ಗದಗ, ಸೆ.19: ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ (H.K.Patil) ಅವರು ಗದಗ ನಗರದ ರಹಮತ್ ನಗರದ ಬಳಿಯ ರೈಲ್ವೆ ಹಳಿಯ ಪಕ್ಕದಲ್ಲಿ ಇರುವ ಹೊಂಡದಲ್ಲಿ ನೀರು ಪಾಲಾದ ಇಬ್ಬರು ಬಾಲಕರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿಗಳ ಚೆಕ್ ಗಳನ್ನು ವಿತರಿಸಿದರು.
ಗದಗ ನಗರದ ರೆಹಮತ್ ನಗರದ ಬಳಿಯ ರೈಲ್ವೆ ಹಳಿಯ ಪಕ್ಕದಲ್ಲಿ ಇರುವ ಹೊಂಡದಲ್ಲಿ ಜಾನುವಾರು ಮೇಯಿಸಲು ಹೋಗಿದ್ದ ಇಬ್ಬರು ಬಾಲಕರು ನೀರು ಪಾಲಾದ ಘಟನೆ ಆಗಸ್ಟ 15 ರಂದು ನಡೆದಿತ್ತು. ರೆಹಮತ ನಗರದ 12 ವರ್ಷದ ಮಹಮದ ಅಮೀನ ಹಾಗೂ 14 ವರ್ಷದ ಸಂತೋಷ ಕುಂಬಾರ ಎಂಬ ಬಾಲಕರಿಬ್ಬರು ಸಾವನ್ನಪ್ಪಿದ್ದರು.
ಇದನ್ನೂ ಓದಿ: ರಾಜ್ಯದ ಈ ಮೂರು ದೇಗುಲಗಳು ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ಸೇರ್ಪಡೆ; ಸಚಿವ ಎಚ್.ಕೆ.ಪಾಟೀಲ್ ಹೇಳಿದ್ದಿಷ್ಟು
ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ. ಪಾಟೀಲ ಅವರು ಮಾನ್ಯ ಮುಖ್ಯ ಮಂತ್ರಿಗಳು ಮೃತ ಬಾಲಕರ ಕುಟುಂಬಕ್ಕೆ ಮುಖ್ಯ ಮಂತ್ರಿಗಳ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ.ಗಳ ಪರಿಹಾರ ಮೊತ್ತವನ್ನು ನೀಡುವ ಬರವಸೆ ನೀಡಿದ್ದರು. ಅಲ್ಲದೇ ಅಂದು ಮೃತ ಬಾಲಕರ ಮನೆಗಳಿಗೆ ತೆರಳಿ ಕುಟುಂಬ ಸದಸ್ಯರಿಗೆ ಸಾಂತ್ವನ ಸಹ ಹೇಳಿದ್ದರು.
ಪರಿಹಾರ ಚೆಕ್ ವಿತರಣೆ ವೇಳೆಯಲ್ಲಿ ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್, ತಹಶಿಲ್ದಾರ ಶ್ರೀನಿವಾಸ ಮೂರ್ತಿ ಕುಲಕರ್ಣಿ, ನಗರಸಭೆ ಸದಸ್ಯ ಕೃಷ್ಣ ಪರಾಪೂರ ಇದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ