ಆರೋಗ್ಯ ಕ್ಷೇತ್ರಕ್ಕೂ ತಟ್ಟಿದ ಯುದ್ಧದ ಬಿಸಿ; ಸಿಲಿಂಡರ್ ಇಲ್ಲದೆ ರೋಗಿಗಳಿಗೂ ಪ್ರಾಬ್ಲಮ್!

ಮಧ್ಯಪ್ರಾಚ್ಯ ಯುದ್ಧದಿಂದ ದೇಶಾದ್ಯಂತ ಇಂಧನ ಸರಬರಾಜು ವ್ಯತ್ಯಯಗೊಂಡಿದೆ. ಇದರ ಬಿಸಿ ಗದಗಿನ ಸರಕಾರಿ ಆಯುಷ್ ಆಸ್ಪತ್ರೆಗೂ ತಟ್ಟಿದ್ದು, 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳ ಕೊರತೆ ಎದುರಾಗಿದೆ. ಪಂಚಕರ್ಮ ಚಿಕಿತ್ಸೆ, ಸ್ಟೀಮ್ ಥೆರಪಿ ಹಾಗೂ ರೋಗಿಗಳ ಆಹಾರ ವ್ಯವಸ್ಥೆಗೆ ತೊಂದರೆಯಾಗಿದ್ದು, ರೋಗಿಗಳು ತೊಂದರೆಗೀಡಾಗಿದ್ದಾರೆ. ಸದ್ಯ 5 ಕೆಜಿ ಸಿಲಿಂಡರ್‌ಗಳನ್ನು ಬಳಸಲಾಗುತ್ತಿದ್ದು, ಪರ್ಯಾಯವಾಗಿ ಎಲೆಕ್ಟ್ರಾನಿಕ್ ಒಲೆಗಳ ಬಳಕೆಗೆ ಆಸ್ಪತ್ರೆ ಆಡಳಿತ ಯೋಜನೆ ರೂಪಿಸಿದೆ.

ಆರೋಗ್ಯ ಕ್ಷೇತ್ರಕ್ಕೂ ತಟ್ಟಿದ ಯುದ್ಧದ ಬಿಸಿ; ಸಿಲಿಂಡರ್ ಇಲ್ಲದೆ ರೋಗಿಗಳಿಗೂ ಪ್ರಾಬ್ಲಮ್!
ಆರೋಗ್ಯ ಕ್ಷೇತ್ರಕ್ಕೂ ತಟ್ಟಿದ ಯುದ್ಧದ ಬಿಸಿ; ಸಿಲಿಂಡರ್ ಇಲ್ಲದೆ ರೋಗಿಗಳಿಗೂ ಪ್ರಾಬ್ಲಮ್!
Edited By:

Updated on: Mar 21, 2026 | 11:50 AM

ಗದಗ, ಮಾರ್ಚ್​ 21: ಮಧ್ಯಪ್ರಾಚ್ಯ ಯುದ್ಧದ ಪರಿಣಾಮ ದೇಶದಾದ್ಯಂತ ಇಂಧನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗುತ್ತಿದ್ದು, ಅದರ ಬಿಸಿ ಇದೀಗ ಗದಗ (Gadag) ಜಿಲ್ಲೆಯಲ್ಲಿ ಆರೋಗ್ಯ ಕ್ಷೇತ್ರಕ್ಕೂ ತಟ್ಟಿದೆ. ಗದಗದ ಸರ್ಕಾರಿ ಆಯುಷ್ಯ ಆಸ್ಪತ್ರೆಯಲ್ಲಿ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಕೊರತೆ ತೀವ್ರವಾಗಿ ಎದುರಾಗಿದ್ದು, ಚಿಕಿತ್ಸೆ ವ್ಯವಸ್ಥೆಯ ಮೇಲೆ ಪರಿಣಾಮ ಬೀರಿದೆ.

ತಾತ್ಕಾಲಿಕವಾಗಿ 5ಕೆಜಿ ಸಿಲಿಂಡರ್ ಬಳಕೆ

ಪಂಚಕರ್ಮ ಚಿಕಿತ್ಸೆಗೆ ಗ್ಯಾಸ್ ಸಿಲಿಂಡರ್ ಅತ್ಯಾವಶ್ಯಕವಾಗಿದ್ದು, ಮಸಾಜ್ ಎಣ್ಣೆ ಬಿಸಿ ಮಾಡಲು ಹಾಗೂ ಸ್ಟೀಮ್ ಚಿಕಿತ್ಸೆ ನೀಡಲು ಗ್ಯಾಸ್ ಅವಶ್ಯಕವಾಗಿದೆ. ಆದರೆ 19 ಕೆಜಿ ಕಮರ್ಷಿಯಲ್ ಸಿಲಿಂಡರ್ ಲಭ್ಯವಿಲ್ಲದ ಕಾರಣ ಆಸ್ಪತ್ರೆ ಆಡಳಿತವು ಇದೀಗ 5 ಕೆಜಿ ಸಿಲಿಂಡರ್‌ಗಳನ್ನು ಬಳಸಿಕೊಂಡು ತಾತ್ಕಾಲಿಕವಾಗಿ ಕಾರ್ಯನಿರ್ವಹಿಸುತ್ತಿದೆ.

ಇದನ್ನೂ ಓದಿ ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಪುರಾತತ್ವ ತಜ್ಞರು

ಎಲೆಕ್ಟ್ರಾನಿಕ್ ಸಾಧನ ಬಳಸುವಂತೆ ಯೋಜನೆ

ಆಸ್ಪತ್ರೆಗೆ ಪ್ರತಿದಿನ 10 ರಿಂದ 20 ರೋಗಿಗಳು ದಾಖಲಾಗುತ್ತಿದ್ದು, ಪಾರ್ಶ್ವವಾಯು, ಮಂಡಿ ಹಾಗೂ ಬೆನ್ನುನೋವು ಸೇರಿದಂತೆ ಹಲವು ಸಮಸ್ಯೆಗಳಿಗಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಸಿಲಿಂಡರ್ ಕೊರತೆಯಿಂದ ರೋಗಿಗಳಿಗೆ ನೀಡುವ ಸ್ಟೀಮ್ ಚಿಕಿತ್ಸೆ ಹಾಗೂ ಆಹಾರ ವ್ಯವಸ್ಥೆಯಲ್ಲೂ ತೊಂದರೆ ಉಂಟಾಗಿದೆ. ಸಮಸ್ಯೆ ನಿವಾರಣೆಗೆ ಪರ್ಯಾಯವಾಗಿ ಎಲೆಕ್ಟ್ರಾನಿಕ್ ಒಲೆಗಳು ಹಾಗೂ ಕುಕ್ಕರ್ ಬಳಕೆಗೆ ಅಧಿಕಾರಿಗಳು ಯೋಜನೆ ರೂಪಿಸಿದ್ದಾರೆ. ಯಾವುದೇ ವ್ಯತ್ಯಯ ಉಂಟಾಗದಂತೆ ಚಿಕಿತ್ಸೆ ಮುಂದುವರಿಸುತ್ತಿದ್ದೇವೆ ಎಂದು ವೈದ್ಯರು ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More
Follow Us