AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ: ನೀರು ಪಾಲಾದ ಬಾಲಕರ ಕುಟುಂಬಗಳಿಗೆ ತಲಾ 2 ಲಕ್ಷ ಪರಿಹಾರ ವಿತರಿಸಿದ ಸಚಿವ ಎಚ್.ಕೆ.ಪಾಟೀಲ

ಗದಗ ನಗರದ ರಹಮತ್ ನಗರದ ಬಳಿಯ ರೈಲ್ವೆ ಹಳಿಯ ಪಕ್ಕದಲ್ಲಿ ಇರುವ ಹೊಂಡದಲ್ಲಿ ತುಂಬಿದ್ದ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದ ಇಬ್ಬರು ಬಾಲಕರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂಪಾಯಿಗಳ ಚೆಕ್​ಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಎಚ್​ಕೆ ಪಾಟೀಲ್ ವಿತರಿಸಿದರು. ರೆಹಮತ ನಗರದ 12 ವರ್ಷದ ಮಹಮದ ಅಮೀನ ಹಾಗೂ 14 ವರ್ಷದ ಸಂತೋಷ‌ ಕುಂಬಾರ ಎಂಬ ಬಾಲಕರಿಬ್ಬರು ಆಗಸ್ಟ್ 15 ರಂದು ನೀರಿನಲ್ಲು ಮುಳುಗಿ ಮೃತಪಟ್ಟಿದ್ದರು.

ಗದಗ: ನೀರು ಪಾಲಾದ ಬಾಲಕರ ಕುಟುಂಬಗಳಿಗೆ ತಲಾ 2 ಲಕ್ಷ ಪರಿಹಾರ ವಿತರಿಸಿದ ಸಚಿವ ಎಚ್.ಕೆ.ಪಾಟೀಲ
ಮೃತ ಬಾ;ಲಕರ ಕುಟುಂಬಸ್ಥರಿಗೆ ಪರಿಹಾರದ ಚೆಕ್ ವಿತರಿಸಿದ ಸಚಿವ ಹೆಚ್​ಕೆ ಪಾಟೀಲ
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Updated By: Rakesh Nayak Manchi|

Updated on: Sep 19, 2023 | 9:15 PM

Share

ಗದಗ, ಸೆ.19: ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ (H.K.Patil) ಅವರು‌ ಗದಗ ನಗರದ ರಹಮತ್ ನಗರದ ಬಳಿಯ ರೈಲ್ವೆ ಹಳಿಯ ಪಕ್ಕದಲ್ಲಿ ಇರುವ ಹೊಂಡದಲ್ಲಿ ನೀರು ಪಾಲಾದ ಇಬ್ಬರು ಬಾಲಕರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿಗಳ ಚೆಕ್ ಗಳನ್ನು ವಿತರಿಸಿದರು.

ಗದಗ ನಗರದ ರೆಹಮತ್ ನಗರದ ಬಳಿಯ ರೈಲ್ವೆ ಹಳಿಯ ಪಕ್ಕದಲ್ಲಿ ಇರುವ ಹೊಂಡದಲ್ಲಿ ಜಾನುವಾರು ಮೇಯಿಸಲು ಹೋಗಿದ್ದ ಇಬ್ಬರು ಬಾಲಕರು ನೀರು ಪಾಲಾದ ಘಟನೆ ಆಗಸ್ಟ 15 ರಂದು ನಡೆದಿತ್ತು. ರೆಹಮತ ನಗರದ 12 ವರ್ಷದ ಮಹಮದ ಅಮೀನ ಹಾಗೂ 14 ವರ್ಷದ ಸಂತೋಷ‌ ಕುಂಬಾರ ಎಂಬ ಬಾಲಕರಿಬ್ಬರು ಸಾವನ್ನಪ್ಪಿದ್ದರು.

ಇದನ್ನೂ ಓದಿ: ರಾಜ್ಯದ ಈ ಮೂರು ದೇಗುಲಗಳು ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ಸೇರ್ಪಡೆ; ಸಚಿವ ಎಚ್.ಕೆ.ಪಾಟೀಲ್​ ಹೇಳಿದ್ದಿಷ್ಟು

ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ. ಪಾಟೀಲ ಅವರು ಮಾನ್ಯ ಮುಖ್ಯ ಮಂತ್ರಿಗಳು ಮೃತ ಬಾಲಕರ ಕುಟುಂಬಕ್ಕೆ ಮುಖ್ಯ ಮಂತ್ರಿಗಳ‌ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ.ಗಳ ಪರಿಹಾರ ಮೊತ್ತವನ್ನು ನೀಡುವ ಬರವಸೆ ನೀಡಿದ್ದರು. ಅಲ್ಲದೇ ಅಂದು ಮೃತ ಬಾಲಕರ ಮನೆಗಳಿಗೆ ತೆರಳಿ ಕುಟುಂಬ ಸದಸ್ಯರಿಗೆ ಸಾಂತ್ವನ ಸಹ ಹೇಳಿದ್ದರು.

ಪರಿಹಾರ ಚೆಕ್ ವಿತರಣೆ ವೇಳೆಯಲ್ಲಿ ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್, ತಹಶಿಲ್ದಾರ ಶ್ರೀನಿವಾಸ ಮೂರ್ತಿ ಕುಲಕರ್ಣಿ, ನಗರಸಭೆ ಸದಸ್ಯ ಕೃಷ್ಣ ಪರಾಪೂರ ಇದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ