ಮಾನಸಿಕ ಅಸ್ವಸ್ಥ ಮಗನಿಂದ ತಾಯಿ ಮೇಲೆ ಕೊಡಲಿಯಿಂದ ಹಲ್ಲೆ, ಆರೋಪಿ ಹಿಡಿಯಲು ಪೊಲೀಸರಿಂದ ಹರಸಾಹಸ
ಮಾನಸಿಕ ಅಸ್ವಸ್ಥ ಮಗ ತನ್ನ ತಾಯಿಯ ಮೇಲೆ ಕೊಡಲಿಯಿಂದ ಹಲ್ಲೆ ನಡೆಸಿ ಬಳಿಕ ಸಾರ್ವಜನಿಕರ ಮೇಲೂ ಕೊಡಲಿ ತೋರಿಸಿ ಅಟ್ಟಹಾಸ ಮೆರೆದ ಘಟನೆ ಗದಗದಲ್ಲಿ ನಡೆದಿದೆ. ಸದ್ಯ ಪೊಲೀಸರು ಗ್ರಾಮಸ್ಥರ ಸಹಾಯದಿಂದ ಆರೋಪಿಯನ್ನು ಹಿಡಿದು ಧಾರವಾಡ ನಿಮ್ಹಾನ್ಸ್ ಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಗದಗ, ಜುಲೈ.30: ಮಾನಸಿಕ ಅಸ್ವಸ್ಥ ಮಗ ತನ್ನ ಹೆತ್ತ ತಾಯಿಯ ಮೇಲೆಯೇ ಕೊಡಲಿಯಿಂದ ಮಾರಣಾಂತಿಕ ಹಲ್ಲೆ (Assault) ನಡೆಸಿ ಅಟ್ಟಹಾಸ ಮೆರೆದಿರುವ ಅಮಾನವೀಯ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಬೆಳವಣಕಿ ಗ್ರಾಮದ ಕುರುಬರ ಓಣಿಯಲ್ಲಿ ನಡೆದಿದೆ. ಸದ್ಯ ಸಿನಿಮೀಯ ರೀತಿಯಲ್ಲಿ ಕಾರ್ಯಾಚರಣೆ ಮಾಡಿ ಆರೋಪಿ ಮಗನನ್ನು ಪೊಲೀಸರು ಬಂಧಿಸಿದ್ದಾರೆ.
ಮಾನಸಿಕ ಅಸ್ವಸ್ಥರಾಗಿರುವ ಶಿವಪ್ಪ ತಟ್ಟಿ ಎಂಬಾತ ತನ್ನ ತಾಯಿ ಗೌರವ್ವನ ಮೇಲೆ ಕೊಡಲಿಯಿಂದ ಹಲ್ಲೆ ಮಾಡಿದ್ದು ಗೌರವ್ವನಿಗೆ ಗಂಭೀರ ಗಾಯಗಳಾಗಿವೆ. ಗಾಯಾಳನ್ನು ರೋಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆರೋಪಿ ಶಿವಪ್ಪ ಈ ಹಿಂದೆ ತಂದೆ ಮೇಲೂ ಹಲ್ಲೆ ಮಾಡಿದ್ದ. ಈಗ ತಾಯಿ ಮೇಲೂ ಹಲ್ಲೆ ನಡೆಸಿದ್ದಾನೆ. ಅಲ್ಲದೆ ಇತ್ತೀಚೆಗೆ ತಾವು ಸಾಕಿದ್ದ ಕುದುರೆಯನ್ನೂ ಸಹ ಕೊಡಲಿಯಿಂದ ಹೊಡೆದು ಸಾಯಿಸಿದ್ದನಂತೆ.
ತಾಯಿಯ ಮೇಲೆ ಹಲ್ಲೆ ನಡೆಸಿ ರೋಡಿಗೆ ಬಂದು ಸಾರ್ವಜನಿಕರಿಗೂ ಕೊಡಲಿ ಝಳಪಿಸಿ ಅಟ್ಟಹಾಸ ಮೆರೆದಿದ್ದಾನೆ. ಈ ವೇಳೆ ಆತಂಕಗೊಂಡ ಸಾರ್ವಜನಿಕರು 112ಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ತಕ್ಷಣವೇ ಸ್ಥಳಕ್ಕೆ ಬಂದ ಪೊಲೀಸ್ ಸಿಬ್ಬಂದಿ ಮಾನಸಿಕ ಅಸ್ವಸ್ಥ ಆರೋಪಿಯನ್ನು ಹಿಡಿಯಲು ಹರಸಾಹಸ ಪಟ್ಟಿದ್ದಾರೆ. ಕೊನೆಗೆ ಸತತ ಒಂದು ಗಂಟೆಗಳ ಕಾರ್ಯಾಚರಣೆ ಬಳಿಕ ಆರೋಪಿಯನ್ನು ಸೆರೆ ಹಿಡಿದಿದ್ದಾರೆ.
ಇದನ್ನೂ ಓದಿ: ಪ್ರೀತಿಸಿ ಮದುವೆಯಾಗಿದ್ದ ಪತಿಯನ್ನೇ ಕೊಲೆ ಮಾಡಿಸಿದ ಪತ್ನಿ ಅರೆಸ್ಟ್, ಸಹೋದರ, ಪ್ರಿಯತಮನಿಗಾಗಿ ಹುಡುಕಾಟ
ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ನಂತರ ಪಾಲಕರೊಂದಿಗೆ ಧಾರವಾಡ ನಿಮ್ಹಾನ್ಸ್ ಗೆ ಶಿವಪ್ಪನನ್ನು ರವಾನಿಸಲಾಗಿದೆ. ಪೊಲೀಸ್ ಸಿಬ್ಬಂದಿ ಎಸ್ಡಿ ಗೌಡರ, ವೀರಪ್ಪ ದೊನ್ನೆಗೌಡ, ಎಚ್ಎಸ್ ದೊಣ್ಣೆ ಗುಡ್ಡ, ಮಹೇಶ್ ಚಕ್ರಸಾಲಿ ಅವರು ಸಾರ್ವಜನಿಕರೊಂದಿಗೆ ಸೇರಿ ಮಾನಸಿಕ ಅಸ್ವಸ್ಥ ಮಗನನ್ನು ಹಿಡಿದು ನಿಮ್ಹಾನ್ಸ್ಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಮಾರಕಾಸ್ತ್ರ ಬೀಸಿ ಪುಡಿರೌಡಿಗಳ ಅಟ್ಟಹಾಸ
ಹಾಸನದ ಹೊರವಲಯದಲ್ಲಿ ಪುಡಿರೌಡಿಗಳ ಅಟ್ಟಹಾಸಕ್ಕೆ ಯುವಕ ಸತೀಶ್ ಬಲಿಯಾಗಿದ್ದಾನೆ. ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಮನಸೋ ಇಚ್ಚೆ ಹಲ್ಲೆ ಮಾಡಿದ್ರು. ಸಾವು-ಬದುಕಿನ ಮಧ್ಯೆ ಹೋರಾಡ್ತಿದ್ದ ಸತೀಶ್, ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾನೆ. ಆಸ್ಪತ್ರೆ ಬಳಿ ಪೋಷಕರು ಆಕ್ರಂದನ ಮುಗಿಲು ಮುಟ್ಟಿತ್ತು. ಇನ್ನೂ ಬಂಧಿಸಲು ತೆರಳಿದ್ದಾಗ ಪೊಲೀಸರ ಮೇಲೆಯೇ ಆರೋಪಿಗಳು ಹಲ್ಲೆ ಯತ್ನಿಸಿದ್ದಾರೆ. ಆಗ ಆತ್ಮ ರಕ್ಷಣೆಗಾಗಿ ಪ್ರಮುಖ ಆರೋಪಿ ರಾಜು ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ