ನೀತಿ ಸಂಹಿತೆ ಜಾರಿಗೂ ಮುನ್ನ ಖಾಸಗಿ ಕಾರಿನಲ್ಲಿ ಬಂದು ದೇಗುಲ ಮಹಾದ್ವಾರ ಉದ್ಘಾಟಿಸಿದ ಸಚಿವ ಸಿ.ಸಿ.ಪಾಟೀಲ್

ವಿಧಾನಸಭೆ ಚುನಾವಣೆ ಘೋಷಣೆಗೆ ಇನ್ನು ಕೆಲವೇ ಗಂಟೆಗಳು ಬಾಕಿ ಇರುವ ಮುನ್ನವೇ ಖಾಸಗಿ ಕಾರಿನಲ್ಲಿ ಬಂದ ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ದೇಗುಲ ಮಹಾದ್ವಾರದ ಉದ್ಘಾಟನೆ ಮಾಡಿದ್ದಾರೆ.

Follow us
ಕಿರಣ್ ಹನುಮಂತ್​ ಮಾದಾರ್
|

Updated on:Mar 29, 2023 | 11:03 AM

ಗದಗ: ರಾಜ್ಯ ವಿಧಾನಸಭೆ ಚುನಾವಣೆ(Karnataka Assembly Election) ಘೋಷಣೆಗೆ ಇನ್ನು ಕೆಲವೇ ಗಂಟೆಗಳು ಬಾಕಿ ಇರುವ ಮುನ್ನವೇ ಖಾಸಗಿ ಕಾರಿನಲ್ಲಿ ಬಂದ ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ದೇಗುಲ ಮಹಾದ್ವಾರದ ಉದ್ಘಾಟನೆ ಮಾಡಿದ್ದಾರೆ. ಹೌದು ನಗರದ ಚೇತನಾ ಕ್ಯಾಂಟೀನ್ ಸರ್ಕಲ್​​ನಲ್ಲಿರುವ ಶ್ರೀ ಕ್ಷೇತ್ರ ಕೈಲಾಸ ವರಸಿದ್ಧಿ‌ ಗಣಪತಿ ದೇವಸ್ಥಾನದ ಮಹಾದ್ವಾರವನ್ನ ಉದ್ಘಾಟಿಸಿದ್ದಾರೆ.

ಕೇಂದ್ರ ಚುನಾವಣಾ ಆಯೋಗ ಇಂದು(ಮಾರ್ಚ್​ 29) ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದು, ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಲಿದೆ. ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಇಂದು ಬೆಳಗ್ಗೆ 11.30ಕ್ಕೆ ನವದೆಹಲಿಯ ವಿಜ್ಞಾನ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದು, ಕರ್ನಾಟಕದ 224 ವಿಧಾನಸಭಾ ಕ್ಷೇತ್ರಗಳಿಗೆ ಮತದಾನದ ದಿನಾಂಕ, ಫಲಿತಾಂಶದ ಡೇಟ್​ ಜೊತೆಗೆ ನೀತಿ ಸಂಹಿತೆ ಬಗ್ಗೆ ವಿವರಣೆ ನೀಡಲಿದ್ದಾರೆ. 2018 ರ ವಿಧಾನಸಭಾ ಚುನಾವಣೆಯು ಮೇ 12, 2018 ರಂದು ನಡೆದಿತ್ತು. ಮತ್ತು ಪ್ರಸ್ತುತ ವಿಧಾನಸಭೆಯ ಅವಧಿಯು ಮೇ 24, 2023 ರಂದು ಮುಕ್ತಾಯಗೊಳ್ಳುತ್ತದೆ. ಈ ಹಿನ್ನೆಲೆಯಲ್ಲಿ ಇಂದು ಚುನಾವಣಾ ಆಯೋಗವು ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕವನ್ನು ಘೋಷಣೆ ಮಾಡಲಿದೆ. ವೇಳಾಪಟ್ಟಿ ಪ್ರಕಟವಾದ ನಂತರ ಮಾದರಿ ನೀತಿ ಸಂಹಿತೆ ಜಾರಿಗೆ ಬರಲಿದೆ.

ಇನ್ನಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:51 am, Wed, 29 March 23