AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಥರ್ಡ ಐ ಮತ್ತು ಮಾದಕ ವ್ಯಸನ ಮುಕ್ತ ಗದಗ ಜಾಗೃತಿ ಅಭಿಯಾನಕ್ಕೆ ಸಚಿವ ಎಚ್​ಕೆ ಪಾಟೀಲ ಚಾಲನೆ

ಗದಗ ಜಿಲ್ಲಾ ಪೊಲೀಸ ಇಲಾಖೆಯಿಂದ ಆಯೋಜಿಸಿದ ಥರ್ಡ ಐ ಮತ್ತು ಮಾದಕ ವ್ಯಸನ ಮುಕ್ತ ಗದಗ ಜಿಲ್ಲೆ ಜಾಗೃತಿ ಅಭಿಯಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ್ ನಗರದ ಗಾಂಧೀ ವೃತ್ತದಲ್ಲಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಥರ್ಡ ಐ ಮುಖಾಂತರ ಸಮಾಜದ ಬದುಕಿನಲ್ಲಿ ಬಹು ದೊಡ್ಡ ಸುಧಾರಣೆ ಕಾಣಬಹುದಾಗಿದೆ ಎಂದಿದ್ದಾರೆ.

ಥರ್ಡ ಐ ಮತ್ತು  ಮಾದಕ ವ್ಯಸನ ಮುಕ್ತ ಗದಗ ಜಾಗೃತಿ ಅಭಿಯಾನಕ್ಕೆ ಸಚಿವ ಎಚ್​ಕೆ ಪಾಟೀಲ ಚಾಲನೆ
ಸಚಿವ ಎಚ್.ಕೆ. ಪಾಟೀಲ
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on: Oct 21, 2023 | 8:14 PM

Share

ಗದಗ, ಅಕ್ಟೋಬರ್​​​​ 21: ಗದಗ ಜಿಲ್ಲಾ ಪೊಲೀಸ ಇಲಾಖೆಯಿಂದ ಆಯೋಜಿಸಿದ ಥರ್ಡ ಐ ಮತ್ತು ಮಾದಕ ವ್ಯಸನ ಮುಕ್ತ ಗದಗ ಜಿಲ್ಲೆ ಜಾಗೃತಿ ಅಭಿಯಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ್ (H K Patil) ನಗರದ ಗಾಂಧೀ ವೃತ್ತದಲ್ಲಿ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ಥರ್ಡ ಐ ಮುಖಾಂತರ ಸಮಾಜದ ಬದುಕಿನಲ್ಲಿ ಬಹು ದೊಡ್ಡ ಸುಧಾರಣೆ ಕಾಣಬಹುದಾಗಿದೆ. ಜಿಲ್ಲೆಯಲ್ಲಿ ಕಳುವು, ಕಾನೂನು ಬಾಹಿರ ಚಟುವಟಿಕೆಗಳನ್ನು ಕಂಡು ಹಿಡಿದು ನಿಯಂತ್ರಿಸಲು ಥರ್ಡ ಐ ಸಹಕಾರಿಯಾಗಲಿದೆ ಎಂದು ಹೇಳಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಮಕ್ಕಳು ಮಾದಕ ವಸ್ತುಗಳ ಸೇವನೆಗೆ ದಾಸರಾಗುತ್ತಿದ್ದು ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಪೊಲೀಸರೊಂದಿಗೆ ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ ಎಂದರು. ಗದಗ ಜಿಲ್ಲೆಯನ್ನು ವ್ಯಸನ ಮುಕ್ತ ಜಿಲ್ಲೆಯಾಗಿಸುವ ಪಣ ಜಿಲ್ಲೆಯ ಜನತೆ ತೊಡಬೇಕಿದೆ ಎಂದರು.

ಇದನ್ನೂ ಓದಿ: ರಾಜ್ಯ ಸರ್ಕಾರಿ ನೌಕರರಿಗೆ ದಸರಾ ಗಿಫ್ಟ್‌ ನೀಡಿದ ಸರ್ಕಾರ: ಶೇ. 38.75 ತುಟ್ಟಿಭತ್ಯೆ ಹೆಚ್ಚಳ

ಯುವ ಸಮುದಾಯ ಆರೋಗ್ಯಯುತ ಸುಸ್ಥಿರ ಜೀವನ ಸಾಗಿಸಲು ಸಮಾಜದ ಸರ್ವರೂ ಈ ಮಾದಕ ದ್ರವ್ಯಗಳ ನಿಯಂತ್ರಣ ಹಾಗೂ ನಿರ್ಮೂಲನೆ ಮಾಡಲು ದೃಢ ನಿರ್ಧಾರ ಕೈಗೊಳ್ಳಬೇಕು. ಪ್ರತಿಯೊಬ್ಬರೂ ತಮ್ಮ ನೆರೆಹೊರೆಯುವರನ್ನು ವ್ಯಸನ ಮುಕ್ತ ಗೊಳಿಸಲು ಶ್ರಮಿಸಬೇಕು. ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಸಚಿವ ಎಚ್.ಕೆ.ಪಾಟೀಲ ತಿಳಿಸಿದರು.

ಕಾನೂನು ಪಾಲಿಸುವ ಮೂಲಕ ಸುರಕ್ಷಿತ ಜೀವನ ಸಾಗಿಸಬೇಕು. ಈ ನಿಟ್ಟಿನಲ್ಲಿ ಪೊಲೀಸ ಇಲಾಖೆಯಿಂದ ಥರ್ಡ ಐ ಕಮಾಂಡ್ ಸೆಂಟರ್ ತೆರೆಯಲಾಗಿದೆ. ಉತ್ತಮ ಗುಣಮಟ್ಟದ ಸಿಸಿ ಟಿವಿ ಕ್ಯಾಮರಾಗಳನ್ನು ಗದಗ ನಗರದ ಪ್ರಮುಖ ರಸ್ತೆ , ವೃತ್ತ , ಸಂಚಾರದಟ್ಟಣೆ ಇರುವೆಡೆ ಅಳವಡಿಸಲಾಗಿದೆ. ಅವುಗಳ ಸಹಾಯದಿಂದ ಸಂಚಾರಿ ನಿಯಮ ಉಲ್ಲಂಘಿಸುವವರನ್ನು ಶಿಕ್ಷೆಗೆ ಒಳಪಡಿಸಲಾಗುವುದು. ಅಲ್ಲದೇ ಈ ಸಿಸಿ ಟಿವಿ ಅಳವಡಿಕೆಯಿಂದ ಅಪರಾಧಗಳ ನಿಯಂತ್ರಣ ಮಾಡಲು ಸಹಕಾರಿಯಾಗಿದೆ . ಸಾರ್ವಜನಿಕರು ದೈನಂದಿನ ಜೀವನದಲ್ಲಿ ಸಂಚಾರಿ ನಿಯಮಗಳನ್ನು ಪಾಲಿಸುವ ಅಭ್ಯಾಸವನ್ನು ಮಾಡಿಕೊಳ್ಳುವ ಮೂಲಕ ಅಪಘಾತಗಳನ್ನು ತಡೆಗಟ್ಟಬೇಕು ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.

ಇದನ್ನೂ ಓದಿ: ಹಾಯಿದೋಣಿ ಜಲಕ್ರೀಡಾ ತರಬೇತಿ ಶಿಬಿರಕ್ಕೆ ಸಚಿವ ಎಚ್​ಕೆ ಪಾಟೀಲ ಚಾಲನೆ

ಜಾಥಾ ಕಾರ್ಯಕ್ರಮದಲ್ಲಿ ಸರ್ಕಾರಿ ಮುಖ್ಯ ಸಚೇತಕರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಸಲೀಂ ಅಹ್ಮದ್, ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ಬಿ.ಎಸ್. ನೇಮಗೌಡ ಗದಗ ಬೆಟಗೇರಿ ನಗರಸಭೆ ಅಧ್ಯಕ್ಷೆ ಉಷಾ ದಾಸರ, ಉಪಾಧ್ಯಕ್ಷೆ ಸುನಂದಾ ಬಾಕಳೆ,ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಸಿದ್ಧಲಿಂಗೇಶ ಪಾಟೀಲ, ಸೇರಿದಂತೆ ಜಾಥಾದಲ್ಲಿ ಶಾಲಾ ಮಕ್ಕಳು, ಸಂಘ ಸಂಸ್ಥೆಗಳು, ಮಾಜಿ ಸೈನಿಕರ ಸಂಘದ ಪದಾಧಿಕಾರಿಗಳು ಹಾಜರಿದ್ದರು.

ಥರ್ಡ ಐ ಹಾಗೂ ಮಾದಕ ವ್ಯಸನ ಮುಕತ ಗದಗ ಜಿಲ್ಲೆ ಜಾಗೃತಿ ಅಭಿಯಾನದ ಜಾಥಾವು ಗದಗ ನಗರದ ಗಾಂಧೀ ವೃತ್ತದಿಂದ ಆರಂಭವಾಗಿ ಟಾಂಗಾ ಸರ್ಕಲ್ ಮೂಲಕ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಹುಬ್ಬಳ್ಳಿ ರಸ್ತೆಯಲ್ಲಿರುವ ಭೀಮಸೇನ್ ಜೋಶಿ ಜಿಲ್ಲಾ ರಂಗ ಮಂದಿರ ತಲುಪಿತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬೀದಿನಾಯಿಯನ್ನು ಗುಂಡಿಕ್ಕಿ ಕೊಂದ ನ್ಯಾಯಮೂರ್ತಿ ಮನೆಯ ಭದ್ರತಾ ಸಿಬ್ಬಂದಿ
ಬೀದಿನಾಯಿಯನ್ನು ಗುಂಡಿಕ್ಕಿ ಕೊಂದ ನ್ಯಾಯಮೂರ್ತಿ ಮನೆಯ ಭದ್ರತಾ ಸಿಬ್ಬಂದಿ
ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?
ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ