ವಜಾಗೊಂಡಿದ್ದ ಕೆಎಸ್ಆರ್​ಟಿಸಿ ಸಿಬ್ಬಂದಿ 4 ವಾರದೊಳಗೆ ಮರುನೇಮಕಕ್ಕೆ ನಿರ್ಧಾರ; ಸಚಿವ ಬಿ ಶ್ರೀರಾಮುಲು

ಮುಂದುವರಿದು ಮಾತನಾಡಿದ ಅವರು, ಸಿಎಂ ಬದಲಾವಣೆ, ಸಂಪುಟ ಪುನಾರಚನೆಯ ಪ್ರಸ್ತಾಪವಿಲ್ಲ. ಎಲ್ಲ ಮಂತ್ರಿಗಳು ಸಕ್ರಿಯವಾಗಿ ಕೆಲಸ ಮಾಡುತ್ತಿದ್ದಾರೆ. ಬದಲಾವಣೆ ಬಗ್ಗೆ ನಾಯಕರು ನಿರ್ಧಾರ ತೆಗೆದುಕೊಳ್ಳುತ್ತಾರೆ.

ವಜಾಗೊಂಡಿದ್ದ ಕೆಎಸ್ಆರ್​ಟಿಸಿ ಸಿಬ್ಬಂದಿ 4 ವಾರದೊಳಗೆ ಮರುನೇಮಕಕ್ಕೆ ನಿರ್ಧಾರ; ಸಚಿವ ಬಿ ಶ್ರೀರಾಮುಲು
ಕೆಎಸ್​ಆರ್​ಟಿಸಿ ಬಸ್ (ಸಾಂದರ್ಭಿಕ ಚಿತ್ರ)
Follow us
TV9 Web
| Updated By: sandhya thejappa

Updated on:Dec 21, 2021 | 12:54 PM

ಗದಗ: ವಜಾಗೊಂಡಿದ್ದ ಕೆಎಸ್ಆರ್​ಟಿಸಿ (KSRTC) ಸಿಬ್ಬಂದಿಯನ್ನು 4 ವಾರದೊಳಗೆ ಮರುನೇಮಕ ಮಾಡಲು ನಿರ್ಧರಿಸಲಾಗಿದೆ ಅಂತ ಗದಗ ನಗರದಲ್ಲಿ ಸಾರಿಗೆ ಸಚಿವ ಬಿ ಶ್ರೀರಾಮುಲು ತಿಳಿಸಿದ್ದಾರೆ. ಮುಷ್ಕರ ವೇಳೆ ಕೆಲವರು ಕೆಲಸಕ್ಕೆ ಗೈರಾಗಿದ್ದರು. ಅಂತವರನ್ನ ಕೆಲಸದಿಂದ ವಜಾ ಮಾಡಲಾಗಿತ್ತು. ವಜಾ ಆಗಿದ್ದವರನ್ನ ಇಲ್ಲಿಯವರೆಗೆ ಕೆಲಸಕ್ಕೆ ನೇಮಕಗೊಳಿಸಲು ಸಾಧ್ಯ ಆಗಿರಲಿಲ್ಲ. ನಾಲ್ಕು ವಿಭಾಗದ ಎಂಡಿಗಳಿಗೆ ಈಗಾಗಲೇ ಸೂಚನೆ ಕೊಟ್ಟಿದ್ದೇನೆ. ಲೋಕಾದಾಲತ್ ಮೂಲಕ ಕಾನೂನು ತೊಡಕು ನಿವಾರಿಸಿ ಸಮಸ್ಯೆ ಇತ್ಯರ್ಥ ಮಾಡಲಾಗುತ್ತದೆ ಅಂತ ಶ್ರೀರಾಮುಲು ತಿಳಿಸಿದ್ದಾರೆ.

ಮುಂದುವರಿದು ಮಾತನಾಡಿದ ಅವರು, ಸಿಎಂ ಬದಲಾವಣೆ, ಸಂಪುಟ ಪುನಾರಚನೆಯ ಪ್ರಸ್ತಾಪವಿಲ್ಲ. ಎಲ್ಲ ಮಂತ್ರಿಗಳು ಸಕ್ರಿಯವಾಗಿ ಕೆಲಸ ಮಾಡುತ್ತಿದ್ದಾರೆ. ಬದಲಾವಣೆ ಬಗ್ಗೆ ನಾಯಕರು ನಿರ್ಧಾರ ತೆಗೆದುಕೊಳ್ಳುತ್ತಾರೆ. ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ನಿರ್ಧರಿಸಲಿದೆ. ನಾನು ಡಿಸಿಎಂ ಆಗುವ ಬಗ್ಗೆ ಪಕ್ಷ ತೀರ್ಮಾನ ಕೈಗೊಳ್ಳಲಿದೆ ಅಂತ ಹೇಳಿದರು.

ಆಸೆ, ಆಮಿಷ, ಒತ್ತಡದ ಮೂಲಕ ಮತಾಂತರ ಆಗಬಾರದು. ಈ ರೀತಿ ಮತಾಂತರ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಮದುವೆ, ಶಿಕ್ಷಣ, ಹಣ, ಉಡುಗೊರೆ ಮೂಲಕ ಮತಾಂತರ ಮಾಡಿಸಿದರೆ ಅದು ಕಾನೂನು ಬಾಹಿರ. ಎಸ್‌ಸಿ, ಎಸ್‌ಟಿ ಸಮುದಾಯದ ಹಿತ ರಕ್ಷಣೆಗೆ ಸರ್ಕಾರ ಬದ್ಧ ಅಂತ ಬಿ ಶ್ರೀರಾಮುಲು ಅಭಿಪ್ರಾಯಪಟ್ಟರು.

ಇನ್ನು ಇದೇ ವೇಳೆ ಎಮ್ಇಎಸ್ ಪುಂಡರ ಪುಂಡಾಟಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದರು. ಎಂಇಎಸ್ ಅಂದ್ರೆ ಮಹಾ ಎಡವಟ್ಟು ಸಂಘ. ಪುಂಡಾಟಿಕೆ, ಹೇಡಿ ಕೃತ್ಯ, ನಾಟಕಕ್ಕೆ ಸರ್ಕಾರದಿಂದ ಪ್ರತ್ಯುತ್ತರ ಸಿಗುತ್ತದೆ. ಎಮ್​ಇಎಸ್ ನಿಷೇಧದ ಕುರಿತು ಸಿಎಂ ಪರಾಮರ್ಶೆ ಮಾಡುತ್ತಿದ್ದಾರೆ. ಇನ್ಮುಂದೆ ರಾಜ್ಯದಲ್ಲಿ ಎಂಇಎಸ್ ಆಟಗಳು ನಡೆಯೋದಿಲ್ಲ ಅಂತ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ

ಮುಂದುವರಿದ ಎಮ್ಇಎಸ್ ಪುಂಡರ ಪುಂಡಾಟಿಕೆ! ಬಸ್​ಗೆ ಎಮ್ಇಎಸ್ ಧ್ವಜ ಕಟ್ಟಿ, ಮಸಿ ಬಳಿದ ಪುಂಡರು; ವಿಡಿಯೋ ವೈರಲ್

MapmyIndia: 1033 ರೂಪಾಯಿಗೆ ವಿತರಿಸಿದ್ದ ಮ್ಯಾಪ್​​ಮೈಇಂಡಿಯಾ ಷೇರು ರೂ. 1565ಕ್ಕೆ ಬಂಪರ್ ಲಿಸ್ಟಿಂಗ್

Published On - 12:50 pm, Tue, 21 December 21

ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ