ಯೋಜನೆಯಡಿ ಪ್ರತಿಯೊಬ್ಬರಿಗೆ ಎಪ್ಪತ್ತು ಲೀಟರ್ ನೀರು ಒದಗಿಸುವ ಯೋಜನೆಯಾಗಿದ್ದು ಇದರಲ್ಲಿ ಪ್ರಸ್ತುತ ಕೇವಲ ನಲವತ್ತು ಲೀಟರ್ ನೀರು ಮಾತ್ರ ಪೂರೈಸಲಾಗುತ್ತಿದೆ. ಪ್ರಸ್ತುತ ಈ ಯೋಜನೆಗಳನ್ನು ನಿರ್ವಹಿಸುತ್ತಿರುವ ಏಜೆನ್ಸಿಗಳಿಗೆ ಅಗತ್ಯದ ಜನರೇಟರಗಳನ್ನು ಪೂರೈಸಲಾಗಿದ್ದರು ಸಹ ಸಬೂಬುಗಳನ್ನು ಹೇಳುವ ಮೂಲಕ ಸಮರ್ಪಕವಾಗಿ ನೀರು ಪೂರೈಕೆ ಆಗದಿರುವ ಕುರಿತು ಪರಿಶೀಲಿಸಲು ಅಧಿಕಾರಿಗಳಿಗೆ ತಿಳಿಸಿದರು. ಮುಂದೆ ಜರುಗಲಿರುವ ಪ್ರತಿ ಸಭೆಗೂ ಕುಡಿಯುವ ನೀರಿಗೆ ಸಂಬಂಧಿಸಿದ ಏಜೆನ್ಸಿಯ ಜವಾಬ್ದಾರಿಯುತ ವ್ಯಕ್ತಿಯನ್ನು ಕಡ್ಡಾಯವಾಗಿ ಆಗಮಿಸಬೇಕೆಂದು ಸೂಚಿಸಿದರು.

ಇದನ್ನೂ ಓದಿ: ಕಾನೂನು ಸುವ್ಯವಸ್ಥೆಗೆ ಥರ್ಡ ಐ ಯೋಜನೆ ಶೀಘ್ರ ಜಾರಿ: ಸಚಿವ ಎಚ್​ಕೆ ಪಾಟೀಲ್

ಜುಲೈ ಅಂತ್ಯದವರೆಗೆ ಜಿಲ್ಲೆಯಲ್ಲಿನ ಎಲ್ಲ ಶುದ್ಧ ಕುಡಿಯುವ ನೀರಿನ ಘಟಕಗಳು ಕಾರ್ಯ ನಿರ್ವಹಿಸುತ್ತಿರುವ ಕುರಿತು ಎಲ್ಲ ಗ್ರಾಮ ಪಂಚಾಯತಗಳಿಂದ ವರದಿ ಪಡೆದು ದುರಸ್ತಿಗೊಳಪಟ್ಟಂತಹ ಎಲ್ಲ ಘಟಕಗಳನ್ನು ಪುನರ ಪ್ರಾರಂಭವಾಗುವಂತೆ ಸೂಚನೆ ನೀಡಿದರು. ಡಿ.ಬಿ.ಓ.ಟಿ ಯೋಜನೆಯಡಿ ಪೂರ್ಣ ಪ್ರಮಾಣದಲ್ಲಿ ನೀರು ಪೂರೈಕೆ ಆಗದೇ ಇರುವಂತಹ ಗ್ರಾಮಗಳನ್ನು ಗುರುತಿಸಿ ಅಂತಹ ಗ್ರಾಮಗಳಲ್ಲಿ ಕೊಳವೆ ಬಾವಿ ಕೊರೆಸುವ ಕುರಿತು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸಭೆಯಲ್ಲಿ ತೀರ್ಮಾನಿಸಲಾಯಿತು.

ಮುಂದಿನ ದಿನಮಾನಗಳಲ್ಲಿ ಜಾನುವಾರುಗಳಿಗೆ ಮೇವಿನ ತೊಂದರೆ ಆಗದಂತೆ ಈಗಿನಿಂದಲೇ ಮೇವಿನ ಬ್ಯಾಂಕ ತೆರೆಯಬೇಕು. ಜಿಲ್ಲೆಗೆ ಬೇಕಾಗಬಹುದಾಂತಹ ಮೇವಿನ ಅಗತ್ಯತೆಗಳನ್ನು ದಾಸ್ತಾನು ಮಾಡಿಕೊಳ್ಳಲು ಈಗಿನಿಂದಲೇ ಕಾರ್ಯಪ್ರವೃತ್ತರಾಗುವಂತೆ ತಿಳಿಸಿದರು. ಸ್ವಾತಂತ್ರೋತ್ಸವದ ಎಪ್ಪತ್ತೈದು ವರ್ಷಗಳು ಪೂರ್ಣಗೊಳ್ಳುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ನಾಲ್ಕು ಲಕ್ಷ ಸಸಿಗಳನ್ನು ನೆಡುವ ಕಾರ್ಯಕ್ರಮ ರೂಪಿಸಲು ಸಭೆಯಲ್ಲಿ ನಿರ್ಣಯಿಸಿದರು. ಅಲ್ಲದೇ ಈ ಗುರಿಯನ್ನು ಪೂರ್ಣಗೊಳಿಸಲು ಎಲ್ಲ ಇಲಾಖೆಗಳು ಪಾಲ್ಗೊಂಡು ಗದಗ ಜಿಲ್ಲೆಯನ್ನು ಹಸಿರು ಜಿಲ್ಲೆಯನ್ನಾಗಿಸಲು ಪಣತೊಡಲು ಕರೆ ನೀಡಿದರು.

ಸರಕಾರ ಘೋಷಿಸಿರುವ ಗ್ಯಾರಂಟಿಗಳನ್ನು ಅಪೇಕ್ಷಿತ ದಿನದೊಳಗಾಗಿ ಅನುಷ್ಠಾನಗೊಳಿಸಲು ಜಿಲ್ಲೆ ಪ್ರಥಮವಾಗಿರಬೇಕು. ಅಲ್ಲದೇ ಈ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ಲೋಪಗಳಿಗೆ ಆಸ್ಪದ ನೀಡದಂತೆ ನಿಗಾ ವಹಿಸಬೇಕು ಎಂದು ಸಚಿವರಾದ ಎಚ್.ಕೆ.ಪಾಟೀಲ ಸೂಚಿಸಿದರು.

ನರಗುಂದ ಶಾಸಕರಾದ ಸಿ.ಸಿ. ಪಾಟೀಲ ಮಾತನಾಡಿ ಈಗಾಗಲೇ ಬಿತ್ತನೆ ಮಾಡಿದಂತಹ ಹೆಸರು ಬೆಳೆ ನಾಶವಾದಲ್ಲಿ ಬೆಳೆ ವಿಮೆ ದೊರಕಿಸುವ ಕುರಿತು ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಸಭೆ ಜರುಗಿಸಲು ತಿಳಿಸಿದರು. ಪ್ರತಿ ಗ್ರಾಮ ಪಂಚಾಯತಗಳಿಗೆ ಒಂದರಂತೆ ಬೆಳೆ ವಿಮೆ ಕುರಿತು ಬ್ಯಾನರ ಅಳವಡಿಸಬೇಕು. ನಿಗದಿತ ಪ್ರಮಾಣದಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯವಯವಾಗುತ್ತಿರುವ ಕುರಿತು ಗಂಭೀರವಾಗಿ ಪರಿಗಣಿಸಲು ತಿಳಿಸಿದರು. ಮೇವು ಬೆಳೆಯಲು ರೈತರಿಗೆ ಉತ್ತೇಜನ ನೀಡಬೇಕೆಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:33 pm, Sat, 1 July 23

ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ