AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

20 ಲಕ್ಷ ಸಾಲ ಮಾಡಿಕೊಂಡಿದ್ದ ಕುಟುಂಬದಲ್ಲಿ ದುರಂತ: ನದಿಗೆ ಹಾರಿ ತಾಯಿ-ಮಗು ಆತ್ಮಹತ್ಯೆ; ಇಬ್ಬರು ಮಕ್ಕಳು ಬಚಾವ್

ರಾಜ್ಯದಲ್ಲಿ ಸಾಮೂಹಿಕ ಆತ್ಮಹತ್ಯೆಗಳ ಸರಣಿ ಮುಂದುವರಿದಿದೆ. ಗದಗ ಜಿಲ್ಲೆಯ ರೋಣ ತಾಲೂಕಿನ ಹೊಳೆ ಆಲೂರು ಗ್ರಾಮದಲ್ಲಿ ಸುಮಾರು 20 ಲಕ್ಷ ರೂ. ಸಾಲ ಮಾಡಿಕೊಂಡಿದ್ದ ಕುಟುಂಬದಲ್ಲಿ ಭಾರೀ ದುರಂತ ಸಂಭವಿಸಿದೆ. ತನ್ನ ಮೂವರು ಮಕ್ಕಳ ಜತೆ ಮಲಪ್ರಭಾ ನದಿಗೆ ಹಾರಿದ ತಾಯಿ ಆತ್ಮಹತ್ಯೆ ಯತ್ನದಲ್ಲಿ ಸಾವನ್ನು ಕಂಡಿದ್ದಾಳೆ.

20 ಲಕ್ಷ ಸಾಲ ಮಾಡಿಕೊಂಡಿದ್ದ ಕುಟುಂಬದಲ್ಲಿ ದುರಂತ: ನದಿಗೆ ಹಾರಿ ತಾಯಿ-ಮಗು ಆತ್ಮಹತ್ಯೆ; ಇಬ್ಬರು ಮಕ್ಕಳು ಬಚಾವ್
loan problems mother commits suicide by jumping into malaprabha river at ron gadag
TV9 Web
| Updated By: ಸಾಧು ಶ್ರೀನಾಥ್​|

Updated on:Sep 29, 2021 | 12:03 PM

Share

ಗದಗ: ರಾಜ್ಯದಲ್ಲಿ ಸಾಮೂಹಿಕ ಆತ್ಮಹತ್ಯೆಗಳ ಸರಣಿ ಮುಂದುವರಿದಿದೆ. ಗದಗ ಜಿಲ್ಲೆಯ ರೋಣ ತಾಲೂಕಿನ ಹೊಳೆ ಆಲೂರು ಗ್ರಾಮದಲ್ಲಿ ಸುಮಾರು 20 ಲಕ್ಷ ರೂ. ಸಾಲ ಮಾಡಿಕೊಂಡಿದ್ದ ಕುಟುಂಬದಲ್ಲಿ ಭಾರೀ ದುರಂತ ಸಂಭವಿಸಿದೆ. ತನ್ನ ಮೂವರು ಮಕ್ಕಳ ಜತೆ ಮಲಪ್ರಭಾ ನದಿಗೆ ಹಾರಿದ ತಾಯಿ ಆತ್ಮಹತ್ಯೆ ಯತ್ನದಲ್ಲಿ ಸಾವನ್ನು ಕಂಡಿದ್ದಾಳೆ. ಜೊತೆಗೆ ಒಂದು ಮಗೂ ಸಹ ಜಲ ಸಮಾಧಿಯಾಗಿದ್ದು, ತಾಯಿ ಕೈಯಿಂದ ತಪ್ಪಿಸಿಕೊಂಡ ಇಬ್ಬರು ಮಕ್ಕಳು ಬಚಾವ್ ಆಗಿದ್ದಾರೆ.

ಸಾಮೂಹಿಕ ಆತ್ಮಹತ್ಯೆ ಪ್ರಯತ್ನದಲ್ಲಿ 8 ವರ್ಷದ ಹೆಣ್ಣು ಮಗು, ತಾಯಿ ಉಮಾದೇವಿ(45) ಜಲ ಸಮಾಧಿಯಾಗಿದ್ದಾರೆ. ತಾಯಿ ಕೈಯಿಂದ ತಪ್ಪಿಸಿಕೊಂಡ ಇಬ್ಬರು ಮಕ್ಕಳು ಬಚಾವ್ ಆಗಿದ್ದಾರೆ! ಹೊಳೆಆಲೂರು ಗ್ರಾಮದಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದೆ.

ಉಮಾದೇವಿ ₹25 ಲಕ್ಷ ಖರ್ಚು ಮಾಡಿ ಮನೆ ಕಟ್ಟಿಸುತ್ತಿದ್ದಾರೆ. ಮನೆಗೆ ಅಂತ ₹6-7 ಲಕ್ಷ ಸಾಲ ಮಾಡಿದ್ದಾರೆ. ಮನೆಯಲ್ಲಿ ಗಂಡಸರು ಇಲ್ಲ ಎಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಟಿವಿ9ಗೆ ಮೃತಳ ಸಂಬಂಧಿ ಪ್ರವೀಣ್ ಮಾಹಿತಿ ನೀಡಿದ್ದಾರೆ.

3 ತಿಂಗಳ ಹಿಂದೆ ಕೊವಿಡ್​ಗೆ ಬಲಿಯಾಗಿದ್ದ ಉಮಾದೇವಿ ಪತಿ: ಉಮಾದೇವಿ ಕುಟುಂಬ ಸುಮಾರು 20 ಲಕ್ಷ ರೂ. ಸಾಲ ಮಾಡಿಕೊಂಡಿತ್ತು ಎಂದು ತಿಳಿದುಬಂದಿದೆ. 3 ತಿಂಗಳ ಹಿಂದೆ ಕೊವಿಡ್‌ನಿಂದ ಉಮಾದೇವಿ ಪತಿ, ಹೈಸ್ಕೂಲ್ ಶಿಕ್ಷಕ ಸಂಗಮೇಶ ಚಲ್ಲಿಕೇರಿ ಸಾವಿಗೀಡಾಗಿದ್ದರು. ಇದರಿಂದ ಬೇಸತ್ತು ಮಕ್ಕಳ ಜತೆ ತಾಯಿ ಸಾಮೂಹಿಕ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅದೃಷ್ಟವಶಾತ್ 12 ಮತ್ತು 14 ವರ್ಷದ ಇಬ್ಬರು ಮಕ್ಕಳು ಪಾರಾಗಿದ್ದಾರೆ. ರೋಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಬದುಕುಳಿದ ಒಬ್ಬ ಮಗಳು ಗದಗನಲ್ಲಿ ಕಾಲೇಜ್​ನಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ. ಸ್ಥಳಕ್ಕೆ ದೌಡಾಯಿಸಿದ ರೋಣ ಪೊಲೀಸರು, ಅಗ್ನಿಶಾಮಕ ದಳ ಸಿಬ್ಬಂದಿ ತಾಯಿ, ಮಗುವಿಗೆ ಶೋಧ ನಡೆಸಿದ್ದಾರೆ.

ಅಮ್ಮ, ಮಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕರಾಳತೆ ಬಿಚ್ಚಿಟ್ಟಿದ್ದು ಹೇಗೆ? |Sucide| Tv9kannada

ಇದನ್ನೂ ಓದಿ: ಕೊವಿಡ್‌ಗೆ ಪತಿ ಬಲಿ: ಮಗಳಿಗೆ ನೇಣು ಬಿಗಿದು ಪತ್ನಿಯೂ ಆತ್ಮಹತ್ಯೆಗೆ ಯತ್ನ, 12 ವರ್ಷದ ಮಗಳು ಸಾವು

ಇದನ್ನೂ ಓದಿ: ಲಾಕ್​ಡೌನ್​ನಿಂದ ಆರ್ಥಿಕ ಸಂಕಷ್ಟದ ಶಂಕೆ; ಕಿರುತೆರೆ ನಟ ಆತ್ಮಹತ್ಯೆ: ಅನುಮಾನ ಮೂಡಿಸಿದ ಸಾವು

(loan problems mother commits suicide by jumping into malaprabha river at ron gadag)

Published On - 8:22 am, Wed, 29 September 21

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ