ಗದಗ: ಕಾಂಗ್ರೆಸ್ ಕಾರ್ಯಕರ್ತನನ್ನು ಅಟ್ಟಾಡಿಸಿ ಕೊಲೆಗೈದು ಮರಕ್ಕೆ ನೇತುಹಾಕಿದ ದುಷ್ಕರ್ಮಿಗಳು

ಕಾಂಗ್ರೆಸ್ ಕಾರ್ಯಕರ್ತನನ್ನು ಅಟ್ಟಾಡಿಸಿ ಕೊಲೆಗೈದು ಮರಕ್ಕೆ ನೇತುಹಾಕಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಗ್ರಾಮದ ಬಳಿ ನಡೆದಿದೆ. ಶರಣಪ್ಪರನ್ನು ಕಿಡಿಗೇಡಿಗಳು ಅಟ್ಟಾಡಿಸಿ ಕಣ್ಣಿಗೆ ಖಾರದ ಪುಡಿ ಹಾಕಿ ಕೊಲೆ ಮಾಡಿದ್ದಾರೆ. ಕೊಲೆ ಮಾಡಿದ ಬಳಿಕ ಮರಕ್ಕೆ ಹಗ್ಗದಿಂದ ಕಟ್ಟಿ ಹಾಕಿ ವಿಕೃತಿ ಮೆರೆದಿದ್ದಾರೆ.

ಗದಗ: ಕಾಂಗ್ರೆಸ್ ಕಾರ್ಯಕರ್ತನನ್ನು ಅಟ್ಟಾಡಿಸಿ ಕೊಲೆಗೈದು ಮರಕ್ಕೆ ನೇತುಹಾಕಿದ ದುಷ್ಕರ್ಮಿಗಳು
ಶರಣಪ್ಪ ಸಂದಿಗೌಡ್ರ
Edited By: ಆಯೇಷಾ ಬಾನು

Updated on: Mar 12, 2024 | 2:26 PM

ಗದಗ, ಮಾರ್ಚ್​.12: ಚಿತ್ರಹಿಂಸೆ ನೀಡಿ ವ್ಯಕ್ತಿಯ ಭೀಕರ ಹತ್ಯೆ (Murder) ಮಾಡಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ರೋಣ ವಿಧಾನಸಭಾ ಕ್ಷೇತ್ರದ ಡಂಬಳ ಹೋಬಳಿಯ ಗ್ಯಾರಂಟಿ ಫಲಾನುಭವಿಗಳ ಸಮಾವೇಶದ ಹೊತ್ತಿನಲ್ಲಿ ಕಾಂಗ್ರೆಸ್ ಕಾರ್ಯಕರ್ತನೊಬ್ಬನ (Congress Workers) ಭೀಕರ ಕೊಲೆಯಾಗಿದೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಗ್ರಾಮದ ಬಳಿ ಜಮೀನೊಂದರಲ್ಲಿ ಮರಕ್ಕೆ ನೇತು ಹಾಕಿದ ಸ್ಥಿತಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಶವ ನೇತಾಡುತ್ತಿದೆ. ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣದ ಪ್ರಮುಖ ಕಾರ್ಯಕರ್ತ ಡೋಣಿ ಗ್ರಾಮದ ಶರಣಪ್ಪ ಸಂದಿಗೌಡ್ರ ಕೊಲೆಗೀಡಾದ ವ್ಯಕ್ತಿ.

ಕೊಲೆಗೂ ಮುನ್ನ ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ ಮಾಡಿರುವ ದುಷ್ಕರ್ಮಿಗಳು, ಕಣ್ಣಿಗೆ ಕಾರದಪುಡಿ ಎಸೆದು ಹಲ್ಲೆ ಮಾಡಿದ್ದಾರೆ. ನಂತರ ಶವ ತೂಗು ಹಾಕಿ ವಿಕೃತಿ ಮೆರೆದಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇಂದು ಬೆಳ್ಳಂಬೆಳಿಗ್ಗೆ ಮರದಲ್ಲಿ ನೇತಾಡುತ್ತಿರುವ ಶವ ನೋಡಿದ ಸ್ಥಳೀಯರು ಬೆಚ್ಚಿ ಬಿದ್ದಿದ್ದು, ಇಂದು ಡಂಬಳದಲ್ಲಿ ಕಾಂಗ್ರೆಸ್ ಪಕ್ಷದಿಂದ ಗ್ಯಾರಂಟಿ ಫಲಾನುಭವಿಗಳ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಹೀಗಾಗಿ ಕಾರ್ಯಕರ್ತರಲ್ಲಿ ಆತಂಕ ಮೂಡಿದೆ.

ಇದನ್ನೂ ಓದಿ: ಕಾರಿನಲ್ಲಿ ಅನುಮಾನಾಸ್ಪದವಾಗಿ ಉದ್ಯಮಿ ಶವಪತ್ತೆ; ಕೊಲೆ ಮಾಡಿ ಕಾರಿನಲ್ಲಿ ಶವ ಇಟ್ಟು ಹೋಗಿರುವ ಶಂಕೆ

ಯಾವ ಕಾರಣಕ್ಕಾಗಿ ಈ ಕೊಲೆ ನಡೆದಿದೆ ಎಂಬುದು ಸದ್ಯಕ್ಕೆ ತಿಳಿದು ಬಂದಿಲ್ಲ. ಘಟನೆಯ ಸುದ್ದಿ ತಿಳಿದ ಮುಂಡರಗಿ ಠಾಣೆಯ ಇನ್ಸ್‌ಪೆಕ್ಟರ್ ಮಂಜುನಾಥ್ ಕುಸುಗಲ್ಲ‌ ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕೊಲೆ ಯಾವ ಕಾರಣಕ್ಕಾಗಿ ನಡೆದಿರಬಹುದು ಎಂದು ಮಾಹಿತಿ ಕಲೆ ಹಾಕುತ್ತಿದ್ದಾರೆ. ಕೊಲೆ ಮಾಡಿದ ಆರೋಪಿಗಳ ಪತ್ತೆಗೆ ಜಾಲ ಬೀಸಿರುವ ಮುಂಡರಗಿ ಪೊಲೀಸರು, ತನಿಖೆ ಕೈಗೊಂಡಿದ್ದಾರೆ.

ಬಟ್ಟೆ ಅಂಗಡಿಯಲ್ಲಿ 6 ಲಕ್ಷ ಹಣ ಕಳ್ಳತನ

ಕೋಲಾರದಲ್ಲಿ ಪ್ರತಿಷ್ಠಿತ ಬಿ.ಆರ್​​.ಎಂ ಬಟ್ಟೆ ಮಳಿಗೆಯಲ್ಲಿ ಕಳ್ಳತನ ನಡೆದಿದೆ. ಶೌಚಾಲಯದ ಕಿಟಕಿ ಮುರಿದು ಲಕ್ಷಾಂತರ ರೂಪಾಯಿ ಕಳ್ಳತನ ಮಾಡಿದ್ದಾರೆ. ಸುಮಾರು 6 ಲಕ್ಷ ರ ಹಣ ಹಾಗೂ ಬೆಲೆ ಬಾಳುವ ಸೀರೆಗಳ ಕಳ್ಳತನ ಮಾಡಲಾಗಿದೆ. ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸ್ತಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:05 pm, Tue, 12 March 24

Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More
Follow Us